ಲೇಖಕ: admin

ಮಡಿಕೇರಿ ಮೇ 13 : ಕಾರ್ಯಕರ್ತರ ಒಗ್ಗಟ್ಟಿನ ಹೋರಾಟದ ಪರಿಶ್ರಮವೇ ನನ್ನ ಗೆಲುವಿಗೆ ಕಾರಣವಾಗಿದೆ. ನನ್ನನ್ನು ಹೊರಗಿನ ಅಭ್ಯರ್ಥಿ ಎಂದು ವ್ಯಂಗ್ಯವಾಡಿದವರಿಗೆ ಮತದಾರರೇ ತಕ್ಕ ಉತ್ತರ ನೀಡುವ ಮೂಲಕ ಅವರನ್ನೇ ಹೊರ ಕಳುಹಿಸಿದ್ದಾರೆ ಎಂದು ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ತಿರುಗೇಟು ನೀಡಿದರು. ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪೊನ್ನಣ್ಣ, ತಮ್ಮ ಗೆಲುವಿಗೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರು ಮತ್ತು ಮತದಾರರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು. ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದೇವೆ. ಆ ಮೂಲಕ ಬಿಜೆಪಿಯ ಭದ್ರಕೋಟೆಯನ್ನು ಬೇಧಿಸಿದ್ದೇವೆ. ಚುನಾವಣೆ ಸಂದರ್ಭ ಕ್ಷೇತ್ರದ ಪ್ರಗತಿಯ ಕುರಿತು ಮತದಾರರಿಗೆ ಭರವಸೆ ನೀಡಿದ್ದೇನೆ. ಅದರಂತೆ ಅಭಿವೃದ್ದಿ ಕಾರ್ಯಗಳನ್ನು ಮಾಡುವುದಾಗಿ ಪೊನ್ನಣ್ಣ ಹೇಳಿದರು. ::: ಪ್ರೀತಿಯಿಂದ ಕೊಡಗಿನ ಹುಡುಗನ ಕೈ ಹಿಡಿದಿದ್ದಾರೆ ::: ಮಡಿಕೇರಿ ಕ್ಷೇತ್ರದ ವಿಜೇತ ಅಭ್ಯರ್ಥಿ ಡಾ.ಮಂಥರ್ ಗೌಡ ಮಾತನಾಡಿ, ನನ್ನ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು, ಮುಖಂಡರು ಮತ್ತು ಮತದಾರರಿಗೆ ಧನ್ಯವಾದ ಸಲ್ಲಿಸಿದರು. ಈಗಾಗಲೇ ನೀಡಿರುವ ಭರವಸೆಯಂತೆ ಮಡಿಕೇರಿ…

