ಲೇಖಕ: admin

ಮಡಿಕೇರಿ ಜೂ.9 : ಅಲ್ಲಾರಂಡ ರಂಗಚಾವಡಿ ಹಾಗೂ ಸಿರಿಗನ್ನಡ ವೇದಿಕೆ ಸಹಯೋಗದಲ್ಲಿ ಬಹುಭಾಷಾ ಬೈಗುಳ ಸಾಹಿತ್ಯೋತ್ಸವ ನಡೆಯಲಿದ್ದು, ಲೇಖಕರಿಂದ ಬರಹಗಳನ್ನು ಆಹ್ವಾನಿಸಲಾಗಿದೆ. ನವೆಂಬರ್ ತಿಂಗಳಿನಲ್ಲಿ ರಾಜ್ಯೋತ್ಸವದ ಸಂದರ್ಭ ಕಾರ್ಯಕ್ರಮ ಆಯೋಜನೆ ಮಾಡಲು ನಿರ್ಧರಿಸಿದ್ದು, ವಿಭಿನ್ನ ರೀತಿಯ ಬೈಗುಳಗಳನ್ನು ಪುಸ್ತಕ ರೂಪದಲ್ಲಿ ಹೊರತರುವ ಉದ್ದೇಶ ಹೊಂದಲಾಗಿದೆ. ಆಸಕ್ತರು ಆ.31ರ ಒಳಗೆ kudekalsanthu@gmail.com  ವಿಳಾಸಕ್ಕೆ ಬರಹಗಳನ್ನು ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9448312310, 9972538584 ಸಂಪರ್ಕಿಸಬಹುದಾಗಿದೆ ಎಂದು ರಂಗಚಾವಡಿ ಹಾಗೂ ಸಿರಿಗನ್ನಡ ವೇದಿಕೆ ಅಧ್ಯಕ್ಷ ಅಲ್ಲರಂಡ ವಿಠಲ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.9 :  ರಾಜ್ಯ ಸರ್ಕಾರ 28 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿದ್ದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ  ಎನ್​.ಎಸ್​.ಬೋಸರಾಜು ನೇಮಕಗೊಂಡಿದ್ದಾರೆ. ಈ ಹಿಂದೆ  ಬಿ.ಸಿ.ನಾಗೇಶ್  ಅವರು ಉಸ್ತುವಾರಿ ಸಚಿವರಾಗಿದ್ದರು.

Read More

ಮಡಿಕೇರಿ ಜೂ.9 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ರಿಗೆ ಕೊಡವ ಸಾಹಿತ್ಯ ಕ್ಷೇತ್ರದ ಪ್ರತಿಷ್ಠಿತ ಸ್ವಯಂ ಸೇವಾ ಸಂಸ್ಥೆಯಾದ ‘ಕೊಡವ ತಕ್ಕ್ ಎಳ್ತ್’ಕಾರಡ ಕೂಟ’ದ ಸದಸ್ಯರು ಅಭಿನಂದಿಸಿದರು. ಕೊಡವ ಜನಾಂಗದ ಕೊರವುಕಾರರಿಗೆ ನೀಡುವ ವಿಶೇಷ ಗೌರವದ ಪ್ರತೀಕವಾಗಿರುವ ರೇಷ್ಮೆ ಪಟ್ಟ್ ವಸ್ತ್ರವನ್ನು ಪೊನ್ನಣ್ಣ  ಅವರ ಹೆಗಲಿಗಿರಿಸಿ, ಕೊಡವ ಜನಾಂಗದ ಗುರು ಕಾರೋಣ, ಕುಲಮಾತೆ ಕಾವೇರಿ, ಮಾಗುರು ಇಗ್ಗುತಪ್ಪ ದೇವರ ಆಶೀರ್ವಚನ ನೀಡುವ ವಿಶೇಷ ಫಲಕವನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನು ಆಯ್ಕೆ ಮಾಡುವಾಗ ಕೊಡವ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಜಾನಪದದ ವಿಶೇಷ ಅರಿವು ಇರುವ ಹಾಗೂ ಆ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಮರ್ಥ ರನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭ ಕೊಡವ ತಕ್ಕ್ ಎಳ್ತ್’ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ, ಉಪಾಧ್ಯಕ್ಷ ಚೆಂಬಾಂಡ ಶಿವಿ ಭೀಮಯ್ಯ, ಕಾರ್ಯದರ್ಶಿ ಅಮ್ಮಣಿಚಂಡ ಪ್ರವೀಣ್…

