ಮಡಿಕೇರಿ ಜೂ.14 : ಓದುವ ಹವ್ಯಾಸ ಬದುಕಿಗೊಂದು ಅರ್ಥ ಕಲ್ಪಿಸುತ್ತದೆ, ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬಾಲ್ಯದಿಂದಲೇ ಬೆಳೆಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ರಚಿತ ಕೊಡವ ಕಾದಂಬರಿ, ಕೊಡವ ಮಕ್ಕಡ ಕೂಟದ 66ನೇ ಕೃತಿ “ಬೇರ್” ನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಮನುಷ್ಯನ ಬದುಕು ಏನು ಎಂಬುವುದನ್ನು ಅರಿತುಕೊಳ್ಳಲು ಪುಸ್ತಕಗಳು ಸಹಕಾರಿಯಾಗಿವೆ. ಆದ್ದರಿಂದ ವಿದ್ಯಾರ್ಥಿ ಜೀವನದಿಂದಲೇ ಹೆಚ್ಚು ಪುಸ್ತಕಗಳನ್ನು ಓದುವಂತಾಗಬೇಕು, ಯುವಕ, ಯುವತಿಯರಿಗೆ ಮಾರ್ಗದರ್ಶನ ನೀಡುವಂತಹ ಪುಸ್ತಕಗಳು ಪ್ರಕಟಗೊಳ್ಳಬೇಕು ಎಂದರು. ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರು ಅನೇಕ ಉತ್ಸಾಹಿ ಸಾಹಿತಿಗಳಿಗೆ ಪ್ರೋತ್ಸಾಹವನ್ನು ನೀಡಿದ್ದಾರೆ. ಇಲ್ಲಿಯವರೆಗೆ 66 ಪುಸ್ತಕಗಳನ್ನು ಹೊರ ತಂದಿರುವುದೇ ಇದಕ್ಕೆ ಸಾಕ್ಷಿಯಾಗಿದ್ದು, ಕೊಡಗಿನ ಸಾಹಿತ್ಯ ಕ್ಷೇತದ ಬೆಳವಣಿಗೆಯಲ್ಲಿ ಇವರ ಪಾತ್ರವೂ ಪ್ರಮುಖವಾಗಿದೆ ಎಂದು ವೀಣಾ ಅಚ್ಚಯ್ಯ ಶ್ಲಾಘಿಸಿದರು.…
ಲೇಖಕ: admin
ಮಡಿಕೇರಿ ಜೂ.14 : ವಿದ್ಯುತ್ ದರವನ್ನು ನೂತನ ಕಾಂಗ್ರೆಸ್ ಸರ್ಕಾರವೇ ಏರಿಕೆ ಮಾಡಿದ್ದು, ವಿನಾಕಾರಣ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ವಿದ್ಯುತ್ ದರ ಇಳಿಕೆಗೆ ಒತ್ತಾಯಿಸಿ ಪಕ್ಷದ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಮೂಲಕ ಕಾಂಗ್ರೆಸ್ ಜನರ ಹಾದಿ ತಪ್ಪಿಸುತ್ತಿದೆ ಎಂದು ಟೀಕಿಸಿದರು. ವಿದ್ಯುತ್ ದರವನ್ನು ಇಳಿಕೆ ಮಾಡುವ ಸಂಪೂರ್ಣ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ದುಬಾರಿ ವಿದ್ಯುತ್ ದರದಿಂದ ಬೇಸತ್ತಿರುವ ಜನರ ಹಿತ ದೃಷ್ಟಿಯಿಂದ ದರವನ್ನು ತಕ್ಷಣ ಇಳಿಕೆ ಮಾಡಬೇಕು. ತಪ್ಪಿದಲ್ಲಿ ದರ ಇಳಿಕೆಯಾಗುವಲ್ಲಿಯವರೆಗೆ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದರು. ಕುಡಿಯುವ ನೀರಿನ ಸಮಸ್ಯೆಯನ್ನು ಆಲಿಸಲು ಮಡಿಕೇರಿಯ ನೂತನ ಶಾಸಕರು ಕೂಟುಹೊಳೆಗೆ ಭೇಟಿ ನೀಡಿದ್ದ ಸಂದರ್ಭ ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಬಗ್ಗೆ ಅಸಂಬದ್ಧ ಹೇಳಿಕೆ ನೀಡಿದ್ದಾರೆ. ತಮ್ಮ…
