ಮಡಿಕೇರಿ ಜೂ.6 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜೂ.14 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಹಾಗೂ ಜೂ.16 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿಗಳಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಜೂ.6 : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ.ರವರ ಕೋರಿಕೆಯಂತೆ ಜೂ.7 ರಂದು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ 220 ಕೆ.ವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, 66/11 ಕೆವಿ ಆಲೂರು ಸಿದ್ದಾಪುರ, 66/11 ಕೆವಿ ಸುಂಟಿಕೊಪ್ಪ, 66/11 ಕೆವಿ ಮಡಿಕೇರಿ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ ಅಬ್ಬೂರುಕಟ್ಟೆ, ಐಗೂರು, ಹೊಸಗುತ್ತಿ, ಗಣಗೂರು, ಗೋಣಿಮರೂರು, ಆಲೂರು ಸಿದ್ದಾಪುರ, ಮಾಲಂಬಿ, ಸಿದ್ದಲಿಂಗಪುರ, ಮಡಿಕೇರಿ ಪಟ್ಟಣ, ಬೋಯಿಕೇರಿ ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕರ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಜೂ.6 : ಜೂನ್ ಎರಡನೇ ವಾರದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ರೈತರ ಬೇಡಿಕೆಗೆ ತಕ್ಕಂತೆ ರಸಗೊಬ್ಬರ ಪೂರೈಸುವಂತೆ ಸಂಬಂಧಪಟ್ಟವರಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ. ರಸಗೊಬ್ಬರ ಪೂರೈಕೆದಾರರು, ವಿತರಕರು ಹಾಗೂ ಇತರರ ಜೊತೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಸಗೊಬ್ಬರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಯೂರಿಯಾ, ಡಿಎಪಿ ಮತ್ತು ಎಂಒಪಿ ರಸಗೊಬ್ಬರಕ್ಕೆ ಬೇಡಿಕೆ ಇದೆ. ಆ ನಿಟ್ಟಿನಲ್ಲಿ ಬೇಡಿಕೆಗೆ ತಕ್ಕಂತೆ ದಾಸ್ತಾನು ಮಾಡಿಕೊಳ್ಳಬೇಕು. ಜೊತೆಗೆ ಮಣ್ಣು ಆರೋಗ್ಯ ನೋಡಿಕೊಂಡು ಕಾಂಪ್ಲೆಕ್ಸ್ ರಸಗೊಬ್ಬರವನ್ನು ಬಳಸುವಂತಾಗಲು ರೈತರಿಗೆ ಮನವರಿಕೆ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ಕೃಷಿ, ತೋಟಗಾರಿಕೆ, ಕಾಫಿ ಮಂಡಳಿ, ಸಾಂಬಾರ ಮಂಡಳಿ ಇವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೃಷಿಕರು ಯಾವ ಯಾವ ರೀತಿಯ ರಸಗೊಬ್ಬರವನ್ನು ಬಳಸಬೇಕು ಎಂಬ ಬಗ್ಗೆ ಮಣ್ಣು ಆರೋಗ್ಯ ಚೀಟಿಯನ್ನು ನೋಡಿ ರಸಗೊಬ್ಬರ ಬಳಕೆ ಬಗ್ಗೆ ಸಲಹೆ ಮಾಡುವಂತಾಗಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ…