Read More

ಮಡಿಕೇರಿ ಜೂ.9 :  ಕೊಡಗು ವಿಶ್ವ ವಿದ್ಯಾಲಯದ ಸಮಾಜ ಕಾರ್ಯ ಅಧ್ಯಯನ ವಿಭಾಗದ ವತಿಯಿಂದ ಪೊನ್ನಂಪೇಟೆ ತಾಲ್ಲೂಕಿನ ಕೋತೂರು ಆಶ್ರಮ ಶಾಲೆಯಲ್ಲಿ ಹಮ್ಮಿಕೊಂಡಿರುವ ಗ್ರಾಮೀಣ ಅಧ್ಯಯನ ಶಿಬಿರದ ಮೂರನೇ ದಿನ  ಬೊಮ್ಮಾಡು ಹಾಡಿಯ ನಿವಾಸಿಗಳಿಗೆ ಹಾಗೂ ಕೋತೂರು ವಾಲ್ಮೀಕಿ ಗಿರಿಜನ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ಹಾಡಿಯ ನಿವಾಸಿಗಳಿಗೆ ಹಾಗು ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಿ , ವೈಕ್ತಿಯ ಸ್ವಚ್ಛತೆ ಮತ್ತು ಉತ್ತಮ ಪರಿಸರದ ಕುರಿತು ಜಾಗೃತಿ ಮೂಡಿಸಲಾಯಿತು. ನಂತರ  ಮಾತನಾಡಿದ ಡಾ. ಅರ್ಚನಾ “ಆದಿವಾಸಿ ಸಮುದಾಯದಲ್ಲಿ ರಕ್ತ ಹೀನತೆ ಸಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಅವರ ಆರ್ಥಿಕ ಸ್ಥಿತಿಗೆ ಸ್ಥಳೀಯವಾಗಿ ಲಭ್ಯವಿರುವ ಹಣ್ಣು, ತರಕಾರಿ, ಸೊಪ್ಪುಗಳನ್ನು ನಿತ್ಯದ ಆಹಾರದಲ್ಲಿ ಸೇವಿಸಬೇಕು” ಎಂದು ತಿಳಿಸಿದರು. ಹಿರಿಯ ಸುರಕ್ಷಣಾಧಿಕಾರಿ  ಕಾವೇರಮ್ಮ ಮಾತನಾಡಿ, ಶಿಶು ಮರಣ ದರ ಹಾಗು ಮಾತೃ ಮರಣ ದರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಮಾಜ ಕಾರ್ಯ ವಿದ್ಯಾರ್ಥಿಗಳು ಹಾಡಿಯ ಜನರಲ್ಲಿ ಅರಿವು ಮೂಡಿಸಲು ತಿಳಿಸಿದರು.…

Read More

ಚೆಯ್ಯಂಡಾಣೆ  ಜೂ.10 :  ನರಿಯಂದಡ ಕೇಂದ್ರ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ  ಚೇನಂಡ ಗಿರೀಶ್ ಪೂಣಚ್ಚ ಗಿಡ ನೆಡುವುದರ ಮೂಲಕ  ಕಾರ್ಯಕ್ರಮ ಉದ್ಘಾಟಿಸಿದರು.  ನಂತರ ಮಾತನಾಡಿ, ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು. ಮುಖ್ಯ ಶಿಕ್ಷಕಿ ಸುನೀತಾ ಪರಿಸರ ಸಂರಕ್ಷಣೆಯ ಹಾಗೂ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭ ಶಿಕ್ಷಕರಾದ ರವೀಂದ್ರ ನಾಥ್, ಪೊನ್ನಪ್ಪ, ರಾಜ್ ಕುಮಾರ್, ಹೇಮಾಮಾಲಿನಿ, ಭವ್ಯ, ಮಮತಾ ಹಾಗೂ ವಿದ್ಯಾರ್ಥಿ ಗಳು ಹಾಜರಿದ್ದರು.

Read More

ಮಡಿಕೇರಿ ಜೂ.9 :   ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ. ದೀಕ್ಷಿತ (21) ಎಂಬಾಕೆಯೇ ಮೃತ ಯುವತಿಯಾಗಿದ್ದು, ವಿರಾಜಪೇಟೆ ತಾಲ್ಲೂಕಿನ ಕುಟ್ಟಂದಿ ಗ್ರಾಮದ ಪ್ರಸ್ತುತ ವಿರಾಜಪೇಟೆ ಪಟ್ಟಣದಲ್ಲಿ ವಾಸವಿರುವ ದಿ.ನಾಣಯ್ಯ ಹಾಗೂ ಸರಸ್ವತಿ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಾಳೆ. ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರುವ ದೀಕ್ಷಿತಾಳ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿರಾಜಪೇಟೆ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ ಜೂ.9 : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ನಾಪೋಕ್ಲು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಪೋಕ್ಲು ಸಮೀಪದ ಹಳೇ ತಾಲ್ಲೂಕು ಕೂಡು ರಸ್ತೆಯಲ್ಲಿರುವ ಪ್ರಯಾಣಿಕರ ಬಸ್ಸು ತಂಗುದಾಣದ ಬಳಿ ವ್ಯಕ್ತಿಯೊಬ್ಬ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಹಿನ್ನೆಲೆ ಕಾರ್ಯಾಚರಣೆ ನಡೆಯಿತು. ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಗ್ಯಾಸ್ ಏಜೆನ್ಸಿಯ ವಾಹನ ಚಾಲಕ ಎಸ್.ಬಿ.ಪವನ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಈತನನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ವಿಶೇಷ ಸೂಚನೆ :: ನಾಪೋಕ್ಲು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸಾರ್ವಜನಿಕರು ಠಾಣೆಯ ಮೊಬೈಲ್ ಸಂಖ್ಯೆ 9480804948  ಗೆ ಮಾಹಿತಿ ನೀಡುವಂತೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದೆಂದು ಠಾಣಾಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.9 :  ಕಾರು ಮತ್ತು ಬೈಕ್ ನಡುವೆ  ಅಪಘಾತ ಸಂಭವಿಸಿ  ಬೈಕ್  ಸವಾರ  ಸ್ಥಳದಲ್ಲೇ  ಸಾವನ್ನಪ್ಪಿದ ಘಟನೆ  ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದಲ್ಲಿ  ನಡೆದಿದೆ. ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಪ್ಪಾಜಿ (19-ನವೀನ) ಮೃತ ದುರ್ದೈವಿ. ಮೂರ್ನಾಡು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಮತ್ತು ಮೂರ್ನಾಡು ಕಡೆಯಿಂದ ನಾಪೋಕ್ಲುವಿಗೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬೈಕ್‍ನಲ್ಲಿದ್ದ  ಸಹಪ್ರಯಾಣಿಕ ನಿಗೆ ಗಂಭೀರ ಗಾಯಗಳಾಗಿದ್ದು, ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ  ದಾಖಲಿಸಲಾಗಿದೆ. ಸ್ಥಳಕ್ಕೆ ನಾಫೋಕ್ಲು ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರದಿ :ಝಕರಿಯ ನಾಪೋಕ್ಲು 

