ಲೇಖಕ: admin

ಮಡಿಕೇರಿ ಜೂ.26 : ಸತ್ಯ ನಿಷ್ಟೂರ ವರದಿಗಾರಿಕೆಯ ಮೂಲಕ, ಸಮಾಜದ ಯಾವುದೇ ವಿಷಯಗಳನ್ನು ತಮ್ಮದೇ ಆದ ಹೊಸ ಆಯಾಮದಿಂದ ನೋಡುವ ಪರಿಕಲ್ಪನೆಯನ್ನು ಮೂಡಿಸಿದ ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕರಾಗಿದ್ದ ದಿವಂಗತ ಮನು ಶೆಣೈರವರ ನೆನಪುಗಳನ್ನು ಚಿರಸ್ಥಾಯಿಯಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ನಡೆಯಬೇಕೆನ್ನುವ ಆಶಯವನ್ನು ಗಣ್ಯರು ವ್ಯಕ್ತಪಡಿಸಿದರು. ಕೊಡಗು ಪತ್ರಿಕಾ ಭವನ ಟ್ರಸ್ಟ್, ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಸಮಾಚಾರ ಅಭಿಮಾನಿ ಬಳಗ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಆಯೋಜಿತ ‘ದಿ.ಬಿ.ಎನ್.ಮನು ಶೆಣೈ ನೆನಪು’ ಕಾರ್ಯಕ್ರಮವನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್ ಉದ್ಘಾಟಿಸಿದರು. ಈ ಸಂದರ್ಭ ಮೌನಾಚರಣೆ ಮತ್ತು ಮನು ಶೆಣೈ ಅವರ ಭಾವ ಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು. ನಂತರ ಮಾತನಾಡಿದ ಟಿ.ಪಿ.ರಮೇಶ್, ವರ್ಷದ ಹಿಂದೆಯಷ್ಟೆ ನಮ್ಮನ್ನು ಅಗಲಿದ ಮನು ಶೆಣೈ ಅವರು ಪತ್ರಿಕಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿಕೊಳ್ಳುವ ಕಾರ್ಯ ಅಗತ್ಯವಾಗಿ ನಡೆಯಬೇಕಾಗಿದೆ. ಸುದೀರ್ಘ ಇಪ್ಪತ್ತಾರು ವರ್ಷ ಕೊಡಗು ಸಮಾಚಾರ ವಾರ ಪತ್ರಿಕೆಯನ್ನು…

Read More

ಬೆಂಗಳೂರು ಜೂ.26 :  16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳ ತರಬೇತಿ ಶಿಬಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿಯನ್ನು ಪ್ರತಿಯೊಬ್ಬ ಶಾಸಕ ಬೆಳೆಸಿಕೊಳ್ಳಬೇಕು. ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಬೇಕು. ಸದನದ ನಿಯಮಾವಳಿಗಳನ್ನು ನಾವೇ ಮಾಡಿದ್ದೇವೆ. ಅದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡರೆ ಜನರ ಸಮಸ್ಯೆಗಳನ್ನು ನಿಯಮಬದ್ಧವಾಗಿ ಸದನದ ಮುಂದೆ ಮಂಡಿಸಬಹುದು. ಸಂವಿಧಾನಕ್ಕೆ ವಿರುದ್ಧವಾದ ಕಾನೂನು-ಕಾಯ್ದೆಗಳನ್ನು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಂವಿಧಾನದ ಓದು ಅತ್ಯಗತ್ಯ. ಶಾಸಕರು ಸಂಸದರು ಬಜೆಟ್ ಅಂದರೆ ಏನೆಂದು ಅರ್ಥ ಮಾಡಿಕೊಳ್ಳಬೇಕು. 12ನೇ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರು ಬಜೆಟ್ ಬಗ್ಗೆ ಹೇಳಿದ್ದಾರೆ. ಕಾಯಕ ಮತ್ತು ದಾಸೋಹ ಬಜೆಟ್ ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ…

