ಮಡಿಕೇರಿ ಜೂ.27 : ಪೊನ್ನಂಪೇಟೆ ತಾಲ್ಲೂಕು ಬೆಸಗೂರು ಗ್ರಾಮದಲ್ಲಿ ಹುಲಿ ದಾಳಿಯಿಂದ ಹಸುವೊಂದು ಬಲಿಯಾದ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಬಲ್ಲಿಮಾಡ ಸಂಪತ್ ಅವರಿಗೆ ಸೇರಿದ ಹಸು ಇದಾಗಿದ್ದು, ಕಳೇಬರ ಕಾಫಿ ತೋಟದಲ್ಲಿ ಪತ್ತೆಯಾಗಿದೆ. ನಾಪತ್ತೆಯಾಗಿದ್ದ ಹಸುವನ್ನು ಹುಡುಕುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊನ್ನಂಪೇಟೆ ವಿಭಾಗದ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮದಲ್ಲಿ ಆತಂಕ ಮೂಡಿಸಿರುವ ಹುಲಿಯನ್ನು ತಕ್ಷಣ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಲೇಖಕ: admin
ಮಡಿಕೇರಿ ಜೂ.27 : ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿಯಲ್ಲಿ ಉಸ್ತುವಾರಿ ಸಚಿವ ಬೋಸರಾಜ್ ಶ್ರೀ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ , ಜಿಲ್ಲಾಧಿಕಾರಿ ವೆಂಕಟ ರಾಜ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜ್, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆಕಾಶ್, ಕಾಂಗ್ರೆಸ್ ಪ್ರಮುಖರಾದ ಹೆಚ್.ಎಸ್. ಚಂದ್ರಮೌಳಿ, ಜಿ.ರಾಜೇಂದ್ರ ,ಬಿ.ಎಸ್ ತಮ್ಮಯ್ಯ, ತೆನ್ನಿರಾ ಮೈನಾ, ಸೇರಿದಂತೆ ಅನೇಕ ಪ್ರಮುಖರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜೂ.26 : ಶ್ರೀ ಶಕ್ತಿ ಅಶೋಸಿಯೆಷನ್, ಶಕ್ತಿ ಧಾಮ ಹಾಸ್ಪಿಟಲ್ ಹಾಗೂ ಸಮಾಜ ಸೇವಾ ವಿಭಾಗ ಜ್ಞಾನ ಕಾವೇರಿ ಚಿಕ್ಕ ಅಳುವಾರ ಕೊಡಗು ವಿಶ್ವವಿದ್ಯಾಲಯ ಇವರ ಸಹಯೋಗದೊಂದಿಗೆ “ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ’’ ಕಾರ್ಯಕ್ರಮವು ಜೂನ್ 27 ರಂದು ಬೆಳಗ್ಗೆ 10.30 ಗಂಟೆಗೆ ಶಕ್ತಿ ಧಾಮ ಹಾಸ್ಪಿಟಲ್ ಕುಶಾಲನಗರದಲ್ಲಿ ನಡೆಯಲಿದೆ. ಶಕ್ತಿಧಾಮ ಐಆರ್‍ಸಿಎ ಆರೋಗ್ಯ ಆಧಿಕಾರಿ ಡಾ.ಭರತ್, ಸೋಮವಾರಪೇಟೆ ಪೊಲೀಸ್ ಉಪ ಅಧೀಕ್ಷಕರಾದ ಆರ್.ವಿ ಗಂಗಾಧರಪ್ಪ, ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಕೊಡಗು ವಿಶ್ವವಿದ್ಯಾಲಯ ಜ್ಞಾನ ಕಾವೇರಿ ಚಿಕ್ಕಳುವಾರ ಸಮಾಜ ಸೇವಾ ವಿಭಾಗದ ಅಧ್ಯಾಪಕರಾದ ಕೆ.