ಮಡಿಕೇರಿ ಜೂ.9 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ, ಚೈಲ್ಡ್ ಲೈನ್-1098 ಇವರ ಸಂಯುಕ್ತ ಆಶ್ರಯದಲ್ಲಿ ಜೂ.12 ರಂದು ಬೆಳಗ್ಗೆ 10.15 ಗಂಟೆಗೆ ನಗರದ ಸರ್ಕಾರಿ ಪ್ರೌಢ ಶಾಲಾ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ಪುಟ್ಟರಂಗಸ್ವಾಮಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ, ಸಮಾಜ…
ಲೇಖಕ: admin
ಮಡಿಕೇರಿ ಜೂ.9 : ನರೇಗಾ ಕಾರ್ಮಿಕರಿಗೆ ಸ್ಥಳದಲ್ಲೇ ಆರೋಗ್ಯ ಖಾತ್ರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೆಎಚ್‍ಪಿಟಿ ಸಂಸ್ಥೆ ಸಹಯೋಗದೊಂದಿಗೆ ಅನುಷ್ಠಾನಗೊಳಿಸುತ್ತಿರುವ `ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನವು ಈಗಾಗಲೇ ಆರಂಭವಾಗಿದ್ದು, ಜೂನ್ 22 ರವರೆಗೆ ನಡೆಯಲಿದೆ. ಈಗಾಗಲೇ ಆರೋಗ್ಯ ಶಿಬಿರದ ಮೂಲಕ, ಗ್ರಾಮ ಪಂಚಾಯತಿಯ ನೇತೃತ್ವದಲ್ಲಿ ಯಶಸ್ವಿಯಾಗಿ ಜನರನ್ನು ತಲುಪುತ್ತಿದೆ. ಗ್ರಾಮೀಣ ಮಟ್ಟದ ಜನರ ಆರೋಗ್ಯವನ್ನು ಕಾಪಾಡುವುದು, ಹಾಗೂ ಸುಲಭವಾಗಿ ಆರೋಗ್ಯ ಸೇವೆಯನ್ನು ಪಡೆಯುವ ಉದ್ದೇಶವನ್ನು ಈ ಯೋಜನೆಯು ಹೊಂದಿದೆ. ಅದರ ಸಲುವಾಗಿ ಆಶಾ ಕಾರ್ಯಕರ್ತರಿಗೂ ತರಬೇತಿ ನೀಡಲಾಗಿದೆ. ಗ್ರಾ.ಪಂ ಕಚೇರಿ ಅಥವಾ ಹೆಚ್ಚು ಜನರು ಸೇರುವ ಪ್ರದೇಶದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗುತ್ತಿದ್ದು, ವಯಸ್ಕರಿಂದ ವೃದ್ಧರವರೆಗೂ ಉಚಿತ ತಪಾಸಣೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಇದುವರೆಗೆ 57 ಗ್ರಾ.ಪಂ ಗಳಲ್ಲಿ ಶಿಬಿರ ಆಯೋಜನೆ ಮಾಡಿದ್ದು, ಸುಮಾರು 5495 ರಷ್ಟು ಜನರು ಆರೋಗ್ಯ ತಪಾಸಣೆಯನ್ನು ಮಾಡಿಕೊಂಡಿದ್ದಾರೆ. ಆರೋಗ್ಯ ಕಿಟ್ ವಿತರಣೆ ತಪಾಸಣೆ…
ಮಡಿಕೇರಿ ಜೂ.9 : ಭಾಷೆಯ ಬದಲಾವಣೆಯು ಸಹಜ ಪ್ರಕ್ರಿಯೆ. ಕನ್ನಡ ಭಾಷೆಯ ಉಳಿವಿಗೆ ಪ್ರಾಚೀನತೆ ಹಾಗೂ ದಾಖಲೆಗಳು ಕಾರಣವಾಗಿದೆ ಎಂದು ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಮುರಿಗೆಪ್ಪ ತಿಳಿಸಿದರು. ಕೊಡಗು ವಿಶ್ವ ವಿದ್ಯಾನಿಲಯ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಆದಿಪುರಾಣವು ಧರ್ಮಕ್ಕೆ ಸಂಬಂಧಿಸಿದಂತೆ ಹಲವಾರು ವಿಷಯಗಳನ್ನು ತಿಳಿಸುತ್ತದೆ. ಪಂಪ, ರನ್ನ, ಪೊನ್ನ ನಮ್ಮ ಪರಂಪರೆಯನ್ನು ಮುಂದುವರೆಸಿಕೊಂಡು ಬರುತ್ತಾರೆ. ಪಂಪನು ತನ್ನ ಕಾವ್ಯಗಳಲ್ಲಿ ಬರುವ ಪುರಾಣ ಇತಿಹಾಸವನ್ನು ತಿಳಿಸಿದ್ದಾರೆ. ರಾಜ್ಯ ಸತ್ಯ, ಧರ್ಮ ಸತ್ಯ, ಕಾಲ ಸತ್ಯ ಮೌಲ್ಯವನ್ನು ತಿಳಿಸುತ್ತದೆ. ದೀರ್ಘಕಾಲದ ಇತಿಹಾಸವಿರುವ ಹಳೆಗನ್ನಡದ ಸೊಬಗನ್ನು ಗದುಗಿನ ವೀರನಾರಾಯಣ ಕೃತಿಯನ್ನು ದೇವಸ್ಥಾನದಲ್ಲಿ ಕುಳಿತು ರಚಿಸಲಾಗಿದೆ. ಇದು ನಮ್ಮ ಕನ್ನಡದ ಹಿರಿಮೆಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು. ವಚನ ಪರಂಪರೆಯು ಸೀಮಿತವಾದುದಲ್ಲ ಒಂದು ದೀರ್ಘತೆಯುಳ್ಳ ಕ್ರಿಯೆ ಈ ಕ್ರಿಯೆಗಳಿಂದಲೇ ಮಾನವನ ಏಳಿಗೆ ಸಾಧ್ಯವಾಗುತ್ತದೆ.…
ಮಡಿಕೇರಿ ಜೂ.9 : ಮಳೆಗಾಲದ ಅವಧಿಯಲ್ಲಿ ಪ್ರವಾಹ, ಭೂ ಕುಸಿತ ಉಂಟಾದಲ್ಲಿ ಕೂಡಲೇ ಘಟನಾ ಸ್ಥಳಕ್ಕೆ ಹೋಗಬೇಕು. ಗಾಳಿ, ಮಳೆಯಿಂದಾಗಿ ಗಿಡ-ಮರಗಳು ವಿದ್ಯುತ್ ತಂತಿಗಳ ಮೇಲೆ ಉರುಳಿ ವಿದ್ಯುತ್ ಕಡಿತ, ಕುಡಿಯುವ ನೀರಿಗೆ ತೊಂದರೆಯಂತಹ ಸಮಸ್ಯೆಗಳಿಗೆ ಕಂದಾಯ, ಸೆಸ್ಕಾಂ, ಅರಣ್ಯ, ಲೋಕೋಪಯೋಗಿ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಗಳು ಸಮನ್ವಯತೆಯಿಂದ ಕೂಡಲೇ ಸ್ಪಂದಿಸಿ, ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಂಗಾರು ಅವಧಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಳಜಿ ಕೇಂದ್ರಗಳಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತಾಗಬೇಕು. ಕಾಳಜಿ ಕೇಂದ್ರಕ್ಕೆ ಬರುವ ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಮಾಡಬೇಕು ಎಂದು ಶಾಸಕರು ಹೇಳಿದರು. ಕಾಳಜಿ ಕೇಂದ್ರಕ್ಕೆ ಬರುವ ಜನರಿಗೆ ಮಾನಸಿಕ ಧೈರ್ಯ ತುಂಬಲು ಆರೋಗ್ಯ ಇಲಾಖೆ ವತಿಯಿಂದ ಆಪ್ತ ಸಮಾಲೋಚಕರನ್ನು ನಿಯೋಜಿಸಬೇಕು…
