ಲೇಖಕ: admin

ಮಡಿಕೇರಿ ಜೂ.27 : ನಗರದ   ತ್ಯಾಗರಾಜನಗರದಲ್ಲಿರುವ ತಣಲ್ ವೃದ್ಧಾಶ್ರಮದ ನಡೆಯಲು ಅಶಕ್ತರಾದವರಿಗೆ ಆಸರೆ ಆಗುವಂತೆ ಮಾನವೀಯ ಸ್ನೇಹಿತರ ಒಕ್ಕೂಟದ ವತಿಯಿಂದ ಒಂದು ಗಾಲಿ ಕುರ್ಚಿಯನ್ನು  ವಿತರಿಸಲಾಯಿತು. ಗಾಲಿ ಕುರ್ಚಿ ಹಸ್ತಾಂತರ ದ ಮೂಲಕ ಒಕ್ಕೂಟದ ಅಡ್ಮಿನ್ ಅನಿಲ್ ರೈ  ಕಾರ್ಯಕ್ರಮ ಉದ್ಘಾಟಿಸಿದರು. ತಣಲ್ ಸಂಸ್ಥೆಯ ವಕ್ತಾರ, ಸ್ನೇಹಿತರ ಒಕ್ಕೂಟದ ಪ್ರತಿನಿಧಿ, ಮಹಮ್ಮದ್ ಮುಸ್ತಫ ಮಾತನಾಡಿ, ಜೀವನದ ಇಳಿ ವಯಸ್ಸಿನಲ್ಲಿ ವಿವಿಧ ಕಾರಣಗಳಿಂದ ನೊಂದು ಬೆಂದ ಸುಮಾರು 40 ಹಿರಿಯ ಬಡ ಜೀವಿಗಳು ತಣಲ್ ಆಶ್ರಮದಲ್ಲಿ ಆಶ್ರಯ ಪಡೆಯುತ್ತಿದ್ದು, ಅವರುಗಳಿಗೆ ತಣಲ್ ಸಂಸ್ಥೆಯಲ್ಲಿ ನೀಡುತ್ತಿರುವ ಸೇವೆಯ ಕುರಿತು ವಿವರಿಸಿ, ಸ್ನೇಹಿತರ ಒಕ್ಕೂಟದ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಒಕ್ಕೂಟದ ಪ್ರತಿನಿಧಿ ಶಶಿಕುಮಾರ್  ಮಾತನಾಡಿ, ಸದ್ಯದಲ್ಲೇ ನಮ್ಮ ಒಕ್ಕೂಟದಿಂದ ತಣಲ್ ಸಂಸ್ಥೆಯ ಎಲ್ಲ ವಯೋವೃದ್ದರಿಗೆ ಸ್ವೆಟರ್ ಗಳ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು. ಒಕ್ಕೂಟದ ಸಮಾಜಮುಖಿ ಕಾರ್ಯಕ್ರಮಗಳಿಗೆ ಸದಸ್ಯರುಗಳು ಕೈಜೋಡಿಸುವಂತೆ ಕೋರಿದರು. ಸ್ನೇಹಿತರ ಒಕ್ಕೂಟದ ಮತ್ತೋರ್ವ ಪ್ರತಿನಿಧಿ, ಮಾಜಿ ಯೋಧ ಡೇವಿಡ್ ವೇಗಸ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸ್ನೇಹಿತರ…

