ಲೇಖಕ: admin

ಕುಶಾಲನಗರ ಮೇ 15 :   ಕೊಡಗು ಜಿಲ್ಲೆಯ ಬಿಜೆಪಿ‌ ಕೋಟೆಯನ್ನು ಕಾಂಗ್ರೆಸ್ ಬೇಧಿಸಿದ್ದು ಈ ಮೂಲಕ, ಜಿಲ್ಲೆ ಹೊಸ ಪರ್ವಕ್ಕೆ‌ ಕಾಲಿಟ್ಟಿದೆ. ಬಿಜೆಪಿ ಮುಕ್ತ ಆಡಳಿತಕ್ಕೆ ಅಂಕುರಾರ್ಪಣೆಯಾಗಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು. ಕುಶಾಲನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆ ಹಾಗೂ ರಾಜ್ಯದಲ್ಲಿ‌ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಮುಂಬರುವ ಜಿಪಂ, ತಾಪಂ, ಪುರಸಭೆ ಸೇರಿದಂತೆ ಸಹಕಾರ ಸಂಘಗಳ ಚುನಾವಣೆಯನ್ನು ಅತ್ಯಂತ ಉತ್ಸಾಹದಿಂದ ಎದುರಿಸಲಿದ್ದೇವೆ ಎಂದು ತಿಳಿಸಿದರು. ದೂರದೃಷ್ಠಿಯ ಕೊರತೆಯಿಂದ ಹಿಂದಿನ ಶಾಸಕರು ಸರ್ವಾಧಿಕಾರ ಧೋರಣೆ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ ಅವರು, ಶಾಸಕರ ಕಾರ್ಯವೈಖರಿಗಳ ಬಗ್ಗೆ ಆಕ್ರೋಷ ವ್ಯಕ್ತಪಡಿಸಿದರು. ನೂತನವಾಗಿ ಆಯ್ಕೆಯಾದ ಶಾಸಕ ಮಂಥರ್ ಗೌಡ ಅವರ ಅವಧಿಯಲ್ಲಿ ಕೊಡಗಿನಲ್ಲಿ ಅಗತ್ಯವಾಗಿ ಬೇಕಿರುವ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಕ್ಷೇತ್ರದ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ಶೀಘ್ರದಲ್ಲಿ ನಡೆಯಲಿದೆ. ಜನಪೀಡಕ, ಭ್ರಷ್ಟ ಅಧಿಕಾರಿಗಳಿಗೆ ಇಲ್ಲಿ ಜಾಗವಿಲ್ಲ. ಹಿಂದಿನ ಶಾಸಕರ ಕೈಗೊಂಬೆಯಂತೆ ವರ್ತಿಸಿದ…

