ಲೇಖಕ: admin

ಮಡಿಕೇರಿ ಜೂ.11 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡಿ, ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೇಟ್ ವಿತರಿಸುವ ಮೂಲಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಾಂಕೇತಿಕವಾಗಿ ಚಾಲನೆ ನೀಡಿದರು.

Read More

ಮಡಿಕೇರಿ ಜೂ.11 : ಕೊಡಗು ಜಿಲ್ಲಾ ಮೊಗೇರ ಸಮಾಜದ ವತಿಯಿಂದ ಮೊಗೇರ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ನಗರದ ಬಾಲಭವನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೊಗೇರ ಸಮಾಜದ ಗೌರವಾಧ್ಯಕ್ಷ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಪಿ.ಎಂ.ರವಿ, ಮೊಗೇರ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಮೊಗೇರ ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾಗಬೇಕು ಎಂದು ಕರೆ ನೀಡಿದರು. ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ, ಇತ್ತೀಚಿನ ದಿನಗಳಲ್ಲಿ ಮೊಗೇರ ಸಮಾಜ ಎಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುತ್ತಿರುವುದು ಶ್ಲಾಘನೀಯವೆಂದು ಹೇಳಿದರು. ಮುಂದಿನ ದಿನಗಳಲ್ಲಿ ಮೊಗೇರ ಜನಾಂಗದ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು, ಶಿಕ್ಷಣ ಕ್ಷೇತ್ರದಲ್ಲಿ ಸಮಾಜದ ಸಾಧನೆಗೆ ಕಾಳಜಿ ವಹಿಸಲಾಗುವುದು. ಮೊಗೇರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮಾಡುವುದು ಮತ್ತು ಸರ್ಕಾರದಿಂದ ಶಿಕ್ಷಣಕ್ಕೆ ದೊರೆಯುವ ಸೌಲಭ್ಯವನ್ನು ಒದಗಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ರವಿ ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ…

Read More

ಮಡಿಕೇರಿ ಜೂ.11 : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮುಂಗಾರು ಎದುರಿಸಲು ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಡಾನೆ ಹಾವಳಿ ನಿಯಂತ್ರಣ ಸೇರಿದಂತೆ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು. ಬಜೆಟ್ ಆರಂಭಕ್ಕೂ ಮೊದಲು ಜಿಲ್ಲೆಗೆ ಆಗಮಿಸಿ ಕೆಡಿಪಿ ಸಭೆ ನಡೆಸಲಾಗುವುದು ಎಂದು ಭರವಸೆ ನೀಡಿದರು. ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ, ನಡೆಯಲಿದೆ ಎಂದು ತಿಳಿಸಿದರು. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಾತನಾಡಿ ಮಡಿಕೇರಿ ನಗರಕ್ಕೆ ಕುಡಿಯುವ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಲಾಗಿದೆ ಎಂದರು.

Read More

ಮಡಿಕೇರಿ ಜೂ.11 : ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ಭಾನುವಾರ ಚಾಲನೆ ನೀಡಿದರು. ನಗರದ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ‘ಶಕ್ತಿ’ ಉಚಿತ ಪ್ರಯಾಣ ನಮ್ಮ ಪ್ರಮಾಣ’ ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ ‘ಶಕ್ತಿ’ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದ ನಿವಾಸಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ ಎಂದು ಸಚಿವರು ತಿಳಿಸಿದರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಮಾಡಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸರಾಜು ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದು 21 ದಿನದಲ್ಲಿಯೇ 5 ಗ್ಯಾರಂಟಿಗಳಲ್ಲಿ ‘ಶಕ್ತಿ’ ಯೋಜನೆಯಡಿ ಮೊದಲ…

Read More

ಮಡಿಕೇರಿ ಜೂ.11 : ವಿದ್ಯಾರ್ಥಿಗಳು ಪರಿಸರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಪರಿಸರ ರಾಯಭಾರಿಗಳಾಗಿ ರೂಪುಗೊಳ್ಳಬೇಕು ಎಂದು ಸೋಮವಾರಪೇಟೆ ಕ್ಷೇತ್ರದ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಕರೆ ನೀಡಿದರು. ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ಜೆ.ಸಿ.ಬೋಸ್ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಘಟಕದ ವತಿಯಿಂದ ‘ಪ್ಲಾಸ್ಟಿಕ್ ತ್ಯಾಜ್ಯದ ಸಮರ್ಪಕವಾದ ನಿರ್ವಹಣೆ ಪರಿಸರ ಮತ್ತು ಜೀವ- ಸಂಕುಲದ ಸಂರಕ್ಷಣೆ’ ಎಂಬ ಕೇಂದ್ರ ವಿಷಯದಡಿ ‘ವಿಶ್ವ ಪರಿಸರ ದಿನ’ದ ಅಂಗವಾಗಿ ಪ್ರೌಢಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ “ನಮ್ಮನಡೆ ಪರಿಸರದೆಡೆಗೆ” “ಗೋ ಗ್ರೀನ್ ಅಭಿಯಾನ”ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಪರಿಸರದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಭವಿಷ್ಯದ…

Read More

ಮಡಿಕೇರಿ ಜೂ.10 : ಕಾಫಿ ತೋಟದಲ್ಲಿದ್ದ ಬೀಟೆ ಮರವನ್ನು ಅಕ್ರಮವಾಗಿ ಕಡಿದು ಅದರ ನಾಟಾಗಳನ್ನು ಕದ್ದೊಯ್ಯುತ್ತಿದ್ದ ಸಂದರ್ಭ ವಾಹನ ಪಲ್ಟಿಯಾದ ಹಿನ್ನೆಲೆ ಮರಗಳ್ಳರು ಸ್ಥಳದಿಂದ ಪರಾರಿಯಾಗಿರುವ ಪ್ರಕರಣ ಪೊನ್ನಂಪೇಟೆ ತಾಲ್ಲೂಕಿನಲ್ಲಿ ನಡೆದಿದೆ. ಈ ಕುರಿತು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೀಟೆ ಮರದ 7 ನಾಟಾಗಳ ಸಹಿತ ಸಾಗಾಟಕ್ಕೆ ಬಳಸಿದ್ದ ಪಿಕ್ ಅಪ್ ವಾಹನವನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಪೊನ್ನಂಪೇಟೆ ತಾಲ್ಲೂಕಿನ ನಲ್ಲೂರು ಗ್ರಾಮದ ತೀತರಮಾಡ ಸುನೀಲ್ ಎಂಬುವವರ ಕಾಫಿ ತೋಟದಲ್ಲಿ ಬೀಟೆ ಮರಗಳಿದ್ದು, ಒಂದು ವಾರದ ಹಿಂದೆ ಮರಗಳ್ಳರು 1 ಮರವನ್ನು ಕಡಿದು ಹಾಕಿದ್ದರು. ಮಾತ್ರವಲ್ಲದೇ ಮರದ ಬುಡವನ್ನು 3 ನಾಟಾಗಳನ್ನಾಗಿ ಪರಿವರ್ತಿಸಿದ್ದರು. ಈ ಕುರಿತು ತೋಟದ ಮಾಲೀಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮಹಜರು ನಡೆಸಿ ಸ್ಥಳದಿಂದ ತೆರಳಿದ್ದರು. ಬೀಟೆ ಮರದ ನಾಟಾಗಳನ್ನು ತೋಟದಲ್ಲೇ ಬಿಡಲಾಗಿತ್ತು.…

