ಮಡಿಕೇರಿ ಜೂ.10 : ಆಧುನೀಕರಣದಿಂದ ಹಿಂದಿನ ಅರ್ಥಪೂರ್ಣ ಆಚರಣೆಯನ್ನು ಕೈ ಬಿಟ್ಟು ಇಂದು ಹೊಸ ಹೊಸ ಆಚರಣೆಗೆ ಮಾರುಹೋಗುತ್ತಿದ್ದಾರೆ. ಇದು ಸಂಸ್ಕೃತಿಯ ಬೆಳವಣಿಗೆಯ ದೃಷ್ಟಿಯಿಂದ ಸೂಕ್ತವಲ್ಲ ಎಂದು ಹಿರಿಯ ಸಾಹಿತಿ ಬಾಚರಣಿಯಂಡ ರಾಣು ಅಪ್ಪಣ್ಣ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಹಬ್ಬದ ಪ್ರಯುಕ್ತ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಕೊಡವಾಮೆ ಸಂಘಟನೆ ಬುಡಕಟ್ಟು ಸಂಸ್ಕೃತಿ ಅಧ್ಯಯನ ಕೇಂದ್ರದ ಆಶ್ರಯದಲ್ಲಿ “ಕೊಡವ ಸಂಸ್ಕೃತಿ -ವಿಚಾರ ಗೋಷ್ಠಿ” ಹಾಗೂ ಲೇಖಕಿ ಮಾಳೇಟಿರ ಸೀತಮ್ಮ ವಿವೇಕ್ ಅವರ “ಭಾವ ಕುಸುಮ” ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. “ಮರ್‍ಂದ್ ಮರೆಯಾನ ಕೊಡವ ನಡ್‍ಪ್ ಕೊಡ್‍ಪ್” ವಿಷಯವಾಗಿ ಮಾತನಾಡಿದ ರಾಣು ಅಪ್ಪಣ್ಣ, ಕೊಡವ ಸಂಸ್ಕೃತಿಯ ಆಚರಣೆ ಇಂದು ಕಡಿಮೆಯಾಗುತ್ತಿರುದರ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಕೊಡವ ಸಂಸ್ಕೃತಿಯಲ್ಲಿ ಹಿಂದೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದ ಪ್ರಕೃತಿ ಪೂಜೆ, ಭೂಮಿ ಪೂಜೆ, ವಿವಾಹ ಪದ್ಧತಿ ಸೇರಿದಂತೆ ವಿವಿಧ ಆಚರಣೆಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಮತ್ತೋರ್ವ ಹಿರಿಯ ಸಾಹಿತಿ ಬಾಚರಣಿಯಂಡ…
ಲೇಖಕ: admin
ಸೋಮವಾರಪೇಟೆ ಜೂ.10 : ಚನ್ನಾಪುರದಲ್ಲಿ ಗ್ರಾಮದೇವತೆಯ ವಿಶೇಷ ಪೂಜೆ ಶ್ರದ್ಧಾಭಕ್ತಿ ನಡೆಯಿತು. ಸಕಾಲದಲ್ಲಿ ಉತ್ತಮ ಮಳೆಗೆ ಹಾಗೂ ಗ್ರಾಮದ ಸಮೃದ್ಧಿಗಾಗಿ ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮಧ್ಯಾಹ್ನ ಅನ್ನದಾನ ನೆರವೇರಿತು. ಈ ಸಂದರ್ಭ ಮಾತನಾಡಿದ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿ.ಎನ್.ಅಶ್ವಥ್ ಚನ್ನಾಪುರ, ಪ್ರಕೃತಿಯನ್ನು ಗ್ರಾಮದೇವತೆಯ ಹೆಸರಿನಲ್ಲಿ ಪೂಜೆ ಮಾಡುವುದು ತಲೆತಲಾಂತರದಿಂದ ನಡೆದು ಬಂದಿರುವ ಧಾರ್ಮಿಕ ಆಚರಣೆಯಾಗಿದೆ ಎಂದು ಹೇಳಿದರು. ಪ್ರಕೃತಿಯೇ ರೈತರನ್ನು ಕಾಪಾಡುತ್ತಿದೆ. ಎಷ್ಟೇ ಮಳೆ ಸುರಿದು ಫಸಲು ಹಾನಿಯಾದರೂ, ಕುಟುಂಬ ನಿರ್ವಹಣೆಗಾಗುವಷ್ಟು ಫಸಲು ರೈತರಿಗೆ ಸಿಗುತ್ತದೆ. ಅದು ಗ್ರಾಮದೇವತೆಯ ಆಶೀರ್ವಾದ ಎಂದೇ ನಂಬಲಾಗಿದೆ ಎಂದು ಹೇಳಿದರು. ಗ್ರಾಮದಲ್ಲಿ ಯಾವುದೇ ತೊಂದರೆಗಳ ಸಂಭವಿಸಿದರೂ ಗ್ರಾಮ ದೇವತೆಯನ್ನೇ ನೆನೆಯುತ್ತೇವೆ. ಶುಭ ಕಾರ್ಯಗಳು ನಡೆದಾಗಲೂ ಪ್ರಕೃತಿ ಮಾತೆಯನ್ನು ನಮಿಸುವುದು ವಾಡಿಕೆಯಾಗಿದೆ ಎಂದರು. ಸಮಿತಿ ಕಾರ್ಯದರ್ಶಿ ಸಿ.ಎಸ್.ವೀರೇಶ್, ಪದಾಧಿಕಾರಿಗಳಾದ ಸಿ.ಎನ್.ಅಶೋಕ್, ಪ್ರದೀಪ್‍ಗಾಂಧಿ, ಸಿ.ಎಸ್.ಉಮೇಶ್, ನಂದೀಶ್, ದೀಪಕ್ ಹಾಜರಿದ್ದರು.
