ಲೇಖಕ: admin

ಮಡಿಕೇರಿ ಜೂ.8 : ಕೊಡಗು ವಿಶ್ವವಿದ್ಯಾನಿಲಯ, ಮಂಗಳೂರು ವಿಶ್ವವಿದ್ಯಾನಿಲಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಕನ್ನಡ ವಿಭಾಗ ವತಿಯಿಂದ ಜೂ.9 ಮತ್ತು 10 ರಂದು `ಕನ್ನಡ ವಾಙ್ಮಯ ಪರಂಪರೆ ಮತ್ತು ಸಾಂಸ್ಕೃತಿಕ ಅನುಸಂಧಾನ’ ವಿಷಯದ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭವು ಜೂನ್, 09 ರಂದು ಬೆಳಗ್ಗೆ 10.30 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮುರಿಗೆಪ್ಪ, ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಸಿ.ಕೆ.ಕಿಶೋರ್ ಕುಮಾರ್, ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ, ಮಡಿಕೇರಿ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ.ಪ್ರೊ. ಬಿ.ರಾಘವ ಇತರರು ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 1.30 ರಿಂದ ವಿಚಾರಗೋಷ್ಠಿ ನಡೆಯಲಿದೆ. ಜೂ.10 ರಂದು ಮಧ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಮಡಿಕೇರಿ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ.ಪ್ರೊ.ಬಿ.ರಾಘವ, ಚೆನೈ…

Read More

ಮಡಿಕೇರಿ ಜೂ.8 : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಜೂ.15 ರಿಂದ ಜು.15 ರವರೆಗೆ ಇಲಾಖಾ ವೆಬ್‍ಸೈಟ್ www.sw.kar.nic.in  ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಪರಿಶಿಷ್ಟ ಜಾತಿ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು. 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ಮೂರು ಅಥವಾ ಐದು ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದರೆ ಮಾತ್ರ ನಿಯಮಾನುಸಾರ ಸಡಿಲಗೊಳಿಸುವುದು. ಒಂದು ವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂತವರ ಶಿಷ್ಯವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು.…

Read More

ಮಡಿಕೇರಿ ಜೂ.8 : ವಿರಾಜಪೇಟೆ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೋಗುವ 11 ಕೆ.ವಿ.ಬೇತ್ರಿ ಮತ್ತು ಕ್ಲಬ್ ಮಹೀಂದ್ರ ಫೀಡರ್‍ಗಳಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಜೂ.10 ರಂದು ಬೆಳಗ್ಗೆ 10 ಗಂಟೆಯಿಂದ 3 ಗಂಟೆಯವರೆಗೆ ವಿರಾಜಪೇಟೆ ಪಟ್ಟಣ, ಬಿಟ್ಟಂಗಾಲ, ಬೇತ್ರೀ, ಬೇಟೋಳಿ, ಆರ್ಜಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಜೂ.8 : ಕಾರ್ಯಕರ್ತರ ಪರಿಶ್ರಮದಿಂದ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ, ಮುಂಬರುವ ಜಿ.ಪಂ ಮತ್ತು ತಾ.ಪಂ ಚುನಾವಣೆಗೆ ಕೂಡ ಎಲ್ಲರೂ ಸಜ್ಜಾಗುವ ಮೂಲಕ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಕರೆ ನೀಡಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಮುಂಗಾರು ಆರಂಭಗೊಳ್ಳಲಿದ್ದು, ಅತಿವೃಷ್ಟಿಯ ಅನಾಹುತಗಳನ್ನು ತಡೆಯಲು ಮತ್ತು ಪರಿಹಾರವನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭರವಸೆ ನೀಡಿದ್ದಾರೆ. ಅವರಿಗೆ ನಾವೆಲ್ಲರು ಅಗತ್ಯ ಸಹಕಾರ ನೀಡಬೇಕು ಮತ್ತು ಮುಂಬರುವ ಚುನಾವಣೆಗಳನ್ನು ಎದುರಿಸಲು ಸಜ್ಜಾಗಬೇಕೆಂದು ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೋಹನ್ ದಾಸ್ ಮಾತನಾಡಿ ಪಕ್ಷ ಸಂಘಟನೆಗೆ ಆದ್ಯತೆ ನೀಡುವಂತೆ ಕರೆ ನೀಡಿದರು. ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಬಗ್ಗೆ…