Read More

ಮಡಿಕೇರಿ ಜೂ.8 : ಮಡಿಕೇರಿ ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆ ನಗರದ  ಹೊರವಲಯದಲ್ಲಿ ರುವ   ಕೂಟುಹೊಳೆಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ  ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಶಾಸಕರು,  ಇಡಿ ನಾಡಿಗೆ ನೀರುಣಿಸುವ ಕಾವೇರಿಯ ತವರಿನಲ್ಲಿ ಈ ರೀತಿಯಗಿ ನಡೆದಿರೋದು ಬೇಸರದ ವಿಚಾರ. ಇಲ್ಲಿಕೂಟೂ ಹೊಳೆಯಿಂದ ನೀರು ಪಂಪ್ ಮಾಡುವ 300 ಹೆಚ್ ಪಿಯ 2 ಮೋಟಾರ್ ಇದೀಗ ದುಸ್ಥಿಗೆ ಒಳಗಾಗಿದೆ. ಇದರಿಂದ ಮಡಿಕೇರಿ ನಗರಕ್ಕೆ ನೀರು ಪೂರೈಕೆಯಲ್ಲಿ ಸಮಸ್ಯೆಯಾಗಿದೆ. ಈ ಸಮಸ್ಯೆ ಸರಿದೂಗಿಸಲು ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ. ಆದರೆ ಮಡಿಕೇರಿಯ ಕೆಲವೊಂದು ಗುಡ್ಡಗಾಡು ಪ್ರದೇಶಗಳಿಗೂ ಸೂಕ್ತ ರೀತಿಯಲ್ಲಿ ನೀರಿನ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದರು. ಇಲ್ಲಿಯವರೆಗೆ ನೀರು ಪಂಪ್ ಮಾಡುವ ಮೋಟಾರನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುದರಿಂದ ದಿರೋದೆ  ಸಮಸ್ಯೆ ಉದ್ಭವವಾಗಲು ಕಾರಣ. ಅಧಿಕಾರಿಗಳ ನಿರ್ಲಕ್ಷ್ಯವೋ ಇಲ್ಲ, ಜನಪ್ರತಿನಿಧಿಗಳ ನಿರ್ಲಕ್ಷ್ಯವೊ ಗೊತ್ತಿಲ್ಲ ಇಂದು ಕೂಟುಹೊಳೆಗೆ ವಿಸಿಟ್…

Read More

ಮಡಿಕೇರಿ ಜೂ.8 : ಪಂಚಾಯತ್ ರಾಜ್ ಹಾಗೂ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆ ವತಿಯಿಂದ ನ್ಯಾಯಾಂಗ ಇಲಾಖೆ ಸಹಯೋಗದಲ್ಲಿ ಕಾನೂನು ವಿಷಯಗಳಿಗೆ ಸಂಬಂಧಿಸಿದಂತೆ ಅರಿವು ಮೂಡಿಸುವ ಕಾರ್ಯಕ್ರಮವು ಜೂ.9 ರಂದು ಬೆಳಗ್ಗೆ 10 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ತಾ.ಪಂ. ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ತಾ.ಪಂ.ಇಒ ಶೇಖರ್, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಎಚ್.ಕೆ.ಸುರೇಶ್, ಸಂಪನ್ಮೂಲ ವ್ಯಕ್ತಿ ಎಂ.ಎನ್.ಉಮೇಶ್, ವಕೀಲರಾದ ಮೀನಾ ಕುಮಾರಿ, ಪುಂಡರೀಕ ಇತರರು ಪಾಲ್ಗೊಳ್ಳಲಿದ್ದಾರೆ.

Read More