ಲೇಖಕ: admin

ಕುಶಾಲನಗರ ಜೂ.7 :   ಉಚಿತ ವಿದ್ಯುತ್ ಯೋಜನೆ ಜಾರಿಗೆ ಹಲವು ಷರತ್ತು ವಿಧಿಸುವುದರೊಂದಿಗೆ ದಿಡೀರನೆ ಸರಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕುಶಾಲನಗರ ನಗರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರ ಬಿಜೆಪಿ ಅಧ್ಯಕ್ಷ  ಉಮಾಶಂಕರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಸರ್ಕಾರ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು. ಈ ಸಂದರ್ಭ  ಮಾತನಾಡಿದ ನಗರ ಅಧ್ಯಕ್ಷ ಉಮಾಶಂಕರ್ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ. ಚುನಾವಣೆ ಮುಂಚೆ ನೀಡಿದ ಗ್ಯಾರಂಟಿ ಯೋಜನೆಗಳು ಉಚಿತ ಎಂದು ಹೇಳಿದ್ದು ಇದೀಗ ಶರತ್ತು ವಿಧಿಸಲಾಗುತ್ತಿದೆ, ಜೊತೆಗೆ ವಿದ್ಯುತ್ ದರದಲ್ಲಿ ಹೆಚ್ಚಳ ಮಾಡಿ ಗ್ರಾಹಕರ ಮೇಲೆ ಬರೆ ಎಳೆದಿದೆ  ಎಂದು ಆರೋಪಿಸಿದರು. ಹಿರಿಯ ಮುಖಂಡ  ಜಿ.ಎಲ್.ನಾಗರಾಜ್ ಮಾತನಾಡಿ, ಉಚಿತ ಯೋಜನೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಕಲ್ಪನೆಗಳು ಲಭಿಸಿಲ್ಲ. ವೋಟು ಪಡೆದು ಅಧಿಕಾರಕ್ಕಾಗಿ ನಾಟಕ ಆಡಿದ್ದಾರೆ ಎಂದು ಆರೋಪಿಸಿದ ಅವರು ರಾಜ್ಯಾದ್ಯಂತ ಪಕ್ಷದ ವತಿಯಿಂದ ಪ್ರತಿಭಟನೆಗಳು ನಡೆಯುತ್ತಿದ್ದು, ಮಾತು ತಪ್ಪಿದ ಸರ್ಕಾರದ ವಿರುದ್ಧ ಅಸಮಾಧಾನ…

Read More

ಮಡಿಕೇರಿ ಜೂ.6 : ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಹಾಗೂ ಪೊನ್ನಂಪೇಟೆ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡುವ ಸಂಬಂಧ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಡಿಕೇರಿ, ಸೋಮವಾರಪೇಟೆ ಮತ್ತು ಪೊನ್ನಂಪೇಟೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಜೂ.15 ರೊಳಗೆ ಕಚೇರಿ ವೇಳೆ 5.30 ಒಳಗೆ ಸಂಬಂಧಿಸಿದ ಯೋಜನಾ ಕಚೇರಿಗೆ ಸಲ್ಲಿಸತಕ್ಕದ್ದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.6 : ಅಪ್ಪಂಗಳದ ಐಸಿಎಆರ್-ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆ, ಪ್ರಾದೇಶಿಕ ಕೇಂದ್ರದ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಹಣ್ಣಿನ ಮರದ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ವಿಜ್ಞಾನಿ ಡಾ.ಬಾಲಾಜಿ ರಾಜ್ ಕುಮಾರ್ ಅವರು ಮಾತನಾಡಿ ಲೈಫ್ ಮಿಷನ್ ವಿಷಯದ ಕುರಿತು ವಿವರಿಸಿದರು ಹಾಗೂ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ಹೆಚ್ಚು ಮರಗಳನ್ನು ನೆಡುವುದು, ನೈಸರ್ಗಿಕ ಸಂಪನ್ಮೂಲಗಳು ಮತ್ತು ಜಲಮೂಲಗಳ ಸಂರಕ್ಷಣೆಗೆ ಒತ್ತು ನೀಡುವಂತೆ ಕರೆ ನೀಡಿದರು. ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ವಿವಿಧ ಹಣ್ಣಿನ ಮರದ ಸಸಿಗಳನ್ನು ನೆಡಲಾಯಿತು. ನಂತರ ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳು ಬೆಟ್ಟಗೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸೇರಿ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಮರದ ಸಸಿಗಳನ್ನು ನೆಡಲಾಯಿತು.

