ಕುಶಾಲನಗರ ಏ.14 NEWS DESK : ದೇವಾಲಯ ಹಾಗೂ ಮಠ ಮಂದಿರಗಳು ಮನುಷ್ಯನ ಅಂತರಂಗ ಶುದ್ದಿಯ ಆಲಯಗಳು ಎಂದು ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಹೊಸಪಟ್ಟಣ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಕನ್ನಂಬಾಡಮ್ಮ ದೇವರ ವಾರ್ಷಿಕ ಪೂಜೋತ್ಸವ ದಲ್ಲಿ ಭಾಗಿಯಾಗಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮನುಷ್ಯ ಏನೆಲ್ಲಾ ಗಳಿಸಿದರೂ ಕೂಡ ಮಾನಸಿಕ ಶಾಂತಿ ನೆಮ್ಮದಿ ಪಡೆಯಲು ದೇವಾಲಯಗಳಿಗೆ ಬರಬೇಕಿದೆ. ಪೂರ್ವಜರು ಆಚರಿಸಿಕೊಂಡು ಬಂದ ಗ್ರಾಮೀಣ ಹಬ್ಬಗಳು, ದೇವರ ಪೂಜೋತ್ಸವಗಳನ್ನು ಮುಂದಿನ ಪೀಳಿಗೆಗೂ ಜತನದಿಂದ ಒಯ್ಯುವುದೇ ಭಾರತೀಯ ಸಂಸ್ಕೃತಿಯ ಸೌಂದರ್ಯ ಎಂದು ಶ್ರೀಗಳು ಹೇಳಿದರು. ಸೋಮವಾರ ಸಂಜೆಯಿಂದ ಆರಂಭವಾದ ದೇವತಾ ಪೂಜೋತ್ಸವ ಮಂಗಳವಾರ ಮಧ್ಯಾಹ್ನ ಸಮಾಪ್ತಿಗೊಂಡಿತು. ಮಂಗಳವಾರ ಬೆಳಗ್ಗೆ ವಾದ್ಯಮೇಳ, ಅಲಂಕೃತ ದೇವರುಗಳ ಪಲ್ಲಕ್ಕಿಯೊಂದಿಗೆ ಗ್ರಾಮದ ಕಾವೇರಿ ನದಿಗೆ ತೆರಳಿ ಗಂಗಾ ಸ್ನಾನ ನೆರವೇರಿಸಲಾಯಿತು. ಇದೇ ಸಂದರ್ಭ ಹೊಳೆನರಸೀಪುರ ತಾಲ್ಲೂಕಿನ ಉದ್ದೂರು ಗ್ರಾಮದ ವೀರಗಾಸೆ ಕಲಾವಿದ ರಾದ ರವಿಕುಮಾರ ತಂಡದಿಂದ ಆಕರ್ಷಕವಾದ ವೀರಭದ್ರ ನೃತ್ಯ ಭಕ್ತರನ್ನು…
ಲೇಖಕ: admin
ಕುಶಾಲನಗರ ಏ.14 NEWS DESK : ಹೆಬ್ಬಾಲೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಾರ್ವಜನಿಕರಿಗಾಗಿ ಉಚಿತ ಫುಟ್ ಪಲ್ಸ್ ಥೆರಪಿ ಉಚಿತಾ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಹದಿನೈದು ದಿನಗಳ ಅವಧಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಶಿಬಿರ ನಡೆಯಲಿದ್ದು 8 ವರ್ಷದ ಮೇಲ್ಪಟ್ಟು ವಯೋವೃದ್ಧರವರೆಗೂ ಥೆರಪಿಯ ಪ್ರಯೋಜನ ಪಡೆದುಕೊಳ್ಳಬಹುದು ಎಂದು ತರಬೇತಿ ಶಿಬಿರದ ಆಯೋಜಕರಾದ ಕಂಪಾನಿಯೋ ಸಂಸ್ಥೆಯ ಥೆರಪಿಯನ್ ಶಶಿಕಾಂತ ಪೂಜಾರಿ ಹೇಳಿದರು. ಅರ್ಧ ಗಂಟೆ ಕಾಲ ನಡೆಸುವ ಥೆರಪಿಯಲ್ಲಿ ಓರ್ವ ಆರೋಗ್ಯವಂತ ಮನುಷ್ಯ 5 ಕಿಮೀ ವೇಗದ ನಡಿಗೆ ಮಾಡಿದಷ್ಟು ಪ್ರಯೋಜನವಾಗಲಿದೆ. ಥೆರಪಿಯಿಂದಾಗಿ ದೇಹದ ನರನಾಡಿಗಳಲ್ಲಿ ಸುಗಮ ರಕ್ತ ಸಂಚಾರವಾಗುತ್ತದೆ. ದೇಹದಲ್ಲಿನ ಅಶುದ್ಧ ರಕ್ತ ಶುದ್ಧವಾಗುತ್ತದೆ. ಹೃದಯಸಂಬಂಧಿ ಕಾಯಿಲೆಗಳು ಸೇರಿದಂತೆ ಸೊಂಟ ನೋವು, ಹಿಂಬದಿ ನೋವು, ಬೆನ್ನು ನೋವು ಮೊದಲಾದ ನರ ದೌರ್ಬಲ್ಯಗಳ ನೋವುಗಳು ನಿವಾರಣೆಯಾಗಲಿವೆ. ಕಂಪಾನಿಯೋ ಸಂಸ್ಥೆ 2014 ರಿಂದ ಆರಂಭವಾಗಿದ್ದು ದೇಶಾದ್ಯಂತ 15 ಲಕ್ಷಕ್ಕೂ ಹೆಚ್ಚು ಮಂದಿಗೆ ಪ್ರಯೋಜನವಾಗಲಿದೆ ಎಂದು ಶಶಿಕಾಂತ ಪೂಜಾರಿ ಹೇಳಿದರು. ಶಿಬಿರದಲ್ಲಿ…
