ಮಡಿಕೇರಿ ಮೇ 8 : ಕೊಡಗು ಜಿಲ್ಲೆಯಲ್ಲಿ ಕಳೆದ 20-25 ವರ್ಷಗಳ ಕಾಲ ಸೋಲು ಅನುಭವಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ದಾಖಲೆ ನಿರ್ಮಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಅವರುಗಳು ವಿದ್ಯಾವಂತರು ಹಾಗೂ ಅಭಿವೃದ್ಧಿಪರ ಚಿಂತನೆ ಹೊಂದಿದವರಾಗಿದ್ದು, ಇವರ ಗೆಲುವು ನಿಶ್ಚತವೆಂದರು. ಚುನಾವಣಾ ಪ್ರಚಾರದ ಸಂದರ್ಭ ಜನಬೆಂಬಲ ಇವರಿಬ್ಬರ ಪರವಾಗಿದೆ. ಕಳೆದ 20-25 ವರ್ಷಗಳ ಕಾಲದ ಆಡಳಿತದಿಂದ ಜಿಲ್ಲೆಯ ಜನ ಬೇಸತ್ತು ಹೋಗಿದ್ದು, ಬದಲಾವಣೆಯನ್ನು ಬಯಸಿದ್ದಾರೆ. ಇಬ್ಬರೂ ಅಭ್ಯರ್ಥಿಗಳು ಅತ್ಯಧಿಕ ಮತಗಳ ಅಂತರದಿಂದ ಗೆಲುವು ದಾಖಲಿಸಲಿದ್ದಾರೆ ಎಂದು ತಿಳಿಸಿದರು. ಮಾಜಿ ಸಚಿವ ಬಿ.ಎ.ಜೀವಿಜಯ ಅವರು ಪಕ್ಷ ತೊರೆದಿರುವುದರಿಂದ ಯಾವುದೇ ತೊಂದರೆ ಆಗಿಲ್ಲ. ಉಪಾಧ್ಯಕ್ಷ ಸ್ಥಾನದಲ್ಲಿದ್ದ ಅನಂತಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷ ಎಲ್ಲಾ ಸ್ಥಾನಮಾನಗಳನ್ನು…
ಲೇಖಕ: admin
ವಿರಾಜಪೇಟೆ ಮೇ 8 : ದೇವಣಗೇರಿಯ ಬಿ.ಸಿ ಪ್ರೌಢಶಾಲೆಯು 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದು ಸತತವಾಗಿ 5 ವರ್ಷ ಶೇ.100 ರಷ್ಟು ಫಲಿತಾಂಶ ಪಡೆದು ಸಾಧನೆಗೈದು ಜಿಲ್ಲೆಯಲ್ಲಿ ಅನುದಾನಿತ ಪ್ರೌಢಶಾಲಾ ವಿಭಾಗದಲ್ಲಿ ಸಾಧನೆ ಮಾಡಿದೆ. ಇಲ್ಲಿಯವರೆಗೆ ಒಟ್ಟು 7 ಬಾರಿ ಶೇ.100 ಫಲಿತಾಂಶ ಪಡೆದು ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಪ್ರಗತಿಗೆ ಶಿಕ್ಷಕರ ನಿರಂತರ ಪರಿಶ್ರಮ ಸಹಕಾರಿಯಾಗಿದೆ.
ಮಡಿಕೇರಿ ಮೇ 8 : ಜಿಲ್ಲೆಯ ಎಎನ್‌ಎಫ್ ಶಿಬಿರಗಳಿಗೆ ಎಡಿಜಿಪಿ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ), ಐಜಿಪಿ ಐಎಸ್‌ಡಿ ಮತ್ತು ನಕ್ಸಲ್ ನಿಗ್ರಹ ದಳದ ಎಸ್‌ಪಿ ಭೇಟಿ ನೀಡಿ, ಚುನಾವಣೆಯನ್ನು ಸುಸೂತ್ರವಾಗಿ ನಡೆಸುವಂತೆ ತಿಳಿಸಿದರು.
ಮಡಿಕೇರಿ ಮೇ 8 : ಗಾಳಿಬೀಡು ಸರಕಾರಿ ಪ್ರೌಢಶಾಲೆ ಕಳೆದ 11 ವರ್ಷಗಳಿಂದ ಶೇ.100 ರಷ್ಟು ಫಲಿತಾಂಶ ಪಡೆದಿದ್ದು, ಈ ಬಾರಿಯೂ ಶೇ.100 ರಷ್ಟು ಫಲಿತಾಂಶ ಪಡೆಯುವ ಮೂಲಕ ಮಾದರಿ ಶಾಲೆ ಎನಿಸಿಕೊಂಡಿದೆ. ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಶಾಲೆಯ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ಕೋರಿ, ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದೆ.