ಮಡಿಕೇರಿ ಜೂ.6 : ಪರಿಸರ ಅಸಮತೋಲನದಿಂದ ಇತ್ತೀಚಿನ ವರ್ಷಗಳಲ್ಲಿ ಎರಡರಿಂದ ಎರಡೂವರೆ ಡಿಗ್ರಿ ಉಷ್ಟಾಂಶ ಹೆಚ್ಚಾಗುತ್ತಿದೆ ಎಂದು ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್.ಮೂರ್ತಿ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ರಾಷ್ಟ್ರೀಯ ಹಸಿರು ಪಡೆ, ಕೊಡಗು ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ನೂತನ ನ್ಯಾಯಾಲಯ ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಅರಣ್ಯ ಮತ್ತು ವನ್ಯ ಸಂಪತ್ತು ಸಂರಕ್ಷಣೆ ಮಾಡಿದ್ದಲ್ಲಿ, ಪರಿಸರ ಸಮತೋಲನ ಕಾಣಲು ಸಾಧ್ಯ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರತಿಪಾದಿಸಿದರು. ವಿಶ್ವದಲ್ಲಿ 400 ರಿಂದ 500 ಮಿಲಿಯನ್ ಮೆಟ್ರಿಕ್ ಟನ್ ನಷ್ಟು ಪ್ಲಾಸ್ಟಿಕ್‍ನ್ನು ಬಳಕೆ ಮಾಡಲಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ,…
ವಿರಾಜಪೇಟೆ ಜೂ.6 : ಕೋಟೆಕೊಪ್ಪ ಗ್ರಾಮದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗ್ರಾಮದ ಯುವಕರು ಗಿಡಗಳನ್ನು ನೆಟ್ಟು ಆ ಗಿಡಗಳನ್ನು ದತ್ತು ಪಡೆದು ಪೋಷಣೆ ಮಾಡುವ ಜವಾಬ್ದಾರಿಯನ್ನು ಹೊತ್ತು ಸಮಾಜಕ್ಕೆ ಕೊಡುಗೆಯಾಗಿ ನೀಡುವ ಸಂಕಲ್ಪವನ್ನು ಮಾಡುವುದರ ಮೂಲಕ ವಿನೂತನವಾಗಿ ಪರಿಸರ ದಿನಾಚರಣೆಯನ್ನು ಆಚರಿಸಿದರು. ಈ ಸಂದರ್ಭ ಶಿಕ್ಷಕರಾದ ವಿ.ಆರ್.ಸಂದೀಪ್ ಮಾತನಾಡಿ, ಮಾನವನ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಆದ್ದರಿಂದ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ಪಾಲ್ಗೊಂಡು ಮುಂದಿನ ಪೀಳಿಗೆಗೆ ಪರಿಸರವನ್ನು ಕೊಡುಗೆಯಾಗಿ ನೀಡಬೇಕೆಂದು ಸಲಹೆ ನೀಡಿದರು. ಗ್ರಾಮದ ಬೈತೂರೇಶ್ವರ ದೇವಸ್ಥಾನದ ಅಧ್ಯಕ್ಷರಾದ ವಿ.ಎಂ.ಶಿವರಾಜ್ ಮಾತನಾಡಿ, ಜನರು ಪರಿಸರಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಇದಕ್ಕೆ ಜನರ ಸಹಕಾರ ಅತೀ ಮುಖ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ದೇವಸ್ಥಾನದ ಸದಸ್ಯರಾದ ವಿ.ಎನ್.ಗೋಪಿ, ವಿ. ಆರ್. ವಿಕಾಸ್, ವಿ.ಎಸ್.ಪ್ರಸನ್ನ, ವಿ.ಎಲ್. ಕಾರ್ತಿಕ್ ಮತ್ತು ಗ್ರಾಮದ ಪ್ರಮುಖರು ಪಾಲ್ಗೊಂಡಿದ್ದರು.
