ಲೇಖಕ: admin

ಮಡಿಕೇರಿ ಏ.13 NEWS DESK : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಎಸ್.ಆರ್.ರಮ್ಯಾ ಅವರನ್ನು ಸನ್ಮಾನಿಸಲಾಯಿತು. ಕುಶಾಲನಗರ ತಾಲ್ಲೂಕಿನ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎಸ್.ಆರ್.ರಮ್ಯಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 582 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ಹಿನ್ನೆಲೆ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು. ವಿದ್ಯಾರ್ಥಿನಿಯ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಜಿಲ್ಲಾಧ್ಯಕ್ಷರಾದ ಜಯಶ್ರೀ ಮುರುಗೇಶ್, ಜಿಲ್ಲಾ ಉಪಾಧ್ಯಕ್ಷರಾದ ರಾಜಶೇಖರ್ ಗೌಡ, ಗೌರವಾಧ್ಯಕ್ಷರಾದ ಚಂದ್ರು, ಕುಶಾಲನಗರ ತಾಲ್ಲೂಕು ಅಧ್ಯಕ್ಷರಾದ ಶಿವು, ಪ್ರಧಾನ ಕಾರ್ಯದರ್ಶಿ ಸಚಿನ್ ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಮಡಿಕೇರಿ ಏ.13 NEWS DESK : ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿರಾಜಪೇಟೆ ತಾಲ್ಲೂಕು ಹಾಗೂ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಏಪ್ರಿಲ್, 14 ರಂದು ಬೆಳಗ್ಗೆ 10.30 ಗಂಟೆಗೆ ಪೊನ್ನಂಪೇಟೆ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.

Read More

ಮಡಿಕೇರಿ ಏ.13 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.14ರ ಪಂದ್ಯಗಳು *ಮೈದಾನ 1* ಬೆಳಿಗ್ಗೆ 9 ಗಂಟೆಗೆ ತೆನ್ನಿರ ಮತ್ತು ಮುಕ್ಕಾಟಿರ (ಬೇತ್ರಿ), 10ಕ್ಕೆ ಮಿಣ್ಣಂಡ ಮತ್ತು ಚೌರಿರ, 11ಕ್ಕೆ ಕರ್ತಚ್ಚಿರ ಮತ್ತು ಬಾರ್ಯಂಡ, ಮಧ್ಯಾಹ್ನ 12ಕ್ಕೆ ಉಡುವೆರ ಮತ್ತು ಮೇಪಾಡಂಡ, 1ಕ್ಕೆ ಅಜ್ಜಮಕ್ಕಡ ಮತ್ತು ಮುಂಡಚಾಡಿರ, 2ಕ್ಕೆ ಅಣ್ಣಳಮಾಡ (ಪೂಕಳ) ಮತ್ತು ಪಳಂಗಂಡ ಹಾಗೂ 3 ಗಂಟೆಗೆ ಪಾಸುರ ಮತ್ತು ಮಂಡೇಪಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಅಪ್ಪುಮಣಿಯಂಡ ಮತ್ತು ಬಲ್ಲಂಡ, 10ಕ್ಕೆ ಕಂಗಂಡ ಮತ್ತು ಚೆನಿಯಪಂಡ, 11ಕ್ಕೆ ಕಾನತಂಡ ಮತ್ತು ಮುಕ್ಕಾಟಿರ (ಪುಲಿಕೋಟ್), ಮಧ್ಯಾಹ್ನ 12ಕ್ಕೆ ಮೂಕಳೇರ ಮತ್ತು ಅರೆಯಡ, 1ಕ್ಕೆ ಮುಕ್ಕಾಟಿರ (ಅರಪಟ್ಟು) ಮತ್ತು ಮಂಡುವಂಡ, 2ಕ್ಕೆ ಕಲ್ಕಂಡ ಮತ್ತು ತಾತಂಡ ಹಾಗೂ 3 ಗಂಟೆಗೆ ಸಿದ್ದಂಡ ಮತ್ತು ಪೊರುಕೊಂಡ

Read More

ಮಡಿಕೇರಿ, NEWS DESK ಏ.13 :-ಜೂನ್ ತಿಂಗಳಿನಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ರೈತರ ಬೇಡಿಕೆಗೆ ತಕ್ಕಂತೆ ರಸಗೊಬ್ಬರ ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ರಸಗೊಬ್ಬರ ಪೂರೈಕೆದಾರರು ಹಾಗೂ ವಿತರಕರೊಂದಿಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ರಸಗೊಬ್ಬರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಯೂರಿಯಾ, ಡಿಎಪಿ ಮತ್ತು ಎಂಒಪಿ ರಸಗೊಬ್ಬರಕ್ಕೆ ಬೇಡಿಕೆ ಇದೆ. ಆ ನಿಟ್ಟಿನಲ್ಲಿ ಬೇಡಿಕೆಗೆ ತಕ್ಕಂತೆ ದಾಸ್ತಾನು ಮಾಡಿಕೊಳ್ಳಬೇಕು. ಜೊತೆಗೆ ಮಣ್ಣು ಆರೋಗ್ಯ ನೋಡಿಕೊಂಡು ರಸಗೊಬ್ಬರ ಬಳಸುವಂತಾಗಲು ರೈತರಿಗೆ ಮನವರಿಕೆ ಮಾಡುವಂತಾಗಬೇಕು ಹಾಗೂ ಅಧಿಕಾರಿಗಳು, ಮಾರಾಟಗಾರರು ಮತ್ತು ವಿತರಕರು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ಕೃಷಿ, ತೋಟಗಾರಿಕೆ, ಕಾಫಿ ಮಂಡಳಿ, ಸಾಂಬಾರ ಮಂಡಳಿಯವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೃಷಿಕರು ಯಾವ ಯಾವ ರೀತಿಯ ರಸಗೊಬ್ಬರ ಬಳಸಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ…

Read More

ಮಡಿಕೇರಿ ಏ.13 NEWS DESK : ನಿವೇಶನಕ್ಕಾಗಿ ಒತ್ತಾಯಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಬಡ ಕುಟುಂಬಗಳು ಬಳಸುತ್ತಿದ್ದ ಬಾವಿ ನೀರನ್ನು ಕಿಡಿಗೇಡಿಗಳು ಕಲುಷಿತಗೊಳಿಸಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೋತ್ರಿಕಾಡು ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲಾ ಬಹುಜನ ಕಾರ್ಮಿಕ ಸಂಘಟನೆ ಹಾಗೂ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕೋತ್ರಿಕಾಡು ಎಂಬಲ್ಲಿ ನಿವೇಶನಕ್ಕಾಗಿ ಒತ್ತಾಯಿಸಿ ಸುಮಾರು 185 ಕುಟುಂಬಗಳು ಪ್ರತಿಭಟನೆ ನಡೆಸುತ್ತಿವೆ. ಪ್ರತಿಭಟನಾಕಾರರು ಬಳಸುತ್ತಿದ್ದ ಕುಡಿಯುವ ನೀರಿನ ಬಾವಿಗೆ ಕಿಡಿಗೇಡಿಗಳು ಬಟ್ಟೆ ಒಗೆಯುವ ಸರ್ಫ್ ಪೌಡರ್ ಹಾಕಿ ಕಲುಷಿತಗೊಳಿಸಿದ್ದಾರೆ. ಕುಡಿಯಲು ನೀರಿಲ್ಲದ ಪರಿಸ್ಥಿತಿ ಎದುರಾಗಿ ಪ್ರತಿಭಟನಾಕಾರರು ಅಳಲನ್ನು ತೋಡಿಕೊಂಡ ಹಿನ್ನೆಲೆಯಲ್ಲಿ ಪೊನ್ನಂಪೇಟೆ ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಆಲೀರ ರಶೀದ್ ಅವರು ಟ್ಯಾಂಕರ್ ಮೂಲಕ ಹೋರಾಟಗಾರರಿಗೆ ಕುಡಿಯುವ ನೀರು ಸರಬರಾಜಿನ ವ್ಯವಸ್ಥೆ ಮಾಡಿದರು. ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಯತಿರಾಜ್ ಸೂಚನೆ ಮೇರೆಗೆ ಆರೋಗ್ಯ ಸಿಬ್ಬಂದಿಗಳು ಪ್ರತಿಭಟನಾನಿರತರ ಆರೋಗ್ಯ ತಪಾಸಣೆ ಮಾಡಿದರು. ಅಗತ್ಯವಿದ್ದವರಿಗೆ ಮಾತ್ರೆ ಹಾಗೂ…