ಕೊಡ್ಲಿಪೇಟೆ ಮೇ 8 : 2022- 23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕೊಡ್ಲಿಪೇಟೆ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯು ಶೇ 100 ರಷ್ಟು ಫಲಿತಾಂಶ ಪಡೆದಿದ್ದು, 26 ರಷ್ಟು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಮಡಿಕೇರಿ ಮೇ 8 : ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧರಿಸಿದ್ದು, ಮಡಿಕೇರಿ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರಿಗೆ ಮತ ನೀಡುವಂತೆ ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ದಿವಿನ್ ಹಾಗೂ ಮಹಿಳಾ ಒಕ್ಕೂಟದ ತಾಲ್ಲೂಕು ಸಂಚಾಲಕಿ ಶಶಿಕಲಾ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಟಕಣೆ ನೀಡಿರುವ ಅವರು, ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ತೀರ್ಮಾನದಂತೆ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಅವರ ಆದೇಶದ ಮೇರೆಗೆ ಹಾಗೂ ಜಿಲ್ಲಾ ಸಂಚಾಲಕರಾದ ಗಾಯತ್ರಿ ನರಸಿಂಹ ನಿರ್ದೇಶನದಂತೆ ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಂಘಟನೆ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರ ಮತ್ತು ರಾಜ್ಯದಲ್ಲಿ ದಲಿತರನ್ನು ಕಡೆಗಣಿಸಲಾಗುತ್ತಿದೆ. ದಲಿತರ ಕಲ್ಯಾಣಕ್ಕಾಗಿ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತಾರದೆ ದಲಿತರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಕಳೆದ…
ಮಡಿಕೇರಿ ಮೇ 8 : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದು, ಅದರಂತೆ ವಿರಾಜಪೇಟೆ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರಿಗೆ ಮತ ನೀಡುವಂತೆ ಸಮಿತಿಯ ವಿರಾಜಪೇಟೆ ತಾಲ್ಲೂಕು ಸಂಚಾಲಕ ಮನು ಚೆನ್ನಯ್ಯನಕೋಟೆ ಹಾಗೂ ಮಹಿಳಾ ಒಕ್ಕೂಟದ ತಾಲ್ಲೂಕು ಸಂಚಾಲಕಿ ರೇಖಾ ಮಹೇಶ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಟಕಣೆ ನೀಡಿರುವ ಅವರು, ಸಂವಿಧಾನ ವಿರೋಧಿ ನೀತಿಯ ಬಿಜೆಪಿ ಪಕ್ಷವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಅಸ್ತಿತ್ವಕ್ಕೆ ತರಲು ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ತೀರ್ಮಾನದಂತೆ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಅವರ ಆದೇಶದ ಮೇರೆಗೆ ಹಾಗೂ ಜಿಲ್ಲಾ ಸಂಚಾಲಕರಾದ ಗಾಯತ್ರಿ ನರಸಿಂಹ ನಿರ್ದೇಶನದಂತೆ ಜಿಲ್ಲೆಯಲ್ಲಿ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಂಘಟನೆ ಶ್ರಮಿಸುತ್ತಿದೆ ಎಂದರು. ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಕಲ್ಯಾಣಕ್ಕೆ ಪೂರಕವಾದ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ…
ಮಲಪ್ಪುರಂ: 23 ಜನರ ಸಾವಿಗೆ ಕಾರಣವಾದ ಕೇರಳ ದೋಣಿ ದುರಂತ ಪ್ರಕರಣದ ಸಂತ್ರಸ್ಥರಿಗೆ ಕೇರಳ ಸರ್ಕಾರ 10 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸ್ವತಃ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದು, ಸಂತ್ರಸ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ವಿಜಯನ್, ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದರು. ಸೋಮವಾರ ಮಲಪ್ಪುರಂ ಜಿಲ್ಲೆಯ ತಿರುರಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ವಿಜಯನ್, ಘಟನೆಯಿಂದ ತಮಗೆ ಆಘಾತವಾಗಿದ್ದು, ಪ್ರಕರಣದ ಕುರಿತು ಕೇರಳ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ ಎಂದು ಹೇಳಿದರು.
ಮಡಿಕೇರಿ ಮೇ 8 : ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನ್ಯೂ ಮೆಕಾಲೆ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ಪೈ, ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಿಜಿಎಸ್ ಶಾಲೆಯ ಯಶಸ್ ಗೌಡ, ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ವಿಜಯಪುರದ ಭೀಮನಗೌಡ ಪಾಟೀಲ್ ಈ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾದ ಬಾಲಕರ ಸಂಖ್ಯೆ 3,41,108 ಆಗಿದ್ದು, ಬಾಲಕಿಯರ ಸಂಖ್ಯೆ 3,59,511, SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12 ಆಗಿದೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು.
ಮಡಿಕೇರಿ ಮೇ 8 : ಮಡಿಕೇರಿ ತಾಲ್ಲೂಕಿನ ಪೆರಾಜೆ ಗ್ರಾಮದ ಜ್ಯೋತಿ ಪ್ರೌಢ ಶಾಲೆ 10 ನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು ಸಾಧನೆ ಮಾಡಿದೆ. ಕನ್ನಡದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ 125 ಕ್ಕೆ 125 ಅಂಕ ದೊರೆತ್ತಿದೆ. 8ನೇ ತರಗತಿಗೆ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದೆ. ಹಾಸ್ಟೆಲ್ ವ್ಯವಸ್ಥೆ ಇದೆ ಎಂದು ಶಾಲಾ ಆಡಳಿತ ಮಂಡಳಿಯ ಸಹ ಕಾರ್ಯದರ್ಶಿ ಲೋಕನಾಥ್ ಅಮಚೂರು ತಿಳಿಸಿದ್ದಾರೆ.