ಮಡಿಕೇರಿ ಜೂ.6 : ಕಂಡಕರೆ ಗಾಂಧಿ ಯುವಕ ಸಂಘದ ವತಿಯಿಂದ ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಲೆಯ ದೈಹಿಕ ಶಿಕ್ಷಕ ಎಚ್. ದಿನಕರ್ ಶೆಟ್ಟಿ, ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ. ಪರಿಸರವನ್ನು ಉಳಿಸಿದರೆ ಮಾತ್ರ ನಮಗೆ ಆರೋಗ್ಯವಾದ ಜೀವನ ನಡೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಗಾಂಧಿ ಯುವಕ ಸಂಘದ ಅಧ್ಯಕ್ಷ ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಮಾತನಾಡಿ, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಕನಿಷ್ಠ ಒಂದು ಗಿಡವನ್ನು ನೆಟ್ಟು ಬೆಳೆಸಬೇಕಾಗಿದೆ. ನಶಿಸಿ ಹೋಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿರುವುದು ಎಲ್ಲರ ಜವಬ್ದಾರಿಯಾಗಿದೆ. ಶಾಲೆಯ ಪರಿಸರವನ್ನು ಶುಚಿತ್ವದಿಂಡುವುದು ವಿದ್ಯಾರ್ಥಿಗಳು ಕರ್ತವ್ಯವಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ನೆನಪಿಗಾಗಿ ಗಿಡವನ್ನು ನೆಟ್ಟು ಬೆಳೆಸಬೇಕು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸಿ, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಗಾಂಧಿ ಯುವಕ ಸಂಘದಿಂದ ಪರಿಸರದ…
ವಿರಾಜಪೇಟೆ ಜೂ.6 : ನಗರದ ಮದರ್ ತೆರೇಸಾ ಸೇವಾ ಕೇಂದ್ರ ವತಿಯಿಂದ ವಿರಾಜಪೇಟೆಯ ಸಂತ ಅನ್ನಮ್ಮ ಧರ್ಮ ಕೇಂದ್ರದ ಆಯ್ದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಂದನೀಯ ಗುರು ಐಸಾಕ್ ರತ್ನಾಕರ್, ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಶಿಕ್ಷಣವನ್ನು ಪಡೆದುಕೊಂಡು ಉತ್ತಮ ಅಂಕಗಳನ್ನ ಪಡೆಯುವಂತೆ ನುಡಿದರಲ್ಲದೆ ಮದರ್ ತೆರೇಸಾ ಸೇವಾಕೇಂದ್ರದ ಸೇವಾ ಕಾರ್ಯಗಳನ್ನ ಶ್ಲಾಘೀಸಿದರಲ್ಲದೇ, ರೂ.10,000 ದೇಣಿಗೆಯನ್ನು ನೀಡಿದರು. ವಂದನೀಯ ಗುರು ಯೇಸು ಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಹಿತನುಡಿಗಳನ್ನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಿ.ಎಸ್ ಮಚ್ಚಾಡೊ, ಸಂಸ್ಥೆ ವತಿಯಿಂದ ಆಯ್ದ ಕೆಲವು ವಿದ್ಯಾರ್ಥಿಗಳಿಗೆ ಉಚಿತವಾಗಿ ವಿದ್ಯಾರ್ಜನೆಗೆ ಪುಸ್ತಕ ಹಾಗೂ ಇತರ ಸಾಮಾಗ್ರಿಗಳನ್ನು ವಿತರಿಸಲಾಗುತ್ತಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡಿ ಶಾಲೆಗೂ, ಪೋಷಕರಿಗೆ ಕೀರ್ತಿ ತರುವಂತಾಗಬೇಕು. ಮುಂದಿನ ದಿನಗಳಲ್ಲಿ ಸಂಸ್ಥೆ ವತಿಯಿಂದ ಸಾದ್ಯವಾದ ಮಟ್ಟಿಗೆ ಸಾಮಾಜಿಕ ಸೇವೆಯನ್ನು ನಡೆಸಿಕೊಂಡು ಬರಲಾಗುವುದು. ಪ್ರತಿಯೋರ್ವ ವಿದ್ಯಾರ್ಥಿಗಳಿಗೆ ವಿದ್ಯೇಯೊಂದಿಗೆ ವಿನಯವೂ ಮುಖ್ಯ.…
ಮಡಿಕೇರಿ ಜೂ.6 : ಕರಿಕೆ ಅರಣ್ಯಾಧಿಕಾರಿಗಳು ಮತ್ತು ಸಾರ್ವಜನಿಕರು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಅರಣ್ಯದಲ್ಲಿ ಗಿಡಗಳನ್ನು ನೆಟ್ಟು ಪರಿಸರದ ಕುರಿತು ಜಾಗೃತಿ ಮೂಡಿದರು.