Read More

ಮಡಿಕೇರಿ ಜೂ.6 : ಕೊಡಗು ಜಿಲ್ಲೆಯಲ್ಲಿ 12 ಗ್ರಾಮ ಪಂಚಾಯತ್ ಗಳಲ್ಲಿ (ಗ್ರೇಡ್-2ರಡಿ) ಸಮಗ್ರ ನಾಗರಿಕ ಸೇವಾ ಕೇಂದ್ರ “ಗ್ರಾಮ ಒನ್” ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗ್ರಾ.ಪಂ.ಗಳ ವಿವರ : ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ದೊಡ್ಡಮಲ್ತೆ, ಶಾಂತಳ್ಳಿ ಹೋಬಳಿಯ ಬೆಟ್ಟದಳ್ಳಿ, ಸೋಮವಾರಪೇಟೆ ಹೋಬಳಿಯ ಗರ್ವಾಲೆ. ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಹೋಬಳಿಯ ಕೆದಕಲ್, ನಾಕೂರು ಶಿರಂಗಾಲ, ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ ಹೋಬಳಿಯ ಕಾಕೋಟು ಪರಂಬು. ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಹೋಬಳಿಯ ನಿಟ್ಟೂರು, ಪೊನ್ನಪ್ಪಸಂತೆ, ಹುದಿಕೇರಿ ಹೋಬಳಿಯ ಬಲ್ಯಮಂಡೂರು, ಶ್ರೀಮಂಗಲ ಹೋಬಳಿಯ ಕೆ.ಬಾಡಗ, ಪೊನ್ನಂಪೇಟೆ ಹೋಬಳಿಯ ಬಿ.ಶೆಟ್ಟಿಗೇರಿ ಹಾಗೂ ಕಿರುಗೂರು. ಆಸಕ್ತ ಪ್ರಾಂಚೈಸಿಗಳು https://www.gramaonebls.com/users/registration ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪ್ರಾಜೆಕ್ಟ್ ಮಾನೇಜರ್ ಅಥವಾ ಕೋ-ಆರ್ಡಿನೇಟರ್, ಜಿಲ್ಲಾಧಿಕಾರಿಯವರ ಕಚೇರಿ ಇವರನ್ನು ಸಂಪರ್ಕಿಸಬಹುದು (ದೂ.ಸಂಖ್ಯೆ: 9900385301 / 9611657344) ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.6 : ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗಧಿ ಮಾಡಬೇಕಿದ್ದು, ಆ ನಿಟ್ಟಿನಲ್ಲಿ ಇದೇ ಜೂನ್ 12 ರಿಂದ ಪ್ರಕ್ರಿಯೆಗಳು ಆರಂಭವಾಗಲಿದೆ. ಆದ್ದರಿಂದ ಆಯಾಯ ತಾಲ್ಲೂಕಿಗೆ ಸಂಬಂಧಿಸಿದ ಗ್ರಾ.ಪಂ.ಸದಸ್ಯರು ಮೀಸಲಾತಿ ನಿಗಧಿಪಡಿಸುವ ಸಭೆಗೆ ಆಗಮಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಕೋರಿದ್ದಾರೆ. ನಗರದ ಗಾಂಧಿ ಭವನದಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಕೊಡಗು ಜಿಲ್ಲೆಯ ಐದು ತಾಲ್ಲೂಕುಗಳ ಎಲ್ಲಾ ಗ್ರಾ.ಪಂ.ಗಳ ಚುನಾಯಿತ ಸದಸ್ಯರುಗಳ ಸಮ್ಮುಖದಲ್ಲಿ ಗ್ರಾ.ಪಂ.ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ಸ್ಥಾನ ನಿಗಧಿಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಆ ದಿಸೆಯಲ್ಲಿ ಜೂ.12 ರಂದು ಬೆಳಗ್ಗೆ 11 ಗಂಟೆಗೆ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು, ಮಧ್ಯಾಹ್ನ 3 ಗಂಟೆಗೆ ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪ ಪರಿಮಳ ಮಂಗಳ ವಿಹಾರದಲ್ಲಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ನಿಗಧಿ ಮಾಡುವ ಸಭೆ ನಡೆಯಲಿದೆ. ಜೂ.13 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಎಪಿಸಿಎಂಸಿ ಸಭಾಂಗಣ, ಮಧ್ಯಾಹ್ನ 3 ಗಂಟೆಗೆ…

