ಲೇಖಕ: admin

ಮಡಿಕೇರಿ ಮೇ 17 : ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಸರ್ಕಾರದ ಸಮರ್ಥ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸಲು ನೂತನ ಕಾಂಗ್ರೆಸ್ ಸರ್ಕಾರ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಪಿಗ್ಮಿ ಸಂಗ್ರಹಗಾರರ ಸಂಘ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಎಂ.ಡಿ.ನಾಣಯ್ಯ ಅವರು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಅಭಿವೃದ್ಧಿಪರ ಚಿಂತನೆಯ ಉತ್ಸಾಹಿ ಶಾಸಕರು ಆಯ್ಕೆಯಾಗಿದ್ದಾರೆ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಕೊಡಗಿನವರಿಗೆ ಸಚಿವ ಸ್ಥಾನ ನೀಡಬೇಕೆನ್ನುವ ಬೇಡಿಕೆ ದಶಕಗಳಿಂದ ಕೇಳಿ ಬಂದಿದ್ದು, ಜನರ ಮನವಿಗೆ ಈ ಸರ್ಕಾರ ಸ್ಪಂದಿಸಬೇಕು. ಖ್ಯಾತ ವಕೀಲರಾಗಿ ಹಲವು ಜಟಿಲ ಸಮಸ್ಯೆಗಳನ್ನು ಬಗೆ ಹರಿಸಿದ ಹೆಗ್ಗಳಿಕೆಯ ಪೊನ್ನಣ್ಣ ಅವರು ಕ್ಷೇತ್ರದ ಜನ ಸಾಮಾನ್ಯರ ಸಂಕಷ್ಟಗಳಿಗೆ ಚುನಾವಣೆಗೂ ಮೊದಲೇ ಸ್ಪಂದಿಸುತ್ತಾ ಬಂದಿದ್ದಾರೆ. ಇವರು ಸಚಿವರಾಗಿ ಆಯ್ಕೆಯಾದರೆ ಕೊಡಗು ಜಿಲ್ಲೆಗೆ ಮಾತ್ರವಲ್ಲದೆ ಇಡೀ ಕರ್ನಾಟಕ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡಿದಂತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್…

Read More

ಮಡಿಕೇರಿ ಮೇ 17 : ಕೊಡಗಿನ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಬಿಜೆಪಿಯೇತರ ಪಕ್ಷಗಳ ಒಳ ಒಪ್ಪಂದವೇ ಕಾರಣವೆಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸೋಲಿನ ಹೊಣೆಯನ್ನು ಜಿಲ್ಲಾಧ್ಯಕ್ಷನಾಗಿ ನಾನೇ ಹೊರಲಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬೇಕೆನ್ನುವ ಏಕ ಮಾತ್ರ ಉದ್ದೇಶದಿಂದ ಇತರ ಪಕ್ಷಗಳೆಲ್ಲವು ಒಂದಾಗಿ ಕೆಲಸ ಮಾಡಿವೆ ಎಂದು ಟೀಕಿಸಿದರು. ಜಿಲ್ಲೆಯ ಎರಡು ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡಿರಬಹುದಾದರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಡೆದುಕೊಂಡ ಮತಗಳನ್ನು ತುಲನೆ ಮಾಡಿದರೆ ಈ ಬಾರಿ ಬಿಜೆಪಿ ಹೆಚ್ಚಿನ ಮತಗಳನ್ನು ಪಡೆದುಕೊಂಡಿದೆ. ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಒಟ್ಟಾಗಿ ಕಳೆದ ಬಾರಿಗಿಂತ 13,079 ಹೆಚ್ಚಿನ ಮತಗಳನ್ನು ಬಿಜೆಪಿ ಗಳಿಸಿದೆ ಎಂದು ಸಮರ್ಥಿಸಿಕೊಂಡರು. ಜೆಡಿಎಸ್ ಒಳಗೊಂಡಂತೆ ಎಲ್ಲಾ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿರುವುದೇ ಕಾಂಗ್ರೆಸ್ ಗೆಲುವಿಗೆ ಕಾರಣವೆಂದರು. ಈ ಬಾರಿಯ ಚುನಾವಣೆಯಲ್ಲಿನ ಜನಾಭಿಪ್ರಾಯವನ್ನು ಒಳ್ಳೆಯ ಮನಸ್ಸಿನಿಂದ ಸ್ವೀಕಾರ ಮಾಡಿದ್ದೇವೆ. ಚುನಾವಣೆಯಲ್ಲಿ ಸೋಲು ಎದುರಾಗಿದ್ದರು, ಪಕ್ಷದ…