ಮಡಿಕೇರಿ ಜೂ.10 : ಇಂಡಿಯನ್ ಮಿಲಿಟರಿ ಆಕಾಡೆಮಿಯ 152ನೇ ಕೊರ್ಸಿನ ನಿರ್ಗಮನ ಪಥ ಸಂಚಲನದಲ್ಲಿ ಕೊಡಗಿನ ಮಾರ್ಚಂಡ ಶಯನ್ ಸೊಮಣ್ಣ 9ನೇ ಗ್ರೆನೇಡಿಯರ್ ರೆಜಿಮೆಂಟ್ ಗೆ ಲೆಫ್ಟಿನೆಂಟ್ ಆಗಿ ಆಯ್ಕೆಯಾಗಿದ್ದಾರೆ. ಶಯನ್ ಸೋಮಣ್ಣ ನಾಪೋಕ್ಲುವಿನ ಮರಂದೋಡ ಗ್ರಾಮದ ಮಾರ್ಚಂಡ ವಿಜಯ್ ನಂಜಪ್ಪ ಮತ್ತು ಮಾರ್ಚಂಡ ಚಿತ್ರ (ತವರು ಮನೆ ಮಲ್ಲಾಜಿರ) ದಂಪತಿಗಳ ಪುತ್ರ. ಇವರು ಪ್ರಾಥಮಿಕ ಶಿಕ್ಷಣವನ್ನು ನಾಪೋಕ್ಲು ಸೆಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆ ಹಾಗೂ ಜವಾಹರ್ ನವೋದಯ ಶಾಲೆಯಲ್ಲಿ, ಪ್ರೌಢ ಶಿಕ್ಷಣವನ್ನು ಕೂಡಿಗೆ ಸೈನಿಕ ಶಾಲೆಯಲ್ಲಿ ವ್ಯಾಸಂಗ ಮಾಡಿ ಶಾಲಾ ನಾಯಕನಾಗಿ ನಂತರ ನ್ಯಾಷನಲ್ ಡಿಪೆನ್ಸ್ ಅಕಾಡೆಮಿಯ UPSC ಪರೀಕ್ಷೆಯಲ್ಲಿ ತೇರ್ಗಡೆಯಾಗಿ, ಮೂರು ವರ್ಷ ಓಆಂ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ, ಜವಾಹರ್ ನೆಹರು ಯೂನಿವರ್ಸಿಟಿ ದೆಹಲಿಯ ಬಿಎಸ್ಸಿ (ಸಿಎಸ್)ಪದವಿ ಪಡೆದರು. ನ್ಯಾಷನಲ್ ಡಿಪೆನ್ಸ್ ಅಕಾಡೆಮಿ (NDA) ಯಲ್ಲಿ ಬೆಟಾಲಿಯನ್ ಕ್ಯಾಪ್ಟನ್ ಹಾಗೂ ಅಕಾಡೆಮಿಕ್ ಕ್ಯಾಪ್ಟನ್ ಆಗಿ ಕಾರ್ಯನಿರ್ವಾಹಿಸಿ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ಒಂದು ವರ್ಷ ತರಬೇತಿ ಪಡೆದಿದ್ದಾರೆ. ಶಯನ್ ಸೋಮಣ್ಣ ಗೆ…
ವಿರಾಜಪೇಟೆ ಜೂ.10 : ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ವಿರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾರ್ಯದರ್ಶಿ ಬಯವಂಡ ಇಂದಿರಾ ಬೆಳ್ಳಿಯಪ್ಪ ತಪ್ಪಡಕ ಕಟ್ಟುವುದರೊಂದಿಗೆ ಉದ್ಘಾಟಿಸಿದರು. ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿ ಮಾಚಯ್ಯ, ಎಲ್ಲರೂ ಪರಸ್ಪರ ಒಗ್ಗಟ್ಟು, ಹೊಂದಾಣಿಕೆಯೊಂದಿಗೆ ಜೀವನ ಸಾಗಿಸಬೇಕು ಹಾಗೂ ಜೀವಿತಾವಧಿಯಲ್ಲಿ ಆದಷ್ಟು ಸಮಾಜಮುಖಿ ಕಾರ್ಯದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರ ಮೂಲಕ ಸಮಾಜಕ್ಕೆ ಮಾದರಿಯಾಗಿ ಬದುಕನ್ನು ಅರ್ಥ ಪೂರ್ಣಗೊಳಿಸಬೇಕೆಂದು ಕಿವಿಮಾತು ಹೇಳಿದರು. ತಾನು ಜಾನಪದ ಕಲಾ ಪ್ರಕಾರವಾದ ಉಮ್ಮತಾಟ್ ಕಲಾ ಪ್ರಕಾರವನ್ನು ವಿಶ್ವದೆಲ್ಲೆಡೆ ಪಸರಿಸುವ ಕೆಲಸ ನಿರಂತರವಾಗಿ ಮಾಡಲಿದ್ದೇನೆ ಎಂದು ನುಡಿದರು. ಉಮ್ಮತ್ತಾಟ್ ಕಲಾ ತಂಡವನ್ನು ಕಟ್ಟಿಕೊಂಡು ಮಕ್ಕಳಿಗೆ ಕಲೆಯನ್ನು ಕಲಿಸಿ ದೇಶದೆಲ್ಲೆಡೆ ಕರೆದುಕೊಂಡು ಹೋಗಿ ಅನೇಕ ಬಾರಿ ನೃತ್ಯ ಪ್ರಕಾರಗಳನ್ನು ಪ್ರಸ್ತುತಪಡಿಸಿದ್ದೇನೆ. ಸರಕಾರ ನನ್ನನ್ನು ಗುರುತಿಸಿ ಪ್ರಶಸ್ತಿ ನೀಡಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ಕೊಡವ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ…
ಮಡಿಕೇರಿ ಜೂ.10 : ಕೊಡಗು ವಿಶ್ವ ವಿದ್ಯಾಲಯದ ಸಮಾಜ ಕಾರ್ಯ ಅಧ್ಯಯನ ವಿಭಾಗದ ವತಿಯಿಂದ ಪೊನ್ನಂಪೇಟೆ ತಾಲೂಕಿನ ಕೋತೂರು ಆಶ್ರಮ ಶಾಲೆಯಲ್ಲಿ ಹಮ್ಮಿಕೊಂಡಿರುವ ಗ್ರಾಮೀಣ ಅಧ್ಯಯನ ಶಿಬಿರದ ನಾಲ್ಕನೇ ದಿನ ವಿರಾಜಪೇಟೆಯ ಕೊಡಗು ದಂತ ಮಹಾ ವಿದ್ಯಾಲಯದ ಸಹಯೋಗದಲ್ಲಿ ದಂತ ಉಚಿತ ತಪಾಸಣೆ ಶಿಬಿರ ನಡೆಯಿತು. ಬೊಮ್ಮಾಡು ಹಾಡಿಯ ನಿವಾಸಿಗಳಿಗೆ ಹಾಗೂ ಕೋತೂರು ವಾಲ್ಮೀಕಿ ಗಿರಿಜನ ಆಶ್ರಮ ಶಾಲೆಯ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ಸಿಗ್ಮಾ ನೆಟ್ ವರ್ಕ್ ನ ಸಂಸ್ಥಾಪಕರು, ಉದ್ಯಮಿ ಹಾಗೂ ಜಿಲ್ಲೆಯ ಯುವ ಮುಖಂಡರೂ ಚರಣ್ ಪೂಣಚ್ಚ ಉದ್ಘಾಟಿಸಿ ಮಾತನಾಡಿ “ಉತ್ತಮ ಆರೋಗ್ಯ ಮತ್ತು ಶಿಕ್ಷಣ ಎರಡೂ ಜೀವನದ ಎರಡು ಪ್ರಮುಖ ಅಗತ್ಯಗಳಾಗಿದೆ. ಶಿಕ್ಷಣ ಇದ್ದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಉತ್ತಮ ಆರೋಗ್ಯ ಇದ್ದರೆ ಮಾತ್ರ ಶಿಕ್ಷಣ ಪಡೆಯಬಹುದು. ಹಾಗಾಗಿ ಇವೆರಡೂ ಪರಸ್ಪರ ಅವಲಂಬಿತವಾಗಿದ್ದು, ಈ ಎರಡೂ ಅಂಶಗಳಿಂದ ವಂಚಿತ ಸಮುದಾಯಕ್ಕೆ ಇಂತಹ ಶಿಬಿರಗಳು ಅಗತ್ಯವಿದೆ. ಪ್ರತಿಯೊಬ್ಬ ವ್ಯಕ್ತಿಗೂ ಶಿಕ್ಷಣ ಮತ್ತು ಆರೋಗ್ಯ ನೀಡಿದರೆ ಮಾತ್ರ ದೇಶದ…
ಮಡಿಕೇರಿ ಜೂ.9 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ನೂತನವಾಗಿ ಆರಂಭವಾಗಿರುವ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಮಾತನಾಡಿದ ಮಂತರ್ ಗೌಡ, ತಮ್ಮ ಕ್ಷೇತ್ರದ ಜನರು ತಮ್ಮ ಯಾವುದೇ ಕೆಲಸ ಕಾರ್ಯ, ಸಮಸ್ಯೆಗಳು ಇದ್ದರೂ ಇಲ್ಲಿಗೆ ಭೇಟಿ ನೀಡಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ಪ್ರಮುಖರಾದ ನಂದಕುಮಾರ್, ಯಾಕೂಬ್, ಪಕ್ಷದ ಎಸ್. ಎಂ. ಚಂಗಪ್ಪ, ಪುಲಿಯಂಡ ಜಗದೀಶ್, ಸುಜು ತಿಮ್ಮಯ್ಯ ಸೇರಿದಂತೆ ಮತ್ತಿರರು ಹಾಜರಿದ್ದರು.
