ಮಡಿಕೇರಿ ಮೇ 12 : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಮೇ 10 ರ ಮತದಾನದ ದಿನದಂದು ‘ಸೆಲ್ಫಿ ಕಂಟೆಸ್ಟ್’ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಜಿಲ್ಲೆಯ 2 ವಿಧಾನಸಭಾ ಕ್ಷೇತ್ರದಿಂದ ಸುಮಾರು 620 ಸ್ಪರ್ಧಿಗಳು ಭಾಗವಹಿಸಿದ್ದರು. ಸ್ಪರ್ಧಿಗಳು ಕಳುಹಿಸಿದ ಸೆಲ್ಫಿಗಳಲ್ಲಿ ಅತ್ಯುತ್ತಮವಾದ ಸೆಲ್ಫಿಗಳನ್ನು ಗುರುತಿಸಿ ವಿಜೇತರನ್ನು ಆಯ್ಕೆ ಮಾಡಲಾಗಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚೆನ್ನಯ್ಯನ ಕೋಟೆಯ ಮತಗಟ್ಟೆ ಸಂಖ್ಯೆ 115 ಕಾರ್ಯಪ್ಪ(ಪ್ರಥಮ), ಮಾಯಮುಡಿಯ ಮತಗಟ್ಟೆ ಸಂಖ್ಯೆ 208 ಬಾನಂಡ ಆಶಾ ಸೂದನ(ದ್ವಿತೀಯ), ಕೊಟ್ಟೋಳಿ ಮತಗಟ್ಟೆ ಸಂಖ್ಯೆ 168 ರ ಗಿರೀಶ್ ಕುಮಾರ್(ತೃತೀಯ) ಬಹುಮಾನ ಪಡೆದಿದ್ದಾರೆ. ಸಮಾಧಾನಕರ ಬಹುಮಾನವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 51 ದೊಡ್ಡಮಳ್ತೆಯ ಜಯಶ್ರೀ, ಮದಲಾಪುರ ಮತಗಟ್ಟೆ ಸಂಖ್ಯೆ 147 ರ ಶ್ವೇತಾ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನರಿಯಂದಡ ಎಡಪಾಲ ಮತಗಟ್ಟೆ ಸಂಖ್ಯೆ 83 ಸುಮಯ್ಯ ಇವರು ಭಾಜನರಾಗಿದ್ದು, ವಿಜೇತರಿಗೆ…
ಲೇಖಕ: admin
ಮಡಿಕೇರಿ ಮೇ 12 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾಗಿ ನೇಮಕಗೊಂಡಿರುವ ಜಿ.ಪ್ರಸನ್ನ ರಾಮಸ್ವಾಮಿ (ಭಾ.ಆ.ಸೇ) ಅವರು ನಗರದ ಸಂತ ಜೋಸೆಫರ ಶಾಲೆಗೆ ಭೇಟಿ ನೀಡಿ ಮತ ಎಣಿಕೆ ಸಿದ್ಧತೆ ಬಗ್ಗೆ ಪರಿಶೀಲಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಜೊತೆ ಸಮಾಲೋಚನೆ ನಡೆಸಿದರು. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬನಾ ಎಂ.ಶೇಕ್ ಅವರಿಂದ ಮತ ಎಣಿಕೆಗೆ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು. ಈಗಾಗಲೇ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ನೇಮಕವಾಗಿರುವ ವಿಕ್ರಮ ಸಿಂಗ್ ಮಲ್ಲಿಕ್(ಭಾ.ಆ.ಸೇ) ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಮತ ಎಣಿಕೆ ವೀಕ್ಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ ಎಣಿಕೆ ಸಂಬಂಧಿಸಿದಂತೆ ಅಂತಿಮ ಸಿದ್ಧತೆಯನ್ನು ಪರಿಶೀಲಿಸಿದರು. ಹಾಗೆಯೇ ಅಂಚೆ ಮತಪತ್ರ ಎಣಿಕೆ ಹಾಗೂ ವಿದ್ಯುನ್ಮಾನ ಮತಯಂತ್ರದ ಮತ ಎಣಿಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಮಾಲೋಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯತೀಶ್ ಉಳ್ಳಾಲ್, ಸಹಾಯಕ ಚುನಾವಣಾಧಿಕಾರಿಗಳಾದ ಎಸ್.ಎನ್.ನರಗುಂದ,…
