ಮಡಿಕೇರಿ ಮೇ 11 : ಕಾರ್ಮಿಕನೊಬ್ಬ ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಕಡಿದು ಗಾಯಗೊಳಿಸಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ನೇಗಳ್ಳೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಗಿರಿಜನರ ಕಮಲ(50) ಗಾಯಾಳುವಾಗಿದ್ದು, ಪತಿ ಆರೋಪಿ ಗಣೇಶ ತಲೆ ಮರೆಸಿಕೊಂಡಿದ್ದಾನೆ. ತೋಟದ ಲೈನ್‌ಮನೆಯಲ್ಲಿ ಗಣೇಶ ಹಾಗೂ ಕಮಲ ವಾಸವಾಗಿದ್ದರು. ಗುರುವಾರ ಸಂಜೆ ದಂಪತಿ ನಡುವೆ ಕಲಹ ಏರ್ಪಟ್ಟಿದ್ದು, ಮದ್ಯದ ಅಮಲಿನಲ್ಲಿದ್ದ ಪತಿ, ಪತ್ನಿಯನ್ನು ಕತ್ತಿಯಿಂದ ಕಡಿದಿರುವುದಾಗಿ ಆರೋಪಿಸಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಕಮಲಾಗೆ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸೋಮವಾರಪೇಟೆ ಠಾಣಾಧಿಕಾರಿಗಲಾದ ರಾಮಚಂದ್ರ ನಾಯಕ್ ಹಾಗೂ ರಮೇಶ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
ಲೇಖಕ: admin
ಮಡಿಕೇರಿ ಮೇ 11 : ಕೆಲಸ ಮಾಡುತ್ತಿದ್ದ ಸಂದರ್ಭ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಕೂಡ್ಲು ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಅಭ್ಯತ್ ಮಂಗಲ ಪೈಸಾರಿ ನಿವಾಸಿ ನಾಗಪ್ಪ ಚಾಮುಣು (55) ಮೃತ ದುರ್ದೈವಿ. ಕೂಡ್ಲೂರು ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಕಾನನ್ ಕಾಡು ಖಾಸಗಿ ಕಾಫಿ ತೋಟದಲ್ಲಿ ಸಿಲ್ವರ್ ಮರ ಕತ್ತರಿಸುತ್ತಿರುವ ಸಂದರ್ಭದಲ್ಲಿ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಆರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಮೇ.11 : ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ರ ಮತದಾನ ಮೇ, 10 ರಂದು ನಡೆದಿದ್ದು, ಕರ್ನಾಟಕದಲ್ಲಿ ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬದಂತೆ ಆಚರಿಸಲಾಗಿದೆ. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ನಡೆಯಲಿದೆ. ಲೋಕಸಭಾ ಚುನಾವಣೆ-2019 ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿಸುವುದರ ಜೊತೆಗೆ ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆದ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ನೀಡಲಾಗುತ್ತಿದೆ. ಸ್ಪರ್ಧೆಯಲ್ಲಿ…
ಮಡಿಕೇರಿ ಮೇ.11 : ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ (1 ರಿಂದ 10ನೇ ತರಗತಿ) 5 ರಿಂದ 16 ವರ್ಷದ ಮಕ್ಕಳಿಗಾಗಿ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಅಂಡ್ ಗೈಡ್ಸ್ ಭವನ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿ. ಇಲ್ಲಿ ಮೇ, 15 ರಿಂದ 29 ರವರೆಗೆ ಉಚಿತ ಬೇಸಿಗೆ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಿಗೆ ತರಬೇತಿ ನೀಡಲಾಗುವುದು. ಆದ್ದರಿಂದ ಈ ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ಮೇ, 12 ರೊಳಗೆ ದೂರವಾಣಿ ಸಂಖ್ಯೆ 8618861505, 6363285685 ಕಚೇರಿ ಸಮಯದಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ. ಕಚೇರಿಯಲ್ಲಿ ಹೆಸರು ನೋಂದಾಯಿಸಿದ ಮಕ್ಕಳಿಗೆ ಮಾತ್ರ ಶಿಬಿರದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.