Read More

ಮಡಿಕೇರಿ ಜೂ.27 : ಭಾಗಮಂಡಲ ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯ 2021- 23 ನೇ ಸಾಲಿನ ತರಬೇತುದಾರರಿಗೆ ಬೀಳ್ಕೊಡುಗೆ ನೀಡಲಾಯಿತು. ತರಬೇತಿ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಮಂಡಲದ ಅಂಬೇಡ್ಕರ್ ವಸತಿ ಸ್ಕೂಲ್  ಪ್ರಾಂಶುಪಾಲೆ ನೀತು ಮಾತನಾಡಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶುಭಹಾರೈಸಿದರು. ಪ್ರಾಚಾರ್ಯರಾದ ಕೆ.ವಿ.ಶ್ರೀಕಾಂತ್  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಪ್ರತಿಯೊಂದು ವೃತ್ತಿ ವಿಭಾಗದ ಒಬ್ಬ ಅತ್ಯುತ್ತಮ ವಿದ್ಯಾರ್ಥಿಯನ್ನು ಗೌರವಿಸಲಾಯಿತು. ಕಿರಿಯ ತರಬೇತಿ ಅಧಿಕಾರಿ ಕೆ.ಜಿ.ಜಯಪ್ರಕಾಶ್ ವಾರ್ಷಿಕ ವರದಿ ಮಂಡಿಸಿದರು. ಕಿರಿಯ ತರಬೇತಿ ಅಧಿಕಾರಿ ಪುನೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ತರಬೇತಿ ಸಂಸ್ಥೆ ಕಛೇರಿ ಅಧೀಕ್ಷಕ ಸಿ.ಕೆ.ವಿನೋದ್  ಸ್ವಾಗತಿಸಿದರು. ದ್ವಿತೀಯ ದರ್ಜೆ ಸಹಾಯಕ ಕೆ.ಟಿ. ಅರುಣ್ ವಂದಿಸಿದರು.

Read More

ಮಡಿಕೇರಿ ಜೂ.27 : ಪುಸ್ತಕಗಳು ಸಂವಹನ ಶೀಲತೆ, ಸಾಮಾಜಿಕ ಕಳಕಳಿ, ಕ್ರಿಯಾಶೀಲತೆ, ಸೃಜನಶೀಲತೆ ಮತ್ತು ಬುದ್ದಿಯ ಮಟ್ಟವನ್ನು ಹೆಚ್ಚಿಸುವ ಶಕ್ತಿಯನ್ನು ಹೊಂದಿದೆ. ಆದ್ದರಿಂದ ಪುಸ್ತಕಗಳ ಮಹತ್ವದ ಕುರಿತು ಬಾಲ್ಯದಿಂದಲೇ ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಇದು ಮಕ್ಕಳಿಗೆ ಮಾತ್ರವಲ್ಲ ಸಮಾಜಕ್ಕೂ ಸಹಕಾರಿಯಾಗಲಿದೆ ಎಂದು ಮಕ್ಕಳ ತಜ್ಞ ವೈದ್ಯ ಡಾ.ಬಿ.ಸಿ.ನವೀನ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡಗು ಪ್ರೆಸ್ ಕ್ಲಬ್ ನಿರ್ದೇಶಕ ಕೆ.ಆರ್.ಪ್ರಸಿನ್ ಗೌಡ ರಚಿತ ಚೊಚ್ಚಲ ಕೃತಿ “ಮನ ಮಾತಾದಾಗ” ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ವೃತ್ತಿಯಲ್ಲಿ ತೊಡಗಿಸಿಕೊಂಡರೂ ಅಲ್ಲಿ ನಮ್ಮದೇ ಆದ ಹೆಜ್ಜೆಯನ್ನು ಮೂಡಿಸುವಂತಾಗಬೇಕು. ಇದಕ್ಕೆ ಪುಸ್ತಕಗಳು ಹೆಚ್ಚು ಸಹಕಾರಿಯಾಗಲಿದೆ. ಸಮಾಜಕ್ಕಾಗಿ ತ್ಯಾಗ ಮಾಡಿದವರನ್ನು ಸದಾ ನೆನಪಿಸುವುದು ಪುಸ್ತಕಗಳು. ಹೊರ ಜಗತ್ತಿಗೆ ಪುಸ್ತಕಗಳೇ ಕಿಟಕಿಗಳು, ಆದ್ದರಿಂದ ಪುಸ್ತಕ ಸಂಸ್ಕೃತಿಯನ್ನು ಬೆಳೆಸಬೇಕು, ಉಳಿಸಬೇಕು ಎಂದರು. ಪ್ರತಿ ವ್ಯಕ್ತಿಗೆ ಪುಸ್ತಕವೇ ಜೀವನದ ಅಂಗ, ಪುಸ್ತಕವೇ ಸ್ನೇಹಿತನಿದ್ದಂತೆ, ಪ್ರತಿ…