Read More

ಮಡಿಕೇರಿ ಏ.13 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.13ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಕೊಲ್ಲಿರ (ಚೆಯ್ಯಂಡಾಣೆ) ಮತ್ತು ಕೂತಂಡ ತಂಡಗಳ ನಡುವಿನ ಪಂದ್ಯದಲ್ಲಿ ಕೂತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಜಯ ಲಭಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಲ್ಲಿರ 6 ಓವರ್‍ಗಳಲ್ಲಿ 9 ವಿಕೆಟ್ ನಷ್ಟಕ್ಕೆ 20 ರನ್ ಗಳನ್ನು ಗಳಿಸಿತು. ಕೂತಂಡ ಕೇವಲ 1.4 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 23 ರನ್ ಗಳನ್ನು ಸೇರಿಸಿ ವಿಜಯ ಸಾಧಿಸಿತು. ಅಲ್ಲಂಗಡ ಮತ್ತು ಬಾಚಳ್ಳಿರ ನಡುವಿನ ಪಂದ್ಯದಲ್ಲಿ ಅಲ್ಲಂಗಡ ತಂಡಕ್ಕೆ 8 ವಿಕೆಟ್ ಗಳ ಜಯ ದೊರೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಚಳ್ಳಿರ 6 ಓವರ್‍ಗಳಲ್ಲಿ 5 ವಿಕೆಟ್ ನಷ್ಟಕ್ಕೆ 45 ರನ್ ಗಳನ್ನು ಸೇರಿಸಿತು. ಅಲ್ಲಂಗಡ ತಂಡ 2 ವಿಕೆಟ್ ನಷ್ಟಕ್ಕೆ…

Read More

ಮಡಿಕೇರಿ, NEWS DESK ಏ.13 : ನೀರನ್ನರಸುತ್ತಾ ಬಂದ ಕಾಡಾನೆಯೊಂದು ಪಾಳು ಬಾವಿಗೆ ಬಿದ್ದ ಘಟನೆ ಸಂಪಾಜೆ ಸಮೀಪದ ಪೆರಾಜೆ ಕಲ್ಚರ್ಪೆಯಲ್ಲಿ ನಡೆದಿದೆ. ಕಾಡಾನೆ ಘೀಳಿಡುವ ಶಬ್ದ ಕೇಳಿದ ಸ್ಥಳೀಯ ನಿವಾಸಿಗಳು ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಬಾವಿ ಆಳವಿರುವುದರಿಂದ ಕಾಡಾನೆಯನ್ನು ಮೇಲೆತ್ತುವ ಕಾರ್ಯಕ್ಕೆ ಅಗ್ನಿ ಶಾಮಕ ದಳದ ಸಹಾಯ ಪಡೆಯಲಾಗಿದೆ. ದ್ರೋನ್ ಮತ್ತು ಜೆಸಿಬಿ ಯಂತವನ್ನು ಕೂಡ ಬಳಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.

Read More

ಕೂಡಿಗೆ/ಕುಶಾಲನಗರ, NEWS DESK ಏ.13: ಸರ್ಕಾರಿ ಶಾಲೆಗಳ ಪ್ರಗತಿಯಲ್ಲಿ ಪೋಷಕರು, ಗ್ರಾಮಸ್ಥರು ಹಾಗೂ ಸಮುದಾಯದ ಪಾತ್ರವು ಅತ್ಯಂತ ಪ್ರಮುಖವಾದುದು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯೂ ಆದ ಗೈಡ್ಸ್ ಕ್ಯಾಪ್ಟನ್ ಕೆ.ಟಿ.ಸೌಮ್ಯ ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮ ಹಾಗೂ ಪೋಷಕರ ಸಭೆಯಲ್ಲಿ ಸರ್ಕಾರಿ ಶಾಲೆಗಳ ಪ್ರಗತಿಗೆ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ( ಎಸ್ ಡಿ ಎಂ ಸಿ ) ಯೊಂದಿಗೆ ಪೋಷಕರು, ಗ್ರಾಮಸ್ಥರು ಮತ್ತು ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಪ್ರೋತ್ಸಾಹ ಹಾಗೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ಹಾಗೂ ಆದುನಿಕ ತಂತ್ರಜ್ಞಾನ ಬಳಕೆ ಮೂಲಕ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನುನಡೆಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದರು. ಶಾಲೆಯ ಮೂಲಸೌಕರ್ಯ ಅಭಿವೃದ್ಧಿ, ಮಕ್ಕಳ ದಾಖಲಾತಿ ಹೆಚ್ಚಳ, ಶಾಲಾ ಪರಿಸರ ಅಭಿವೃದ್ಧಿ ಸೇರಿದಂತೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ…