ಮಡಿಕೇರಿ ಏ.14 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಮೈದಾನ 2 ರಲ್ಲಿ ಏ.14ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 2* ಅಪ್ಪುಮಣಿಯಂಡ ಮತ್ತು ಬಲ್ಲಂಡ ತಂಡಗಳ ನಡುವಿನ ಪಂದ್ಯದಲ್ಲಿ ಅಪ್ಪುಮಣಿಯಂಡ ತಂಡಕ್ಕೆ 7 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಲ್ಲಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಸೇರಿಸಿತು. ಅಪ್ಪುಮಣಿಯಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಗಳಿಸಿ ಗೆಲುವು ಕಂಡಿತು. ಕಂಗಂಡ ಮತ್ತು ಚೆನಿಯಪಂಡ ನಡುವಿನ ಪಂದ್ಯದಲ್ಲಿ ಕಂಗಂಡ ತಂಡ 19 ರನ್ ಗಳ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಕಂಗಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 66 ರನ್ ಗಳನ್ನು ಸೇರಿಸಿತು. ಚೆನಿಯಪಂಡ 6 ಓವರ್ ಗಳಲ್ಲಿ…
ಮಡಿಕೇರಿ ಏ.14 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.14ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ತೆನ್ನಿರ ಮತ್ತು ಮುಕ್ಕಾಟಿರ (ಬೇತ್ರಿ) ನಡುವಿನ ಪಂದ್ಯದಲ್ಲಿ ಮುಕ್ಕಾಟಿರ 10 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತೆನ್ನಿರ 6 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಗಳಿಸಿತು. ಮುಕ್ಕಾಟಿರ ಯಾವುದೇ ವಿಕೆಟ್ ನಷ್ಟವಿಲ್ಲದೆ 4.4 ಓವರ್ ಗಳಲ್ಲಿ 55 ರನ್ ಗಳನ್ನು ಸೇರಿಸಿ ಗೆಲುವಿನ ನಗೆ ಬೀರಿತು. ಮಿನ್ನಂಡ ಮತ್ತು ಚೌರಿರ ತಂಡಗಳ ನಡುವಿನ ಹಣಾಹಣಿಯಲ್ಲಿ ಸೂಪರ್ ಓವರ್ ನಲ್ಲಿ ಚೌರಿರ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಿಣ್ಣಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 50 ಮತ್ತು ಇದನ್ನು ಬೆನ್ನಟ್ಟಿದ ಚೌರಿರ 6 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ…
ಸುಂಟಿಕೊಪ್ಪ ಏ.14 NEWS DESK : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲ್ಲೂಕು ಘಟಕ ಕೊಡಮಾಡುವ ‘ನೇಗಿಲಯೋಗಿ’ ಪ್ರಶಸ್ತಿ ಪ್ರದಾನ ಸಮಾರಂಭ ಏ.21 ರಂದು ಕುಶಾಲನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಕುಶಾಲನಗರ ತಾಲೂಕಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನಾಲ್ವರು ಕೃಷಿಕರನ್ನು ತಾಲೂಕು ಪತ್ರಕರ್ತರ ಸಂಘವು ಪ್ರತೀ ವರ್ಷ ‘ನೇಗಿಲಯೋಗಿ’ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಅದರಂತೆ ಈ ಬಾರಿ ಸುಂಟಿಕೊಪ್ಪದ ಪ್ರಗತಿಪರ ಕೃಷಿಕ ಪಟ್ಟೆಮನೆ ಪಿ.ಉದಯಕುಮಾರ್, ನಾಕೂರು ಶಿರಂಗಾಲ ಗ್ರಾಮ ಪಂಚಾಯತ್’ನ ಮಳೂರು ನಿವಾಸಿ ಶಂಕರನಾರಾಯಣ, ಶಿರಂಗಾಲ ಗ್ರಾಮ ಪಂಚಾಯತ್’ನ ಮಣಜೂರು ನಿವಾಸಿ ಭವಾನಿ ಕುಮಾರಸ್ವಾಮಿ ಹಾಗೂ ಗುಡ್ಡೆಹೊಸೂರು ಪಂಚಾಯತ್’ನ ಬಾಳುಗೋಡು ನಿವಾಸಿ ನಂಗಾರು ಜಗ ಅವರನ್ನು ಆಯ್ಕೆ ಮಾಡಲಾಗಿದೆ. ಏ.21 ರಂದು ಪೂರ್ವಾಹ್ನ 11 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಪತ್ರಿಕಾಭವನ ಟ್ರಸ್ಟಿ, ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಅವರು ಉದ್ಘಾಟಿಸಲಿದ್ದು, ಕುಶಾಲನಗರ ತಾಲೂಕು ಪತ್ರಕರ್ತರ ಘಟಕದ ಅಧ್ಯಕ್ಷ ಬಿ.ಸಿ.ದಿನೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ…