Read More

ಕುಶಾಲನಗರ ಮೇ 15 :   ವಿವೇಕಾನಂದ ಪಿಯು ಕಾಲೇಜಿನಲ್ಲಿ ವಿಶ್ವ ತಾಯಿಯಂದಿರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಹಾಗೂ ಭೋದಕ ವರ್ಗದವರೆಲ್ಲರು ತಮ್ಮ ತಮ್ಮ ತಾಯಂದಿರನ್ನು  ಕರೆತಂದು ಅವರನ್ನೆಲ್ಲಾ ಮನದುಂಬಿ ಗೌರವಿಸಿ ನಮಿಸಿದ್ದು ವಿಶೇಷವಾಗಿತ್ತು. ಈ ಸಂದರ್ಭ ಮಾತನಾಡಿದ ಮಂಗಳೂರಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕೇಶವ ಬಂಗೇರ, ಅಮ್ಮನ ಪ್ರೀತಿಗೆ ಗೌರವ ತೋರುವ ಈ ಸುದಿನದಲ್ಲಿ ಅಮ್ಮನ ಮಮತೆಯನ್ನು ಸ್ಮರಿಸಿ ಸದಾ ಕಾಲ ಆ ತಾಯಿಗೆ ಪ್ರೀತಿಯ ಗೌರವಗಳನ್ನು ತೋರುವ ಸಂಸ್ಕಾರ ಅತ್ಯಂತ ಅಗತ್ಯವಿದೆ.  ಶಾಲಾ ಕಾಲೇಜುಗಳಲ್ಲಿ ವ್ಯಾಸoಗ ಮಾಡುವ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಉತ್ತಮ ಸಂಸ್ಕಾರಗಳನ್ನು ಕಲಿಯುವ ಮೂಲಕ ಭಾರತೀಯ ಸನಾತನ ಪರಂಪರೆಯನ್ನು ಸಂರಕ್ಷಿಸಬೇಕಿದೆ ಎಂದರು. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ನಾಗೇಶ್ ಮಾತನಾಡಿ, ಭಾರತೀಯ ಸನಾತನ ಪರಂಪರೆಯಲ್ಲಿ ಮಹಿಳೆಗೆ ವಿಶೇಷ ಸ್ಥಾನ ಮಾನವಿದೆ. ಪಾಶ್ಚಿಮಾತ್ಯ ಸಂಸ್ಕೃತಿ ಮೇಳೈಸುತ್ತಿರುವ ಇಂದಿನ ದಿನಮಾನಗಳಲ್ಲಿ ಹೆಣ್ಣು ಮಕ್ಕಳಿಗೆ ಉತ್ತಮ ಸಂಸ್ಕಾರಗಳು ಅತಿ ಮುಖ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ…

Read More

ಮಡಿಕೇರಿ ಮೇ 15 : ಬದಲಾಗುತ್ತಿರುವ ಹವಾಮಾನ, ಜಾಗತಿಕ ತಾಪಮಾನ ಏರಿಕೆ ಪ್ರಪಂಚದಾದ್ಯಂತ ಎಲ್ಲ ರಾಷ್ಟ್ರಗಳು ಎದುರಿಸುತ್ತಿರುವ ಸವಾಲಾಗಿದೆ. ಈ ಜಾಗತಿಕ ಗಂಡಾಂತರ ತಡೆಗಟ್ಟಲು ಹಸಿರು ಪ್ರೀತಿಯನ್ನು ಜಾಗೃತಗೊಳಿಸಿ, ಜನರ ಬೇಡಿಕೆಗೆ ಅನುಸಾರವಾಗಿ ಸಸಿಗಳನ್ನು ಪೂರೈಸುವ ಜವಾಬ್ದಾರಿಯಿಂದ ವಿವಿಧ ಯೋಜನೆಗಳಡಿಯಲ್ಲಿ ‘ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದಿಂದ’ ಸೋಮವಾರಪೇಟೆ-ಕುಶಾಲನಗರ ರಸ್ತೆಯಲ್ಲಿ ಹುದುಗೂರು ಗ್ರಾಮದಲ್ಲಿರುವ ಸಾಮಾಜಿಕ ಅರಣ್ಯ ವಲಯದ ಸಸ್ಯಕ್ಷೇತ್ರದಲ್ಲಿ 50 ವಿವಿಧ ಸಸಿಗಳನ್ನು ಬೆಳೆಸಲಾಗಿದೆ. ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ಚೀಟಿ ಹೊಂದಿರುವ ಬಿಪಿಎಲ್ ಕಾರ್ಡುದಾರರು ಈ ಯೋಜನೆಯಲ್ಲಿ ಉಚಿತವಾಗಿ ಸಸಿಗಳನ್ನು ಪಡೆಯಬಹುದು ಹಾಗೂ ಇತರೆ ಯೋಜನೆಗಳಲ್ಲಿ ಸರ್ಕಾರ ನಿಗಧಿಪಡಿಸಿರುವ 6*9 ಅಳತೆಯ ಚೀಲದ ಸಸಿ ಒಂದಕ್ಕೆ ರೂ.7 ಹಾಗೂ 8*12 ಅಳತೆಯ ಚೀಲದ ಸಸಿ ಒಂದಕ್ಕೆ ರೂ.23.60 ಗಳನ್ನು ಪಾವತಿಸಿ ಪಡೆದುಕೊಳ್ಳಬಹುದು. ಹುದುಗೂರು ಸಸ್ಯಕ್ಷೇತ್ರದಲ್ಲಿ ನೇರಳೆ, ಮಹಾಗನಿ, ನೆಲ್ಲಿ, ಸೀತಾಫಲ, ಜಂಬು ನೇರಳೆ, ಮರಸೇಬು, ಆಮೆಹಣ್ಣು, ಬಿಳಿ ಧೂಪ, ಸಂಪಿಗೆ, ಹಿಪ್ಪೆ, ರುದ್ರಾಕ್ಷಿ, ಬಿದಿರು, ಮೊಟ್ಟೆ ಹಣ್ಣು, ಕಾಚಂಪುಳಿ,…