Read More

ಮಡಿಕೇರಿ ಮೇ 13 : ಸುದೀರ್ಘ ಅವಧಿಯ ಬಳಿಕ ಕೊಡಗಿನ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಮೂಲಕ ತನ್ನ ಅಧಿಪತ್ಯ ಸ್ಥಾಪಿಸಿದ್ದು, ಚುನಾವಣಾ ಮತ ಎಣಿಕೆ ಮುಕ್ತಾಯವಾಗಿ ವಿಜೇತ ಅಭ್ಯರ್ಥಿಗಳ ಘೋಷಣೆಯಾಗುತ್ತಿದ್ದಂತೆ ಮತ ಎಣಿಕಾ ಕೇಂದ್ರದ ಹೊರ ಆವರಣದಲ್ಲಿದ್ದ ನೂರಾರು ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಹಷೋದ್ಘಾರಗಳನ್ನು ಮಾಡಿ, ವಿಜೇತ ಅಭ್ಯರ್ಥಿಗಳಿಗೆ ಪುಷ್ಪಾಹಾರ ತೊಡಿಸಿ ಸಂಭ್ರಮಿಸಿದರು. ಮಡಿಕೇರಿ ಕ್ಷೇರತ್ರದಿಂದ ಕಾಂಗ್ರೆಸ್ ಗೆಲುವು ಖಚಿತವಾದ ಬಳಿಕವಷ್ಟೆ ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ ಅವರು ತಮ್ಮ ಪತ್ನಿ ಹಾಗೂ ಕಟುಂಬಸ್ಥರೊಂದಿಗೆ ಮತ ಎಣಿಕಾ ಕೇಂದ್ರಕ್ಕೆ ಆಗಮಿಸಿ ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರೊಂದಿಗೆ ಸಂತಸ ಹಂಚಿಕೊಂಡರು. ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಅವರು ಮತ ಎಣಿಕೆಯ ಸಂದರ್ಭ ಸಣಿಕಾ ಕೇಂದ್ರ್ರದಲ್ಲಿ ಪಕ್ಷದ ಪ್ರಮುಖರೊಂದಿಗೆ ಹಾಜರಿದ್ದು ಗಮನ ಸೆಳೆದರು. ಬೆಳಗ್ಗೆ 8 ಗಂಟೆಗೆ ಮತ ಎಣಿಕಾ ಕಾರ್ಯ ಆರಂಭವಾಗಿ ಸರಿ ಸುಮಾರು ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಎರಡೂ ಕ್ಷೇತ್ರಗಳ ವಿಜೇತ ಅಭ್ಯರ್ಥಿಗಳ ಘೋಷಣೆಯಾಯಿತು.…

Read More

ಮಡಿಕೇರಿ ಮೇ 13 : ಜನರ ತೀರ್ಪಿಗೆ ತಲೆಬಾಗುವುದಾಗಿ ಮಡಿಕೇರಿ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ. ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಮತ ಎಣಿಕೆ ಕೇಂದ್ರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಕ್ಷೇತ್ರದ ಮತದಾರರು ನನಗೆ ಆಶೀರ್ವಾದ ಮಾಡಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಅಧಿಕಾರದ ಅವಧಿಯಲ್ಲಿ ಯಾರಿಗೂ ತೊಂದರೆಯಾಗದಂತೆ ಅಭಿವೃದ್ಧಿ ಕಾರ್ಯ ನಿರ್ವಹಿಸಿದ ತೃಪ್ತಿ ಇದೆ. ಇದೀಗ ಕಾಂಗ್ರೆಸ್’ನ ಗ್ಯಾರಂಟಿ ಕಾರ್ಡ್ ಹಾಗೂ ಉಚಿತ ಅಕ್ಕಿ ನೀಡುವ ಘೋಷಣೆಯ ಪರಿಣಾಮದಿಂದಾಗಿ ಮತಗಳು ಕಾಂಗ್ರೆಸ್’ಗೆ ಹೋಗಿದೆ. ಇದರಿಂದಾಗಿ ಈ ಬಾರಿ ಸೋಲು ಉಂಟಾಗಿದೆ ಎಂದು ಹೇಳಿದರು. ಚುನಾವಣೆ ಸಂದರ್ಭ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದ ಎಲ್ಲರಿಗೂ ತಾನು ಆಭಾರಿಯಾಗಿರುವುದಾಗಿ ಅಪ್ಪಚ್ಚು ರಂಜನ್ ಹೇಳಿದರು.

Read More

ಮಡಿಕೇರಿ ಮೇ 13 : ನಗರದ ಸಂತ ಜೋಸೆಫರ ಶಾಲೆಯ ಮತ ಎಣಿಕಾ ಕೇಂದ್ರದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಉಸ್ತುವಾರಿಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕಾ ಕಾರ್ಯ ಆರಂಭಗೊಂಡಿತು. ಮಧ್ಯಾಹ್ನ 1 ಗಂಟೆಯ ವೇಳೆಗೆ ಎರಡೂ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬಿದ್ದಿತು. ಜಿಲ್ಲಾ ಪೊಲೀಸ್, ಕೈಗಾರಿಕಾ ಭದ್ರತಾ ಪಡೆ ಪೊಲೀಸರ ಬಿಗಿ ಭದ್ರತೆಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.