Read More

ನಾಪೋಕ್ಲು 26 : ಒಡಿಶಾದಲ್ಲಿ ಜೂ.27 ರಿಂದ ನಡೆಯಲಿರುವ ರಾಷ್ಟ್ರೀಯ ಜೂನಿಯರ್ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದ ಗೋಲ್ ಕೀಪರ್ ಆಗಿ ಕುಂಜಿಲ-ಕಕ್ಕಬ್ಬೆಯ ಪಿ.ಡಿ.ಶ್ರಾವ್ಯ ಆಯ್ಕೆಯಾಗಿದ್ದಾರೆ. ಈಕೆ ಮಡಿಕೇರಿಯ ಸಾಯಿ ಬಾಲಕಿಯರ ಕ್ರೀಡಾ ವಸತಿ ನಿಲಯದಲ್ಲಿ ಇದ್ದು, ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಕುಂಜಿಲ ಗ್ರಾಮದ ದೇವಯ್ಯ-ಚಿತ್ರಾ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ    

Read More

ಸುಂಟಿಕೊಪ್ಪ, ಜೂ.26 : ಸುಂಟಿಕೊಪ್ಪ ಪಟ್ಟಣದಲ್ಲಿ ಸಂತೆ ದಿನವಾದ ಭಾನುವಾರ ಜನಜಂಗುಳಿ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶದಿಂದಲೂ ಸಂತೆ ಮಾರುಕಟ್ಟೆಗೆ ಗ್ರಾಹಕರು ಬರುತ್ತಾರೆ. ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಹೆದ್ದಾರಿ ರಸ್ತೆ ಬದಿ ದಿಢೀರನೆ ಗೂಡ್ಸ್ ಗಾಡಿಗಳಲ್ಲಿ ಚಪ್ಪಲಿ ಹಣ್ಣು ಹಂಪಲು ಅಂಗಡಿಗಳು, ಸೇರಿದಂತೆ ಇತರೆ ಸಾಮಾಗ್ರಿಗಳ ಅಂಗಡಿಗಳು ತಲೆ ಎತ್ತಿದ್ದು, ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಶನಿವಾರ ಹಾಗೂ ಭಾನುವಾರ ಪ್ರವಾಸಿಗರು ಅಧಿಕ ಸಂಖ್ಯೆಯಲ್ಲಿ ಈ ರಸ್ತೆಗಾಗಿ ಸಂಚರಿಸುತ್ತಿದ್ದು, ರಸ್ತೆ ಬದಿ ಅಂಗಡಿಗಳು ತೆರೆದು ಮಾರಾಟಗೊಳಿಸುವುದರಿಂದ ಕೆಲ ಖಾಸಗಿ ವಾಹನ ನಿಲುಗಡೆಗೊಳಿಸುವುದು ಟ್ರಾಫಿಕ್ ಜಾಮ್ ಆಗುತ್ತಿದ್ದು, ಅನಾಹುತ ಹಾಗೂ ಪಾದಚಾರಿಗಳ ಜೀವಕ್ಕೆ ಕಂಟಕಕ್ಕೆ ಆಹ್ವಾನ ನೀಡಿದಂತ್ತಾಗಿದೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Read More

ಮಡಿಕೇರಿ ಜೂ.26 : ಎಸ್‌ಕೆಎಸ್‌ಎಸ್‌ಎಫ್  ಗೂನಡ್ಕ ಶಾಖೆ ವತಿಯಿಂದ ಸಮಸ್ತ ಸ್ಥಾಪನಾ ದಿನ ಆಚರಣೆ ನಡೆಯಿತು. ಖತೀಬರಾದ ರಿಯಾಝ್ ಫೈಝಿ ಮಾತನಾಡಿ,  ಸಮಸ್ತದ 97 ವರ್ಷಗಳ ಕಾಲ ಸಮುದಾಯಕ್ಕೆ ನೀಡಿದ ಕೊಡುಗೆಗಳನ್ನು ವಿವರಿಸಿದರು. ಜಮಾಅತ್ ಪ್ರಧಾನ ಕಾರ್ಯದರ್ಶಿ ಪಿ.ಕೆ.ಉಮ್ಮರ್  ಧ್ವಜಾರೋಹಣ  ನೆರವೇರಿಸಿದರು. ಎಸ್‍ಕೆಎಸ್‍ಎಸ್‍ಎಫ್ ಶಾಖೆ ಅಧ್ಯಕ್ಷ ಸಾಜಿದ್ ಅಝ್ಹರಿ ಅಧ್ಯಕ್ಷತೆ ವಹಿಸಿದರು. ಜಮಾಅತ್ ಉಪಾಧ್ಯಕ್ಷ ಟಿ.ಬಿ.ಹನೀಫ್, ಅಲ್ತಾಪ್ ಗೂನಡ್ಕ ಶಂಸುದ್ದೀನ್ ಡ್ರೈವರ್ ಮಿದ್ಲಾಝ್ ದಾರಿಮಿ, ಅಬ್ಬಾಸ್ ಮುಸ್ಲಿಯಾರ್ ಉಸ್ಮಾನ್ ಪಾಂಡಿ ಸಾದುಮಾನ್ ತೆಕ್ಕಿಲ್ ಉಸ್ಮಾನ್ ಗಡಿಕಲ್ಲು ಹಾಗೂ ಜಮಾಅತರು ಮದ್ರಸ ವಿದ್ಯಾರ್ಥಿಗಳು ಹಾಜರಿದ್ದರು. ಶಾಖೆಯ ಪ್ರಧಾನ ಕಾರ್ಯದರ್ಶಿ ಕಾದರ್ ಮೊಟ್ಟೆಂಗಾರ್ ಸ್ವಾಗತಿಸಿ, ಸಾದುಮಾನ್ ತೆಕ್ಕಿಲ್ ವಂದಿಸಿದರು.