Read More

ಮಡಿಕೇರಿ ಮೇ 15 : ಹೊದ್ದೂರು ವಾಟೆಕಾಡು ಸಾಮಾಜಿಕ ಅರಣ್ಯ ಇಲಾಖೆಯ ಸಸ್ಯಕ್ಷೇತ್ರದಲ್ಲಿ 2023-24ನೇ ಸಾಲಿನ ಮಳೆಗಾಲದಲ್ಲಿ ನೆಡಲು ವಿವಿಧ ಹಣ್ಣಿನ, ಔಷಧೀಯ ಹಾಗೂ ಕಾಡು ಜಾತಿಯ ಸಸಿಗಳನ್ನು ಬೆಳೆಸಲಾಗಿದೆ. ಮಹಾಗನಿ, ಶಿವನೆ, ಸಿಲ್ವರ್, ತೇಗ, ಬೀಟೆ, ಮಳೆಮರ, ನೇರಳೆ, ಸುಬಾಬುಲ್, ಹಲಸು, ಧೂಪ, ನೆಲ್ಲಿ, ನಿಂಬೆ, ಪುನರ್‍ಪುಳಿ, ಅಗಸೆ, ಬೆಟ್ಟದನೆಲ್ಲಿ, ಸೀಬೆ ಮತ್ತಿತರ ಸಸಿಗಳು ಲಭ್ಯವಿದ್ದು, ರೈತ ಫಲಾನುಭವಿಗಳಿಗೆ ರೂ.7 ಹಾಗೂ ರೂ.23.60 ಪ್ರತಿ ಸಸಿಗೆ ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದು. ರೈತರು ತಮ್ಮ ಆಧಾರ್ ಪ್ರತಿ, ರಾಷ್ಟ್ರೀಕೃತ ಬ್ಯಾಂಕ್ ಪಾಸ್‍ಬುಕ್ ಪ್ರತಿ, ತಮ್ಮ ಜಮೀನಿನ ಆರ್‍ಟಿಸಿ ಪ್ರತಿಯನ್ನು ನೀಡಿ ಸಸಿಗಳನ್ನು ಪಡೆಯಬಹುದು. ಬಿಪಿಎಲ್ ಕಾರ್ಡ್ ಮತ್ತು ನರೇಗಾ ಉದ್ಯೋಗ ಚೀಟಿ ಹೊಂದಿರುವ ರೈತರಿಗೆ ನೆಟ್ಟ 100 ಸಸಿಗಳಿಗೆ ಸರಿಸುಮಾರು 10 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಉಪ ವಲಯ ಅರಣ್ಯಾಧಿಕಾರಿಗಳು-9743722646, ಗಸ್ತು ಅರಣ್ಯ ಪಾಲಕರು-7975952388 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸಾಮಾಜಿಕ ಅರಣ್ಯ ವಲಯದ ವಲಯ…