ಮಡಿಕೇರಿ ಮೇ 12 : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಥಮ ಬಿಬಿಎ ವಿದ್ಯಾರ್ಥಿನಿ ಲಾವಣ್ಯ ಬೋರ್ಕರ್ ನೃತ್ಯದಲ್ಲಿ ಸಾಧನೆ ಮಾಡಿದ್ದಾಳೆ. ತಮಿಳುನಾಡಿನ ತಿರುಚಿಯ ವೃಕ್ಷ ವರ್ಲ್ಡ್ ರೆಕಾರ್ಡ್ ನಿಂದ ಆಯೋಜಿಸಲಾಗಿದ್ದ ನೃತ್ಯ ಕಾರ್ಯಕ್ರಮದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಈ ಹಿಂದೆಯು ಈಕೆ ಕಲಾ ಮಾಣಿಕ್ಯ, ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಮುಂತಾದ ಪುರಸ್ಕಾರವನ್ನು ಪಡೆದಿದ್ದು, ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಯೂ ನೃತ್ಯ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾಳೆ. ಲಾವಣ್ಯ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆ ವಿದ್ಯಾರ್ಥಿನಿಯಾಗಿದ್ದು, ಬೇಟೋಳಿ ಗ್ರಾಮದ ನಟರಾಜ್ ಬೋರ್ಕರ್ ಹಾಗೂ ಸುನಂದ ದಂಪತಿಗಳ ಪುತ್ರಿ. ವಿದ್ಯಾರ್ಥಿನಿಯ ಈ ಸಾಧನೆಗೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಕರ್ ಅಭಿನಂದಿಸಿ ಶ್ಲಾಘಿಸಿದ್ದಾರೆ.
ಮಡಿಕೇರಿ ಮೇ 12 : 2023ನೇ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಚುನಾವಣಾಧಿಕಾರಿಗಳು ಶ್ಲಾಘನೀಯ ಕಾರ್ಯ ಮಾಡಿದ್ದಾರೆ ಎಂದು ಶ್ರೀ ಕೃಷ್ಣ ಗೋಶಾಲೆಯ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹರೀಶ್ ಜಿ.ಆಚಾರ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತಾಗಬೇಕು ಎಂಬ ನಿಟ್ಟಿನಲ್ಲಿ ಮತದಾರರನ್ನು ಆಕರ್ಷಿಸುವ ಸಲುವಾಗಿ ಸ್ವೀಪ್ ಸಮಿತಿ ಸೇರಿದಂತೆ ಜಿಲ್ಲಾಧಿಕಾರಿಗಳು, ಎಡಿಸಿ, ಎಸಿ, ಪೊಲೀಸ್ ಇಲಾಖಾ ಅಧಿಕಾರಿ, ಸಿಬ್ಬಂದಿಗಳು, ಸರಕಾರಿ ನೌಕರರು ನಿರಂತರ ಪ್ರಯತ್ನಗಳನ್ನು ಮಾಡಿದ್ದಾರೆ. ಬಂದೋಬಸ್ತ್ ಕಾರ್ಯದಲ್ಲಿ ಐಟಿಬಿಪಿ, ಸಿಐಎಸ್‍ಎಫ್, ಅರೆ ಸೇನಾಪಡೆಯ ಸಿಬ್ಬಂದಿಗಳು ಹಗಲು ರಾತ್ರಿಗಳ ಪರಿವೆ ಇಲ್ಲದೆ ಕಾರ್ಯನಿರ್ವಹಿಸಿದ್ದಾರೆ. ರಜೆಯ ದಿನಗಳಲ್ಲೂ ಕೂಡ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಮನೆಗೆ ತೆರಳದೆ ಕೆಲಸ ಮಾಡಿರುವುದು ಕಂಡು ಬಂದಿದೆ. ಜನರಲ್ಲಿ ಮತದಾನದ ಜಾಗೃತಿ ಮೂಡಿಸುವ ಹಲವಾರು ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯವೆಂದು ತಿಳಿಸಿದ್ದಾರೆ. ಮತ ಪ್ರಚಾರದ ಚುನಾವಣಾ ರ್ಯಾಲಿಗಳು, ನಾಮಪತ್ರ…
