ಮಡಿಕೇರಿ ಮೇ 16 : ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಶಾಸಕರುಗಳಾಗಿ ಆಯ್ಕೆಯಾಗಿರುವ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರುಗಳು ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳಿಗೆ ಶೀಘ್ರ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುದ್ದ ಕಳಲ ಯುವಕ ಸಂಘ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಜ್ಯೋತಿಕುಮಾರ್ ಸ್ವತಂತ್ರ್ಯ ಪೂರ್ವದಿಂದಲೇ ಕೊಡಗಿನ ವಿವಿಧೆಡೆ ಕಾಫಿ ತೋಟಗಳ ಲೈನ್ ಮನೆಯಲ್ಲಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳು ಸ್ವಂತ ಸೂರು ಮತ್ತು ವಿವಿಧ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆದ್ದರಿಂದ ನಿವೇಶನ ಮಂಜೂರು ಮಾಡುವ ಮೂಲಕ ಬಡ ಕುಟುಂಬಗಳನ್ನು ಲೈನ್ ಮನೆಯಿಂದ ಮುಕ್ತಗೊಳಿಸಬೇಕೆಂದು ಕೋರಿದ್ದಾರೆ. ಕಳೆದ 2 ವರ್ಷಗಳಿಂದ ಬೀದಿಗಿಳಿದು ಹೋರಾಟ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು ಇಲ್ಲಿಯವರೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ಟೀಕಿಸಿರುವ ಅವರು, ನೂತನ ಶಾಸಕರುಗಳ ಅವಧಿಯಲ್ಲಾದರು ಲೈನ್ ಮನೆಗಳಲ್ಲಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ…
ಲೇಖಕ: admin
ಮಡಿಕೇರಿ ಮೇ 16 : ಜೆಸಿಐ ಪೊನ್ನಂಪೇಟೆ ನಿಸರ್ಗ ಸಂಸ್ಥೆ ವತಿಯಿಂದ ಮೇ 21 ರಂದು 2 ನೇ ವರ್ಷದ ಜೆಸಿ ನಿಸರ್ಗ ಶೂಟಿಂಗ್ ಸ್ಪರ್ಧೆ ನಡೆಯಲಿದೆ ಎಂದು ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ಅಧ್ಯಕ್ಷ ಜೆಸಿ ಮುಕ್ಕಾಟಿರ ನೀತ್ ಅಯ್ಯಪ್ಪ ತಿಳಿಸಿದ್ದಾರೆ. ಪೊನ್ನಂಪೇಟೆಯಲ್ಲಿ ಮಾತನಾಡಿದ ಅವರು ಬಾಳುಗೋಡು ಕೊಡವ ಸಮಾಜದ ಮೈದಾನದಲ್ಲಿ 0.22 ಸ್ಪರ್ಧೆ, 12 ಬೋರ್‍ನಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಹಾಗೂ ಏರ್ ಗನ್ ನಲ್ಲಿ ಕೋಳಿಮೊಟ್ಟೆಗೆ ಗುರಿ ಇಡುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ ಎಂದು ಹೇಳಿದರು. 0.22 ಹಾಗೂ 12 ಬೋರ್ ಸ್ಪರ್ಧೆಯ ಪ್ರಥಮ ಬಹುಮಾನ 20 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ 15 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ 10 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಈ ಸಂದರ್ಭ ಸಂಸ್ಥೆಯ ಪೂರ್ವಾಧ್ಯಕ್ಷ ಅಪ್ಪಡೇರಡ ದಿನು, ಆಪಟ್ಟೀರ ಟಾಟು ಮೊಣ್ಣಪ್ಪ, ಚಟ್ಟೋಳಿರ ಶರತ್…
