ಲೇಖಕ: admin

ಬೆಂಗಳೂರು ಮೇ 13 :  ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಕಾರ್ಯ ಆರಂಭವಾಗಿದೆ. ಮತಎಣಿಕೆ ಕಾರ್ಯದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದ್ದು,  ಬಿಜೆಪಿ ಕೂಡ ಪ್ರಬಲ ಪೈಪೋಟಿ ನೀಡುತ್ತಿದೆ. ಬಿಜೆಪಿ 73 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 117 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು 5  ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

Read More

ಮಡಿಕೇರಿ ಕ್ಷೇತ್ರ : 5ನೇ ಸುತ್ತಿನಲ್ಲಿ ಡಾ.ಮಂತರ್ ಗೌಡ 23888 (ಕಾಂಗ್ರೆಸ್) ಎಂ.ಪಿ.ಅಪ್ಪಚ್ಚುರಂಜನ್ 19834 (ಬಿಜೆಪಿ) ನಾಪಂಡ ಮುತ್ತಪ್ಪ 1554 (ಜೆಡಿಎಸ್)

Read More

ಮಡಿಕೇರಿ ಮೇ 12 : ಕಳೆದ ರಾತ್ರಿ ಸುರಿದ ಧಾರಾಕಾರ ಗಾಳಿ ಮಳೆಯಿಂದಾಗಿ ಕಡಂಗ – ವಿರಾಜಪೇಟೆ ಮುಖ್ಯ ರಸ್ತೆಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲ ಹೊತ್ತು ಸಂಚಾರ ಸ್ಥಗಿತಗೊಂಡಿತ್ತು. ಕಡಂಗ- ಕೆದುಮುಳ್ಳೋರು ಮುಖ್ಯ ರಸ್ತೆಯಲ್ಲೂ ವಿದ್ಯುತ್ ಕಂಬಗಳು ಮತ್ತು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರ ಸ್ಥಗಿತಗೊಂಡಿತ್ತು. ಕಡಂಗ ದೇವಸ್ಥಾನ ಸಮೀಪದಲ್ಲಿ ಮರದ ಕೊಂಬೆ ಬಿದ್ದು ಸಂಚಾರಕ್ಕೆ ಅಡಚಣೆಗೊಂಡಿತ್ತು. ಕಡಂಗ ಸುತ್ತುಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಕತ್ತಲು ಅವರಿಸಿಕೊಂಡಿವೆ. (ವರದಿ : ನೌಫಲ್)

Read More

ಮಡಿಕೇರಿ ಮೇ 12 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿ ಚುನಾವಣಾ ಪೂರ್ವಭಾವಿ ಸಿದ್ಧತೆ ಹಾಗೂ ಮಸ್ಟರಿಂಗ್ ಮತ್ತು ಡೀ ಮಸ್ಟರಿಂಗ್ ಕಾರ್ಯಗಳಿಗಾಗಿ ಅಧಿಗ್ರಹಣಗೊಳಿಸಲಾದ ಎಲ್ಲಾ ವರ್ಗದ ವಾಹನಗಳನ್ನು ಸಕಾಲದಲ್ಲಿ ಒದಗಿಸಿ ಸೇವೆ ನೀಡಿ ಸಹಕರಿಸಿದ ಜಿಲ್ಲೆಯ ಎಲ್ಲಾ ಸರಕು-ಸಾಗಾಣೆ, ಮ್ಯಾಕ್ಸಿಕ್ಯಾಬ್, ಬಸ್ಸು, ಟ್ಯಾಕ್ಸಿ, ಶಾಲಾ-ಕಾಲೇಜು ವಾಹನಗಳ ಚಾಲಕರು, ಮಾಲೀಕರು ಹಾಗೂ ಸಂಘದ ಪದಾಧಿಕಾರಿಗಳಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ ಎಸ್.ಎನ್. ಅವರು ಕೃತಜ್ಞತೆ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 12 : ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2023-24 ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ನೇರವಾಗಿ ಪ್ರಥಮ ಡಿಪ್ಲೋಮಾ ಪ್ರವೇಶ ನೀಡಲಾಗುವುದು. ಮೇ 15 ರಿಂದ ನೇರ ಪ್ರವೇಶ ಪಡೆಯಲು ಅವಕಾಶವಿದ್ದು, ಸಂಸ್ಥೆಯಲ್ಲಿ 5 ಎಂಜಿನಿಯರಿಂಗ್ ಕೋರ್ಸ್‍ಗಳಿದ್ದು ಆಟೊಮೊಬೈಲ್, ಸಿವಿಲ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ ಹಾಗೂ ಮೆಕ್ಯಾನಿಕಲ್ ವಿಭಾಗಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಪ್ರವೇಶ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಕಾಲೇಜಿನಲ್ಲಿ ನೇರವಾಗಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ. 9611470407, 9591137340 ನ್ನು ಸಂಪರ್ಕಿಸಬಹುದು ಎಂದು ಕುಶಾಲನಗರ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

Read More