ಮಡಿಕೇರಿ ಜೂ.14 : ಮಡಿಕೇರಿ ನಗರದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸಲು ಹಳೆಯ ಪೈಪ್ ಲೈನ್ ಗಳನ್ನು ಬದಲಾಯಿಸಿ ನೂತನ ಪೈಪ್ ಲೈನ್ ಗಳ ಅಳವಡಿಕೆಗೆ 60 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೇ 20 ಕೋಟಿ ರೂ. ಬಿಡುಗಡೆಯಾಗಿದ್ದು, ಉಳಿದ ಹಣವನ್ನು ಬಿಡುಗಡೆ ಮಾಡುವಂತೆ ನೂತನ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 120 ಕಿ.ಮೀ ನಷ್ಟು ನೂತನ ಪೈಪ್ ಗಳನ್ನು ಅಳವಡಿಸಲು ಯೋಜನೆ ರೂಪಿಸಲಾಗಿದ್ದು, ಸರ್ಕಾರದ ಅನುಮೋದನೆ ದೊರೆತ ತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದರು. ನಗರದ ಜನರಿಗೆ ಯಾವುದೇ ಅಡಚಣೆ ಇಲ್ಲದೆ ಕುಡಿಯುವ ನೀರು ಒದಗಿಸಲು ನಗರಸಭೆ ಬದ್ಧವಾಗಿದೆ. ಕಳೆದ ಕೆಲವು ದಿನಗಳ ಕಾಲ ತಾಂತ್ರಿಕ ಕಾರಣಗಳಿಂದ ನೀರಿನ ಸಮಸ್ಯೆ ಎದುರಾಗಿತ್ತು. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುತ್ತೇವೆ, ಮೋಟಾರ್ ಗಳನ್ನು ಸುಸ್ಥಿತಿಯಲ್ಲಿಡಲು ಕ್ರಮ ಕೈಗೊಳ್ಳಲಾಗಿದೆ. ನೀರು ಸರಬರಾಜಿನಲ್ಲಿ ವ್ಯತ್ಯಯ…
ಮಡಿಕೇರಿ ಜು.14 : ಲೇಖಕಿ ಕೆ.ಜಯಲಕ್ಷ್ಮಿ ಬರೆದಿರುವ “ಚಪ್ಪಾಳೆಗೂ ಬೆಲೆ ಇದೆ” ಎಂಬ ನೂತನ ಪುಸ್ತಕದ ಲೋಕಾಪ೯ಣೆಯು ಜೂ.18 ರಂದು ನಡೆಯಲಿದೆ. ಮಡಿಕೇರಿಯ ಲಯನ್ಸ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ “ಚಪ್ಪಾಳೆಗೂ ಬೆಲೆ ಇದೆ” ಕೃತಿಯನ್ನು ಶಕ್ತಿಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್ ಲೋಕಾಪ೯ಣೆಗೊಳಿಸಲಿದ್ದಾರೆ. ಕೊಡಗು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವಕಾಮತ್, ಚಿತ್ರದುಗ೯ದ ಸಿರಿಗನ್ನಡ ಬಳಗದ ಸಂಚಾಲಕ ಚಳ್ಳಕೆರೆ ಯರ್ರಿ ಸ್ವಾಮಿ, ಹಿರಿಯ ಸಾಹಿತಿ ಮೊಣ್ಣಂಡ ಶೋಭಾಸುಬ್ಬಯ್ಯ, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ., ಲಯನ್ಸ್ ಟ್ರಸ್ಟ್ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಕಾಯ೯ಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಯಲಕ್ಷ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿರಾಜಪೇಟೆ ಜೂ.14 : ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಸಾಂಸ್ಕೃತಿಕ ಸಮಾರಂಭ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕರುನಾಡ ನಿಧಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜೂ.17 ರಂದು ನಡೆಯಲಿದೆ ಎಂದು ನಾಟ್ಯ ಮಯೂರಿ ನೃತ್ಯ ಶಾಲೆಯ ಸಂಸ್ಥಾಪಕಿ ಪ್ರೇಮಾಂಜಲಿ ಆಚಾರ್ಯ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಮದ್ಯಾಹ್ನ 2.30 ಗಂಟೆಗೆ ನಗರದ ಕಾವೇರಿ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮವನ್ನು ಖ್ಯಾತ ಗಾಯಕ, ಚಲನಚಿತ್ರ ನಟ ಶಶಿಧರ್ ಕೋಟೆ ಉದ್ಘಾಟಿಸಲಿದ್ದಾರೆ. ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ರಂಗಭೂಮಿ ಕಲಾವಿದರು, ಕಾಂತಾರ ಚಲನಚಿತ್ರ ನಟರಾದ ಬಾಸುಮ ಕೊಡಗು ಹಾಗೂ ಸತೀಶ್ ಆಚಾರಿ ಭಾಗವಹಿಸಲಿದ್ದಾರೆ. ರಂಗಭೂಮಿ ಕಲಾವಿದ, ಪತ್ರಕರ್ತ, ನಟ ಕೆಂಚನೂರು ಶಂಕರ್ ಸಭೆಯ ಅಧ್ಯಕ್ಷತೆ, ಧರ್ಮದರ್ಶಿಗಳಾದ ಡಾ. ಅಶೋಕ್ ಶೆಟ್ಟಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಇದೇ ಸಂದರ್ಭ ಗಾಯಕ ಶಶಿಧರ್ ಕೋಟೆ ಸೇರಿದಂತೆ ಬಾಸುಮ ಕೊಡಗು, ಸತೀಶ್ ಆಚಾರಿ, ಡಾ. ಅಶೋಕ್ ಶೆಟ್ಟಿ, ಮಹೋನಿ ಶೋಭಾ, ಡಾ. ಜ್ಯೋತಿ…
ನಾಪೋಕ್ಲು ಜೂ.14 : ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಪೊನ್ನಂಪೇಟೆಯಲ್ಲಿ ನಡೆದ ಅಂತರ ಕಾಲೇಜು ಪುರುಷರ ಹಾಕಿ ಪಂದ್ಯಾವಳಿಯಲ್ಲಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಕ ಕಂಬೀರಂಡ ಬೋಪಣ್ಣ ತರಬೇತಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದರು. ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ವಿ.ಟಿ.ಸೋಮಣ್ಣ ಪಂದ್ಯಾವಳಿಯ ಅತ್ಯುನ್ನತ ಗೋಲ್ ಕೀಪರ್ ಪ್ರಶಸ್ತಿಯನ್ನು ಪಡೆದುಕೊಂಡರು. ವರದಿ : ದುಗ್ಗಳ ಸದಾನಂದ
ಸೋಮವಾರಪೇಟೆ ಜೂ.14 : ತುಮಕೂರು ಟಿಆರ್‍ಎಸ್ ಅಬಾಕಸ್ ಅಕಾಡೆಮಿ ವತಿಯಿಂದ ಅಂತರಾಷ್ಟ್ರೀಯ ಮಟ್ಟದ ಆನ್ ಲೈನ್ ಅಬಾಕಸ್ ಸ್ಪರ್ಧೆಯಲ್ಲಿ ಸಾಂದೀಪನಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ 35 ವಿದ್ಯಾರ್ಥಿಗಳು ಭಾಗವಹಿಸಿದ್ದು, ಪ್ರಣಮ್ಯಾ, ಅದ್ವಿತ್ ಪೂಜಾರಿ, ಪ್ರಧಾನ್ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಿತೈಷಿ ಟೋಪರ್ ಹಾಗೂ ಎನ್. ಖುಷಿ, ಬಿ.ಎಸ್. ಹಿತೇಶ್ ವಿನ್ನರ್ ಹಾಗೂ ರಚನಾ, ವೇದಾಂತ್, ಡಿಂಪಲ್ ರನ್ನರ್ ಸ್ಥಾನ ಪಡೆದುಕೊಂಡಿದ್ದು, ಉಳಿದವರು ಸಮಾಧಾನಕರ ಬಹುಮಾನ ಪಡೆಯಲು ಯಶಸ್ವಿಯಾದರು. ಸಾಂದೀಪನಿ ಶಾಲೆಯ ಮುಖ್ಯೋಪಾಧ್ಯಾಯ ರಜಿತ್ ಹಾಗೂ ಅಬಾಕಸ್ ಶಿಕ್ಷಕಿ ಸುಕನ್ಯಾ ಹಾಜರಿದ್ದರು.