ಮಡಿಕೇರಿ ಮೇ 16 : ಅಂಗಡಿ ಮಳಿಗೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ನಗರದ ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣದ ಸಮೀಪ ಟಿ.ವಿ.ಎಸ್. ಶೋ ರೂಂ ಮುಂಭಾಗದ ಹಾಬೀಬ್ ಉಲ್ಲಾಖಾನ್ ಎಂಬವರ ಕಟ್ಟಡದಲ್ಲಿ ಮಳಿಗೆ ಹೊಂದಿರುವ ನಂದಿ ಪೈಂಟ್ಸ್ ಮತ್ತು ಹಾರ್ಡ್‍ವೇರ್ ಮಳಿಗೆಗೂ ಆಕಸ್ಮಿಕ ಬೆಂಕಿ ತಗುಲಿ ಅನಾಹುತ ಸಂಭವಿಸಿದೆ. ದಿನೇಶ್ ಎಂಬವರಿಗೆ ಸೇರಿದ ಪೈಂಟ್ಸ್ ಮತ್ತು ಹಾರ್ಡವೇರ್ ಅಂಗಡಿಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಳಿಗೆಯಲ್ಲಿದ್ದ ಪೈಂಟ್ಸ್, ನಗದು ಸೇರಿದಂತೆ ಮೂರು ಕಂಪ್ಯೂಟರ್, ಪ್ರಿಂಟಿಂಗ್ ಮಿಷನ್, ಕಲರ್ ಮಿಕ್ಸಿಂಗ್ ಮಿಷನ್ ಮತ್ತು ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಸಂಪೂರ್ಣ ಸುಟ್ಟು ಕರಕಲಾಗಿವೆ. ಅಂಗಡಿ ಮಾಲೀಕ ದಿನೇಶ್ ಅವರು ವಿರಾಜಪೇಟೆ ನಗರ ಠಾಣೆಗೆ ದೂರು ನೀಡಿದ್ದಾರೆ.
ಸೋಮವಾರಪೇಟೆ ಮೇ 11 : ಜಾಲ್ಸೂರು ಬೆಂಗಳೂರು ಎಸ್‍ಎಚ್-85 ಮಾರ್ಗದ ಕೂತಿ ಗ್ರಾಮದಲ್ಲಿ ರಸ್ತೆ ಕಿರಿದಾಗಿದ್ದು ನಿರ್ವಹಣೆಯಿಲ್ಲದೆ ದಿನಂಪ್ರತಿ ಅಪಘಾತಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಸಕಲೇಶಪುರ ತಾಲ್ಲೂಕಿನ ರಸ್ತೆಯಾಗಿದ್ದು, ಕೊಡಗು ಭಾಗದಲ್ಲಿ ರಸ್ತೆ ಕಾಮಗಾರಿ ನಡೆಯದ ಹಿನ್ನಲೆ, ಎಡದಂಟೆ, ಕೂತಿ, ಇನಕನಹಳ್ಳಿ ತೋಳೂರುಶೆಟ್ಟಳ್ಳಿ, ದೊಡ್ಡತೋಳೂರು, ಹೊಸಬೀಡು, ಕಲ್ಲಂದೂರು ಗ್ರಾಮಸ್ಥರು ಸಮಸ್ಯೆ ಅನುಭವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಕೂತಿ ಗ್ರಾಮದ ದೀಣೆಕೆರೆ ಜಂಕ್ಷನ್‍ನಲ್ಲಿ ಕಿರಿದಾದ ರಸ್ತೆಯ ಮೇಲೆ ಮಣ್ಣು ಸಂಗ್ರಹವಾಗಿರುವ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಅಯಾತಪ್ಪಿ ಬಿದ್ದ ಪರಿಣಾಮ ಸವಾರ ಹಾಗೂ ಹಿಂಬದಿ ಸವಾರರು ಗಾಯಗೊಂಡಿದ್ದಾರೆ. ಪಟ್ಟಣದ ರೆಂಜರ್‍ಬ್ಲಾಕ್ ನಿವಾಸಿಗಳಾದ ಸುನಿಲ್ ಆಚಾರಿ, ಖುಷಿ ಎಂಬವರು ಸಕಲೇಶಪುರದಿಂದ ವಾಪಾಸ್ಸು ಸೋಮವಾರಪೇಟೆಗೆ ಸ್ಕೂಟಿಯಲ್ಲಿ ಬರುವಾಗ ಅಪಘಾತ ಸಂಭವಿಸಿದೆ. ಗ್ರಾಮಸ್ಥರು ಅಂಬುಲೆನ್ಸ್ ಮೂಲಕ ಪಟ್ಟಣದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಸುನಿಲ್ ಕೈಮೂಳೆ ಮುರಿದ್ದಿದ್ದು ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣವೇ ರಸ್ತೆ ಮೇಲೆ ಸಂಗ್ರಹವಾಗಿರುವ ಮಣ್ಣು ತೆರವುಗೊಳಸಬೇಕು. ಚರಂಡಿ ವ್ಯವಸ್ಥೆ ಮಾಡಬೇಕು…