ಮಡಿಕೇರಿ ಜೂ.9 : ಕೊಡಗು ಜಿಲ್ಲೆಯಲ್ಲಿ ಜೂ.12 ರಿಂದ 19 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢ ಶಾಲೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗ ಮತ್ತು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ,…
ಮಡಿಕೇರಿ ಜೂ.9 : ಮಡಿಕೇರಿ 66/11ಕೆವಿ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಜೂ.10 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಅಪ್ಪಂಗಳ, ಬೆಟ್ಟಗೇರಿ, ಕಾರುಗುಂದ, ಚೇರಂಬಾಣೆ, ಭಾಗಮಂಡಲ, ತಲಕಾವೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಜೂ.9 : 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹೆಚ್ಚುವರಿ ಕೌನ್ಸಿಲಿಂಗ್ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ 2022-23ನೇ ಸಾಲಿನ ವರ್ಗಾವಣೆ ಸಂಬಂಧ ಪರಿಷ್ಕೃತ ವರ್ಗಾವಣಾ ವೇಳಾ ಪಟ್ಟಿ ಬಿಡುಗಡೆ ಮಾಡಲಾಗಿದೆ. ಪ್ರಥಮ ಹಂತದಲ್ಲಿ ಹೆಚ್ಚುವರಿ ಶಿಕ್ಷಕರ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ಮತ್ತು ಸಂಬಂಧಿಸಿದ ಬ್ಲಾಕ್‍ಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಸಂಬಂಧಿಸಿದ ಶಿಕ್ಷಕರು ಪ್ರಕಟಿಸಿರುವ ಪಟ್ಟಿ ಪರಿಶೀಲಿಸಿಕೊಂಡು ಆಕ್ಷೇಪಣೆಗಳಿದ್ದಲ್ಲಿ ಜೂ.10 ರೊಳಗೆ ಆನ್‍ಲೈನ್ ಮೂಲಕ ಆಯಾಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಜೂ.9 : ಕೊಡಗು ಕೇಂದ್ರೀಯ ವಿದ್ಯಾಲಯ ವತಿಯಿಂದ ವರ್ಚುವಲ್ ಮೋಡ್‍ನಲ್ಲಿ `ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರವನ್ನು ಖಚಿತಪಡಿಸಿಕೊಳ್ಳುವ ಸಂಬಂಧ’ ಜಿಲ್ಲಾ ಮಟ್ಟದ ಕಾರ್ಯಾಗಾರವು ಜೂ.13 ರಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರೀಯ ವಿದ್ಯಾಲಯದಲ್ಲಿ ನಡೆಯಲಿದೆ ಎಂದು ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.