Read More

ಮಡಿಕೇರಿ, NEWS DESK ಏ.13: ಟೀಂ ಕೆ.ಆರ್.ಟಿ ಆಯೋಜಿತ 2ನೇ ವರ್ಷದ ದಶಮಂಟಪ ಪ್ರೀಮಿಯರ್ ಲೀಗ್‌ನ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಚಾಂಪಿಯನ್ ಆಗಿ ಭಗವತಿ-ಸಿ ತಂಡ ಹೊರಹೊಮ್ಮಿತು. ರನ್ನರ್ಸ್ ಪ್ರಶಸ್ತಿಯನ್ನು ಕಾಮಾಕ್ಷಿ-ಎ ತಂಡ ತನ್ನದಾಗಿಸಿಕೊಂಡಿತು. 2ನೇ ರನ್ನರ್ಸ್ ಪ್ರಶಸ್ತಿಯನ್ನು ಕಾಮಾಕ್ಷಿ-ಬಿ ತಂಡ ಪಡೆದುಕೊಂಡಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 3 ದಿನಗಳ ಕಾಲ ನಡೆದ ಲೀಗ್ ಮಾದರಿಯ ಟೆನ್ನಿಸ್ ಬಾಲ್ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಿ ಟ್ರೋಫಿಗಾಗಿ ಸೆಣಸಾಡಿದವು. ಅಂತಿಮ ಪಂದ್ಯದಲ್ಲಿ ಭಗವತಿ-ಸಿ ತಂಡ ಕಾಮಾಕ್ಷಿ-ಎ ತಂಡವನ್ನು 23 ರನ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲು ಬ್ಯಾಟ್ ಮಾಡಿದ ಭಗವತಿ-ಸಿ ತಂಡ ನಿಗದಿತ 5 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 63 ರನ್‌ಗಳನ್ನು ಪೇರಿಸಿತು. ತಂಡದ ಪರ ರೆಯಾಜ್ 18 ಎಸೆತಗಳಲ್ಲಿ 43 ರನ್‌ಗಳನ್ನು ಬಾರಿಸಿದರು. 64 ಗುರಿ ಬೆನ್ನಟ್ಟಿದ ಕಾಮಾಕ್ಷಿ-ಎ ತಂಡ 5 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು 40 ರನ್‌ಗಳನ್ನಷ್ಟೆ ಗಳಿಸಿ ಸೋಲನುಭವಿಸಿತು.…

Read More

ಮಡಿಕೇರಿ NEWS DESK ಏ.12 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.12ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಬೊಳಂದoಡ ಮತ್ತು ಮುಂಡoಡ ತಂಡಗಳ ನಡುವಿನ ಪಂದ್ಯದಲ್ಲಿ ಮುಂಡoಡ 14 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಡoಡ ತಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಸೇರಿಸಿತು. ಬೊಳಂದoಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಪಡೆಯೆಟ್ಟಿರ ಮತ್ತು ಮಂದತoಡ ನಡುವಿನ ಪಂದ್ಯದಲ್ಲಿ ಮಂದತoಡ ತಂಡಕ್ಕೆ 9 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ  ಪಡೆಯೆಟ್ಟಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿತು.   ಮಂದತoಡ 2 ಓವರ್ ಗಳಲ್ಲಿ 1 ವಿಕೆಟ್…

Read More