Read More

ಮಡಿಕೇರಿ ಮೇ 13 :  ಕೊಡಗಿನ ವಿಧಾನಸಭಾ ಕ್ಷೇತ್ರಗಳಲ್ಲಿ ನೋಟಾಕ್ಕೆ ಅಧಿಕ ಮತಗಳು ಚಲಾವಣೆಯಾಗಿದೆ. ವೀರಾಜಪೇಟೆ ಕ್ಷೇತ್ರದಲ್ಲಿ 1636 ಮಂದಿ ನೋಟಾಕ್ಕೆ ಮತ ಚಲಾಯಿಸುವ ಮೂಲಕ ಮೂರನೇ ಸ್ಥಾನ ಮತ್ತು ಮಡಿಕೇರಿ ಕ್ಷೇತ್ರದಲ್ಲಿ 1516 ಮಂದಿ ನೋಟಾಕ್ಕೆ ಮತಹಾಕಿ ನಾಲ್ಕನೇ ಸ್ಥಾನ ನೀಡಿದ್ದಾರೆ. ಕಳೆದ ಬಾರಿಯು ಮಡಿಕೇರಿ ಕ್ಷೇತ್ರದಲ್ಲಿ 1615 ಮತ ಮತ್ತು ವೀರಾಜಪೇಟೆ ಕ್ಷೇತ್ರದಲ್ಲಿ 1733 ಮತಗಳು ನೋಟಾಕ್ಕೆ ಚಲಾವಣೆಯಾಗಿದ್ದವು.

Read More

ಮಡಿಕೇರಿ ಮೇ 13 : ಕೊಡಗು ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ ಪಡೆಯುವಲ್ಲಿ ತೀವ್ರ ಹಿನ್ನಡೆ ಸಾಧಿಸಿರುವುದು ಮತ್ತು ಪಕ್ಷದ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕೆ.ಎಂ.ಗಣೇಶ್ ರಾಜಿನಾಮೆ ಸಲ್ಲಿಸಿದ್ದಾರೆ. ಚುನಾವನಾ ಫಲಿತಾಂಶ ಹೊರ ಬಿದ್ದ ತಕ್ಷಣವೇ ನಡೆದ ಬೆಳವಣಿಗೆಗಳ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ಕೆ.ಎಂ.ಗಣೇಶ್ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಗಣೇಶ್, ಕಾಂಗ್ರೆಸ್ ಗೆಲುವಿಗೆ ಜೆಡಿಎಸ್ ಅಭ್ಯರ್ಥಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಜೆಡಿಎಸ್ ಸಕ್ರೀಯವಾಗಿ ಇರುತ್ತಿದ್ದರೆ ಇಂದು ಕಾಂಗ್ರೆಸ್ ಗೆಲ್ಲುತ್ತಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಿನ 15 ದಿನಗಳಲ್ಲಿ ತನ್ನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ಕೆ.ಎಂ.ಗಣೇಶ್ ಹೇಳಿದ್ದಾರೆ.