Read More

ನಾಪೋಕ್ಲು  ಜೂ.27 : ನಾಪೋಕ್ಲು ಪೊಲೀಸ್ ಠಾಣೆ ವತಿಯಿಂದ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆ, ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಾದಕ ವ್ಯಸನಿ ಮತ್ತು ಕಳ್ಳ ಸಾಗಣೆ ವಿರೋಧಿ ದಿನದ ಪ್ರಯುಕ್ತ ನಾಪೋಕ್ಲು ಪಟ್ಟಣದಲ್ಲಿ ಜನಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಮಾರುಕಟ್ಟೆ ಬಳಿಯಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಜಾಥಾ ನಡೆಸಿದ ವಿದ್ಯಾರ್ಥಿಗಳು ಹಾಗೂ ಪೊಲೀಸರು ವಿವಿಧ ಘೋಷ ವಾಕ್ಯಗಳೊಂದಿಗೆ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ಸಂದರ್ಭ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮಾತನಾಡಿ, ಸಮಾಜದಲ್ಲಿ ಮಾದಕ ವ್ಯಸನಿಗಳಿಗೆ, ಮಾದಕ ವಸ್ತು ಸಾಗಣೆ ಮಾಡುವವರ, ಬೆಳೆಯುವವರ ವಿರುದ್ಧ  ಎಚ್ಚರಿಕೆ ಹಾಗೂ ಸೇವನೆ ಮಾಡುವವವರ ವಿರುದ್ಧ ಅರಿವು ಮೂಡಿಸುವ ಕಾರ್ಯವನ್ನು  ಹಮ್ಮಿಕೊಂಡಿದ್ದೇವೆ. ನಮ್ಮ ದೇಶದ ಆರೋಗ್ಯ ಇಲಾಖೆ ವರದಿಯ ಮಾಹಿತಿ ಪ್ರಕಾರ 2022 ರಲ್ಲಿ ನಮ್ಮ ದೇಶದ ಜನಸಂಖ್ಯೆಯಲ್ಲಿ ಶೇ.40ರಷ್ಟು ಜನ ಮಾದಕ ವ್ಯಸನಿಗಳಾಗಿದ್ದಾರೆ. ಇದರಲ್ಲಿ ತಂಬಾಕು, ಮದ್ಯ, ಗಾಂಜಾ,…

Read More

ಶ್ರೀಮಂಗಲ  ಜೂ.27 :  ಜುಲೈ 4 ರಂದು ನಡೆಸಲು ನಿಗಧಿಯಾಗಿದ್ದ “ಕೊಡವ ತಕ್ಕ್ ಎಳ್ತ್’ಕಾರಡ ಕೂಟ”ದ “ಬೆಳ್ಳಿಹಬ್ಬವನ್ನು” ಕೆಲವು ತಾಂತ್ರಿಕ ಕಾರಣಗಳಿಂದ ಜು.23ಕ್ಕೆ ಮುಂದೂಡಲಾಗಿದೆ ಎಂದು ‘ಕೂಟ’ದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ ತಿಳಿಸಿದರು. ಕೊಡವ ತಕ್ಕ್ ಎಳ್ತ್’ಕಾರಡ ಕೂಟ ಹಾಗೂ ಪೊನ್ನಂಪೇಟೆ ಕೊಡವ ಸಮಾಜದ ಜಂಟಿ ಆಶ್ರಯದಲ್ಲಿ ಸಮಾಜದ ಆವರಣದಲ್ಲಿ ಜು.23ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 6.30ರವರೆಗೆ ನಡೆಯುವ ‘ಕೊಡವ ತಕ್ಕ್ ಎಳ್ತ್’ಕಾರಡ ಕೂಟ’ದ “ಬೆಳ್ಳಿ ಹಬ್ಬ”ದಂದು 4 ವಿವಿಧ ಹಂತಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಥೆ, ಕಾದಂಬರಿ, ಕವನ, ಚುಟುಕ, ನಾಟಕ, ವೈಚಾರಿಕ, ಮಕ್ಕಳ ಕಥೆ, ಮಕ್ಕಳ ನಾಟಕ, ಭಕ್ತಿ ಗೀತೆ, ಸಣ್ಣ ಕಥೆಗಳು, ಮಕ್ಕಳ ವಿವಿಧ ಲೇಖನಗಳು, ಪದ್ಧತಿ-ಜಾನಪದ, ಪೌರಾಣಿಕ, ಗಾದೆ,  ಯೋಗಾಭ್ಯಾಸ ಸೇರಿದಂತೆ ವಿವಿಧ ಪ್ರಕಾರದ ಸಾಹಿತ್ಯಗಳುಳ್ಳ 25 ಪುಸ್ತಕಗಳನ್ನು  ಪ್ರಥಮ ಬಾರಿಗೆ ಏಕ ವೇದಿಕೆಯಲ್ಲಿ ಏಕ ಕಾಲಕ್ಕೆ ಬಿಡುಗಡೆ ಮಾಡಲಾಗುವುದು. ಇದರೊಂದಿಗೆ ‘ಕೊಡವ ತಕ್ಕ್ ಎಳ್ತ್’ಕಾರಡ ಕೂಟ’ ನಡೆದು ಬಂದ ದಾರಿಯ ಸಮಗ್ರ ಚಿತ್ರಣಗಳುಳ್ಳ…

