ಲೇಖಕ: admin

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ 7ನೇ ವೇತನ ಆಯೋಗಕ್ಕೆ ವರದಿ ಸಲ್ಲಿಸುವ ಅವಧಿಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿದೆ. ರಾಜ್ಯಪಾಲರ ಆದೇಶದಂತೆ, 7ನೇ ವೇತನ ಆಯೋಗದ ವರದಿ ಸಲ್ಲಿಕೆಗೆ ನೀಡಲಾಗಿದ್ದ ಸಮಯಾವಕಾಶವನ್ನು ಮೇ 19, 2023 ರಿಂದ ಆರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ(ಆರ್ಥಿಕ ಇಲಾಖೆ) ಆದೇಶ ಹೊರಡಿಸಿದ್ದಾರೆ. ನವೆಂಬರ್ 19, 2022ರಲ್ಲಿ 7ನೇ ವೇತನ ಆಯೋಗ ರಚಿಸಲಾಗಿತ್ತು ಮತ್ತು ವರದಿ ಸಲ್ಲಿಸಲು ಆರು ತಿಂಗಳ ಸಮಯ ನೀಡಲಾಗಿತ್ತು.

Read More

ಮಡಿಕೇರಿ ಮೇ 16 : ಆಲೂರು ಸಿದ್ದಾಪುರ 66 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿದ್ದು, ಈ ಹಿನ್ನೆಲೆ ಮೇ, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಆಲೂರು ಸಿದ್ದಾಪುರ, ಮಾಲಂಬಿ, ಹೊಸಗುತ್ತಿ, ಬಾಣಾವಾರ, ಗೋಣಿಮೂರೂರು, ಗಣಗೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.

Read More

ಮಡಿಕೇರಿ ಮೇ 16 : ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್10 ಹೈಸೊಡ್ಲೂರು ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಮೇ, 17 ರಂದು ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಹುದಿಕೇರಿ, ಹೈಸೊಡ್ಲೂರು ಬೆಳ್ಳೂರು, ಕೋಣಂಗೇರಿ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಮೇ 16 : ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ನಗರದ ಸರ್ಕಾರಿ ವಸ್ತುಸಂಗ್ರಹಾಲಯದಲ್ಲಿ ಮೇ, 18 ರಂದು ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯನ್ನು ‘ವಸ್ತುಸಂಗ್ರಹಾಲಯಗಳು, ಸುಸ್ಥಿರತೆ ಮತ್ತು ಯೋಗಕ್ಷೇಮ’ ಎಂಬ ಘೋಷವಾಕ್ಯದಡಿಯಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ಮಧು ಸೋಮಣ್ಣ, ಡಾ.ಎಂ.ಜಿ.ಪಾಟ್ಕರ್ ಮತ್ತು ಹುಣಸೂರು ಪಿ.ಕೆ.ಕೇಶವಮೂರ್ತಿ ಅವರು ಸಂಗ್ರಹಿಸಿಟ್ಟು ಕೊಂಡಿರುವ ಕೊಡಗಿನ ಸಾಂಪ್ರದಾಯಿಕ ಪರಿಕರಗಳ ಪ್ರದರ್ಶವನ್ನು ಕೋಟೆ ಆವರಣದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವನ್ನು ಮೇ, 18 ರಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಉದ್ಘಾಟಿಸಲಿದ್ದಾರೆ ಎಂದು ಸರ್ಕಾರಿ ವಸ್ತು ಸಂಗ್ರಹಾಲಯದ ಕ್ಯೂರೇಟರ್ ರೇಖಾ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಮೇ 16 :  ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 14 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗ ಶಿಕ್ಷಣವನ್ನು ನೀಡುವ ಸಂಸ್ಥೆಯಾಗಿದೆ. ಈ ಸಂಸ್ಥೆ ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ಚವಿದ್ಯಾಲಯದ ಮಾನ್ಯತೆ ಪಡೆದಿದೆ. ಪ್ರತಿವರ್ಷ ರಂಗ ಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್‍ನ್ನು ನಡೆಸುವ ಈ ಸಂಸ್ಥೆಗೆ ಪ್ರಸ್ತುತ 2023-24ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023-24 ನೇ ಸಾಲಿನ ಈ ರಂಗ ತರಬೇತಿ ಕೋರ್ಸ್‍ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ 5 ಸಾವಿರ ರೂ ವಿದ್ಯಾರ್ಥಿ…