ಮಡಿಕೇರಿ ಮೇ 15 : ದೇವಟ್‌ಪರಂಬ್ ಕೊಡವ ನರಮೇಧ ದುರಂತ ಸ್ಮಾರಕ ಸಮಾಧಿಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿತು. ಸಿಎನ್ ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ಅಧ್ಯಕ್ಷತೆಯಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ರಚಿಸುವ ಮೂಲಕ ಕೊಡವ ಸ್ವಯಂ ಶಾಸನದ ಹಕ್ಕುಗಳನ್ನು ಮಾನ್ಯ ಮಾಡುವ ಮೂಲಕ “ಕೊಡವ ಕುಲ”/ಜನಾಂಗೀಯ ಸಮಸ್ಯೆಗಳನ್ನು ಪರಿಹರಿಸಲು ಕರ್ನಾಟಕದ ಹೊಸ ಆಡಳಿತ ವ್ಯವಸ್ಥೆ ಮತ್ತು ಕೊಡವ ಹೃದಯಭಾಗದಿಂದ ಹೊಸದಾಗಿ ಚುನಾಯಿತರಾದ ಶಾಸಕರಿಗೆ ಹಕ್ಕೊತ್ತಾಯ ಮಂಡಿಸಲಾಯಿತು. ::: ಕೊಡವ ನ್ಯಾಷನಲ್ ಕೌನ್ಸಿಲ್‌ನ ಪ್ರಮುಖ ಆಶಯಗಳು ::: 1. ಕರ್ನಾಟಕದಡಿಯಲ್ಲಿ ಸಂವಿಧಾನದ ಅಡಿಯಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವಯಂ ನಿರ್ಣಯ ಹಕ್ಕು ಪ್ರತಿಪಾದನೆ. 2. ಕೊಡಗಿನ ಆದಿಮಸಂಜಾತ ಮೂಲನಿವಾಸಿ ಕೊಡವ ಜನಾಂಗವನ್ನು ನಮ್ಮ ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು. (ಸಂವಿಧಾನದಲ್ಲಿ ರೇಸ್‌ಗೆ ಪ್ರತ್ಯೇಕವಾದ ಯಾವುದೇ ವಿಧಿವಿಧಾನಗಳು ಇಲ್ಲದೇ ಇಲ್ಲದಿರುವುದರಿಂದ ಎಸ್‌ಟಿ ಪಟ್ಟಿಗೆ ಕೊಡವರನ್ನು ಸೇರಿಸಿ ರಕ್ಷಿಸಬೇಕು.) 3. ಕೊಡವ ಸಂಪ್ರದಾಯಿಕ…
ಮಡಿಕೇರಿ ಮೇ 15 : ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಸ್ವಾಮಿ ಬಡಾವಣೆಯ ಆಟೋ ಚಾಲಕ ಹೆಚ್.ಜಿ.ಹರ್ಷ(37) ಮೃತ ವ್ಯಕ್ತಿ. ಮೃತರು ಪತ್ನಿ ಹಾಗೂ ಒಂದು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಮೇ 15 : ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಕಲ್ಲುಮೊಟ್ಟೆ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಶೇಖರ್ ಅವರು ಸೋಮವಾರ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ಈ ಕಾಲೋನಿಗೆ ನೀರು ಪೂರೈಕೆ ಮಾಡಲಾಗುತ್ತಿದ್ದ 7.5 ಹೆಚ್.ಪಿ ಸಾಮರ್ಥ್ಯದ ಮೋಟಾರ್ ಪಂಪು ದುರಸ್ತಿಯಾಗಿರುವ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. ಪ್ರಸ್ತುತ ಈ ಮೋಟಾರ್ ಪಂಪು ದುರಸ್ತಿಯಾಗುವವರೆಗೆ ತಾತ್ಕಾಲಿಕವಾಗಿ 5 ಹೆಚ್.ಪಿ ಮೋಟಾರು ಪಂಪನ್ನು ಅಳವಡಿಸಿ ನೀರು ಪೂರೈಕೆ ಮಾಡಲಾಗಿದೆ ಎಂದು ಶೇಖರ್ ತಿಳಿಸಿದರು. ಕಿರಿಯ ಎಂಜಿನಿಯರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತಿತರರು ಹಾಜರಿದ್ದರು.