Read More

ಮಡಿಕೇರಿ ಜೂ.8 : ಜಿಲ್ಲೆಯ ರೈತರು ಮುಂಗಾರು ಹಂಗಾಮಿನ ಸಿದ್ದತೆ ಮತ್ತು ವಿವಿಧ ಬೆಳೆಗಳಿಗೆ ರಸಗೊಬ್ಬರಗಳ ಬಳಕೆ/ ಪೂರೈಕೆ ಕುರಿತು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕಾಫಿ ಮಂಡಳಿಯ ಅಧಿಕಾರಿಗಳೊಂದಿಗೆ ಜೂ.16 ರಂದು ಬೆಳಗ್ಗೆ 10.30 ಗಂಟೆಗೆ ರೇಡಿಯೋ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಜೂ.8 : ಪ್ರಸಕ್ತ (2023-24) ಸಾಲಿನಲ್ಲಿ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಸಮನ್ವಯ ಶಿಕ್ಷಣ ಮಧ್ಯವರ್ತನೆಯ ಕಾರ್ಯ ಚಟುವಟಿಕೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿಯಿರುವ 6 ಪ್ರೌಢ ಶಾಲಾ ಮತ್ತು 1 ಪ್ರಾಥಮಿಕ ವಿಭಾಗದ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ನೇರಗುತ್ತಿಗೆ ಮೂಲಕ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲು ವಿಶೇಷ ಡಿಎಡ್/ ಬಿಎಡ್ ವಿದ್ಯಾರ್ಹತೆ ಹೊಂದಿ ಆರ್‍ಸಿಐನಲ್ಲಿ ನೋಂದಣಿ ಮಾಡಿಕೊಂಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂ.15 ರಂದು ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು ಹಾಗೂ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ.9448999400 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಅಭಿಯಾನದ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಹಾಗೂ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಜೂ.8 : ಪ್ರಸಕ್ತ (2023-24) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಶೇ.75 ಸ್ಥಾನಗಳು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಉಳಿದ ಶೇ.25 ಸ್ಥಾನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿನಿಲಯದ ವಾರದ 7 ದಿನಗಳಲ್ಲಿ ಪೌಷ್ಠಿಕಯುಕ್ತ ಉಪಹಾರ ಹಾಗೂ ಊಟದ ವ್ಯವಸ್ಥೆ, ಉಚಿತ ವಸತಿ, ಲೇಖನ ಸಾಮಾಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿತರಣೆ, ವೈದ್ಯಕೀಯ ತಪಾಸಣೆ, ಅಂಶಕಾಲಿಕ ಬೋಧಕರಿಂದ ವಿಶೇಷ ಬೋಧನಾ ವ್ಯವಸ್ಥೆ, ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ, ಶುಚಿ ಸಂಭ್ರಮ ಕಿಟ್, ಬಾಲಕಿಯರಿಗೆ ಒನಕೆ ಓಬವ್ವ ಆತ್ಮ ರಕ್ಷಣಾ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಮಾಜ…

Read More

ಮಡಿಕೇರಿ ಜೂ.8 : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜು.8 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ `ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ಪುಟ್ಟರಂಗಸ್ವಾಮಿ ತಿಳಿಸಿದ್ದಾರೆ. ನಗರದ ನೂತನ ನ್ಯಾಯಾಲಯ ಸಭಾಂಗಣದಲ್ಲಿ ವಕೀಲರು ಹಾಗೂ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದರು. ನ್ಯಾಯಾಲಯಗಳಲ್ಲಿ ಹಲವು ಪ್ರಕರಣಗಳಿದ್ದು, ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ವಕೀಲರ ಸಹಕಾರದಿಂದ ಲೋಕ್ ಅದಾಲತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ ಎಂದು ಡಿ.ಟಿ.ಪುಟ್ಟರಂಗಸ್ವಾಮಿ ವಿವರಿಸಿದರು. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ ಎಂದರು. ಲೋಕ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು,…