ಮಡಿಕೇರಿ ಮೇ 11 : ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪ.ಪೂ.ಕಾಲೇಜು ಕೋರಂಗಾಲ (ಭಾಗಮಂಡಲ) ಮಡಿಕೇರಿ ತಾಲೂಕು, ಕೊಡಗು ಜಿಲ್ಲೆ,ಇಲ್ಲಿನ ಪ್ರಥಮ ಪಿಯುಸಿ ತರಗತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತ ವಿದ್ಯಾರ್ಥಿಗಳು ದಿನಾಂಕ:08/05/2023 ರಿಂದ ದಿ: /05/2023ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ SC/ST/C1 ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ ರೂಪಾಯಿ 250000/- ಮತ್ತು 2ಂ, 2ಃ, 3ಂ ಮತ್ತು 3ಃ ಇವರ ಪೋಷಕರ ವಾರ್ಷಿಕ ವರಮಾನ ರೂಪಾಯಿ 100000/- ಆಗಿರಬೇಕು. ಉಚಿತ ಊಟ, ವಸತಿ ಸೌಲಭ್ಯ ಹಾಗೂ ನೋಟ್ ಬುಕ್ ಪುಸ್ತಕ ಇತ್ಯಾದಿ ಸೌಲಭ್ಯಗಳು ಇರುತ್ತದೆ. ಅರ್ಜಿಗಳನ್ನು ತಮ್ಮ ಹತ್ತಿರದ ಮೊರಾರ್ಜಿ ದೇಸಾಯಿ,ಅಟಲ್ ಬಿಹಾರಿ ವಾಜಪೇಯಿ ಕಿತ್ತೂರು ರಾಣಿ ಚೆನ್ನಮ್ಮ ಡಾ. ಬಿ.ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಂದ ಪಡೆದು ಅಥವಾ https://kreis.karnataka.gov.in/ ಇಲ್ಲಿಂದ download ಮಾಡಿಕೊಂಡು ಅದೇ ಶಾಲೆಯಲ್ಲಿ ಅಥವಾ ನಮ್ಮ ಕಾಲೇಜಿಗೆ ಬಂದು ಸಲ್ಲಿಸಬಹುದು. ಕಳೆದ ಶೈಕ್ಷಣಿಕ ವರ್ಷದಲ್ಲಿ ನಮ್ಮ ಕಾಲೇಜಿನಲ್ಲಿ ಶೇಕಡ 100…
ಮಡಿಕೇರಿ ಮೇ 11 : ‘ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ಪ್ರತ್ಯೇಕವಾಗಿ ಮತ ಎಣಿಕೆ ಕಾರ್ಯ ನಡೆಯಲಿದೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 14 ಟೇಬಲ್‍ಗಳಲ್ಲಿ ಮತ ಎಣಿಕೆ ನಡೆಯಲಿದ್ದು, 20 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಜೊತೆಗೆ ಅಂಚೆ ಮತ್ತು ಸೇವಾ ಮತದಾರರ ಪತ್ರ ಮತ ಎಣಿಕೆ ಕಾರ್ಯವೂ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.’
ಮಡಿಕೇರಿ ಮೇ.11 : ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಮೇ, 13 ರಂದು ನಡೆಯಲಿದ್ದು, ಮತ ಎಣಿಕೆ ಪ್ರಕ್ರಿಯೆಯನ್ನು ತಾಳ್ಮೆ ಮತ್ತು ಎಚ್ಚರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ನಗರದ ಸಂತ ಜೋಸೆಫರ ಶಾಲೆಯಲ್ಲಿ ಮತ ಎಣಿಕೆ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು. ಮತ ಎಣಿಕೆ ಪ್ರಕ್ರಿಯೆಯು ಮೇ, 13 ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಚುನಾವಣಾ ಆಯೋಗದ ನಿಯಮದ ಪ್ರಕಾರ ಮತ ಎಣಿಕೆ ಕೈಗೊಳ್ಳಬೇಕು. ಮತ ಎಣಿಕೆ ಸ್ಥಳಕ್ಕೆ ಮೊಬೈಲ್ ತರಬಾರದು. ಮತ ಎಣಿಕೆ ಕಾರ್ಯವು ಸರಳ ಪ್ರಕ್ರಿಯೆ ಆಗಿದ್ದು, ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗದೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು. ಯಾವುದಾದರೂ ಸಮಸ್ಯೆಗಳು ಇದ್ದಲ್ಲಿ ಚುನಾವಣಾಧಿಕಾರಿ ಗಮನಕ್ಕೆ ತರಬೇಕು. ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರು ಕಾರ್ಯನಿರ್ವಹಿಸಲಿದ್ದು, ಜೊತೆಗೆ ಮೈಕ್ರೋ ವೀಕ್ಷಕರು ಇರಲಿದ್ದಾರೆ. ಎದುರಿಗೆ ವಿವಿಧ ಪಕ್ಷದ…