ಮಡಿಕೇರಿ ಜೂ.6 : ಕೊಡಗು ವಿಶ್ವ ವಿದ್ಯಾಲಯದ ಸಮಾಜ ಕಾರ್ಯ ಅಧ್ಯಯನ ವಿಭಾಗದ ವತಿಯಿಂದ ಪೊನ್ನಂಪೇಟೆ ತಾಲ್ಲೂಕಿನ ಕೋತೂರು ಆಶ್ರಮ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಗ್ರಾಮೀಣ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗಿದೆ. ಏಳು ದಿನಗಳವರೆಗೆ ನಡೆಯಲಿರುವ ಶಿಬಿರದ ಅಂಗವಾಗಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂ. ಆಲೂರ ಸಮಾಜ ಕಾರ್ಯ ಪ್ರಶಿಕ್ಷಣಾರ್ಥಿಗಳು ಹಾಗೂ ಉಪನ್ಯಾಸಕರುಗಳನ್ನು ವಿಶ್ವವಿದ್ಯಾಲಯದ ಆವರಣದಿಂದ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ. ಸಿನಪ್ಪ ಹಾಜರಿದ್ದರು.
ಮಡಿಕೇರಿ ಜೂ.6 : ನಗರದ ಹಿಲ್ ರಸ್ತೆಯಲ್ಲಿರುವ ಕಿಂಗ್ಸ್ ಆಫ್ ಕೂರ್ಗ್ ನೃತ್ಯ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಹಾಗೂ ಛದ್ಮವೇಶ ಸ್ಪರ್ಧೆ ನಡೆಯಿತು. ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಕ್ತಿ ದಿನಪತ್ರಿಕೆ ಉಪ ಸಂಪಾದಕ ಕುಡೆಕಲ್ ಸಂತೋಷ್ ಮಾತನಾಡಿ ರಜಾ ದಿನಗಳಲ್ಲಿ ಮಕ್ಕಳು ಕಾಲಹರಣ ಮಾಡುವದಕ್ಕಿಂತ ಇಂತಹ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿ ಪಠ್ಯೇತರ ಚಟುವಟಿಕೆಗಳಲ್ಲೂ ತಲ್ಲೀನರಾಗಬೇಕು. ಇದು ಮುಂದಕ್ಕೆ ಸಮಾಜದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಪೋಷಕರು ಕೂಡ ಮಕ್ಕಳ ಆಸಕ್ತಿಗೆ ತಕ್ಕ ಹಾಗೆ ಪ್ರೋತ್ಸಾಹ ನೀಡಬೇಕೆಂದು ಹೇಳಿದರು. ಇದೇ ಸಂದರ್ಭದಲ್ಲಿ ಛದ್ಮವೇಶ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಭಾಗವಹಿಸಿದವರೆಲ್ಲರಿಗೂ ಪ್ರಶಂಸನಾ ಪತ್ರ, ಪಾರಿತೋಷಕ ನೀಡಲಾಯಿತು. ತಿರ್ಪುಗಾರರಾಗಿ ಕುಡೆಕಲ್ ಸವಿತಾ ಸಂತೋಷ್ ಹಾಗೂ ಕಿಂಗ್ಸ್ ಆಫ್ ಕೂರ್ಗ್ನ ನೃತ್ಯ ತರಬೇತುದಾರ ಕಿರಣ್ ಕಾರ್ಯನಿರ್ವಹಿಸಿದರು. ಕಿಂಗ್ಸ್ ನೃತ್ಯ ಸಂಯೋಜಕ ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಕ್ಕಳು, ಪೋಷಕರು ಪಾಲ್ಗೊಂಡಿದ್ದರು.






