ಮಡಿಕೇರಿ ಜೂ.3 : ಕೊಡಗಿನ ಮೂಲಭೂತ ಸಮಸ್ಯೆಗಳ ಬಗೆಹರಿಕೆಗೆ ಅಗತ್ಯವಾದ ‘ಸಚಿವ’ ಸ್ಥಾನ ಜಿಲ್ಲೆಯ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ಅವರಿಗೆ ಕೈತಪ್ಪಿರುವುದು ಜಿಲ್ಲೆಯ ಕಾಂಗ್ರೆಸ್ ಪ್ರಮುಖರು ಮತ್ತು ಕಾರ್ಯಕರ್ತರಿಗೆ ಅತೀವ ನೋವನ್ನು ಉಂಟುಮಾಡಿದೆಯೆಂದು ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎರಡು ಕ್ಷೇತ್ರಗಳ ಚುನಾವಣೆಯ ಹಂತದಲ್ಲಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವ ಕುಮಾರ್ ಅವರು, ಕೊಡಗಿನಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಪಡೆದುಕೊಂಡಲ್ಲಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಇಂದು ಅವರ ಭರವಸೆ ಈಡೇರಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಪ್ರಸ್ತುತ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರನ್ನು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ ನಿಯುಕ್ತಿಗೊಳಿಸಿ, ಕ್ಯಾಬಿನೆಟ್ ಸಚಿವ ಸ್ಥಾನದ ಎಲ್ಲಾ ಸೌಲಭ್ಯಗಳನ್ನು ನೀಡಲಾಗಿದೆ. ಇದು ಸಂತಸವನ್ನು ಉಂಟುಮಾಡಿದೆಯಾದರು, ಕೊಡಗಿನ ಮೂಲಭೂತ ಸಮಸ್ಯೆಗಳನ್ನು ಸಚಿವ ಸಂಪುಟದ ಮುಂದಿಟ್ಟು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಸಚಿವ ಸ್ಥಾನದ ಅಗತ್ಯವಿದೆಯೆಂದು ಒತ್ತಿ ನುಡಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೊಡಗು ಭೌಗೋಳಿಕವಾಗಿ ಮತ್ತು ಸಾಂಸ್ಕøತಿಕವಾಗಿ ಇತರೆ…
ಲೇಖಕ: admin
ಮಡಿಕೇರಿ ಜೂ.3 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜೂ.5 ರಂದು ಬೆಳಗ್ಗೆ 10 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವು ನೂತನ ನ್ಯಾಯಾಲಯ ಆವರಣದಲ್ಲಿ ನಡೆಯಲಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಡಿ.ಟಿ ಪುಟ್ಟರಂಗಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಕೆ.ಬಿ.ಪ್ರಸಾದ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್.ಮೂರ್ತಿ, ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ…
ಮಡಿಕೇರಿ ಜೂ 3 : ಹತ್ತು ಹೆಚ್‍ಪಿ ಗಿಂತ ಹೆಚ್ಚುವರಿ ವಿದ್ಯುತ್ ಸಂಪರ್ಕ ಹೊಂದಿರುವ ಕಾಫಿ ಬೆಳೆಗಾರರ ವಿದ್ಯುತ್ ಸ್ಥಾವರಗಳಲ್ಲಿ ಬಾಕಿ ಕಂದಾಯ ಉಳಿಸಿಕೊಂಡಿರುವುದಕ್ಕೆ ಈಗಾಗಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಸೂಚನೆ ನೀಡಲಾಗಿದೆ. ಬಾಕಿ ಕಂದಾಯ ಮೊತ್ತವನ್ನು ಮುಂದಿನ ಒಂದು ವಾರದ ಅವದಿಯೊಳಗೆ ಪೂರ್ಣ ಪ್ರಮಾಣದಲ್ಲಿ ಹತ್ತಿರದ ಚಾ,ವಿ,ಸ,ನಿ,ನಿ ಕಂದಾಯ ಶಾಖೆಗೆ ಪಾವತಿಸಲು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಮುಂದುವರಿದು ನಿಗದಿತ ಅವದಿಯೊಳಗೆ ಬಾಕಿ ಕಂದಾಯವನ್ನು ಪಾವತಿಸದಿದ್ದಲ್ಲಿ ಕ್ಲಬ್ಬಿಂಗ್ ನೋಟಿಸ್ ನೀಡಲಾಗಿರುವ ವಿದ್ಯುತ್ ಸ್ಥಾವರಗಳ ವಿದ್ಯುತ್ ನಿಲುಗಡೆಗೊಳಿಸಲಾಗುವುದರಿಂದ, ಇಂತಹ ಘಟನೆಗಳಿಗೆ ಅವಕಾಶ ನೀಡದೆ ಕೂಡಲೇ ಬಾಕಿ ಮೊತ್ತವನ್ನು ಪಾವತಿಸುವಂತೆ ಸೆಸ್ಕ್ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಜೂ. 3 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಾಚರಣೆಯಲ್ಲಿರುವ 100 ಸಂಖ್ಯಾಬಲವುಳ್ಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಮಡಿಕೇರಿಯಲ್ಲಿ ವಿದ್ಯಾರ್ಥಿಗಳು ವಾಸಕ್ಕೆ ಸೂಕ್ತ ಮೂಲಭೂತ ಸೌಕರ್ಯವುಳ್ಳ ನೀರಿನ ವ್ಯವಸ್ಥೆ, ವಿದ್ಯುತ್, ಕಾಂಪೌಂಡು, ಶೌಚಾಲಯ, ಸ್ನಾನದ ಗೃಹಗಳ ವ್ಯವಸ್ಥೆ ಹೊಂದಿದ್ದು, ಕಟ್ಟಡಕ್ಕೆ ಸಂಬಂಧಿಸಿದಂತೆ ಮೂಲ ದಾಖಲೆಗಳಿರುವ ಸೂಕ್ತ ಕಟ್ಟಡ ಅಥವಾ ಮನೆ ಕೂಡಲೇ ಬಾಡಿಗೆಗೆ ಬೇಕಿದೆ. ಸಂಪರ್ಕಿಸಬೇಕಾದ ದೂರಾವಾಣಿ ಸಂಖ್ಯೆ: 8105240463/ 9972995632/ 8762476790 ಸಂಖ್ಯೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ.