Read More

ವಿರಾಜಪೇಟೆ ಮೇ 17 : ತುರ್ತು ಕರೆಗೆ ಸ್ಪಂದಿಸಿ ರಾತ್ರಿ ವೇಳೆಯಲ್ಲಿ ರಕ್ತದಾನ ಮಾಡಿದ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸದಸ್ಯ  ಯಾಸಿನ್ ಮಾನವೀಯತೆ ಮೆರೆದಿದ್ದಾರೆ. ಬೆಂಗಳೂರಿನ ಸ್ವಾಮಿ ವಿವೇಕಾನಂದ ರಕ್ತ ನಿಧಿ ಘಟಕದಿಂದ ಕರೆ ಬಂದ ತಕ್ಷಣವೇ ರಾತ್ರಿ 1 ಗಂಟೆಯ ಸಮಯದಲ್ಲಿ ಹೋಗಿ ರಕ್ತದಾನ ಮಾಡಿ ಜೀವ ಉಳಿಸಿದ್ದಾರೆ.

Read More

ಮಡಿಕೇರಿ ಮೇ 17 :  ಕೌಶಲ್ಯ ತರಬೇತಿ ಪಡೆಯುತ್ತಿರುವ ವಿದ್ಯಾಥಿ೯ಗೆ ಮಡಿಕೇರಿ ಇನ್ನರ್ ವೀಲ್ ಸಂಸ್ಥೆ ವತಿಯಿಂದ ನೆರವು ನೀಡಲಾಯಿತು. ದೇವರಕೊಲ್ಲಿ ಗ್ರಾಮದ ಕೆ.ಎಂ.ಜೀವನ್ ಅವರ ತಂದೆ ಎರಡು ವಷ೯ಗಳ ಹಿಂದೆ ಸಿಡಿಲು ಬಡಿದು ಹಾಸಿಗೆ ಹಿಡಿದಿದ್ದಾರೆ. ತಾಯಿಯೋವ೯ರೇ ದುಡಿದು ಮಗನ ಶಿಕ್ಷಣಕ್ಕೆ ನೆರವಾಗುತ್ತಿದ್ದು, ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ವಿದ್ಯಾಥಿ೯ ದಶ೯ನ್ ಗೆ ಅಗತ್ಯವಿದ್ದ ಮೊಬೈಲ್ ಫೋನ್ ನೀಡಿ ತಾಂತ್ರಿಕವಾಗಿ ಸಹಾಯ ಮಾಡಲಾಯಿತು. ಅಂತೆಯೇ ಡಾ.ಎಂ.ಜಿ.ಪಾಟ್ಕರ್ ಕೂಡ ದಶ೯ನ್ ಗೆ ಆಥಿ೯ಕ ನೆರವು ನೀಡಿದರು. ಮಡಿಕೇರಿಯ ಹಿರಿಯ ಲೆಕ್ಕಪರಿಶೋಧಕ ಅನಂತಸುಬ್ಬರಾವ್ ಪುತ್ರಿ ವಿದ್ಯಾ ವಿಷ್ಣುಕಿರಣ್ ಅವರು ಕೊಡುಗೆಯಾಗಿ ನೀಡಿದ ಸ್ಮಾಟ್೯ ಫೋನ್ ನ್ನು ಇನ್ನರ್ ವೀಲ್ ಅಧ್ಯಕ್ಷೆ ಡಾ.ರೇಣುಕಾಸುಧಾಕರ್, ಕಾಯ೯ದಶಿ೯ ಲಲಿತಾ ರಾಘವನ್ , ಸದಸ್ಯರಾದ ಜಯಲಕ್ಷ್ಮೀ ಪಾಟ್ಕರ್, ಸಲೀಲಾ ಪಾಟ್ಕರ್, ಉಮಾಗೌರಿ, ಮಲ್ಲಿಗೆ ಪೈ, ಆಗ್ನೇಸ್ ಮುತ್ತಣ್ಣ, ಲತಾ ಚಂಗಪ್ಪ, ಲಕ್ಷ್ಮೀ ಈಶ್ವರ್ ಭಟ್, ದಾನಿಗಳಾದ ಅನಂತ ಸುಬ್ಬರಾವ್, ಡಾ.ಎಂ.ಜಿ.ಪಾಟ್ಕರ್ ಈ ಸಂದಭ೯ ಹಾಜರಿದ್ದರು.