ಮಡಿಕೇರಿ ಜೂ.9 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಯಂತೆ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗವಾಗಿರುವ ಕೊಡಗು ಜಿಲ್ಲೆಯ ಬುಡಕಟ್ಟು ಜನಾಂಗ ಕೊಡವರಿಗೆ ವಿಶೇಷ ಸ್ಥಾನಮಾನ ಕಲ್ಪಿಸಲು ಸರ್ಕಾರ ಆಯೋಗವೊಂದನ್ನು ರಚಿಸಬೇಕೆಂದು ಒತ್ತಾಯಿಸಿ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣ್ಯನ್ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೊಡವ ಸ್ವಾಯತ್ತ ನಾಡಿನ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಈಗಾಗಲೇ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿರುವ ಅವರು ಇದೇ ಜೂ.14 ರಂದು ಅರ್ಜಿ ವಿಚಾರಣೆಯ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಪತ್ರದಲ್ಲಿ ಕೊಡವರ ಬೇಡಿಕೆಗಳ ಕುರಿತು ಉಲ್ಲೇಖಿಸಿರುವ ಡಾ.ಸುಬ್ರಮಣ್ಯನ್ ಸ್ವಾಮಿ ಕೊಡವರಿಗೆ ಕರ್ನಾಟಕ ರಾಜ್ಯದಲ್ಲಿ ವಿಶೇಷ ಸ್ಥಾನಮಾನ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಆಯೋಗವೊಂದನ್ನು ರಚಿಸುವ ತುರ್ತು ಅಗತ್ಯತೆ ಇದೆ ಎಂದು ತಿಳಿಸಿದ್ದಾರೆ. ಕೂರ್ಗ್ ಪ್ರದೇಶವು 1950 ಮತ್ತು 1956 ರ ನಡುವೆ ವಿಧಾನಸಭೆ, ಮುಖ್ಯಮಂತ್ರಿ, ಚುನಾಯಿತ ಲೋಕಸಭಾ ಸಂಸದ ಹಾಗೂ ರಾಜ್ಯಸಭಾ ಸಂಸದರನ್ನು ಹೊಂದಿರುವ ರಾಜ್ಯವಾಗಿತ್ತು. 1957…
ಮಡಿಕೇರಿ ಜೂ.9 : ವಿವಿಧ ಇಲಾಖೆಗಳಿಂದ ಪೂರ್ಣಗೊಂಡ ಕಾಮಗಾರಿಗಳ ಗುತ್ತಿಗೆದಾರರಿಗೆ ಹಾಗೂ ಎನ್‍ಡಿಆರ್‍ಎಫ್ ಯೋಜನೆಯ ಪೂರ್ಣಗೊಂಡ ಕಾಮಗಾರಿಗಳಿಗೆ ಹಣ ಪಾವತಿ ಮಾಡುವಂತೆ ಕೊಡಗು ಜಿಲ್ಲಾ ಲೋಕೋಪಯೋಗಿ ಗುತ್ತಿಗೆದಾರರ ಸಂಘ ಮನವಿ ಮಾಡಿದೆ. ಸಂಘದ ಜಿಲ್ಲಾಧ್ಯಕ್ಷ ಕೆ.ಎ.ರವಿ ಚಂಗಪ್ಪ ಅವರ ನೇತೃತ್ವದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರಿಗೆ ಮನವಿ ಸಲ್ಲಿಸಿದ ಸಂಘದ ಪ್ರಮುಖರು ಹಾಗೂ ಗುತ್ತಿಗೆದಾರರು, ಪೂರ್ಣಗೊಂಡ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗದಿರುವ ಬಗ್ಗೆ ಗಮನ ಸೆಳೆದರು. ವಿವಿಧ ಲೆಕ್ಕ ಶೀರ್ಷಿಕೆಯಡಿ ಪೂರ್ಣಗೊಂಡ ಕಾಮಗಾರಿಗಳಿಗೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಅಂದಾಜು ರೂ.40 ಕೋಟಿ ಲೋಕೋಪಯೋಗಿ ಇಲಾಖೆಯಲ್ಲಿ ರೂ.93 ಕೋಟಿ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿ 30 ಕೋಟಿ ರೂ. ಗುತ್ತಿಗೆದಾರರಿಗೆ ಪಾವತಿ ಮಾಡಲು ಬಾಕಿ ಇದ್ದು, ಗುತ್ತಿಗೆದಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ತುರ್ತು ಕಾಮಗಾರಿ ನಿರ್ವಹಿಸಲು ಗುತ್ತಿಗೆದಾರರು ಅಸಹಾಯಕರಾಗಿದ್ದು, ತಕ್ಷಣ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಸಂಘದ ಜಿಲ್ಲಾ…
ಮಡಿಕೇರಿ ಜೂ.9 : ಮಡಿಕೇರಿ ಕ್ಷೇತ್ರದ ನೂತನ ಶಾಸಕ ಡಾ.ಮಂತರ್ ಗೌಡ ಅವರನ್ನುಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಶುಭ ಹಾರೈಸಲಾಯಿತು. ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿನ ಶಾಸಕರ ಕಚೇರಿಯಲ್ಲಿ ಭೇಟಿಯಾದ ಸಂಘದ ಪದಾಧಿಕಾರಿಗಳು ಶಾಸಕರನ್ನು ಅಭಿನಂದಿಸಿದರು. ಈ ಸಂದರ್ಭ ಜಿಲ್ಲಾಧ್ಯಕ್ಷ ಬಿ.ಡಿ.ಜಗದೀಶ್‍ರೈ, ಉಪಾಧ್ಯಕ್ಷ ಬಿ.ಕೆ.ರವೀಂದ್ರರೈ, ಸಹಕಾರ್ಯದರ್ಶಿ ಮನೋಜ್ ಶೆಟ್ಟಿ, ನಿರ್ದೇಶಕರಾದ ಪ್ರಭುರೈ, ಶರತ್‍ಕುಮಾರ್ ಶೆಟ್ಟಿ, ಸತೀಶ್ ರೈ ಹಾಜರಿದ್ದರು.
ಮಡಿಕೇರಿ ಜೂ.9 : ಉಡೋತ್‍ಮೊಟ್ಟೆಯ ಶ್ರೀ ಆಧಿಶಕ್ತಿ ದೇವಿಯ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ವೇದಮೂರ್ತಿ ವೇದವ್ಯಾಸ ತಂತ್ರಿಗಳ ಮಾರ್ಗದರ್ಶನದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು. ಜೂ.7ರ ಮುಂಜಾನೆಯಿಂದಲೇ ಆರಂಭಗೊಂಡು ಮಹಾಪ್ರಾರ್ಥನೆ ಸ್ವಸ್ತಿ ಪುಣ್ಯಾಹ ವಾಚನ, ಗಣಪತಿ ಹೋಮ, ಕಂಕಣ ಬಂಧನ, ಉಗ್ರಾಣ ಪೂಜೆ, ಸಂಜೆ ಕಳಶ ಮೆರವಣಿಗೆ ಹಾಗೂ ಹೊರೆಕಾಣಿಕೆ, ಬಿಂಬ ಶುದ್ಧಿ, ಆಧಿವಾಸ ಹೋಮ, ಪ್ರಸಾದ ಶುದ್ಧಿ ಹಾಗೂ ಮಹಾಪೂಜೆ ಜರುಗಿದವು. ನಂತರ ಬಿಂಬದಲ್ಲಿ ತತ್ವನ್ಯಾಸ ಮತ್ತು ತತ್ವನ್ಯಾಸ ಹೋಮ, ಬಿಂಬ ಆಧಿವಾಸ ಪೂಜೆ, ಧಾನ್ಯಾದಿವಾಸ ನೆರವೇರಿತು. ಮಧ್ಯಾಹ್ನ ಮಹಾಪೂಜೆ, ಸಂಜೆ ಕಳಸ ಪ್ರತಿಷ್ಠೆ, ಕಳಶಾಧಿವಾಸ ಹೋಮ, ವಾಸ್ತು ರಾಕ್ಷೋಘ್ನ ಹೋಮ, ಬಿಂಬ ಶಯ್ಯಾದಿವಾಸ ಪೂಜೆ ನೆರವೇರಿತು. ರಾತ್ರಿ ಮಕ್ಕಳಿಂದ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಪ್ರತಿಷ್ಠಾ ಪ್ರಧಾನ ಹೋಮ, ದೇವಿಯ ಪುನರ್ ಪ್ರತಿಷ್ಠೆ, ದುರ್ಗಾಹೋಮ, ದೇವರಿಗೆ ಪ್ರಸನ್ನ ಪೂಜೆ, ಬ್ರಹ್ಮಕಲಶಾಭಿಷೇಕ ಸೇವೆಯ ಪೂಜೆಗಳು ಜರುಗಿತು.…