ಸೋಮವಾರಪೇಟೆ ಜೂ.14 : ಸೋಮವಾರಪೇಟೆ ವಕೀಲರ ಸಂಘಕ್ಕೆ ಜಿಲ್ಲಾ ನ್ಯಾಯಾಧೀಶ ಡಿ.ಟಿ.ಪುಟ್ಟರಂಗ ಸ್ವಾಮಿ ಭೇಟಿ ನೀಡಿದರು. ಈ ಸಂದರ್ಭ ಸೋಮವಾರಪೇಟೆ ನ್ಯಾಯಾಲಯ ಹಾಗೂ ಸಂಘದ ಕಚೇರಿಗೆ ಬೇಕಾದ ಮೂಲಭೂತ ಅವಶ್ಯಕತೆಗಳ ಕುರಿತು ಸಂಘದ ಪದಾಧಿಕಾರಿಗಳು ಗಮನ ಸೆಳೆಸದರು. ಈ ಸಂದರ್ಭ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ ಮತ್ತಿತರರು ಇದ್ದರು.
ಸೋಮವಾರಪೇಟೆ ಜೂ.14 : ಕಳೆದ 9 ವರ್ಷಗಳ ಹಿಂದೆ ಭೂಮಿಪೂಜೆ ನೆರವೇರಿ ಇಂದಿಗೂ ಮುಕ್ತಾಯಗೊಳ್ಳದ ಸೋಮವಾರಪೇಟೆ ಟರ್ಫ್ ಹಾಕಿ ಮೈದಾನವನ್ನು ಶಾಸಕ ಮಂತರ್ ಗೌಡ ಅವರು ಪರಿಶೀಲಿಸಿ, ತಕ್ಷಣ ಬಾಕಿ ಇರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಕ್ರೀಡಾಪಟುಗಳ ಉಪಯೋಗಕ್ಕೆ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗೆ ನಿರ್ದೇಶನ ನೀಡಿದರು. ಟರ್ಫ್ ಕಾಮಗಾರಿಯನ್ನು ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಕೇಂದ್ರ ಕಚೇರಿಯೇ ನಿರ್ವಹಿಸುತ್ತಿದ್ದು, ಗುತ್ತಿಗೆ ಪಡೆದ ಕಂಪೆನಿಯವರು ಈವರೆಗೆ ಮೈದಾನವನ್ನು ಇಲಾಖೆಗೆ ಹಸ್ತಾಂತರಿಸಿಲ್ಲ. ಇದರೊಂದಿಗೆ ಕಾಮಗಾರಿಯನ್ನೂ ಪೂರ್ಣಗೊಳಿಸಿಲ್ಲ ಎಂದು ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕಿ ವಿಸ್ಮಯ ಅವರು ಶಾಸಕರ ಗಮನಕ್ಕೆ ತಂದರು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೈದಾನದ ಪ್ರಗತಿ ಕುಂಠಿತವಾಗಿದೆ. ಟೆಂಡರ್ ಪಡೆದ ಗುತ್ತಿಗೆದಾರ ಕಂಪೆನಿಯವರು ಬಿಲ್ ಮಾಡಿಕೊಂಡಿದ್ದು, ಕಾಮಗಾರಿಯನ್ನು ಮುಕ್ತಾಯಗೊಳಿಸಿಲ್ಲ. ಈ ಬಗ್ಗೆ ಲೋಕಾಯುಕ್ತಕ್ಕೂ ದೂರು ನೀಡಲಾಗಿದೆ ಎಂದು ಮೈದಾನ ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದರು. ಈ ಸಂದರ್ಭ ಮಾತನಾಡಿದ ಡಾ. ಮಂತರ್ ಗೌಡ, ಕೂಡಲೇ ಮೈದಾನಕ್ಕೆ ಅಗತ್ಯವಿರುವ ವಿದ್ಯುತ್ ಹಾಗೂ…
ಸುಂಟಿಕೊಪ್ಪ,ಜೂ.14 : ಮಾದಾಪುರ ರಾಜ್ಯ ಹೆದ್ದಾರಿಯ ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್ಸು ಹಾಗೂ ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿದ್ದು, ಟ್ರ್ಯಾಕ್ಟರ್ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ಮಾದಾಪುರದಿಂದ ಶನಿವಾರಸಂತೆಗೆ ತೆರಳುತ್ತಿದ್ದ ವೆಂಕಟೇಶ್ವರ ಬಸ್ಸಿಗೆ ಸುಂಟಿಕೊಪ್ಪದಿಂದ ಮಾದಾಪುರ ಕಡೆ ತೆರಳುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅರ್ಧ ಗಂಟೆಗಳ ಕಾಲ ಮಡಿಕೇರಿ ಸೋಮವಾರಪೇಟೆ ಭಾಗದಲ್ಲಿ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.