Read More

ಮಡಿಕೇರಿ ಜೂ.26 : ಮಡಿಕೇರಿಯ ಚಾಮುಂಡೇಶ್ವರಿ ನಗರದ ಸಿದ್ಧಿವಿನಾಯಕ ಯುವಕ ಮಿತ್ರ ಮಂಡಳಿಯ ನೂತನ ಅಧ್ಯಕ್ಷರಾಗಿ ರೇಣುಕಾ ಪ್ರಸಾದ್, ಉಪಾಧ್ಯಕ್ಷರಾಗಿ ಪುನೀತ್ ಆಯ್ಕೆಯಾದರು. ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ 24ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಕಾರ್ಯದರ್ಶಿ ಸಂತೋಷ್, ಖಜಾಂಚಿ ನರೇಶ್ ಅವರನ್ನು ಪುನರ್ ಆಯ್ಕೆ ಮಾಡಲಾಯಿತು. ಉಪ ಖಜಾಂಚಿಯಾಗಿ ಲವ, ಸೋಮ್ ಮತ್ತು ದಿವಾಕರ್ ನೇಮಕಗೊಂಡರು. ಅಲಂಕಾರ ಸಮಿತಿ ಅಧ್ಯಕ್ಷರಾಗಿ ಶ್ರೀಕಾಂತ್, ಉಪಾಧ್ಯಕ್ಷರಾಗಿ ಸುಮನ್ ಮತ್ತು ಲಿಖಿ(ಗುಡ್ಡೆ) ಆಯ್ಕೆಯಾದರು. ಈ ಸಂದರ್ಭ ನೂತನ ಅಧ್ಯಕ್ಷ ರೇಣುಕಾ ಪ್ರಸಾದ್ ಮಾತನಾಡಿ, ಈ ಬಾರಿ ಗೌರಿ-ಗಣೇಶ ಉತ್ಸವವನ್ನು ಅದ್ಧೂರಿಯಾಗಿ ನಡೆಸಲು ಸರ್ವ ಸದಸ್ಯರ ಸಹಕಾರ ಕೋರಿದರು. ಖಜಾಂಚಿ ನರೇಶ್ ಈ ವರ್ಷದ ಸದಸ್ಯತ್ವ ಶುಲ್ಕದ ಬಗ್ಗೆ ಚರ್ಚಿಸಿದರು. ಎಲ್ಲಾ ಸದಸ್ಯರ ಸಹಕಾರ ಇದ್ದಲ್ಲಿ ಮಾತ್ರ ಈ ಬಾರಿಯೂ ಉತ್ತಮ ರೀತಿಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂದರು.