ಕುಶಾಲನಗರ ಏ.14 NEWS DESK : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಬ್ಬ ವ್ಯಕ್ತಿಯಾಗಿರದೆ, ಇಡೀ ಸಮಾಜದ ಶಕ್ತಿಯಾಗಿದ್ದರು. ಅವರ ಶಿಕ್ಷಣ, ಸಂಘಟನೆ, ಹೋರಾಟ ಎಲ್ಲರಿಗೂ ಮಾದರಿಯಾದುದು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆ( ಎನ್ನೆಸ್ಸೆಸ್ ) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಶಾಲಾ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ‘ಭಾರತ ಭಾಗ್ಯ ವಿಧಾತ’ ವಿಶ್ವಜ್ಞಾನಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ , ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಂವಿಧಾನ ಪೀಠಿಕೆಯನ್ನು ಬೋಧಿಸಿ ಭಾರತೀಯ ಸಂವಿಧಾನದ ಮಹತ್ವ ಕುರಿತು ಮಾತನಾಡಿದರು. ಡಾ.ಅಂಬೇಡ್ಕರ್ ರಂತಹ ಮಹಾನ್ ಪುರುಷರ ವೈಚಾರಿಕ ಚಿಂತನೆಗಳು ಶೋಷಿತರಿಗೆ ಪ್ರೇರಣೆ, ಸ್ಪೂರ್ತಿಯಾಗಬೇಕೆಂಬ ನೆಲೆಗಟ್ಟಿನಲ್ಲಿ ಇಂತಹ ಜಯಂತಿಗಳನ್ನು ಆಚರಿಸಲಾಗುತ್ತಿದೆ ಎಂದು ಪ್ರೇಮಕುಮಾರ್ ತಿಳಿಸಿದರು. ಶಿಕ್ಷಣ-ಸಂಘಟನೆ-ಹೋರಾಟ…
ಮಡಿಕೇರಿ ಏ.14 NEWS DESK : ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ ಎಂಬುದನ್ನು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಾರಿದ್ದಾರೆ. ಆದ್ದರಿಂದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲು ಶ್ರಮಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವ ಜನರು ಉನ್ನತ ಶಿಕ್ಷಣ ಪಡೆದು ವಿವಿಧ ಕ್ಷೇತ್ರದಲ್ಲಿ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು. ಆ ನಿಟ್ಟಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರಂತೆ ನಿರಂತರ ಹಾಗೂ ಕಠಿಣ ಪರಿಶ್ರಮ ಅಗತ್ಯ ಎಂದು ಶಾಸಕರು ಪ್ರತಿಪಾದಿಸಿದರು. ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಮೇಲೆ ಬರಲು ಶ್ರಮ ವಹಿಸಬೇಕು. ಪರಿಶ್ರಮ ಇಲ್ಲದೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಅಸಾಧ್ಯ ಎಂದು ಡಾ.ಮಂತರ್ ಗೌಡ ಅವರು ಕಿವಿಮಾತು ಹೇಳಿದರು. ಸಂವಿಧಾನ…
ಮಡಿಕೇರಿ ಏ.14 NEWS DESK : ಕೊಡಗು ಪ್ರೆಸ್ ಕ್ಲಬ್‌ನ ನಾಮನಿರ್ದೇಶಕರಾಗಿ ಎಚ್.ಆರ್.ಸಿಂಗಿಸತೀಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ತೆರವಾಗಿದ್ದ ನಾಮನಿರ್ದೇಶಕ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು.