ವಿರಾಜಪೇಟೆ ಮೇ 11 : ನಗರದ ಹೊರವಲಯದ ಕೊಮ್ಮೆತ್ತೊಡು ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ವಿರಾಜಪೇಟೆ-ಸಿದ್ದಾಪುರ ಮುಖ್ಯ ರಸ್ತೆಯ ಕೊಮ್ಮೆತೋಡು ಬಳಿಯ ಸಂತ ಮರಿಯ ಚರ್ಚ್ ಮುಂಭಾಗದ ತಿರುವಿನಲ್ಲಿ ವಿರಾಜಪೇಟೆಯಿಂದ ಸಿದ್ದಾಪುರಕ್ಕೆ ತೆರಳುತಿದ್ದ ಗೂಡ್ಸ್ ವಾಹನ ಮತ್ತು ಸಿದ್ದಾಪುರದಿಂದ ವಿರಾಜಪೇಟೆ ನಗರಕ್ಕೆ ಆಗಮಿಸುತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ವಾಹನಗಳ ಮುಂಭಾಗ ಜಖಂಗೊಂಡಿದೆ. ಅಪಘಾತದ ಸಂದರ್ಭ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದು, ಇವರನ್ನು ಅಮ್ಮತ್ತಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಮೇ 10 : ಹಾವಿನ ಕಡಿತದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊಡಗಿನ ಅತ್ತೂರು ಗ್ರಾಮದಲ್ಲಿ ನಡೆದಿದೆ. ಗೋಣಿಕೊಪ್ಪ ಸಮೀಪದ ಅತ್ತೂರು ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ, ಮೋಹನ್ ನೆಲ್ಲೂರಾಯ ಅವರ ತಾಯಿ ಶುಭಲಕ್ಷ್ಮೀ (68) ಎಂಬವರೆ ಸಾವನ್ನಪ್ಪಿರುವ ದುರ್ದೈವಿ. ಇಂದು ಬೆಳಗ್ಗೆ ಶುಭಲಕ್ಷ್ಮೀ ಅವರು ವಿಷ ಪೂರಿತ ಗರಗಸ ಮಂಡಲ ಹಾವಿನ ಕಡಿತಕ್ಕೆ ಒಳಗಾಗಿದ್ದು, ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಹಂತದಲ್ಲಿ ಅವರು ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ.
ಬೇಕಾದ ಸಾಮಾಗ್ರಿಗಳು: ಮಾವಿನ ಹಣ್ಣು ಮೂರರಿಂದ ನಾಲ್ಕು , ಹಣ್ಣು ಹಸಿಮೆಣಸಿನ ಕಾಯಿ: 4 ರಿಂದ 5, ತೆಂಗಿನ ಕಾಯಿ: ¼ ಕಪ್, ಒಣಮೆಣಸು: 2, ಸಾಸಿವೆ: ಅರ್ಧ ಚಮಚ, ಕರಿಬೇವು: 5 ರಿಂದ 6 ಎಲೆಗಳು, ಉಪ್ಪು: ರಚಿಗೆ ತಕ್ಕಷ್ಟು. ಮಾಡುವ ವಿಧಾನ: ಮೊದಲು ಮಾವಿನ ಹಣ್ಣಿನ ಸಿಪ್ಪೆ ತೆಗೆದು ಚೆನ್ನಾಗಿ ಕಿವುಚಿ. ಒಂದು ಮಿಕ್ಸಿ ಜಾರಿಗೆ ಕಾಯಿತುರಿ, ಹಸಿಮೆಣಸಿನಕಾಯಿ ಹಾಕಿ ಗ್ರೈಂಡ್ ಮಾಡಿ. ಗ್ರೈಂಡ್ ಮಾಡಿದ ಖಾರವನ್ನು ಮಾವಿನ ಹಣ್ಣಿನ ರಸಕ್ಕೆ ಹಾಕಿ. ಇದಕ್ಕೆ ರಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಒಂದು ಸಣ್ಣ ಬಾಣಲೆಯಲ್ಲಿ ಒಂದು ಚಮಚ ಎಣ್ಣೆ ಹಾಕಿ. ಎಣ್ಣೆ ಕಾದ ನಂತರ ಅದಕ್ಕೆ ಸಾಸಿವೆ, ಕರಿಬೇವು, ಒಣಮೆಣಸು ಹಾಕಿ. ಈ ಒಗ್ಗರಣೆಯನ್ನು ಗೊಜ್ಜಿಗೆ ಹಾಕಿ. ಗೊಜ್ಜು ರೆಡಿ.