Read More

ನಾಪೋಕ್ಲು ಜೂ.26 : ರಾಜ್ಯ ರಸ್ತೆ ಸಾರಿಗೆ ಬಸ್ಸುಗಳು ನಿಗದಿತ ಸಮಯಕ್ಕೆ ಸಂಚರಿಸದೆ ಶಾಲಾ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ನಾಪೋಕ್ಲು ಪೊಲೀಸರಿಗೆ ದೂರು ನೀಡಿದರು. ಬೆಂಗಳೂರಿನಿಂದ ನಾಪೋಕ್ಲು ಮುಖಾಂತರ ಭಾಗಮಂಡಲಕ್ಕೆ ತೆರಳುವ ಸರ್ಕಾರಿ ಬಸ್ಸುಗಳು ನಿಗದಿತ ಸಮಯಕ್ಕೆ ಬರುತ್ತಿಲ್ಲ. ವಾರದಲ್ಲಿ ಎರಡು ಮೂರು ದಿನಗಳು ಮಾತ್ರ ಸಂಚರಿಸುತ್ತಿದ್ದು ಈ ಬಸ್ಸುಗಳ ಮೂಲಕ ಶಾಲಾ ಕಾಲೇಜುಗಳಿಂದ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ನಾಪೋಕ್ಲುವಿನಿಂದ ನೆಲಜಿ, ಬಲಮಾವಟಿ, ಅಯ್ಯಂಗೇರಿ ಮೂಲಕ ಪ್ರತಿನಿತ್ಯ ಸಂಜೆ 4 ಬಸ್ಸುಗಳು ಭಾಗಮಂಡಲಕ್ಕೆ ತೆರಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಕೆಲವು ಬಸ್ಸುಗಳು ಇಲ್ಲಿಯ ಸಂತೆ ಮೈದಾನದಲ್ಲಿ ಸ್ಥಗಿತಗೊಳಿಸಲಾಗುತ್ತಿದ್ದು ನಿಯಮಿತವಾಗಿ ಸಂಚರಿಸುತ್ತಿಲ್ಲ. ವಾರದಲ್ಲಿ ಎರಡು ಮೂರು ದಿನಗಳು ಮಾತ್ರ ಬರುವುದರಿಂದ ವಿದ್ಯಾರ್ಥಿಗಳು ತೀವ್ರ ಸಮಸ್ಯೆಯನ್ನು ಎದುರಿಸುವಂತಾಗಿದೆ. ನಾಪೋಕ್ಲುವಿಗೆ ತಡವಾಗಿ ಆಗಮಿಸುವ ಬಸ್ಸುಗಳು ಸಂತೆ ಮೈದಾನದಲ್ಲಿ ನಿಲುಗಡೆಗೊಳ್ಳುತ್ತಿವೆ. ಇಲ್ಲಿಂದ ಮುಂದಕ್ಕೆ ತೆರಳುತ್ತಿಲ್ಲ. ನಾವು ಪ್ರತಿನಿತ್ಯ ಬಸ್ಸಿಗಾಗಿ ಕಾದು ಸಮಸ್ಯೆ ಅನುಭವಿಸುವಂತಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಸಂಬಂಧಪಟ್ಟವರು…

Read More

ನಾಪೋಕ್ಲು ಜೂ.26 : ಪೋಷಕರು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮನ್ವಯತೆಯಿಂದ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ ಹೇಳಿದರು. ಶಾಲೆಯ ಸಭಾಂಗಣದಲ್ಲಿ 2023-24ರ ಶೈಕ್ಷಣಿಕ ವರ್ಷದ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳನ್ನು ಪೋಷಕರು ಶಾಲೆಗೆ ದಾಖಲು ಮಾಡಿ ಸುಮ್ಮನಿರಬಾರದು. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಬೇಕು. ಶಿಕ್ಷಕರೊಡನೆ ನಿರಂತರ ಸಂಪರ್ಕದಲ್ಲಿದ್ದು ಶೈಕ್ಷಣಿಕ ಪ್ರಗತಿಯ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಬೇಕು ಎಂದರು. ಸಂಸ್ಥೆಯ ಉಪಾಧ್ಯಕ್ಷ ಕಲಿಯಂಡ ಹಾರಿ ಮಂದಣ್ಣ, ಪ್ರಾಂಶುಪಾಲರಾದ ಕಲ್ಯಾಟಂಡ ಶಾರದಾ ಅಪ್ಪಣ್ಣ, ನಿವೃತ್ತ ಪ್ರಾಂಶುಪಾಲ ಪ್ರೊ.ಕಲ್ಯಾಟಂಡ ಪೂಣಚ್ಚ ಮಾತನಾಡಿದರು. ಈ ಸಂದರ್ಭ ಕಾರ್ಯಕ್ರಮದ ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕ ಮಕ್ಕಿ ಸುಬ್ರಮಣ್ಯ, ಕೊಂಬಂಡ ಗಣೇಶ, ಬೋಪ್ಪಂಡ ಕುಶಾಲಪ್ಪ, ಅಪ್ಪಾರಂಡ ಅಪ್ಪಯ್ಯ, ಬಿದ್ದಾಟಂಡ ಮುತ್ತಣ್ಣ, ನಾಯಕಂಡ ದೀಪಕ್ ಚಂಗಪ್ಪ, ಅಪ್ಪಚೆಟ್ಟೋಳಂಡ ನವೀನ್ ಅಪ್ಪಯ್ಯ ಉಪಸ್ಥಿತರಿದ್ದರು. ಪೋಷಕರು ಹಾಗೂ ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಕ್ಷಕಿ ಚಂದ್ರಕಲಾ…