Read More

ಮಡಿಕೇರಿ ಜೂ.10 :   ಕೊಡಗಿನಲ್ಲಿ ಕಳೆದ 20 ವರ್ಷಗಳ ನಂತರ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಅಚ್ಚರಿಯ ಗೆಲುವು ಸಾಧಿಸಿದ್ದು, ಈ ಬಾರಿ ಕೊಡಗಿನ ಅಲ್ಪಸಂಖ್ಯಾತರ ನಾಯಕರಿಗೆ ಎಂಎಲ್ ಸಿ ಅಥವಾ ನಿಗಮ ಮಂಡಳಿ ಸ್ಥಾನ ನೀಡಬೇಕೆಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಎಂ.ಅಬ್ದುಲ್ ಲತೀಫ್  ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,  ಕೊಡಗಿನಲ್ಲಿ ಅಲ್ಪಸಂಖ್ಯಾತರ ಮತದಾರರು ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಮಂಥರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರನ್ನು ಗೆಲ್ಲಿಸುವ ಮೂಲಕ ಬಿಜೆಪಿಯ ಭದ್ರಕೋಟೆ ಕೊಡಗಿನ ಎರಡೂ ಕ್ಷೇತ್ರಗಳು ಕೂಡ ಕಾಂಗ್ರೆಸ್ ಪಾಲಾಗಿದೆ . ಕೊಡಗಿನಲ್ಲಿ ಕಾಂಗ್ರೆಸ್ ಗೆಲುವಿಗೆ ಅಲ್ಪಸಂಖ್ಯಾತರ ಮತದಾರರು ಮುಖ್ಯ ಪಾತ್ರ ವಹಿಸಿದ್ದಾರೆ. ಆದರೆ ಈ ವರೆಗೆ ಕೊಡಗಿನ ಅಲ್ಪಸಂಖ್ಯಾತರ ನಾಯಕರುಗಳಿಗೆ ಸರ್ಕಾರದಲ್ಲಿ ಯಾವುದೇ ಸೂಕ್ತ ಸ್ಥಾನ ಮಾನಗಳು ಲಭಿಸಿಲ್ಲ ಹಾಗಾಗಿ ಆದ್ದರಿಂದ  ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಎರಡು ಶಾಸಕರುಗಳು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಕೊಡಗಿನ ಅಲ್ಪಸಂಖ್ಯಾತರ ನಾಯಕರಿಗೆ ಎಂ…

Read More

ಮಡಿಕೇರಿ ಜೂ.10 : ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ಜೂ.12 ರಂದು ಕಾರುಗುಂದ ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ ಎಂದು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನೂತನ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ. ಸೋಮವಾರ ಬೆಳಗ್ಗೆ 10:30 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಪಕ್ಷದ ಎಲ್ಲಾ ಮುಖಂಡರುಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಡಿಸಿಸಿ ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರುಗಳು, ಬೂತ್ ಕಾಂಗ್ರೆಸ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ಸದಸ್ಯರುಗಳು, ಸಹಕಾರಿ ಸಂಘದ ಅಧ್ಯಕ್ಷರುಗಳು, ಸದಸ್ಯರುಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಇಸ್ಮಾಯಿಲ್ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಜೂ.10 :  ಅಖಿಲ ಕೊಡವ ಸಮಾಜದಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ   ಪೊನ್ನಣ್ಣ ಸೇರಿದಂತೆ ಸಾಧಕರನ್ನು ಸನ್ಮಾನಿಸಲಾಯಿತು. ಅಖಿಲ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ನಂತರ ಕಾವೇರಿ ಆಶ್ರಮಕ್ಕೆ ಭೇಟಿ ನೀಡಿದ ಶಾಸಕ ಪೊನ್ನಣ್ಣ ಹಾಗೂ ಅಖಿಲ ಕೊಡವ ಸಮಾಜ ಪದಾಧಿಕಾರಿಗಳು  ಶತಾಯುಷಿಯನ್ನು ಸನ್ಮಾನಿಸಿದರು.  

Read More

ಮಡಿಕೇರಿ ಜೂ.10 :  ಕೊಡಗು ಜಿಲ್ಲೆಯ ನೂತನ ಉಸ್ತುವಾರಿ ಸಚಿವ  ಎನ್.ಎಸ್ ಬೋಸರಾಜ್  ಅವರು ಜೂ.11 ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.  ಬೆಳಿಗ್ಗೆ 11 ಗಂಟೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ  ಕಾಂಗ್ರೆಸ್ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ. ಅಪರಾಹ್ನ 12:30ಕ್ಕೆ, ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಾರ್ಯಕ್ರಮಕ್ಕೆ ಕೊಡಗಿನ ಶಾಸಕದ್ವಯರೊಂದಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ  ಎಂದು ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.

Read More