Read More

ಮಡಿಕೇರಿ ಮೇ 17 : ನಗರದ ಶ್ರೀ ಮುತ್ತಪ್ಪ ದೇವಾಲಯದ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವವು ಮೇ 21 ರಂದು ನಡೆಯಲಿದೆ ಎಂದು ಮಹಿಳಾ ವೇದಿಕೆಯ ಸದಸ್ಯೆ ವಿಶಾಲಾಕ್ಷಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಪುರಾತನ ದೇವಾಲಯಗಳಲ್ಲಿ ಒಂದಾದ ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಪಾರ್ವತಿ, ಶ್ರೀ ಸರಸ್ವತಿ, ಶ್ರೀ ಮಹಾಲಕ್ಷ್ಮಿ ಸಂಕಲ್ಪದಲ್ಲಿರುವ ಶ್ರೀ ಭಗವತಿ ದೇವಿಗೆ ಪೊಂಗಾಲ ಸೇವೆಯನ್ನು ಬೆಳಿಗ್ಗೆ 8.30ಕ್ಕೆ ನಡೆಸಲು ಉದ್ದೇಶಿಸಲಾಗಿದ್ದು, ಈ ಬಾರಿ ವಿಜೃಂಭಣೆಯಿಂದ ಉತ್ಸವ ನಡೆಸಲಾಗುವುದು. ಇದು ಕೇವಲ ಮಹಿಳೆಯರು ಮಾತ್ರ ನಡೆಸುವ ಪುಣ್ಯ ಕಾರ್ಯವಾಗಿದ್ದು, ಪೊಂಗಾಲ ಸಮರ್ಪಣೆಯಿಂದ ಮನೆಯಲ್ಲಿ ಆರೋಗ್ಯ ಶಾಂತಿ, ನೆಮ್ಮದಿ ನೆಲೆಸುವ ನಂಬಿಕೆ ಇದೆ ಎಂದರು. ಇಟ್ಟಿಗೆ ಅಥವಾ ಕಲ್ಲುಗಳನ್ನು ಜೋಡಿಸಿ ಒಲೆಯನ್ನು ಹಾಕಿ ಸೌದೆಯನ್ನು ಜೋಡಿಸಿ ಸಿದ್ದಪಡಿಸಿದ ನಂತರ ಅರ್ಚಕರು ನೀಡಿದ ಕರ್ಪೂರದಾರತಿಯಿಂದ ಒಲೆ ಉರಿಸಿ, ಹೊಸ ಮಡಿಕೆಯಲ್ಲಿ ನೀರು ತುಂಬಿಸಿ ಪೊಂಗಾಲ ತಯಾರಿಕೆ ಮಾಡಲಾಗುತ್ತದೆ. ಪೊಂಗಾಲ  ಸೇವೆ ಮಾಡಲಿಚ್ಚಿಸುವ ಮಹಿಳೆಯರು…