Read More

ಮಡಿಕೇರಿ ಮೇ 16 :  ಕಾಡಾನೆ ದಾಳಿಯಿಂದ  ಕಾರ್ಮಿಕ  ಗಂಭೀರ  ಗಾಯಗೊಂಡಿರುವ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ. ಪಾಲಿಬೆಟ್ಟದ ನಿವಾಸಿ ಬಾಬಿ(58) ಎಂಬವರೆ ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದು, ಇವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲಿಬೆಟ್ಟದ ಮಸ್ಕಲ್ ಕಾಫಿ ತೋಟದಲ್ಲಿ ಬಾಬಿ ಮತ್ತು ಇನ್ನಿತರ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ದಾಳಿ ಮಾಡಿದ್ದು, ಈ ಸಂದರ್ಭ ಕಾಡಾನೆಯ ನೇರ ದಾಳಿಗೆ ಸಿಲುಕಿದ ಬಾಬಿ ಅವರ ಎದೆ ಮತ್ತು ಕೈಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಇವರನ್ನು ತಕ್ಷಣ ಸಮೀಪದ ಆರ್‍ಐಹೆಚ್‍ಪಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅರಣ್ಯ ಅಧಿಕಾರಿಗಳ ಭೇಟಿ :  ಘಟನಾ ಸ್ಥಳಕ್ಕೆ ಡಿಎಫ್‍ಒ ಶರಣ ಬಸಪ್ಪ, ಎಸಿಎಫ್ ನೆಹರು, ಉಪ ವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ಅರಣ್ಯ ಅಧಿಕಾರಿ ಕಳ್ಳಿರ ಎಂ. ದೇವಯ್ಯ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಬಾಬಿ ಅವರ ಚಿಕಿತ್ಸಾ ವೆಚ್ಚವನ್ನು ಇಲಾಖೆ ವತಿಯಿಂದಲೆ ಭರಿಸುವುದಾಗಿ…

Read More

ಮಡಿಕೇರಿ ಮೇ 16 : ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಜಿಲ್ಲೆಯ ಶಾಸಕರಿಗೆ ಅವಕಾಶ ಒದಗಿಸುವುದರೊಂದಿಗೆ, ಸ್ಥಳೀಯರನ್ನೆ ಜಿಲ್ಲಾ ಉಸ್ತುವಾರಿಯನ್ನಾಗಿ ನಿಯುಕ್ತಿಗೊಳಿಸಬೇಕೆಂದು ಮಾಜಿ ಎಂಎಲ್‍ಸಿ ಶಾಂತೆಯಂಡ ವೀಣಾ ಅಚ್ಚಯ್ಯ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಡಿಕೇರಿ ಕ್ಷೇತ್ರದಿಂದ ಡಾ.ಮಂಥರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದಿಂದ ಅಜ್ಜಿಕುಟ್ಟೀರ ಪೊನ್ನಣ್ಣ ಅವರು ಆಯ್ಕೆಯಾಗಿದ್ದು, ಇವರಿಬ್ಬರು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಕಾಳಜಿಯನ್ನು ಹೊಂದಿದ್ದು, ಇವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಸಭೆ ನಡೆಸಿ ಕಾಂಗ್ರೆಸ್ ವರಿಷ್ಠರ ಬಳಿಗೆ ನಿಯೋಗ ತೆರಳಿ ಆಗ್ರಹಿಸಲಾಗುವುದೆಂದು ಸ್ಪಷ್ಟಪಡಿಸಿದರು. ಕೊಡಗಿಗೆ ಆದ್ಯತೆ ನೀಡಿ- ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತವನ್ನು ಪಡೆದುಕೊಂಡಿದ್ದು, ನೂತನ ಸರ್ಕಾರದಲ್ಲಿ ಮುಖ್ಯ ಮಂತ್ರಿಗಳಾಗಿ ಯಾರೇ ಅಧಿಕಾರಕ್ಕೆ ಬರಲಿ, ಅವರು ಕೊಡಗಿನ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡುವಂತಾಗಬೇಕು. ಜಿಲ್ಲೆಯ ಸರ್ವಾಂಗಿಣ ಪ್ರಗತಿಗೆ ಒತ್ತು ನೀಡುವಂತೆ ಸರ್ಕಾರವನ್ನು ಆಗ್ರಹಿಸಲು ಎಲ್ಲಾ ಸಂಘ ಸಂಸ್ಥೆಗಳು, ಪಕ್ಷದ ಮುಖಂಡರೊಂದಿಗೆ…