Read More

ಮಡಿಕೇರಿ ಮೇ 15 : ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿಗಳನ್ನು ಸ್ಪರ್ಶಿಸದೇ) ತಕ್ಷಣ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ (ಚ.ವಿ.ಸ.ನಿನಿ) ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಕೊಡಗು ಜಿಲ್ಲೆಯ (24*7) ಸರ್ವೀಸ್ ಸೆಂಟರ್‍ನ ದೂರವಾಣಿ ಸಂಖ್ಯೆ “1912” ಹಾಗೂ ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ(9449598665), ಮಡಿಕೇರಿ ತಾಲ್ಲೂಕಿಗೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯಕುಮಾರ್ (9449598602), ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳು ಮಡಿಕೇರಿ ಸಂಪತ್‍ಕುಮಾರ್ (9449598603), ತಾಳತ್‍ಮನೆ ಹೇಮಂತ್ ರಾಜ್ (9449598604), ಮೂರ್ನಾಡು ಪ್ರಕಾಶ್ (9449598605), ಸಂಪಾಜೆ ಅನಿಲ್ ಕುಮಾರ್ (9448994851), ಭಾಗಮಂಡಲ ತೇಜ (9480810344), ನಾಪೋಕ್ಲು ಹರೀಶ್ (9449598606), ಗ್ರಾಹಕರ ಸೇವಾ ಕೇಂದ್ರ (08272-248454) ಮತ್ತು (9449598665). ಕುಶಾಲನಗರ ತಾಲ್ಲೂಕಿಗೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್(9449598538),…

Read More

ಮಡಿಕೇರಿ ಮೇ 15 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ ಮೇ, 29 ರವರೆಗೆ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರಕ್ಕೆ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಕ್ಕಳು ಇಂತಹ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ನುಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಥಮ ದರ್ಜೆ ಸಹಾಯಕರಾದ ಜಯಂತಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರಾದ ಕವಿತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಕೆ.ಆರ್.ಬಿಂದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಂ.ಎಂ.ವಸಂತಿ ಹಾಜರಿದ್ದರು.…

Read More

ಮಡಿಕೇರಿ ಮೇ 15 :  ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಡವ ಯುವ ಸಮುದಾಯದಲ್ಲಿ ಇಲ್ಲಿನ ಸಂಸ್ಕೃತಿ ಪರಂಪರೆಗಳ ಬಗ್ಗೆ ಅರಿವು ಮೂಡಿಸುವ ಮಹತ್ತರ ಉದ್ದೇಶವನ್ನಿರಿಸಿಕೊಂಡು ಮೇ20 ರಂದು ಮಡಿಕೇರಿಯಲ್ಲಿ ‘ಕೊಡವ ಯುವ ಮೇಳ-2023’ ನ್ನು ಆಯೋಜಿಸಲಾಗಿದೆಯೆಂದು ಟ್ರಸ್ಟ್ ಸಂಚಾಲಕ ಚೊಟ್ಟೆಕ್‍ಮಾಡ ರಾಜೀವ್ ಬೋಪಯ್ಯ ತಿಳಿಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಯುವ ಸಮೂಹವನ್ನು ನಮ್ಮ ಶ್ರೀಮಂತ ಸಂಸ್ಕೃತಿಯ ಜೊತೆ ಜೊತೆಯಲ್ಲಿ ಸಾಗುವಂತೆ ಮಾಡುವುದು ಮತ್ತು ಮಾದಕ ದ್ರವ್ಯದಂತಹ ದುಶ್ಚಟಗಳಿಂದ ಯುವ ಸಮೂಹವನ್ನು ದೂರ ಇಟ್ಟು ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಚಿಂತನೆಗಳ ಹಿನ್ನೆಲೆ ಯುವ ಮೇಳವನ್ನು ಮಡಿಕೇರಿಯ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಆಯೋಜಿಸಲಾಗಿದೆಯೆಂದು ತಿಳಿಸಿದರು. ಟ್ರಸ್ಟ್ ಪದಾಧಿಕಾರಿ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಅವರು ಮಾತನಾಡಿ, ಯುವ ಮೇಳದ ಹಿನ್ನೆಲೆ ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಹಾಲ್ ಬಳಿಯಿಂದ ಕೊಡವ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಮೆರವಣಿಗೆ ಕಾಲೇಜು ರಸ್ತೆ, ಎಸ್‍ಬಿಐ ಮೂಲಕ ಹಳೇ…