ಮಡಿಕೇರಿ ಜೂ.9 : ಪುಷ್ಪಗಿರಿ ಜೇಸಿ ಸಂಸ್ಥೆಯ ವತಿಯಿಂದ ಸೋಮವಾರಪೇಟೆಯ ಅಗ್ನಿಶಾಮಕ ದಳದ ಸಹಾಯಕ ಠಾಣಾಧಿಕಾರಿ ಪಿ.ಎಸ್.ಸುರೇಶ್ ಅವರಿಗೆ ಸಲ್ಯೂಟ್ ದಿ ಸೈಲೆಂಟ್ ವರ್ಕರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುರೇಶ್ ಅವರು ಅಗ್ನಿಶಾಮಕ ದಳದಲ್ಲಿ 33 ವರ್ಷಗಳಿಂದ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಜೆಸಿಐ ಅಧ್ಯಕ್ಷೆ ಎಂ.ಎ.ರುಬೀನಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭ ಜೆಸಿ ಪ್ರಕಾಶ್, ಅಶೋಕ್, ಲಕ್ಷ್ಮೀಕುಮಾರ್, ಸುನೀತ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಜೂ.9 : ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರನ್ನು ಸನ್ಮಾಸಲಾಯಿತು. ನಗರದ ಜಿ.ಪಂ ನಲ್ಲಿರುವ ಶಾಸಕರ ನೂತನ ಕಚೇರಿಯಲ್ಲಿ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಫಲ ತಂಬೂಲ ಹಾಗೂ ಮೈಸೂರು ಪೇಟೆ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ಬಿ.ಎಂ.ವಿಜಯ, ಪ್ರಧಾನ ಕಾರ್ಯದರ್ಶಿ ಪಿ.ಕೆ ಶಶಿಕುಮಾರ್, ಉಪಾಧ್ಯಕ್ಷ ಟಿ.ಕೆ.ಸುಧೀರ್, ಖಜಾಂಜಿ ಕೆ.ಬಾಬು, ಕರ್ನಾಟಕ ರಾಜ್ಯ ಒಬಿಸಿ ಉಪಾಧ್ಯಕ್ಷ ಟಿ.ಕೆ ಸಾಯಿಕುಮಾರ್, ಪ್ರಮುಖರಾದ ವಿನೂಪ್ ವಿರಾಜಪೇಟೆ, ಅಜೀಶ್ ಕುಮಾರ್, ಶಾಜು, ಉಣ್ಣಿಕೃಷ್ಣ, ಎಂ.ರಥಿ ಕೇಶನ್, ಟಿ.ಆರ್ ವಾಸುದೇವ್, ಸಂತೋಶ್ ಕುಮಾರ್, ಸತೀಶ್, ಸೋಮವಾರಪೇಟೆ ಹಿಂದೂ ಮಲಯಾಳಿ ಸಮಾಜದ ಮಾಜಿ ಅಧ್ಯಕ್ಷ ಲೀಲಾದಾಸ್,ಸಂಘಟನಾ ಕಾರ್ಯದರ್ಶಿ ಸದಾನಂದ, ಗೋಣಿಕೊಪ್ಪಲಿನ ಶರತ್ ಕಾಂತ್, ಜಿ.ಪಂ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ಸುಂಟಿಕೊಪ್ಪ ಮಲಯಾಳಿ ಸಮಾಜದ ಸಂತೋಷ್ ಕುಮಾರ್ ಹಾಗೂ ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಕಾರ್ಯಾಕಾರಿ ಸಮಿತಿ…