Read More

ಮಡಿಕೇರಿ ಮೇ 16 : ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಜಟಿಲ ಸಮಸ್ಯೆಗಳ ಪರಿಹಾರಕ್ಕಾಗಿ ನೂತನ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸದಸ್ಯ ಹಾಗೂ ಕರಿಕೆ ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಕೊಡಗಿಗೆ ಸಚಿವ ಸ್ಥಾನ ದೊರೆತ್ತಿದೆ, ಈ ಬಾರಿಯೂ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಕಳೆದ 20-25 ವರ್ಷಗಳಿಂದ ಜಿಲ್ಲೆಯ ಗಡಿ ಗ್ರಾಮಗಳು ಸೇರಿದಂತೆ ವಿವಿಧ ಪ್ರದೇಶಗಳು ಅಭಿವೃದ್ಧಿ ಶೂನ್ಯವಾಗಿದೆ. ಮೂಲಭೂತ ಸಮಸ್ಯೆಗಳಿಗೆ ಪರಿಹಾರವೇ ಇಲ್ಲದೆ ಜನಸಾಮಾನ್ಯರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸೂಚಿಸಲು ಸಾಧ್ಯವಾಗಿಲ್ಲ. ಇದೀಗ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯ ಭದ್ರಕೋಟೆಯನ್ನು ಬೇಧಿಸಿರುವ ಕಾಂಗ್ರೆಸ್ ನ ಉತ್ಸಾಹಿ ಯುವ ಅಭ್ಯರ್ಥಿಗಳು ಶಾಸಕರಾಗಿ ಆಯ್ಕೆಯಾಗಿದ್ದು, ಮುಂದಿನ ಐದು ವರ್ಷಗಳ ಕಾಲ ಜಿಲ್ಲೆಯಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳು ನಡೆಯಲಿದೆ ಎಂದು…

Read More

ವಿರಾಜಪೇಟೆ ಮೇ 16 : ರೈತರ ಹೆಸರಿನಲ್ಲಿ ಸ್ಥಾಪನೆಯಾದ ಸರ್ವೋದಯ ಕರ್ನಾಟಕ ಪಕ್ಷದ ಏಕೈಕ ಶಾಸಕ ದರ್ಶನ್ ಪುಟ್ಟಣಯ್ಯ ಅವರನ್ನು ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕವು ಭೇಟಿ ನೀಡಿ ರೈತರ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ವತಿಯಿಂದ ಕೊಡಗು ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರ ನೇತೃತ್ವದ ನಿಯೋಗವು ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲಿತ ಮಂಡ್ಯ ಜಿಲ್ಲೆ ಮೆಲುಕೋಟೆಯ ಶಾಸಕ ದರ್ಶನ್ ಪುಟ್ಟಣಯ್ಯ ಅವರನ್ನು ಮಂಡ್ಯ ನಗರದ ಪ್ರವಾಸಿ ಮಂದಿರಲ್ಲಿ ಭೇಟಿ ಮಾಡಿ ಜಿಲ್ಲೆಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಕೊಡಗು ಜಿಲ್ಲೆಯು ಪುಟ್ಟದಾದರು ರಾಜ್ಯ ಮತ್ತು ಕೇಂದ್ರಕ್ಕೆ ಅಪಾರ ಪ್ರಮಾಣದಲ್ಲಿ ತೆರಿಗೆಯನ್ನು ನೀಡುತ್ತಿದೆ. ಇಲ್ಲಿ ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳಿಂದ ಕಾಫಿ ಸೇರಿದಂತೆ ಇತರ ಬೆಳೆಗಳಿಗೆ ಹಾನಿ, ಅಡಿಕೆ ಮತ್ತು ಭತ್ತ ಇತರ ವಾಣಿಜ್ಯ ಬೆಳೆಗಳಿಗೆ ಬೆಂಬಲ…

Read More

ಮಡಿಕೇರಿ ಮೇ 16 : ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳ ಗೆಲುವಿನಲ್ಲಿ ಜಿಲ್ಲೆಯ ಮಹಿಳಾ ಮತದಾರರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಮಹಿಳೆಯರು ಕಾಂಗ್ರೆಸ್ ಗೆ ಉತ್ತಮ ಸ್ಪಂದನೆ ನೀಡಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರ ಶ್ರಮ ಮತ್ತು ಎಐಸಿಸಿಯಿಂದ ಆಗಮಿಸಿದ್ದ ಮಹಿಳಾ ವೀಕ್ಷಕರ ಮಾರ್ಗದರ್ಶನ ಇಬ್ಬರು ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಿದೆ. ಕಾಂಗ್ರೆಸ್ ಪಕ್ಷ ಪ್ರತಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ ಸೇರಿದಂತೆ ಗ್ಯಾರಂಟಿ ಕಾರ್ಡ್ ಮೂಲಕ ನೀಡಲಾದ ಭರವಸೆಗಳನ್ನು ಈಡೇರಿಸಲಾಗುವುದು ಎಂದರು. ಇಬ್ಬರು ನೂತನ ಶಾಸಕರು ಕೊಡಗಿನ ಅಭಿವೃದ್ಧಿಗಾಗಿ ಶ್ರಮಿಸಲಿದ್ದಾರೆ. ಮಹಿಳಾ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿದ್ದು, ಜಿಲ್ಲಾ ಉಸ್ತುವಾರಿಯಾಗಿ ಬರುವುದು ಖಚಿತವೆಂದು ಸುರಯ್ಯ ಅಬ್ರಾರ್ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಪ್ರಮುಖ ನೆರವಂಡ ಉಮೇಶ್ ಮಾತನಾಡಿ, ಪ್ರತಿಸ್ಪರ್ಧಿಗಳ ಉರುಳಿಲ್ಲದ ಆರೋಪ ಮತ್ತು…

Read More