Read More

ಮಡಿಕೇರಿ ಜೂ.8 : ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಅವರಿಗೆ ವಿಧಾನ ಪರಿಷತ್ ಸ್ಥಾನ ಅಥವಾ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಬೇಕೆಂದು ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರೌವೂಫ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಗೆಲುವಿನಲ್ಲಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಯಾವುದೇ ರೀತಿಯಲ್ಲಿ ಪ್ರಚಾರ ಪಡೆಯದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಹೆಚ್ಚು ಮತದಾರರನ್ನು ಕಾಂಗ್ರೆಸ್ ಕಡೆಗೆ ಸೆಳೆಯುವಲ್ಲಿ ಹಂಸ ಯಶಸ್ವಿಯಾಗಿದ್ದಾರೆ. ಇವರ ಪಕ್ಷದ ಮೇಲಿನ ನಿಷ್ಠೆಯನ್ನು ಗಮನಿಸಿ ವರಿಷ್ಠರು ವಿಧಾನ ಪರಿಷತ್ ಸ್ಥಾನ ಅಥವಾ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ. ಯಾವುದೇ ಜವಾಬ್ದಾರಿ ನೀಡಿದರೂ ಉತ್ತಮ ರೀತಿಯಲ್ಲಿ ನಿಭಾಯಿಸುವ ಸಾಮಥ್ರ್ಯ ಹಂಸ ಅವರಿಗಿದ್ದು, ಕಾರ್ಯಕರ್ತರ ಬೇಡಿಕೆಗೆ ಸರ್ಕಾರ ಸ್ಪಂದಿಸಲಿದೆ…

Read More

ವಿರಾಜಪೇಟೆ ಜೂ.7 : ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ವಿರಾಜಪೇಟೆಯ ಸಹಾಯಕ ಕೃಷಿ ಉಪನಿರ್ದೇಶಕ ಪಿ.ಶಿವಮೂರ್ತಿ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಪರಿಸರ ದಿನದ ಪ್ರಯುಕ್ತ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಗಿಡ ನೆಡುವುದರ ಮೂಲಕ ಜಾಗೃತಿ ಮೂಡಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಈಗಿನಿಂದಲೇ ಪರಿಸರ ಸಂರಕ್ಷಣಾ ಜಾಗೃತಿ ಹೊಂದಿರಬೇಕೆಂದು ಕರೆ ನೀಡಿದರು. ಸಹಾಯಕ ಧರ್ಮಗುರುಗಳಾದ ಫಾ. ಯೇಸು ಪ್ರಸಾದ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪರಿಸರ ದಿನಾಚರಣೆ ಕುರಿತು ಮಾತನಾಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪರಿಸರವಾದಿಗಳಾದ ಅಭಿಷೇಕ್ ಉತ್ತಪ್ಪ ಕೊಡಗು ಜಿಲ್ಲೆಯಲ್ಲಿ ಹವಾಮಾನ ಬದಲಾವಣೆ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಅರಣ್ಯವನ್ನು ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಪರಿಸರ ಮಾಲಿನ್ಯವನ್ನು ತಡೆಗಟ್ಟಬೇಕು ಎಂದರಲ್ಲದೆ ನಾಗರೀಕರಣ, ಕೈಗಾರೀಕರಣವು ಪರಿಸರದ ಮೇಲೆ ಉಂಟು ಮಾಡುವ ದುಷ್ಪರಿಣಾಮವನ್ನು ತಡೆಗಟ್ಟಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಬದಲಾಗುತ್ತಿರುವ ಹವಾಮಾನ…

Read More