ಮಡಿಕೇರಿ ಜೂ.3 : 2023-24 ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,2 ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ. 1 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.44,500 ಆಗಿದೆ. ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ID ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.inನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 15 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ,…
ಮಡಿಕೇರಿ ಜೂ.3 : ಪ್ರಸಕ್ತ ವರ್ಷದಲ್ಲಿ ಪ್ರಾಕೃತಿಕ ವಿಕೋಪ ಘಟನೆಗಳು ವರದಿಯಾದಲ್ಲಿ, ಕಾರ್ಯಾಚರಣೆ ನಡೆಸಲು ಅಗತ್ಯವಾದ ವಾಹನಗಳನ್ನು ಇಲಾಖಾ ವ್ಯಾಪ್ತಿಯಲ್ಲಿ ಸನ್ನದ್ದವಾಗಿರಿಸಲು ಹಾಗೂ ಈ ವಾಹನಗಳಿಗೆ ಬಾಡಿಗೆ ದರ ನಿಗದಿಪಡಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅಧ್ಯಕ್ಷತೆಯಲ್ಲಿ ನಿರ್ಧರಿಸಲಾಗಿದೆ. ಅದರಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಅವರು ಅಗತ್ಯ ವಾಹನಗಳ ಮಾಲೀಕರೊಂದಿಗೆ ಚರ್ಚಿಸಿ ಅವುಗಳ ಬಾಡಿಗೆ ದರವನ್ನು ನಿಗದಿಪಡಿಸಿದ್ದಾರೆ. ವರ್ಗ-1 ಜೀಪ್ ಒಂದು ದಿನಕ್ಕೆ ರೂ 3,750, ವರ್ಗ-2 ಜೆ.ಸಿ.ಬಿ ಒಂದು ಗಂಟೆಗೆ ರೂ.950 ಹಾಗೂ ಒಂದು ದಿನಕ್ಕೆ ರೂ.7000, ವರ್ಗ-3 ಹಿಟಾಚಿ (ಶಿಪ್ಟಿಂಗ್ ಒನ್ ಸೈಡ್) ರೂ.7000 ಹಿಟಾಚಿ ಇಘಿ70 ಒಂದು ಗಂಟೆಗೆ ರೂ.1100 ಹಿಟಾಚಿ ಇಘಿ110 ಒಂದು ಗಂಟೆಗೆ ರೂ.1350 ಹಿಟಾಚಿ ಇಘಿ140 ಒಂದು ಗಂಟೆಗೆ ರೂ.1700 ವರ್ಗ-4 ಕ್ರೇನ್ ( 101 ಕೆಪಾಸಿಟಿ) ಒಂದು ಗಂಟೆಗೆ ರೂ. 1000 ಕ್ರೇನ್ (151 ಕೆಪಾಸಿಟಿ) ಒಂದು ಗಂಟೆಗೆ ರೂ.1100 ಕ್ರೇನ್…
ಮಡಿಕೇರಿ ಜೂ.3 : ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅಧ್ಯಕ್ಷತೆಯಲ್ಲಿ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ನಡೆಯಿತು. ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡುವಂತಾಗಲು ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ “ಬಾರ್‍ಕೋಡ್ ಸ್ಕ್ಯಾನರ್” ಫಲಕವನ್ನು ರಾಜಾಸೀಟು, ರಾಜರ ಗದ್ದುಗೆ, ನಗರದ ಕೋಟೆ, ಓಂಕಾರೇಶ್ವರ ದೇವಾಲಯ, ನಿಸರ್ಗಧಾಮ, ದುಬಾರೆ ಮತ್ತಿತರ ಪ್ರಮುಖ ಸ್ಥಳಗಳಲ್ಲಿ ಅಳವಡಿಸುವಂತೆ ನಿರ್ಮಿತಿ ಕೇಂದ್ರದ ಎಂಜಿನಿಯರಿಗೆ ಸೂಚಿಸಿದರು. “ಬಾರ್‍ಕೋಡ್ ಸ್ಕ್ಯಾನರ್” ಫಲಕ ಅಳವಡಿಸುವುದಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಹಣ ಭರಿಸಲಾಗುವುದು. ಈ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ನಿರ್ಮಿತಿ ಕೇಂದ್ರದ ಎಂಜಿನಿಯರ್‍ಗೆ ತಿಳಿಸಿದರು. ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದ್ದರಿಂದ ವಾರದ ಎಲ್ಲಾ ದಿನಗಳಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ತೆರೆಯುವಂತಾಗಬೇಕು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಲಹೆ ಮಾಡಿದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿ ಮತ್ತಷ್ಟು ಆಕರ್ಷಣಿಯಗೊಳಿಸುವ ನಿಟ್ಟಿನಲ್ಲಿ ವಿವಿಧ…