Read More

ಮಡಿಕೇರಿ ಮೇ 17 :  ಕೊಡಗು ಜಿಲ್ಲೆಯಲ್ಲಿ  ಕಾಡಾನೆಗಳ ದಾಂಧಲೆ ಮುಂದುವರಿದಿದ್ದು,   ಮನೆಯ ಗೇಟ್, ಕಾಫಿ, ಅಡಿಕೆ ಬೆಳೆಗಳನ್ನು ನಾಶಪಡಿಸಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಪುಲಿಯೇರಿ ಗ್ರಾಮದಲ್ಲಿ  ನಡೆದಿದೆ. ಬೆಳೆಗಾರ ಚೋವಂಡ ವಾಸು ಪೊನ್ನಪ್ಪ ಅವರ  ಮನೆಯಂಗಳಕ್ಕೆ ಲಗ್ಗೆ ಇಟ್ಟ ಕಾಡಾನೆಗಳು  ಮನೆಯ ಗೇಟ್ ಗೆ ಹಾನಿಗೊಳಿಸಿವೆ. ರಾತ್ರಿ ತೋಟಕ್ಕೆ ನುಗ್ಗಿ ಕಾಫಿ, ಅಡಿಕೆ ಬೆಳೆಗಳನ್ನು  ನಾಶಪಡಿಸಿವೆ.   ಕಳೆದೆರಡು ದಿನಗಳಿಂದ ಇದೆ ಭಾಗದಲ್ಲಿ ಕಾಡಾನೆಗಳು‌ ಬೀಡು ಬಿಟ್ಟಿದ್ದು, ಆತಂಕವನ್ನು ಸೃಷ್ಟಿಸಿವೆ. ಗ್ರಾಮಸ್ಥರು ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು,  ತಕ್ಷಣ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಮೇ 17 : ಚುನಾವಣೆಗು ಮೊದಲು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಕೊಡಗು ಜಿಲ್ಲೆಯ ಇಬ್ಬರು ನೂತನ ಶಾಸಕರು ಈಡೇರಿಸಲಿದ್ದು, ಸರ್ವಜನಾಂಗ ಅಭಿವೃದ್ಧಿಯಾಗಲಿದೆ ಎಂದು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚುನಾವಣೆಗೂ ಮೊದಲು ಕ್ಷೇತ್ರದಲ್ಲಿ ಸಂಚರಿಸಿ ಜನಸಾಮಾನ್ಯರ ಕಷ್ಟಗಳನ್ನು ಅರಿತು ಸ್ಪಂದಿಸುತ್ತಿದ್ದ ರೀತಿಗೆ ಉತ್ತರವಾಗಿ ಇಂದು ಮತದಾರರು ಗೆಲುವು ತಂದುಕೊಟ್ಟಿದ್ದಾರೆ. ಪೊನ್ನಣ್ಣ ಅವರು ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದರೊಂದಿಗೆ ಜನರ ಕನಸು ನನಸು ಮಾಡಲಿದ್ದಾರೆ. ಜಾತ್ಯತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿಪರ ಚಿಂತನೆಯೊಂದಿಗೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು. ಆ ಮೂಲಕ ಸರ್ಕಾರ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಪೂರಕ ವಾತಾವರಣವನ್ನು ಸೃಷ್ಟಿಸಬೇಕೆಂದು ಮನವಿ ಮಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಪೋಕ್ಲು ಬ್ಲಾಕ್ ವ್ಯಾಪ್ತಿಯಲ್ಲಿ 11,500 ಮತಗಳನ್ನು ಗಳಿಸಿದ್ದ ಕೆ.ಜಿ.ಬೋಪಯ್ಯ ಅವರು ಈ ಬಾರಿ ಮೂರೂವರೆ ಸಾವಿರ ಮತಗಳಿಗೆ ಕುಸಿತ ಕಂಡಿದ್ದಾರೆ. ಇದು…