ಹರಿಣಾಕ್ಷಿ, ಕುಶಾಲನಗರದ ಪ್ರಜಾಪೀಠ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಬ್ರಹ್ಮಕುಮಾರಿ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜೂ.26 : ಯುವ ಜನಾಂಗ ಮಾದಕ ವಸ್ತು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗಿ, ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳದೆ ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬದುಕಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಆಶಯ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ `ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸ್ನೇಹಿತರ ಒತ್ತಾಯ, ಗೆಳೆಯರ ಗುಂಪಿನಲ್ಲಿ ಒಂದಾಗಬೇಕು ಎಂಬ ಭಾವನೆ, ಮನೆಯ ವಾತಾವರಣ, ಹೀಗೆ ಅನೇಕ ಕಾರಣಗಳಿಗಾಗಿ ಯುವ ಜನತೆ ಮಾದಕ ವಸ್ತುಗಳ ದಾಸರಾಗುತ್ತಾರೆ ಎಂದು ಹೇಳಿದರು. ವಿದ್ಯಾರ್ಥಿಗಳ ಮಾದಕ ವಸ್ತುಗಳಿಂದ ದೂರವಿರಬೇಕು. ನಾಳೆಯ ಬಗ್ಗೆ ಚಿಂತಿಸುವಂತಾಗಬೇಕು.…
ವಿರಾಜಪೇಟೆ ಜೂ.26 : ಕಾರ್ಮಿಕರು ಸಂಘಟಿತರಾಗಿ ಸೌಲಭ್ಯಗಳನ್ನು ಪಡೆದುಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂದು ಜಿಲ್ಲಾ ಸಿಐಟಿಯು ಸಂಘಟನೆಯ ಮಾಜಿ ಅಧ್ಯಕ್ಷ ಡಾ.ದುರ್ಗಾಪ್ರಸಾದ್ ಹೇಳಿದರು. ಸೆಂಟರ್ ಆಫ್ ಇಂಡಿಯನ್ ಟ್ರೆಡ್ ಯೂನಿಯನ್ ‘ಸಿಐಟಿಯು ಸಂಘಟನೆಯ 53ನೇ ಸಂಸ್ಥಾಪನಾ ದಿನಾಚರಣೆ’ ಅಂಗವಾಗಿ ಜಿಲ್ಲಾ ಸಂಘಟನೆ ವತಿಯಿಂದ ವಿರಾಜಪೇಟೆ ಪುರಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 1970ರಲ್ಲಿ ಸಿಐಟಿಯು ಸಂಘಟನೆ ಸ್ಥಾಪನೆಗೊಂಡು ನಂತರ ಬ್ರಿಟಿಷರ ಅವಧಿಯಲ್ಲಿ ಕಾರ್ಮಿಕ ಸಂಘಟನೆ ಭಾರೀ ಚಳುವಳಿ ನಡೆದಿತ್ತು ಎಂದು ಸಂಘಟನೆ ನಡೆದುಬಂದ ದಾರಿ ಬಗ್ಗೆ ವಿವರಿಸಿದ ದುರ್ಗಾಪ್ರಸಾದ್, ಕಾರ್ಮಿಕರು ಒಂದು ದಿನದ ಬದುಕಿಗಾಗಿ ಹೋರಾಟ ನಡೆಸದೆ ಜೀವನದಲ್ಲಿ ನೆಮ್ಮದಿಯ ಬದುಕಿಗಾಗಿ ಹೊರಾಟ ನಡೆಸುವಂತಾಗಬೇಕು. ಬಂಡವಾಳ ಶಾಹಿಗಳ ಒಡೆತನ ಆಳ್ವಿಕೆ ಇಲ್ಲದೆ ಕಾರ್ಮಿಕರಿಗೆ ಕೈಗೆಟುಕುವಂತ ಆಡಳಿತದ ಅಗತ್ಯವಿದೆ ಎಂದರು. ಸಿಐಟಿಯು ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಕಟ್ಟಡ ಕಾರ್ಮಿಕರು, ಬಿಸಿಯೂಟ ನೌಕರರ ಸಂಘ, ಗ್ರಾ.ಪಂ ನೌಕರರ ಸಂಘ, ಅಂಗನವಾಡಿ ನೌಕರರು ಸೇರಿದಂತೆ ರಾಜ್ಯದಲ್ಲಿ…