ಮಡಿಕೇರಿ ಮೇ 12 : ಮುಖ್ಯ ರಸ್ತೆಯ ಬದಿಯಲ್ಲಿನ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿಯಾಗಿ, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪೊನ್ನಂಪೇಟೆಯಲ್ಲಿ ನಡೆದಿದೆ. ಕುಟ್ಟ ರಸ್ತೆಯಿಂದ ಪೊನ್ನಂಪೇಟೆ ಕಡೆಗೆ ಬರುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು, ನಂತರ ಎಪಿಸಿಎಂಎಸ್ ಕಟ್ಟಡದಲ್ಲಿದ್ದ ಎಳನೀರು ಅಂಗಡಿಗೆ ಕೂಡ ನುಗ್ಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸಮೀಪದ ರಾಮಕೃಷ್ಣ ಸೇವಾ ಆಶ್ರಮದಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ನಾಪೋಕ್ಲು ಮೇ 12 : ನಾಪೋಕ್ಲು ಗ್ರಾ.ಪಂ ಗೆ ಒಳಪಟ್ಟ ಕಲ್ಲುಮೊಟ್ಟೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ತಕ್ಷಣವೇ ಗ್ರಾ.ಪಂ ನೀರಿನ ವ್ಯವಸ್ಥೆಯನ್ನು ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೂಲಿ ಕಾರ್ಮಿಕರೇ ಹೆಚ್ಚಾಗಿರುವ ಕಲ್ಲುಮೊಟ್ಟೆ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಇದ್ದರೂ ಸರಿಯಾದ ರೀತಿಯಲ್ಲಿ ನೀರು ಸರಬರಾಜು ಆಗುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿನಿತ್ಯ ದುಡಿದು ಜೀವನ ಸಾಗಿಸುತ್ತಿರುವ ನಮಗೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಕುಡಿಯುವ ನೀರನ್ನು ಒದಗಿಸಲು ಗ್ರಾ.ಪಂ ವಿಫಲವಾಗಿದೆ. ಹಲವು ಬಾರಿ ಇದರ ಬಗ್ಗೆ ಪಂಚಾಯಿತಿ ಅಧಿಕಾರಿಗಳ, ಜನ ಪ್ರತಿನಿಧಿಗಳ ಗಮನಕ್ಕೆ ತಂದಾಗ ಮೋಟಾರ್ ರಿಪೇರಿಯಾಗಿದೆ ಎಂಬ ನೆಪ ಒಡ್ಡಿ ಇದುವರೆಗೂ ಅದನ್ನು ದುರಸ್ತಿಪಡಿಸುವ ಕಾರ್ಯಕ್ಕೆ ಮುಂದಾಗದೆ ಇಂದು ಗ್ರಾಮಸ್ಥರು ಕುಡಿಯುವ ನೀರಿಗಾಗಿ ದೂರದ ಕಾವೇರಿ ಹೊಳೆಗೆ ತೆರಳುವ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದಲ್ಲಿ ಕಳೆದ ಅಲವು…
ಮಡಿಕೇರಿ ಮೇ 12 : ವಿರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡು ಆತಂಕ ಮೂಡಿಸಿದೆ. ಪಕ್ಕದ ಕುರುಬರಮೊಟ್ಟೆ ತೋಟದಿಂದ ಸಿದ್ಧಾಪುರ ನಗರಕ್ಕೆ ಬಂದ ಕಾಡಾನೆ ಪಟ್ಟಣದಲ್ಲಿ ಇದ್ದ ಸಾರ್ವಜನಿಕರ ಮೇಲೆ ದಾಳಿಗೆ ಮುಂದಾಗಿದ್ದು ಜನ ಚದುರಿ ಓಡಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ನಂತರ ಅದೇ ಮಾರ್ಗದಲ್ಲಿ ಮರಳಿ ಪಕ್ಕದ ಕುರುಬರಮೊಟ್ಟೆ ತೋಟದಲ್ಲಿ ಬೀಡುಬಿಟ್ಟಿರುವುದಾಗಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಮೇ 12 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತ ಎಣಿಕೆ ನಡೆಯುವ ದಿನದಂದು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೇ 12 ರ ಮಧ್ಯರಾತ್ರಿ 12 ಗಂಟೆಯಿಂದ ಮೇ, 13 ರ ಮಧ್ಯರಾತ್ರಿ 12 ಗಂಟೆ ವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ-ಸಮಾರಂಭ, ವಾಹನ ಜಾಥ, ರ್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವುದು, ಸ್ಪೋಟಕ, ದಹನ ವಸ್ತುಗಳು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮತ ಎಣಿಕಾ ಕೇಂದ್ರವಾದ ಮಡಿಕೇರಿಯ ಸೆಂಟ್ ಜೋಸೆಫ್ ಕಾನ್ವೆಂಟ್‍ನ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವು ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿರುತ್ತದೆ. ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ತಂಗುವಿಕೆ ಮತ್ತು ಧ್ವನಿವರ್ಧಕ ಬಳಕೆಯನ್ನು ಸಹ ನಿಷೇಧಿಸಿದೆ. ಈ ಆದೇಶವು ಸರ್ಕಾರಿ ಕರ್ತವ್ಯದ ನಿಮಿತ್ತ, ಬ್ಯಾಂಕ್.…
ಮಡಿಕೇರಿ ಮೇ 12 : ಗೋಣಿಕೊಪ್ಪಲಿನ ಕೋಟೂರು ಗ್ರಾಮದ ಮನೆಯಂಗಳದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ವರ್ಷದ ಬಾಲಕಿ ಸಾವಿಗೀಡಾಗಿದೆ. ಪೆಮ್ಮಂಡ ರೋಶನ್, ಇಸು ದಂಪತಿ ಪುತ್ರಿ ಸಿಯಾನ್ (3) ಮೃತ ಕಂದಮ್ಮ. ಬುಧವಾರ ಸಂಜೆ ಬಲೂನ್‌ನಲ್ಲಿ ಆಟವಾಡುತ್ತಿದ್ದಾಗ ಮನೆಯ ಸಮೀಪವಿದ್ದ ಬಾವಿಗೆ ಬಲೂನ್ ಬಿದ್ದಿದೆ. ಇದನ್ನು ತೆಗೆಯಲು ಪ್ರಯತ್ನಿಸುತ್ತಿದ್ದ ಸಂದರ್ಭ ಬಾಲಕಿ ಬಾವಿಗೆ ಜಾರಿ ಬಿದ್ದಿದೆ ಎನ್ನಲಾಗಿದೆ. ಮನೆಯ ಒಳಗೆ ಇದ್ದ ಪಾಲಕರು ಮಗುವನ್ನು ಹುಡುಕಿಕೊಂಡು ಬಂದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಯಿತು. ಬೀರ್ಯ ಕೊಡವ ಸಿನಿಮಾದಲ್ಲಿ ಸಿಯಾನ್ ಪಾತ್ರ ಮಾಡಿದ್ದು, ಸಾರ್ವಜನಿಕವಾಗಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಮೇ 12 : ಕೊಡಗು ಮೂಲದ ಚರಿಷ್ಮಾ ಮಾದಪ್ಪ ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದು, ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಕೊಡವ ಸಾಂಪ್ರದಾಯಿಕ ಧಿರಿಸಿನಲ್ಲಿ ಅಧಿಕಾರ ಸ್ವೀಕರಿಸಿದ್ದು ವಿಶೇಷವಾಗಿತ್ತು. ಚರಿಷ್ಮಾ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕೊಡಗಿನ ಹಿರಿಮೆಯನ್ನು ವಿದೇಶಿಗರ ಮನ ಮುಟ್ಟುವಂತೆ ಮಾಡಿದರು. ಮೂಲತಃ ನಾಪೋಕ್ಲು ವಿಭಾಗದ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ರಾಜಕೀಯದಲ್ಲಿ ಚರಿಷ್ಮಾ ಮಾದಪ್ಪ ಗುರುತಿಸಿಕೊಂಡಿದ್ದಾರೆ.