Read More

ಮಡಿಕೇರಿ ಜೂ.27 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 4.46 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.92 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 268.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 630.31 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.28 ಮಿ.ಮೀ. ಕಳೆದ ವರ್ಷ ಇದೇ ದಿನ 20.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 399.86 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 854.33 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.88 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 31.17 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 198.34 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ಕಳೆದ ವರ್ಷ 565.23 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.23 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…

Read More

ನಾಪೋಕ್ಲು ಜೂ.27 : ಸ್ಥಳೀಯ ಪೊಲೀಸ್ ಠಾಣಾ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ನಾಪೋಕ್ಲುವಿನಲ್ಲಿ ಶಾಲಾ ಕಾಲೇಜು ಸಹಯೋಗದೊಂದಿಗೆ ಜನಜಾಗೃತಿ ಜಾಥ ನಡೆಯಿತು. ಈ ಸಂದರ್ಭ ಸ್ಥಳೀಯ ಸರ್ಕಾರಿ ಪದವಿ ಕಾಲೇಜು ಹಾಗೂ ಕೆಪಿಎಸ್ ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳು, ಬೋಧಕರು ಮತ್ತು ಪೊಲೀಸರು ಪಟ್ಟಣದ ಮುಖ್ಯ ಬೀದಿಯಲ್ಲಿ ಜಾತ ನಡೆಸಿ ಘೋಷಣೆಗಳನ್ನು ಕೂಗುದರ ಮೂಲಕ ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಿದರು. ಸರ್ಕಾರಿ ಪದವಿ ಕಾಲೇಜು ಪ್ರಾಂಶುಪಾಲೆ ಡಾ.ಕಾವೇರಿ ಮಾತನಾಡಿ, ಯುವ ಪಿಳಿಗೆ ವಿವಿಧ ಮಾದಕ ವಸ್ತುಗಳ ಬಳಕೆ ಮಾಡುವುದರ ಮೂಲಕ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಕೆಲಸ ನಮ್ಮೆಲ್ಲರದಾಗಿದ್ದು, ಸಮಾಜದ ಸ್ವಸ್ಥ ಕಾಪಾಡಬೇಕಾಗಿದೆ ಎಂದರು. ಸ್ಥಳೀಯ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಮುಂದಾಳತ್ವದಲ್ಲಿ ಜರುಗಿದ ಜಾಥದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಕೆಪಿಎಸ್ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ಶಿಕ್ಷಕರು, ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಬೋಧಕ…