Read More

ಮಡಿಕೇರಿ ಮೇ.15 :  ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2023 ಜೂನ್, 01 ರಿಂದ 2024 ರ ಮಾರ್ಚ್, 30 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಮೇ, 22 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ವಿವರವನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾ.ವ), ಮಡಿಕೇರಿ ಕೊಡಗು ಜಿಲ್ಲೆ ಕಚೇರಿಯನ್ನು ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಅಥವಾ ದೂ.ಸಂ. 8310687707/ ಅಂತರ್ಜಾಲ www.horticulture.kar.nic.in ನಲ್ಲಿ ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ(ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ ಮತ್ತಿತರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಮಡಿಕೇರಿಯ…

Read More

ಮಡಿಕೇರಿ ಮೇ 15 : ಕೊಡಗು ಜಿಲ್ಲೆಯಿಂದ ಬೆಂಗಳೂರಿಗೆ ವರ್ಗಾವಣೆಗೊಂಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಭೃಂಗೇಶ್ ಅವರಿಗೆ ಮಡಿಕೇರಿ ವಕೀಲರ ಸಂಘದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಕೆ.ಡಿ.ದಯಾನಂದ ನ್ಯಾಯಾಧೀಶರ ಸೇವೆಯನ್ನು ಸ್ಮರಿಸಿ ಶುಭ ಹಾರೈಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಭೃಂಗೇಶ್, ಕೋರ್ಟ್ ಕಲಾಪ ನಡೆಸುವಲ್ಲಿ ವಕೀಲರ ಪಾತ್ರ ಮಹತ್ವದು. ಮಡಿಕೇರಿಯ ವಕೀಲರು ಕಕ್ಷಿದಾರರಿಗೆ ನ್ಯಾಯ ಒದಗಿಸುವಲ್ಲಿ ಸಹಕಾರ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು. ಸಮಾರಂಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಅಪರ ಸಿವಿಲ್ ನ್ಯಾಯಾಧೀಶ ಎನ್.ಎ.ನಾಗೇಶ್, ಸಂಘದ ಖಜಾಂಚಿ ಬಿ.ಸಿ.ದೇವಿಪ್ರಸಾದ್, ಜಂಟಿ ಕಾರ್ಯದರ್ಶಿ ಎಂ.ವಿ.ಸಂಜಯ್ ರಾಜ್, ಪದಾಧಿಕಾರಿಗಳಾದ ಭಾನುಪ್ರಕಾಶ್, ಡಿ.ಕೆ.ರಾಜೇಶ್, ಡಿ.ಎನ್.ಡೊಮಿನಿಕ್, ದಿವ್ಯಾ ನಂಜಪ್ಪ, ತಾಹ ಯಾಸೀನ್, ಪಿ.ಆರ್.ಚಂದನ್, ಲತಾಕುಮಾರಿ ಹಾಗೂ ಸಂಘದ ಸದಸ್ಯರು ಹಾಜರಿದ್ದರು. ಸಂಘದ ಕಾರ್ಯದರ್ಶಿ ಎಂ.ಕೆ.ಅರುಣ ಕುಮಾರ್…

Read More

ವಿರಾಜಪೇಟೆ ಮೇ 15 : ವಿರಾಜಪೇಟೆಯ ಮೀನುಪೇಟೆಯ ಕಂಚಿ ಕಾಮಾಕ್ಷಿ ಅಮ್ಮನವರ ದೇವಾಲಯದ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಕಂಚಿ ಕಾಮಾಕ್ಷಿ ಅಮ್ಮನವರ ಕರಗೋತ್ಸವ ಹಾಗೂ ಮಹಾಪೂಜೆ ಮೆ 16 ರಿಂದ 19 ರವರೆಗೆ ನಡೆಯಲಿದೆ. ಕರಗೋತ್ಸವದ ಪ್ರಯುಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Read More