ವಿರಾಜಪೇಟೆ ಜೂ.26 : ಬಿಳುಗುಂದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕಿ ಎಸ್.ಜಿ.ಲಿನ್ನಿ ಪ್ರಾಣಾಯಾಮ ಯೋಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪೂರ್ವಭಾವಿ ತರಬೇತಿ ನೀಡಿದರು. ಮುಖ್ಯ ಶಿಕ್ಷಕಿ ಅರುಣ ಆನ್ಸಿ ಡಿಸೋಜ ಯೋಗದ ಮಹತ್ವದ ಬಗ್ಗೆ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರತಿದಿನ ಯೋಗಾಭ್ಯಾಸ ಮಾಡಬೇಕು. ಮನೆಯ ಸದಸ್ಯರಿಗೂ ಕಲಿಸಬೇಕು. ಆರೋಗ್ಯಕ್ಕೆ ಯೋಗ ಉತ್ತಮ ಸಾಧನ. ಇಡೀ ವಿಶ್ವವೇ ಇಂದು ಯೋಗದ ಬಗ್ಗೆ ತಿಳಿದುಕೊಂಡು ಯೋಗದ ಅಭ್ಯಾಸ ಮಾಡುತ್ತಿದೆ. ಇತ್ಯಾದಿ ಅಂಶಗಳ ಬಗ್ಗೆ ತಿಳಿಸಿದರು. ವಸುದೈವ ಕುಟುಂಬಕಂ ಎಂಬ ಧ್ಯೇಯ ವಾಕ್ಯದೊಂದಿಗೆ ಯೋಗವನ್ನು ಮಾಡಲಾಯಿತು. ಶಿಕ್ಷಕರಾದ ಲೀಲಾವತಿ, ಪವಿತ್ರ, ಕಿರಣ್ ಕುಮಾರ್, ಅಲ್ಲಾಬಕ್ಷ ಬಡೇಘರ್, ಹಾಗೂ ಸಾವಿತ್ರಿ ಸೇರಿದಂತೆ ಎಲ್ಲಾ ಶಿಕ್ಷಕರೂ ಯೋಗ ಮಾಡಿದರು.
ಮಡಿಕೇರಿ ಜೂ.26 : ಮಣಿಪುರ ರಾಜ್ಯದಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕ್ರಿಶ್ಚಿಯನ್ ಘಟಕ ಜೂ.28 ರಂದು ಮಡಿಕೇರಿಯಲ್ಲಿ ನಡೆಸಲುದ್ದೇಶಿಸಿರುವ ಪ್ರತಿಭಟನೆಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಬೆಂಬಲ ಸೂಚಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಕಾಂಗ್ರೆಸ್ ನ ಅಲ್ಪಸಂಖ್ಯಾತರ ವಿಭಾಗದ ಎಲ್ಲಾ ಘಟಕಗಳು ಪ್ರತಿಭಟನೆಗೆ ಬೆಂಬಲ ನೀಡಲಿವೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಮಣಿಪುರದಲ್ಲಿ ಚರ್ಚ್‍ಗಳ ಮೇಲೆ ದಾಳಿಯಾಗುತ್ತಿದೆ ಮತ್ತು ಕ್ರೈಸ್ತರನ್ನು ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಕ್ರೈಸ್ತರು ಸೇರಿದಂತೆ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಸೂಕ್ತ ರಕ್ಷಣೆ ನೀಡಬೇಕೆಂದು ಉಸ್ಮಾನ್ ಒತ್ತಾಯಿಸಿದ್ದಾರೆ.
ಮಡಿಕೇರಿ ಜೂ.26 : ರಾಷ್ಟ್ರೀಯ ಸಂಯೋಜಿತ ವೈದ್ಯ ಪದ್ದತಿಗಳ ಸಂಘಟನೆಯ ಕೊಡಗು ಶಾಖೆಯ ವತಿಯಿಂದ ಕೊಡಗು ಸಂಘದ ವೈದ್ಯರಿಗೆ ಮಡಿಕೇರಿಯಲ್ಲಿ ನಿರಂತರ ಶಿಕ್ಷಣ ನಡೆಯಿತು. ಸುಳ್ಯದ ಕೆ.ವಿ.ಜಿ.ಆಯುರ್ವೇದ ಕಾಲೇಜಿನ ಹಿರಿಯ ಪ್ರಾಧ್ಯಾಪಕಿ ಡಾ.ರೋಹಿಣಿ ಭಾರದ್ವಾಜ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು, ಆಯುರ್ವೇದದಲ್ಲಿ ಶೀಘ್ರವಾಗಿ ಕೆಲಸ ಮಾಡುವ ಮದ್ದುಗಳ ಬಗ್ಗೆ ವೈದ್ಯರಿಗೆ ಮಾಹಿತಿ ನೀಡಿದರು. ಹೊಸದಾಗಿ ಮಾರುಕಟ್ಟೆಗೆ ಬಂದಿರುವ ವಿಶೇಷ ಆಯುರ್ವೇದ ಮದ್ದಿನ ಬಗ್ಗೆ ಡಾ.ಉದಯ ಕುಮಾರ್.ಎಸ್.ಮಾಹಿತಿ ನೀಡಿದರು. NIMA ಕೊಡಗು ಅಧ್ಯಕ್ಷ ಡಾ.ರಾಜಾರಾಮ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 25ಕ್ಕೂ ಹೆಚ್ಚು ಕೊಡಗಿನ ಆಯುಷ್ ವೈದ್ಯರು ನಿರಂತರ ಶಿಕ್ಷಣದ ಪ್ರಯೋಜನ ಪಡೆದುಕೊಂಡರು. ಡಾ.ರೋಶನ್ ಸ್ವಾಗತಿಸಿ,,ಡಾ.ಅನುಷಾ ವಂದಿಸಿದರು. ಸಂಪನ್ಮೂಲ ವ್ಯಕ್ತಿ ಪರಿಚಯ ಡಾ.ಹೀನಾ ಕೌಸರ್ ನೆರವೇರಿಸಿ, ಡಾ.ಸೌಮ್ಯ ಗಣರಾಜ್ ನಿರೂಪಿಸಿದರು. NIMA ಮಹಿಳಾ ಘಟಕದ ಅಧ್ಯಕ್ಷೆ ಡಾ.ಶೈಲಜಾ ರಾಜೇಂದ್ರ, ಹಿರಿಯ ವೈದ್ಯರುಗಳಾದ ಡಾ.ಉದಯ ಶಂಕರ.ಎನ್.,ಡಾ.ಶೈಲಜಾ ಮುರಳೀಧರ,ಡಾ.ರಾಜೇಂದ್ರ ಇತರರು ಉಪಸ್ಥಿತರಿದ್ದರು. ಸಂಘದ ಸದಸ್ಯರಲ್ಲಿ ಅದೃಷ್ಟದ ವೈದ್ಯರಾಗಿ ಡಾ.ಪದ್ಮನಾಭ, ಅದೃಷ್ಟದ ಕ್ಲಿನಿಕ್ಗಾಗಿ ಡಾ.ರಾಜೇಶ್ವರಿ,ವೈದ್ಯೋತ್ತಮರಾಗಿ ಡಾ.ಶ್ಯಾಮ.ಕೆ ಅವರನ್ನು ಗುರುತಿಸಲಾಯಿತು.