Read More

ನಾಪೋಕ್ಲು ಜೂ.27 : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ರಚನೆಗೆ ಚುನಾವಣೆ ನಡೆದಿದ್ದು, ಎಲ್ಲಾ ಸ್ಥಾನಗಳನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದುಕೊಂಡಿದ್ದಾರೆ. 13 ಸ್ಥಾನಗಳಿಗೆ 33 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅಂತಿಮವಾಗಿ 26 ಮಂದಿ ಸ್ಪರ್ಧಾ ಕಣದಲ್ಲಿದ್ದರು. ಸಾಲಗಾರರ ಕ್ಷೇತ್ರದಲ್ಲಿ ಒಟ್ಟು 791 ಮತಗಳಿದ್ದು, ಅದರಲ್ಲಿ 751 ಮತಗಳು ಚಲಾವಣೆಯಾಗಿವೆ. ಸಾಲಗಾರರಲ್ಲದ ಕ್ಷೇತ್ರದಲ್ಲಿ ಒಟ್ಟು 376 ಮತಗಳಿದ್ದು, 313 ಮತಗಳು ಚಲಾವಣೆಯಾಗಿದೆ. ಸಾಮಾನ್ಯ ಸಾಲಗಾರರ ಕ್ಷೇತ್ರದಿಂದ ಒಟ್ಟು ಆರು ಮಂದಿ ನಿರ್ದೇಶಕರ ಆಯ್ಕೆ ಆಗಬೇಕಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಹಾಲಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ 534 ಮತಗಳನ್ನು, ಜಯರಾಮ ನಿಡ್ಯಮಲೆ 402 ಮತಗಳನ್ನು, ಧನಂಜಯ ಕೋಡಿ 346 ಮತಗಳನ್ನು, ಹೊನ್ನಪ್ಪ ಅಮೆಚೂರು 453 ಮತಗಳನ್ನು ,ಸೀತಾರಾಮ ಕದಿ ಕಡ್ಕ 388 ಮತಗಳನ್ನು ಅಶೋಕ ಪೆರುಮುಂಡ 478 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಸುರೇಶ್ ಪೆರುಮುಂಡ, ದಯಾನಂದ ಪೆರುಮುಂಡ, ಗೌತಮ್ ಎಂ.ಎಸ್, ಚಿದಾನಂದ ಪೀಚೆ, ಜನಾರ್ದನ…

Read More

ಮಡಿಕೇರಿ ಜೂ.27 : ಮಡಿಕೇರಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಿಯಮಬಾಹಿರವಾಗಿದೆ ಎಂದು ನಗರಸಭಾ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅರುಣ್ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರಸಭೆಯ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿಗೆ 11 ಸದಸ್ಯರನ್ನು ಮೊದಲು ಆಯ್ಕೆ ಮಾಡಬೇಕು. ನಂತರ ಸದಸ್ಯರುಗಳು ಅಧ್ಯಕ್ಷರನ್ನು ಆಯ್ಕೆ ಮಾಡುವ ನಿಯಮವಿದೆ. ಆದರೆ ಈ ನಿಯಮವನ್ನು ಗಾಳಿಗೆ ತೂರಿ ಪಕ್ಷ ನಿಷ್ಠನಾದ ನನಗೆ ಅನ್ಯಾಯ ಮಾಡಿ ಅಧ್ಯಕ್ಷರ ಆಯ್ಕೆಯನ್ನು ಬಹಿರಂಗ ಪಡಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷದ ನಗರಾಧ್ಯಕ್ಷ ಮನು ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಕುರಿತು ಚರ್ಚಿಸಲಾಯಿತು. ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚು ಇದ್ದ ಕಾರಣ ಕೆಲವು ಆಕಾಂಕ್ಷಿಗಳು ಗುಪ್ತ ಮತದಾನದ ಮೂಲಕ ಆಯ್ಕೆ ಮಾಡುವಂತೆ ಸಲಹೆ ನೀಡಿದರು. ಆದರೆ ಇದಕ್ಕೆ ಪಕ್ಷದ ಜಿಲ್ಲಾ ವಕ್ತಾರ ಹಾಗೂ…

Read More

ಮಡಿಕೇರಿ ಜೂ.27 : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಎರಡನೇ  ವಾರ್ಷಿಕೋತ್ಸವದ ಪ್ರಯುಕ್ತ ಕೊಡಗು ವೈದ್ಯಕೀಯ ವಿಜ್ಞಾನಗಳ  ಸಂಸ್ಥೆ , ಕೊಡಗು ರಕ್ತ ನಿಧಿ ಘಟಕ ಹಾಗೂ ನೇತ್ರ ಆಪ್ಟಿಕಲ್ಸ್ ಮಡಿಕೇರಿ ಇವರ ಸಹಯೋಗದೊಂದಿಗೆ *ಬೃಹತ್ ರಕ್ತದಾನ ಶಿಬಿರ* ಮತ್ತು *ಉಚಿತ ನೇತ್ರ ತಪಾಸಣಾ ಶಿಬಿರ*ಜೂ.28 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಮಡಿಕೇರಿಯ ಹೋಟೆಲ್ ರಾಜ್ ದರ್ಶನ್ ನಲ್ಲಿ ನಡೆಯಲಿದೆ. ಹೆಸರನ್ನು ನೋದಾಯಿಸಿಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : +91 7760830077 +91 97318 98768 +91 82777 79722 +91 95359 04296 +91 99002 01001

Read More