ಮಡಿಕೇರಿ ಮೇ 15 : ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಉಜಿರೆ ಟೆಲಿಫೋನ್ ಎಕ್ಸ್ ಚೇಂಜ್ ಟವರ್ ಬಳಿ ವಾರಸುದಾರರಿಲ್ಲದ ಶವವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿ ಕೊಡಗು ಜಿಲ್ಲೆಯ ಕುಶಾಲನಗರದವರು ಎಂದು ತಿಳಿದು ಬಂದಿದೆ. ತಮ್ಮಯ್ಯ (55) ಎಂಬುವವರೇ ಸಾವಿಗೀಡಾದವರಾಗಿದ್ದು, ಮೃತದೇಹದ ಬಳಿ 6.65 ಲಕ್ಷ ರೂ. ಪತ್ತೆಯಾಗಿದೆ. ಇವರು ಸೌದೆ ಒಡೆದು ಜೀವನ ಸಾಗಿಸುತ್ತಿದ್ದು, ದುಡಿದ ಹಣವನ್ನು ಉಳಿತಾಯ ಮಾಡಿರಬಹುದೆಂದು ಹೇಳಲಾಗಿದೆ. ಬಸ್ ಟಿಕೆಟ್ ಮತ್ತಿತರ ಚೀಟಿಗಳನ್ನು ಪರಿಶೀಲಿಸಿದಾಗ ತಮ್ಮಯ್ಯ ಕುಶಾಲನಗರ ಭಾಗದವರೆಂದು ತಿಳಿದು ಬಂದಿದೆ. ಬೆಳ್ತಂಗಡಿ ಪೊಲೀಸರು ಕುಶಾಲನಗರ ಮತ್ತು ಬೈಲುಕೊಪ್ಪಕ್ಕೆ ಭೇಟಿ ನೀಡಿ ಮೃತ ವ್ಯಕ್ತಿಯ ಸಂಬAಧಿಕರ ಪತ್ತೆಗೆ ಪ್ರಯತ್ನಿಸಿದರು. ಆದರೆ ಯಾರೂ ಪತ್ತೆಯಾಗದೆ ಇರುವುದರಿಂದ ತಮ್ಮಯ್ಯ ಅವರ ವಾರಸುದಾರರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು (08256-232093, 9480805370) ಸಂಪರ್ಕಿಸುವAತೆ ಮನವಿ ಮಾಡಿದ್ದಾರೆ.
