ಮಡಿಕೇರಿ ಜೂ.27 : ಕೊಳೆತ ಸ್ಥಿತಿಯಲ್ಲಿ ಕಾಡಾನೆಯೊಂದರ ಮೃತದೇಹ ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿ ಬೆಟ್ಟದಕಾಡು ಗ್ರಾಮದ ಕಾಫಿ ತೋಟವೊಂದರಲ್ಲಿ ಕಂಡು ಬಂದಿದೆ. ಬೆಟ್ಟದಕಾಡು ಸಮೀಪದ ಸಂಪಿಗೆಕೊಲ್ಲಿ ಎಂಬಲ್ಲಿ ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆಯಾಗಿದೆ. ಸುಮಾರು ಇಪ್ಪತ್ತು ದಿನಗಳ ಹಿಂದೆಯೇ ಕಾಡಾನೆ ಮೃತಪಟ್ಟಿದೆ ಎಂದು ಅಂದಾಜಿಸಲಾಗಿದೆ. ತೋಟಕ್ಕೆ ತೆರಳಿದ್ದ ಕಾರ್ಮಿಕರು ಕಾಡಾನೆಯ ಕಳೇಬರ ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಅರಣ್ಯ ಅಧಿಕಾರಿಗಳು ಮತ್ತು ವನ್ಯಜೀವಿ ವೈದ್ಯಾಧಿಕಾರಿ ಡಾ. ಚೆಟ್ಟಿಯಪ್ಪ ಕಳೇಬರದ ಮಹಜರು ಮಾಡಿ ಮರಣೋತ್ತರ ಪರೀಕ್ಷೆ ನಡೆಸಿದರು. ಈ ಸಂದರ್ಭ ಮೃತ ಹೆಣ್ಣಾನೆ 15 ವರ್ಷ ಪ್ರಾಯದ್ದಾಗಿರಬಹುದು ಎಂದು ಅಂದಾಜಿಸಿದ್ದಾರೆ. ಕಾಡಾನೆಗಳ ನಡುವಿನ ಕಾದಾಟದಲ್ಲಿ ಗಾಯಗೊಂಡ ಆನೆ ಸಾವನ್ನಪ್ಪಿರ ಬಹುದೆಂದು ಊಹಿಸಲಾಗಿದೆ. ಸ್ಥಳದಲ್ಲೇ ಜೆಸಿಬಿ ಯಂತ್ರ ಬಳಸಿ ಗುಂಡಿ ತೋಡಿ ಆನೆಯ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಘಟನಾ ಸ್ಥಳದಲ್ಲಿ ಕುಶಾಲನಗರ ಎಸಿಎಫ್ ಗೋಪಾಲ್, ವಲಯ ಅರಣ್ಯಾಧಿಕಾರಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿ ಸುಬ್ರಾಯ, ರವಿ ಯತ್ನಾಳ್, ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ…
ಲೇಖಕ: admin
ಮಡಿಕೇರಿ ಜೂ.27 : ಕೊಡಗು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಕಾಣಿಸಿಕೊಂಡ ಅರಕಲಗೂಡು ಶಾಸಕ, ಕರ್ನಾಟಕ ರಾಜ್ಯ ಕೃಷಿ ಸಹಕಾರ ಮಂಡಲದ ನಿರ್ದೇಶಕ ಎ.ಮಂಜು, ವೇದಿಕೆಯ ಮೇಲೆ ಹೋಗಿ ಮಡಿಕೇರಿ ಶಾಸಕ, ಪುತ್ರ ಡಾ.ಮಂತರ್ ಗೌಡ ಅವರ ಬೆನ್ನು ತಟ್ಟಿ ವಿಶ್ ಮಾಡಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಜೂ.27 : ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜ್ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಅರಕಲಗೋಡು ಜೆಡಿಎಸ್ ಶಾಸಕ ಎ.ಮಂಜು ಅವರು ಪಾಲ್ಗೊಳ್ಳುವ ಮೂಲಕ ಚರ್ಚೆಗೆ ಗ್ರಾಸವಾದರು. ಪುತ್ರ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಕಾರ್ಯವೈಖರಿಯನ್ನು ವೀಕ್ಷಿಸುವ ಕುತೂಹಲದಿಂದ ಮಂಜು ಉಪಸ್ಥಿತರಿದ್ದರೇ ಎನ್ನುವ ಸಂಶಯವನ್ನು ಹುಟ್ಟು ಹಾಕಿದರು. ಕರ್ನಾಟಕ ರಾಜ್ಯ ಕೃಷಿ ಸಹಕಾರ ಮಂಡಲದ (ಎಸ್‍ಎಲ್‍ಡಿಪಿ) ನಿರ್ದೇಶಕನಾಗಿ ನನಗೆ ಕೊಡಗು, ಹಾಸನ ಉಸ್ತುವಾರಿ ಇದೆ, ನನಗೆ ಸಭೆಗೆ ಆಹ್ವಾನ ಇದೆ. ಹಾಗಾಗಿ ನಾನೂ ಕೂಡ ಕೆಡಿಪಿ ಸಭೆಗೆ ಬಂದಿದ್ದೇನೆ. ಜೊತೆಗೆ ಮಗ ನಡೆಸುವ ಸಭೆ ನೋಡಿ ಖುಷಿ ಆಗಿದೆ, ಅದಕ್ಕೆ ಅಧಿಕಾರಿಗಳ ಸಾಲಲ್ಲಿ ಕುಳಿತು ಸಭೆಯಲ್ಲಿ ಭಾಗಿಯಾದೆ. ಜೊತೆಗೆ ಮಗ ನಡೆಸುವ ಸಭೆ ನೋಡಿ ಖುಷಿ ಆಗಿದೆ, ಅದಕ್ಕೆ ಅಧಿಕಾರಿಗಳ ಸಾಲಲ್ಲಿ ಕುಳಿತು ಸಭೆಯಲ್ಲಿ ಭಾಗಿಯಾದೆ ಎಂದು ಕೆಡಿಪಿ ಸಭೆಯಲ್ಲಿ ಭಾಗಿಯಾದ ನಂತರ ಸುದ್ದಿಗಾರರ ಬಳಿ ಸ್ಪಷ್ಟನೆ ನೀಡಿದರು. ::: ಕಾಂಗ್ರೆಸ್…
ಮಡಿಕೇರಿ ಜೂ.27 : ದಕ್ಷಿಣ ಕನ್ನಡದ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದ್ದ ಹಿಂದೂ ಪರ ಸಂಘಟನೆಯ ಪ್ರಮುಖ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಎನ್ ಐಎ ಅಧಿಕಾರಿಗಳು ಇಂದು ತನಿಖೆ ನಡೆಸಿದರು ಎಂದು ತಿಳಿದು ಬಂದಿದೆ. ಸೋಮವಾರಪೇಟೆಯ ಕನ್ವೆಂಟ್ ಬಾಣೆ ಹಾಗೂ ಕಲ್ಕಂದೂರು ಭಾಗದಲ್ಲಿ ಇಬ್ಬರು ವ್ಯಕ್ತಿಗಳ ಮನೆಗೆ ಇಂದು ಬೆಳಿಗ್ಗೆ ದಾಳಿ ಮಾಡಿದ ಅಧಿಕಾರಿಗಳು ಕೆಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ಹೇಳಲಾಗಿದೆ. ಈ ವ್ಯಕ್ತಿಗಳಿಬ್ಬರು ದುಬೈಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಮಧ್ಯ ಪ್ರದೇಶ/ಧಾರವಾಡ: ಬೆಂಗಳೂರು-ಧಾರವಾಡ ಸೇರಿದಂತೆ ಐದು ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ಮಧ್ಯ ಪ್ರದೇಶದ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ನಡೆದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನಾ ಸಮಾರಂಭದಲ್ಲಿ ರಾಣಿ ಕಮಲಾಪತಿ-ಜಬಾಲ್ಪುರ, ಖಜುರಾಹೊ- ಭೂಪಾಲ್- ಇಂದೋರ್, ಗೋವಾದ ಮಂಡಗಾವ್- ಮುಂಬೈ, ಧಾರವಾಡ- ಬೆಂಗಳೂರು, ಹಟಿಯಾ- ಪಾಟ್ನಾ ನಡುವೆ ಸಂಚರಿಸಲು ರೈಲುಗಳಿಗೆ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು. ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮೇಯರ್ ವೀಣಾ ಭರದ್ವಾಡ ಮತ್ತಿತರರು ಭಾಗವಹಿಸಿದರು.
ಹಾಸನ ಜೂ.27 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾಡಿನ ಜನತೆಗೆ ಶುಭ ಕೋರಿದರು. ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎನ್. ರಾಜಣ್ಣ, ಶಿವರಾಜ್ ತಂಗಡಗಿ, ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಶಾಸಕಕೆ.ಎಂ.ಶಿವಲಿಂಗೇಗೌಡ, ಸಿ.ಎನ್ ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಹೆಚ್.ಕೆ.ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳ ಮತ್ತಿತರರು ಹಾಜರಿದ್ದರು.