Read More

ಮಡಿಕೇರಿ ಮೇ 17 : ಅಭಿವೃದ್ಧಿ ಶೂನ್ಯ ವ್ಯವಸ್ಥೆ ಮತ್ತು ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಜನರ ಹಾದಿ ತಪ್ಪಿಸುವುದಕ್ಕಾಗಿ ಬಿಜೆಪಿ ಮಾಡಿದ ಪ್ರಯತ್ನಗಳು ವಿಫಲವಾಗಿದ್ದು, ಜನರು ಪರಿವರ್ತನೆ ಬಯಸಿದ ಪರಿಣಾಮ ಕಾಂಗ್ರೆಸ್ ಭರ್ಜರಿ ಗೆಲುವನ್ನು ಸಾಧಿಸಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಗೆಲ್ಲಲು ಸಾಧ್ಯವಾಗದಿದ್ದ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮಡಿಕೇರಿ ಕ್ಷೇತ್ರದ ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಅವರು ಉತ್ಸಾಹಿ ಶಾಸಕರುಗಳಾಗಿದ್ದಾರೆ. ಈ ಗೆಲುವು ನನ್ನ ಒಬ್ಬನಿಂದ ಸಾಧ್ಯವಾಗಿಲ್ಲ, ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ಪ್ರತಿಯೊಬ್ಬ ಪದಾಧಿಕಾರಿ ಹಾಗೂ ಮೇಲ್ಮಟ್ಟದ ನಾಯಕರಿಗೂ ಯಶಸ್ಸಿನ ಕೀರ್ತಿ ಸಲ್ಲಬೇಕು ಎಂದರು. ಬಿಜೆಪಿ ಸ್ಟಾರ್ ಪ್ರಚಾರಕನ್ನು ಕರೆತಂದರೂ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಜಿಲ್ಲೆಯ ಇಬ್ಬರು ನೂತನ ಶಾಸಕರು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಿದ್ದಾರೆ. ಚುನಾವಣೆ ಪೂರ್ವದಲ್ಲೇ ಮಂತರ್ ಗೌಡ ಹಾಗೂ ಪೊನ್ನಣ್ಣ…

Read More

ಮಡಿಕೇರಿ ಮೇ.17 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕಲಾ ವೈಭವ ಉತ್ಸವದ ಲೋಗೋವನ್ನು  ಬಿಡುಗಡೆ ಮಾಡಲಾಯಿತು. ಪ್ರಾಂಶುಪಾಲರಾದ ಮೇಜರ್ ಡಾ. ರಾಘವ.ಬಿ ಅವರು ಜೂನ್, 3 ರಂದು ನಡೆಯುವ ಕಲಾ ಉತ್ಸವ ‘ಕಲಾ ವೈಭವ’ ಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭ ಮಾತನಾಡಿದ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಅವರು, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ, ಸೃಜನಶೀಲತೆ ಹೆಚ್ಚಿಸಲು ಅನುಕೂಲ ಆಗುತ್ತದೆ. ಜೊತೆಗೆ ಸ್ಪರ್ಧಾತ್ಮಕ ಯುಗದಲ್ಲಿಯೂ ಯಶಸ್ಸಿನ ಗುರಿಯತ್ತ ಸಾಗಲು ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿದರು. 

Read More

ಮಡಿಕೇರಿ ಮೇ 17 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮಡಿಕೇರಿ-ಕುಟ್ಟ ರಸ್ತೆಯ 8.30 ಕಿ.ಮೀ.ನಿಂದ 10 ಕಿ.ಮೀ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಸೋಮವಾರಪೇಟೆ ತಾಲ್ಲೂಕು ಮಡಿಕೇರಿ-ಕುಟ್ಟ ರಸ್ತೆಯ 8.30 ಕಿ.ಮೀ.ನಿಂದ 10 ಕಿ.ಮೀ.ವರೆಗಿನ ರಸ್ತೆಯಲ್ಲಿ ಮೇ, 22 ರಿಂದ ಜುಲೈ, 10 ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಬದಲಿ ರಸ್ತೆಯಾದ ಮಡಿಕೇರಿ-ಸುಂಟಿಕೊಪ್ಪ-ಚೆಟ್ಟಳ್ಳಿ ಮಾರ್ಗವನ್ನು ಬಳಸುವುದು. ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳು 1989 ರ (ತಿದ್ದುಪಡಿ ನಿಯಮಗಳು 1990) ನಿಯಮ 221 ಎ (2) ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ…

Read More