Read More

ಮಡಿಕೇರಿ ಮೇ 13 : ಕಳೆದ 25 ವರ್ಷಗಳಿಂದ ಬಿಜೆಪಿ ಶಾಸಕರುಗಳ ಹಿಡಿತದಲ್ಲಿದ್ದ ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು ಕೈವಶವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಕಳೆದ 25 ವರ್ಷಗಳ ಬಳಿಕ ಬಿಜೆಪಿಯ ಭದ್ರಕೋಟೆಯನ್ನು ಛಿದ್ರಗೊಳಿಸಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಡಾ.ಮಂಥರ್ ಗೌಡ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಎಂ.ಪಿ.ಅಪ್ಪಚ್ಚುರಂಜನ್ ಅವರನ್ನು 4,402 ಮತಗಳಿಂದ ಪರಾಭವಗೊಳಿಸಿದ್ದಾರೆ. ವೀರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎ.ಸ್.ಪೊನ್ನಣ್ಣ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರನ್ನು 4,291ಮತಗಳಿಂದ ಸೋಲಿಸಿದ್ದಾರೆ. ಕ್ಷೇತ್ರ ಪುನರ್ ವಿಂಗಡಣೆಯ ಬಳಿಕ ಮಡಿಕೇರಿ ಮತ್ತು ವೀರಾಜಪೇಟೆ ಕ್ಷೇತ್ರಗಳಲ್ಲಿ ಬಿಜೆಪಿ ಸತತ ಗೆಲುವು ಸಾಧಿಸುತ್ತಾ ಬಂದಿದ್ದು, ಇದೀಗ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಕಾಂಗ್ರೆಸ್ ಬ್ರೇಕ್ ಹಾಕಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಮಂಥರ್ ಗೌಡ ಅವರು 84,879 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದು, ಪ್ರತಿಸ್ಪರ್ಧಿ ಅಪ್ಪಚ್ಚುರಂಜನ್ ಅವರು 80,477 ಮತಗಳನ್ನು ಪಡೆದರು. ಜೆಡಿಎಸ್ ನ ನಾಪಂಡ ಮುತ್ತಪ್ಪ ಕೇವಲ…

Read More

ಮಡಿಕೇರಿ ಮೇ 13 :  ಅರಕಲಗೂಡು ವಿಧಾನಸಭಾ ಕ್ಷೇತದಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿ ಮಾಜಿ ಸಚಿವ ಎ. ಮಂಜು ಕಾಂಗ್ರೆಸ್​ ಹಾಗೂ ಬಿಜೆಪಿ ಅಭ್ಯರ್ಥಿಗಳ ವಿರುದ್ಧ 19,605 ಸಾವಿರ ಮತಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿದ್ದಾರೆ. 2021ರಲ್ಲಿ ಮಡಿಕೇರಿ ಕ್ಷೇತ್ರಕ್ಕೆ ನಡೆದ ವಿಧಾನಪರಿಷತ್​ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಎ.ಮಂಜು ಪುತ್ರ ಮಂಥರ್​ ಗೌಡ ಬಿಜೆಪಿಯ ಅಪ್ಪಚ್ಚು ರಂಜನ್​​ಗೆ ವಿರುದ್ಧ 4,402 ಸಾವಿರ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ.

Read More

ಬೆಂಗಳೂರು ಮೇ 13 :  ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ  ಪ್ರಕಟವಾಗಿದ್ದು,  ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಬಿಜೆಪಿ 65  ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 19 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು 4 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

Read More

ಮಡಿಕೇರಿ ಮೇ 13 : ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎ.ಎಸ್.ಪೊನ್ನಣ್ಣ ಅವರು ಜಯಗಳಿಸಿದ್ದಾರೆ. ಗೆಲುವು ಸಾಧಿಸಿದ ಡಾ.ಮಂತರ್ ಗೌಡ ಅವರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ಚುನಾವಣಾ ಪ್ರಮಾಣ ಪತ್ರ ನೀಡಿದರು. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬನಾ ಎಂ.ಶೇಕ್ ಅವರು ಎ.ಎಸ್.ಪೊನ್ನಣ್ಣ ಅವರಿಗೆ ಚುನಾವಣಾ ಪ್ರಮಾಣ ಪತ್ರ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ತಹಶೀಲ್ದಾರರು ಮತ್ತು ಸಹಾಯಕ ಚುನಾವಣಾಧಿಕಾರಿಗಳಾದ ಎಸ್.ಎನ್.ನರಗುಂದ, ಕಿರಣ್ ಗೌರಯ್ಯ, ಪ್ರಮೋದ್, ರಾಮಚಂದ್ರ, ಚುನಾವಣಾ ತಹಶೀಲ್ದಾರ್ ರವಿಶಂಕರ್ ಇತರರು ಇದ್ದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿ ವಿಕ್ಷೀಸಿದರು.

Read More