Read More

ಮಡಿಕೇರಿ ಜೂ.6 :  ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹಾಕತ್ತೂರು ಗ್ರಾ.ಪಂ ಸದಸ್ಯರು ಕಾಂಗ್ರೆಸ್‍ ಪಕ್ಷಕ್ಕೆ ಸೇರ್ಪಡೆಗೊಂಡರು. ಹಾಕತ್ತೂರು ಗ್ರಾ.ಪಂ ವ್ಯಾಪ್ತಿಯ ಉಳಿತ್ತಾಳ್ ವಾರ್ಡಿನ ಸದಸ್ಯರಾದ ಬಿ.ಎಸ್. ಶೀಲಾವತಿ ಮತ್ತು ತೊಂಬತ್ತುಮನೆ ವಾರ್ಡಿನಿಂದ ಆಯ್ಕೆಗೊಂಡಿದ್ದ ಎನ್.ಎಸ್.ಶೈನಿ ಅವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಮತ್ತು ಪಕ್ಷದ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕರ ನಿವಾಸದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಾಕತ್ತೂರು ಗ್ರಾ.ಪಂ ಸದಸ್ಯರನ್ನು ಶಾಸಕರು ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಆತನಾಡಿದ ಎ.ಎಸ್.ಪೊನ್ನಣ್ಣ, ಸರ್ವರಿಗೂ ಸಮಾನ ಸ್ಥಾನಮಾನ ಕೊಡುವುದು ಕಾಂಗ್ರೆಸ್ ಪಕ್ಷದ ಕರ್ತವ್ಯವಾಗಿದೆ. ನಾಡಿನ ಸರ್ವಾಂಗೀಣ ಅಭಿವೃದ್ಧಿ ಮತ್ತು ಭ್ರಷ್ಟಾಚಾರ ರಹಿತವಾಗಿ ಪಾರದರ್ಶಕದೊಂದಿಗೆ ಆಡಳಿತ ನೀಡುವುದು ಮುಖ್ಯ ಎಂದರು. ಪಕ್ಷದ ಸಿದ್ಧಾಂತ ತತ್ವಗಳನ್ನು ಆಧಾರಿಸಿ ಗೌರವಿಸಿ, ನಾಡಿನ ಹಿತ ಚಿಂತನೆಯನ್ನು ಬಯಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಸಂತಸ ತಂದಿದೆ ಎಂದು ತಿಳಿಸಿದರು. ಈ ಸಂದರ್ಭ ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಿರಾಜಪೇಟೆ ಬ್ಲಾಕ್…

Read More

ಮಡಿಕೇರಿ ಜೂ.6 :  ಕೊಡಗು ಜಿಲ್ಲೆ ಸನ್ನದ್ದ ಕಾರ್ಯಕರ್ತರ ಸಂಗಮ ಜಿ ಟೀಮ್ ಕಾರ್ಯಾಗಾರ ನೆಲ್ಯಾಹುದಿಕೇರಿಯ ದಾರುನ್ನಜಾತ್ ಸುನ್ನಿ ಸೆಂಟರಿನಲ್ಲಿ ನಡೆಯಿತು. ಸುನ್ನಿ ವಿದ್ಯಾರ್ಥಿ ಸಂಘಟನೆ ಎಸ್‍ಎಸ್‍ಎಫ್ ನ 50ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ “ನಾವು ಭಾರತೀಯರು ಎಂಬ ಘೋಷಣೆಯೊಂದಿಗೆ ಕರ್ನಾಟಕ ವಿದ್ಯಾರ್ಥಿ ಸಮ್ಮೇಳನ ಗೋಲ್ಡನ್ ಫಿಫ್ಟಿ” ಐತಿಹಾಸಿಕ ಸಮ್ಮೇಳನ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿದ್ದು, ಇದರ ಭಾಗವಾಗಿ ಕಾರ್ಯಾಗಾರ ನಡೆಯಿತು. ಜಿಲ್ಲಾಧ್ಯಕ್ಷರಾದ ಝುಬೈರ್ ಸಅದಿ ಉಸ್ತಾದರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ಹಾಗೂ ಕೇರಳ ರಾಜ್ಯದ ಎಸ್‍ಎಸ್‍ಎಫ್ ಮಾಜಿ ಪ್ರಧಾನ ಕಾರ್ಯದರ್ಶಿ ರಷೀದ್ ಮಾಷ್ಟರ್ ನರಿಕ್ಕೋಡ್ ತರಗತಿ ನಡೆಸಿದರು. ಎಸ್‍ಎಸ್‍ಎಫ್ ಕಳೆದ 50 ವರ್ಷದಲ್ಲಿ ಸಾಗಿ ಬಂದ ಹಾದಿಯನ್ನು ವಿವರಿಸಿದ ರಷೀದ್ ಮಾಸ್ಟರ್ ಗೋಲ್ಡನ್ ಫಿಫ್ಟಿ ಸಮ್ಮೇಳನ ಯಶಸ್ಸಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ನಾಯಕರಾದ ರಷೀದ್ ಮಾಸ್ಟರ್ ಮಡಂತ್ಯಾರ್, ಕಮರುದ್ದೀನ್ ಅನ್ವಾರಿ ಸಖಾಫಿ, ಇಬ್ರಾಹಿಂ ಮಾಸ್ಟರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜುನೈದ್ ಅಮ್ಮತ್ತಿ…