ಮಡಿಕೇರಿ ಏ.13 NEWS DESK : ಅರಮೆರಿ ಲಿಂಗರಾಜೇಂದ್ರ ಪ್ರಸಾದ ಭವನದಲ್ಲಿ ಹೊಂಬೆಳಕು ಕಿರಣ 242 ಮಾಸಿಕ ತತ್ವ ಚಿಂತನ ಗೋಷ್ಠಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಳಂಚೇರಿ ಮಠದ ಪೀಠಾಧಿಪತಿಗಳಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಲೇಖಕಿ ಕೆ.ಜಯಲಕ್ಷ್ಮಿ ಅವರ ‘ನಡೆದಷ್ಟೂ ದಾರಿ’ ಕೃತಿಯನ್ನು ಲೋಕಾರ್ಪಣೆಗೊಳಿಸಿ, ಶುಭ ಕೋರಿದರಲ್ಲದೆ ಶರಣ ಶರಣೆಯರ ಜೀವನ ಆದರ್ಶ, ವಚನಗಳ ಸಾರ್ವಕಾಲಿಕ ಮೌಲ್ಯಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೊಡಗು ಜಾನಪದ ಪರಿಷತ್ತಿನ ಅಧ್ಯಕ್ಷರು ಹಾಗೂ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ಸಾಮಾಜಿಕ, ಧಾರ್ಮಿಕ ಕ್ಷೇತ್ರಕ್ಕೆ ಅರಮೇರಿ ಮಠದ ಪರಮಪೂಜ್ಯ ಗುರುಗಳು ನೀಡುತ್ತಾ ಬರುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಉದಾತ್ತ ವ್ಯಕ್ತಿಗಳ ಜೀವನ ಚರಿತ್ರೆಯನ್ನು ವಿವರಿಸಿತ್ತ ವಾಸ್ತವದಲ್ಲಿ ಬದುಕುವ ಚಿಂತನೆ ಉತ್ತಮ ಎಂದರು. ಪೊನ್ನಂಪೇಟೆ ಸಿ ಐ ಟಿ ಕಾಲೇಜಿನ ಉಪನ್ಯಾಸಕಿ ಸುಶ್ಮಿತಾ ಅವರು ಮಾತನಾಡಿ ಜಯಲಕ್ಷ್ಮಿ ಅವರ ಕೆಲವು ಲೇಖನಗಳ ಬಗ್ಗೆ ಮಾತನಾಡಿದರು. ಕೊಡಗು ಜಿಲ್ಲಾ ಕನ್ನಡ…
ಗೋಣಿಕೊಪ್ಪಲು ಏ.13 NEWS DESK : ಸಾರ್ವಜನಿಕರಿಂದ ಸಹಕಾರ ಪಡೆದು ಸರಕಾರದ ಯಾವುದೇ ಅನುದಾನ ಇಲ್ಲದೆ ಪಾರದರ್ಶಕ ಲೆಕ್ಕಪತ್ರ ಇಟ್ಟು, ಕುಟ್ಟ ವಲಯದ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯನ್ನು ನೂತನವಾಗಿ ನಿರ್ಮಿಸಿದ್ದು ಬಹುದೊಡ್ಡ ಸಾಧನೆ ಎಂದು ವಿರಾಜಪೇಟೆ ಪೊಲೀಸ್ ಉಪವಿಭಾಗಾಧಿಕಾರಿ ಮಹೇಶ್ ಕುಮಾರ್ ನುಡಿದರು. ಕುಟ್ಟ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ನೂತನ ವೃತ್ತನಿರೀಕ್ಷಕರ ಕಟ್ಟಡ ನಿರ್ಮಿಸಲು ಸಹಕರಿಸಿದವರಿಗೆ ಧನ್ಯವಾದ ಸಮರ್ಪಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಕಚೇರಿಯನ್ನು ನಿರ್ಮಿಸುವ ಸಲುವಾಗಿ ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಾಮರಾಜನ್ ಅವರ ಅನುಮತಿಯ ಮೇಲೆ ಈ ಕಾರ್ಯ ನಡೆದಿದೆ. ಆದರೆ ಕುಟ್ಟ ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಮೂರ್ತಿಯವರ ಸಾಧನೆಯ ಫಲ ಇದಾಗಿದೆ. ಕೇವಲ 2 ರಿಂದ 3 ವರ್ಷಗಳ ಕಾಲ ಒಂದು ಠಾಣೆಯಲ್ಲಿ ಸೇವೆ ಸಲ್ಲಿಸುವ ಅಧಿಕಾರಿ ನನಗೇಕೆ ಈ ಉಸಾಬರಿ ಎನ್ನುವ ಈ ಸಂದರ್ಭದಲ್ಲಿ ಸಾರ್ವಜನಿಕರ ಸಹಕಾರ ಪಡೆದು ನೂತನ ಕಚೇರಿ ನಿರ್ಮಿಸಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಪ್ರಮುಖರಾದ…