ನಾಪೋಕ್ಲು ಮೇ 15 : ನಾಪೋಕ್ಲು ಮೂರ್ನಾಡು ಸಂಪರ್ಕಿಸುವ ಮುಖ್ಯರಸ್ತೆ ಹೊದ್ದೂರು ರಸ್ತೆಯಲ್ಲಿ ಬಿದ್ದಿರುವ ಮರದ ತುಂಡುಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ವಾಹನ ಚಾಲಕರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಹೊದ್ದೂರು ಗ್ರಾಮದಲ್ಲಿ ಸುರಿದ ಭಾರೀ ಗಾಳಿ ಮಳೆಯಿಂದ ನಾಪೋಕ್ಲು -ಮೂರ್ನಾಡು ಸಂಪರ್ಕ ಕಲ್ಪಿಸುವ ಹೊದ್ದೂರು ಗ್ರಾಮದ ಬಳಿ ಮುಖ್ಯ ರಸ್ತೆಯ ಬದಿಯಲ್ಲಿದ್ದ ಭಾರಿ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಅಲ್ಲದೆ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿ ನಾಪೋಕ್ಲು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಕೂಡ ಉಂಟಾಗಿತ್ತು. ಬಳಿಕ ಮರವನ್ನು ಸೆಸ್ಕ್ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು ಸೇರಿ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದರು. ಆದರೆ ರಸ್ತೆಯಲ್ಲಿರುವ ಮರವನ್ನು ಪೂರ್ಣ ಪ್ರಮಾಣದಲ್ಲಿ ತೆರೆವುಗೊಳಿಸದೆ ಅರ್ಧದಷ್ಟು ಅಲ್ಲೇ ಬಿಟ್ಟು ಹೋಗಿದ್ದಾರೆ. ಇದರಿಂದ ಈ ರಸ್ತೆಯಲ್ಲಿ ಹಗಲಿರುಳು ನೂರಾರು ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಬಿದ್ದಿರುವ ಮರದ ತುಂಡುಗಳಿಂದ ಅಪಘಾತವಾಗುವ ಸಂಭವ ಹೆಚ್ಚಿದೆ ಎಂದು…
ಮಡಿಕೇರಿ ಮೇ 15 : ಕೊಡಗಿನ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತ ಶಯನ ಅವರು ಬರೆದಿರುವ ಪ್ರತಿಕೋದ್ಯಮ ಅನುಭವ ಆಧಾರಿತ ‘ಸೊಡರು’ ಗಣ್ಯರ ಸಮ್ಮುಖದಲ್ಲಿ ಅನಾವರಣಗೊಂಡಿತು. ನಗರದ ರೆಡ್ ಬ್ರಿಕ್ಸ್ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ರಾಜ್ಯ ಪ್ರೆಸ್‍ಕ್ಲಬ್ ಹಾಗೂ ಮಾದ್ಯಮ ಅಕಾಡೆಮಿ ಮಾಜೀ ಅಧ್ಯಕ್ಷ ಎಂ.ಎ. ಪೊನ್ನಪ್ಪ ಅವರು ಸೊಡರು ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿ, ಪತ್ರ್ರಿಕಾ ಕ್ಷೇತ್ರಕ್ಕೆ ಕಾಲಿಡುವವರಿಗೆ ಮಾರ್ಗದರ್ಶಕವಾಗಿ ‘ಸೊಡರು’ ಪುಸ್ತಕ ರುಪುಗೊಂಡಿರುವುದಾಗಿ ಮೆಚ್ಚುಗೆಯ ನುಡಿಗಳನ್ನಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರು ತಮ್ಮ ಕಾರ್ಯವೈಖರಿಗಳ ಮೂಲಕ ಸಮಾಜದ ವಿಶ್ವಾಸಾರ್ಹತೆಯನ್ನು ಪಡೆದುಕೊಳ್ಳುವುದು ಅವಶ್ಯಕ. ‘ಬ್ರೇಕಿಂಗ್’ ನ್ಯೂಸ್‍ಗಳ ಧಾವಂತದ ಪತ್ರಿಕೋದ್ಯಮದ ನಡುವೆ ಸಾತ್ವಿಕವಾದ , ಸೃಜನಾತ್ಮಕವಾದ ಪತ್ರಿಕೋದ್ಯಮದ ಅಗತ್ಯವಿದೆಯೆಂದು ಅಭಿಪ್ರಾಯಿಸಿದರು. ಗಡಿನಾಡು ಸಂಚಾರಿ ಪತ್ರಿಕೆಯ ಸಂಪಾದಕ ಟಿ.ಪಿ. ರಮೇಶ್, ಮಾತನಾಡಿ, ಪತ್ರಿಕಾ ಕ್ಷೇತ್ರದಲ್ಲಿ ಇರುವವರು ಓದುವ ಹವ್ಯಾಸವನ್ನು ಮೊದಲನೆಯದಾಗಿ ರೂಢಿಸಿಕೊಳ್ಳುವುದು ಅವಶ್ಯವೆಂದು ತಿಳಿಸಿ, ಈಗಿನಷ್ಟು ಸೌಲಭ್ಯಗಳು ಇಲ್ಲದಿದ್ದ ಕಾಲಘಟ್ಟದ ಪತ್ರಿಕೋದ್ಯಮದ ವಿಚಾರಗಳನ್ನು…