Read More

ಮಡಿಕೇರಿ, ಜೂ.6 :   ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಡಿಕೇರಿ ನಗರದ ಹೊರ ವಲಯದ ಕೊಡಗು ಜಿಲ್ಲಾ ಪಂಚಾಯತ್ ಆವರಣದಲ್ಲಿ ಆರ್ಟಿಫಿಶಿಯಲ್ ರಿಜನರೇಷನ್ ಮಾದರಿಯಲ್ಲಿ ಭೂಕುಸಿತ ಹಾಗೂ ಬರೆ ಕುಸಿಯುವ ಜಾಗದಲ್ಲಿ ಇರುವ ಜಾಗದಲ್ಲಿ ಔಷಧೀಯ ಗುಣ ಹಾಗೂ ಬಹುಪಯೋಗಿ ಹೊಂದಿರುವ ಲಾವಂಚ ( ಕಸ್ಸ್ ಗ್ರಾಸ್ ) ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೆ ಜಿ.ಪಂ ಸಿಇಒ ಡಾ. ಎಸ್.ಆಕಾಶ್  ಚಾಲನೆ ನೀಡಿದರು. ಜಿ.ಪಂ ಕಚೇರಿಯ ಗುಡ್ಡದ ಸುತ್ತಲಿನ ಇಳಿಜಾರು ಪ್ರದೇಶದಲ್ಲಿ 1600 ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಬೆಳೆಸುವ ಉದ್ದೇಶ ಹೊಂದಿರುವ ಸ್ಥಳದಲ್ಲಿ ಅಧಿಕಾರಿಗಳು, ಸ್ವಯಂಸೇವಕರು ಜತೆಗೂಡಿ ಸಸಿನೆಟ್ಟರು. ಈ ಸಂದರ್ಭ ಮಾತನಾಡಿದ ಜಿ.ಪಂ ಸಿಇಓ ಡಾ ಎಸ್.ಆಕಾಶ್, ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಹಸಿರು ಗಿಡ ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು. ನಾವು ಪರಿಸರವನ್ನು ಸಂರಕ್ಷಿಸಿದರೆ, ಪರಿಸರ ನಮ್ಮನ್ನು ಸಂರಕ್ಷಿಸುತ್ತದೆ‌ ಎಂದು ತಿಳಿಸಿದರು. ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್. ಎನ್. ಮೂರ್ತಿ ಮಾತನಾಡಿ,…