Read More

ಮಡಿಕೇರಿ ಜೂ.24  : ಕಳೆದ ಒಂದು ವರ್ಷ ಎಂಟು ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡಿರುವ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರಿಗೆ ಜಿಲ್ಲಾಡಳಿತ ವತಿಯಿಂದ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು. ನಗರದಲ್ಲಿ ನಡೆದ ಸರಳ ಬೀಳ್ಕೊಡುಗೆ ಸಮಾರಂಭದಲ್ಲಿ ಡಾ.ಬಿ.ಸಿ.ಸತೀಶ ಅವರಿಗೆ ಫಲಪುಷ್ಪ, ತಾಂಬೂಲ, ಶಾಲೂ ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವುದು ಒಂದು ಅವಕಾಶ, ಆ ನಿಟ್ಟಿನಲ್ಲಿ ಎಲ್ಲರ ಸಹಕಾರದಿಂದ ಹೆಚ್ಚಿನ‌ ಕೆಲಸ ನಿರ್ವಹಿಸಲು ಸಾಧ್ಯವಾಯಿತು ಎಂದು ತಿಳಿಸಿದರು. ಕೊಡಗು ವಿಶೇಷ ಜಿಲ್ಲೆಯಾಗಿದ್ದು, ಇಲ್ಲಿ ಕೆಲಸ ನಿರ್ವಹಿಸುವುದು ವಿಶೇಷ ಅನುಭವ ಪಡೆದಂತೆ ಎಂದರು. ವಿಧಾನಸಭಾ ಮತ್ತು ವಿಧಾನ ಪರಿಷತ್ ಚುನಾವಣೆ ಜೊತೆಗೆ ಹಲವು ಅಭಿವೃದ್ಧಿ ಕಾರ್ಯದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಂಡವಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಲು ಪ್ರಯತ್ನಿಸಿದ್ದೇನೆ. ಎಲ್ಲರ ಸಹಕಾರದಿಂದ ಸಾರ್ವಜನಿಕ ಕರ್ತವ್ಯವನ್ನು ನಿರ್ವಹಿಸಲು ಸಾಧ್ಯ ಎಂದು…

Read More

ಮಡಿಕೇರಿ  ಜೂ.26 :  ಕುಂಜಿಲದ ಕೆ ಪಿ ಬಾಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ  ಒಂದನೇ ತರಗತಿ  ಆಂಗ್ಲ ಮಾಧ್ಯಮ ಶಾಲೆಯನ್ನು ಉದ್ಘಾಟಿಸಲಾಯಿತು. ಸಮಾರಂಭದಲ್ಲಿ ಕುಂಜಿಲ-ಕಕ್ಕಬೆ ಗ್ರಾ.ಪಂ ಅಧ್ಯಕ್ಷ  ಸಂಪನ್ ಅಯ್ಯಪ್ಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶೋಕ್ ,  ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಮೊಹಮ್ಮದ್ ಹಾಜಿ ಹಾಗೂ ಶಾಲೆಯ ಎಸ್. ಡಿ ಎಂ. ಸಿ ಅಧ್ಯಕ್ಷರು ಹಾಗೂ ಗ್ರಾ.ಪಂ ಸದಸ್ಯರಾದ ಸಫಿ, ಗ್ರಾ.ಪಂ ಉಪಾಧ್ಯಕ್ಷ  ರಸೀನಾ, ಗ್ರಾ.ಪಂ ಸದಸ್ಯ ಬಷೀರ್ , ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ  ಅಫೀಲ್ , ಶಾಲಾ ಮುಖ್ಯೋಪಾಧ್ಯಾಯರಾದ ಪಿ. ಕೆ ಗಂಗಮ್ಮ, ಶಿಕ್ಷಕರು, ಪೋಷಕರು, ಶಾಲಾ ಎಸ್. ಡಿ ಎಂ ಸಿ ಸದಸ್ಯರು ಹಾಜರಿದ್ದರು.

Read More