ಮಡಿಕೇರಿ ಜೂ.27 : ಕೊಡಗುಜಿಲ್ಲಾ ಬಂಟರ ಸಂಘದ ವತಿಯಿಂದ 2022-23ನೇ ಸಾಲಿನ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ, ಬಂಟ ಸಮುದಾಯಕ್ಕ ಸೇರಿದ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ಪ್ರತಿ, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಜು.5 ಕೊನೆಯ ದಿನವಾಗಿದೆ. ನಂತರದಲ್ಲಿ ಬರುವ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾಧ್ಯಕ್ಷ ಬಿ.ಡಿ.ಜಗದೀಶ್‍ರೈ, ಕಾರ್ಯದರ್ಶಿ ರವೀಂದ್ರ ವಿ. ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ತಲುಪಿಸಬೇಕಾದ ಕಚೇರಿ ವಿಳಾಸ : ಅಧ್ಯಕ್ಷರು, ಕೊಡಗುಜಿಲ್ಲಾ ಬಂಟರ ಸಂಘ, 25/4, ಗಾಂಧಿ ಮೈದಾನ ಬಳಿ, ಮಡಿಕೇರಿ- 571201. ಮೊ.7204520272. ಹೆಚ್ಚಿನ ಮಾಹಿತಿಗೆ 9880869490 ಮನೋಜ್ ಶೆಟ್ಟಿ, 7204520272 ಕಿಶೋರ್ ರೈ ಕತ್ತಲೆಕಾಡು ಇವರನ್ನು ಸಂಪರ್ಕಿಸಬಹುದು. ನಿಗದಿತ ಸಮಯದೊಳಗೆ ಬಂದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದೆಂದು ಅವರು ತಿಳಿಸಿದ್ದಾರೆ.
ಮಡಿಕೇರಿ ಜೂ.26 : ಸತ್ಯ ನಿಷ್ಟೂರ ವರದಿಗಾರಿಕೆಯ ಮೂಲಕ, ಸಮಾಜದ ಯಾವುದೇ ವಿಷಯಗಳನ್ನು ತಮ್ಮದೇ ಆದ ಹೊಸ ಆಯಾಮದಿಂದ ನೋಡುವ ಪರಿಕಲ್ಪನೆಯನ್ನು ಮೂಡಿಸಿದ ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕರಾಗಿದ್ದ ದಿವಂಗತ ಮನು ಶೆಣೈರವರ ನೆನಪುಗಳನ್ನು ಚಿರಸ್ಥಾಯಿಯಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ನಡೆಯಬೇಕೆನ್ನುವ ಆಶಯವನ್ನು ಗಣ್ಯರು ವ್ಯಕ್ತಪಡಿಸಿದರು. ಕೊಡಗು ಪತ್ರಿಕಾ ಭವನ ಟ್ರಸ್ಟ್, ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಸಮಾಚಾರ ಅಭಿಮಾನಿ ಬಳಗ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಆಯೋಜಿತ ‘ದಿ.ಬಿ.ಎನ್.ಮನು ಶೆಣೈ ನೆನಪು’ ಕಾರ್ಯಕ್ರಮವನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್ ಉದ್ಘಾಟಿಸಿದರು. ಈ ಸಂದರ್ಭ ಮೌನಾಚರಣೆ ಮತ್ತು ಮನು ಶೆಣೈ ಅವರ ಭಾವ ಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು. ನಂತರ ಮಾತನಾಡಿದ ಟಿ.ಪಿ.ರಮೇಶ್, ವರ್ಷದ ಹಿಂದೆಯಷ್ಟೆ ನಮ್ಮನ್ನು ಅಗಲಿದ ಮನು ಶೆಣೈ ಅವರು ಪತ್ರಿಕಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿಕೊಳ್ಳುವ ಕಾರ್ಯ ಅಗತ್ಯವಾಗಿ ನಡೆಯಬೇಕಾಗಿದೆ. ಸುದೀರ್ಘ ಇಪ್ಪತ್ತಾರು ವರ್ಷ ಕೊಡಗು ಸಮಾಚಾರ ವಾರ ಪತ್ರಿಕೆಯನ್ನು…