Read More

ಮಡಿಕೇರಿ ಜೂ.6 : ವಿರಾಜಪೇಟೆ ವಿಧಾನಸಭಾಕ್ಷೇತ್ರದ ನೂತನ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರನ್ನು ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಅಭಿನಂದಿಸಲಾಯಿತು. ವಿರಾಜಪೇಟೆಯ ನಿವಾಸದಲ್ಲಿ ಭೇಟಿಯಾದ ಅಧ್ಯಕ್ಷ ಬಿ.ಡಿ. ಜಗದೀಶ್‍ರೈ ಮತ್ತು ಪದಾಧಿಕಾರಿಗಳು ಕರಾವಳಿಯ ಕಲೆ ಯಕ್ಷಗಾನ ಕಿರೀಟದ ಪ್ರತಿರೂಪವನ್ನು ನೀಡಿ ಶುಭ ಹಾರೈಸಿದರು. ಸಂಘದ ಪ್ರಮುಖ ಬೇಡಿಕೆಯುಳ್ಳ ಮನವಿ ಪತ್ರವನ್ನು ಶಾಸಕರಿಗೆ ನೀಡಲಾಯಿತು. ಸಮುದಾಯದ ಬೆಳವಣಿಗೆ ಜತೆಗೆಎಲ್ಲಾ ವರ್ಗದವರನ್ನು ಜತೆ ಸೇರಿಸಿಕೊಂಡು ಪಕ್ಷಾತೀತವಾಗಿಕಾರ್ಯ ನಿರ್ವಹಿಸುವಂತೆ ಪೊನ್ನಣ್ಣ ಸಲಹೆ ನೀಡಿದರು. ಜಿಲ್ಲಾ ಸಹಕಾರ್ಯದರ್ಶಿ ಮನೋಜ್ ಶೆಟ್ಟಿ, ನಿರ್ದೇಶಕರಾದ ಬಾಲಕೃಷ್ಣ (ಅಪ್ಪು) ರೈ, ಸತೀಶ್‍ರೈ ಫಾರೆಸ್ಟ್ ವ್ಯಾಲಿ, ಪ್ರಭುರೈ, ವಿರಾಜಪೇಟೆತಾಲೂಕುಅಧ್ಯಕ್ಷ ಲೀಲಾಧರರೈ ನೀಲುಮಾಡು, ಉಪಾಧ್ಯಕ್ಷ ಪ್ರಕಾಶ್‍ರೈ, ಕಾರ್ಯದರ್ಶಿ ಸಂಪತ್‍ಕುಮಾರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ನೀತರೈ, ಸದಸ್ಯರಾದಜಗನ್ನಾಥರೈ ಈ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ಜೂ.6 : ಆಧುನೀಕರಣ ಪ್ರಕ್ರಿಯೆಯತ್ತ ಕೊಡಗು ಜಿಲ್ಲಾ ಕೃಷಿ ಇಲಾಖೆ ದಾಪುಗಾಲಿಟ್ಟಿದ್ದು, ಜಿಲ್ಲೆಯ ರೈತ ಸಮುದಾಯ ಇದರ ಸದುಪಯೋಗ ಪಡೆಯುವುದರೊಂದಿಗೆ ಯಾಂತ್ರೀಕೃತ ಕೃಷಿಯತ್ತ ಹೆಚ್ಚಿನ ಒಲವು ತೋರಬೇಕೆಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ. ಶೇಖ್ ಕರೆ ನೀಡಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಕುಶಾಲನಗರ ರೈತ ಸಂಪರ್ಕ ಕೇಂದ್ರದಲ್ಲಿ ಮಂಗಳವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕೊಡಗು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಇಲ್ಲಿ ಎಲ್ಲ ರೀತಿಯ ಬೆಳೆಗಳನ್ನು ಲಾಭದಾಯಕವಾಗಿ ಬೆಳೆಯಲು ಸಾಧ್ಯವಿಲ್ಲ. ಭತ್ತದ ಕೃಷಿಯು ಲಾಭದಾಯಕವಲ್ಲ. ವನ್ಯ ಪ್ರಾಣಿಗಳ ಉಪಟಳ, ಕಾರ್ಮಿಕರ ಸಮಸ್ಯೆಯಿಂದಾಗಿ ಭತ್ತದ ಕೃಷಿ ಕೊಡಗಿನಲ್ಲಿ ಹಿನ್ನೆಡೆ ಕಂಡಿದೆ ಎಂದು ಅವರು ವಿಷಾದಿಸಿದರು. ಒಂದು ಕಾಲದಲ್ಲಿ ಜಿಲ್ಲೆಯಲ್ಲಿ 40 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದ್ದು, ಪ್ರಸ್ತುತ 28 ಸಾವಿರ ಹೆಕ್ಟೇರ್ ಕಡಿಮೆ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಆದರೆ ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ಬರುವಂತಹ ತಳಿಗಳನ್ನು ಉಪಯೋಗಿಸಿ ಅದರೊಂದಿಗೆ ಶೇ.90ರಷ್ಟು…

Read More