ಮಡಿಕೇರಿ ಜೂ.27 : ವೈಭವದಿಂದ ಆಕಾಶವನ್ನು ಸ್ಪರ್ಶಿಸು (Touch the sky with Glory) ಎಂಬ ಭಗವದ್ಗೀತೆಯ 11ನೇ ಅಧ್ಯಾಯದ ಸೂಕ್ತಿಯಂತೆ ನಭಃ ಸ್ಪರ್ಶಃ ದೀಪ್ತಃ ಎಂಬ ಭಾರತೀಯ ವಾಯುಸೇನೆಯು ಧ್ಯೇಯ ವಾಕ್ಯವು ಯುವ ತಲೆಮಾರಿಗೆ ಪ್ರೇರಣಾದಾಯಕವಾಗಿದೆ. ಆ ಮೂಲಕ ಯುವ ತಲೆಮಾರು ಜೀವನಸ್ಪೂರ್ತಿಯ ರೆಕ್ಕೆ ಕಟ್ಟಿಕೊಂಡು ಆಕಾಶದೆತ್ತರಕ್ಕೆ ಹಾರುವ ಕನಸುಗಳನ್ನು ಕಾಣಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಅಭಿಪ್ರಾಯಪಟ್ಟರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಭಾರತೀಯ ವಾಯು ಸೇನೆಯಲ್ಲಿನ ವೃತ್ತಿ ಮಾರ್ಗದರ್ಶನವನ್ನು ಕುರಿತಾದ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಗುರಿ ದೇಶಸೇವೆಯ ಕಡೆಗಿರಲಿ, ಭೂಸೇನೆಯಲ್ಲಿ ಕೊಡಗಿನ ವೀರರು ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದೇ ರೀತಿಯಲ್ಲಿ ವಾಯುಸೇನೆಯಲ್ಲಿಯೂ ಯುವ ತಲೆಮಾರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಮಾತ್ರವಲ್ಲ ಭಾರತೀಯ ವಾಯುಸೇನಯ ಅಧಿಕಾರಿ ವಿಂಗ್ ಕಮಾಂಡರ್ ಸಿ.ಎ.ಭಾನುಪ್ರಕಾಶ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆದಿದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ಪ್ಲೈಟ್ ಲೆಪ್ಟಿನೆಂಟಲ್ ಗೌರವ್…
ಮಡಿಕೇರಿ ಜೂ.27 : ಮಡಿಕೇರಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ ಬೆಳ್ಳಿಯಪ್ಪ ಅವರು ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ನಗರದಲ್ಲಿ ಶಾಸಕರನ್ನು ಭೇಟಿಯಾದ ಅವರು ಮಡಿಕೇರಿ ನಗರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು. ಶಾಶ್ವತ ಕುಡಿಯುವ ನೀರಿನ ಯೋಜನೆ ಎಂದು ಪ್ರತಿಬಿಂಬಿಸಿ ರೂಪಿಸಲಾದ ಕುಂಡಾಮೇಸ್ತ್ರಿ ಯೋಜನೆಯಿಂದ ಕೋಟ್ಯಾಂತರ ರೂ. ನಷ್ಟವಾಗಿದೆ, ಬೇಸಿಗೆ ಕಾಲದಲ್ಲಿ ನೀರಿನ ಕೊರತೆ ಎದುರಾಗಿದೆ. ಆದ್ದರಿಂದ ಈ ಯೋಜನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ನಗರದಲ್ಲಿ ನಿರ್ಮಿಸಲಾಗಿರುವ ಹೈ-ಟೆಕ್ ಖಾಸಗಿ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಅಭಿವೃದ್ಧಿ ಪಡಿಸಬೇಕು. ನಗರದಲ್ಲಿರುವ ಮಾರುಕಟ್ಟೆ ಗಬ್ಬೆದ್ದು ನಾರುತ್ತಿದ್ದು, ಮಾಂಸ ಮತ್ತು ಮೀನು ಮಾರುಕಟ್ಟೆಯಲ್ಲಿ ನೀರು ಸೇರಿದಂತೆ ಮೂಲಭೂತ ಸೌಲಭ್ಯವಿಲ್ಲದೆ ವ್ಯಾಪಾರಿಗಳು…
ಸುಂಟಿಕೊಪ್ಪ,ಜೂ.27: ಕರ್ನಾಟಕ ರಾಜ್ಯ ಸಹಶಿಕ್ಷಕರ ಸಂಘದ ವತಿಯಿಂದ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರನ್ನು ಸನ್ಮಾನಿಸಲಾಯಿತು. ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಸಚಿವ ಎನ್.ಎಸ್. ಬೋಸರಾಜು ಅವರನ್ನು ಸಂಘದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಹಾಗೂ ಪದಾಧಿಕಾರಿಗಳು ಮತ್ತಿತರರು ಇದ್ದರು.
ಮಡಿಕೇರಿ ಜೂ.27 : ಕುಶಾಲನಗರದ ಶಾರದಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶಾಂತ ಶ್ರೀಪತಿ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನಿಂದ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ದೊಡ್ಡಬಳ್ಳಾಪುರದಲ್ಲಿ ತೋಟಂದಾರ್ಯ ಮಠದ ನಿಜಗುಣ ಪ್ರಭು ಸ್ವಾಮೀಜಿ ಸಾನ್ವಿಧ್ಯದಲ್ಲಿ ನಡೆದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಪರಿಷತ್ತು ರಾಜ್ಯ ಅಧ್ಯಕ್ಷರಾದ ಡಾ.ಹುಲಿಕಲ್ ನಟರಾಜ್ ಮತ್ತಿತರರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಪರಿಷತ್ ಕೊಡಗು ಜಿಲ್ಲಾ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.