ಮಡಿಕೇರಿ ಜೂ.3 : ಕೊಡಗು ಜಿಲ್ಲೆಯಲ್ಲಿ ಕನಸಾಗಿಯೇ ಉಳಿದಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಜಿಲ್ಲೆಯ ರೈತರ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಕೊಡವ ರೈಡರ್ಸ್ ಕ್ಲಬ್ ಒತ್ತಾಯಿಸಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ನೇಮಕಗೊಂಡು, ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದಿರುವ ಅಜ್ಜಿಕುಟ್ಟೀರ ಎಸ್ ಪೊನ್ನಣ್ಣ ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿಯಾದ ಕೊಡವ ರೈಡರ್ಸ್ ಕ್ಲಬ್ ಪ್ರಮುಖರು ಸಂಸ್ಥೆಯ ಪರವಾಗಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ನಂತರ ಜಿಲ್ಲಾಯ ಸಮಸ್ಯೆಗಳ ಬಗ್ಗೆ ಗಮನ ಸೆಳೆದ ಕ್ಲಬ್‍ನ ಪ್ರಮುಖರು ಕೊಡಗು ಜಿಲ್ಲೆಯಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ತಕ್ಷಣವೇ ತೆರೆದು ಜಿಲ್ಲೆಯ ಜನರ ಪ್ರಾಣ ರಕ್ಷಣೆ ಮುಂದಾಗಬೇಕೆಂದು ಮನವಿ ಮಾಡಿದರು. ಕೊಡಗಿನ ಪ್ರಮುಖ ಬೆಳೆಗಳಾದ ಭತ್ತ, ಕಾಫಿ ಹಾಗೂ ಕರಿಮೆಣಸಿನ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ಸರ್ಕಾರಕ್ಕೆ ಒತ್ತಾಯ ಹೇರಬೇಕು ಎಂಬ ಮನವಿ ಸಲ್ಲಿಸಿದರು. ಈ ಸಂದರ್ಭ ಕ್ಲಬ್ ನ…
ಮಡಿಕೇರಿ ಜೂ.3 : ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗ್ರೀನ್ ಸಿಟಿ ಫೋರಂ ಹಾಗೂ ಮಡಿಕೇರಿ ನಗರಸಭೆಯ ಸಂಯುಕ್ತಶ್ರಯದಲ್ಲಿ ಜೂ.5 ರಂದು ಉಚಿತವಾಗಿ ಗಿಡಗಳನ್ನು ವಿತರಿಸಲಾಗುವುದು. ಅಂದು ಬೆಳಿಗ್ಗೆ 8 ಗಂಟೆಗೆ ನಗರಸಭೆಯ ಆವರಣದಲ್ಲಿ ಗಿಡಗಳನ್ನು ವಿತರಣೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ 8147159011, 7022058953 ಸಂಪರ್ಕಿಸಬಹುದಾಗಿದೆ ಎಂದು ಫೋರಂ ಅಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ ತಿಳಿಸಿದ್ದಾರೆ.
ಮಡಿಕೇರಿ ಜೂ.3 : ಕಾಫಿ ತೋಟಕ್ಕೆ ಆಹಾರವರಸಿ ದಾಳಿ ಮಾಡಿದ್ದ ಕಾಡಾನೆಯೊಂದು ಕೆರೆಯ ಕೆಸರಿನಲ್ಲಿ ಸಿಲುಕಿಕೊಂಡು ಪರದಾಡಿ, ಅರಣ್ಯ ಇಲಾಖೆಯ ಕಾರ್ಯಾಚರಣೆಯ ಮೂಲಕ ಹೊರಬಂದ ಘಟನೆ ವಿರಾಜಪೇಟೆ ತಾಲ್ಲೂಕಿನ ಕರಡ ಗ್ರಾಮದಲ್ಲಿ ನಡೆದಿದೆ. ನರಿಯಂದಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರಡ ಗ್ರಾಮದ ನಡಿಕೇರಿಯಂಡ ಅಯ್ಯಣ್ಣ ಎಂಬವರ ಕಾಫಿ ತೋಟಕ್ಕೆ ಶುಕ್ರವಾರ ರಾತ್ರಿ ಕಾಡಾನೆಗಳ ಹಿಂಡು ಸಹಿತ ದಾಳಿ ಇಟ್ಟಿದ್ದವು. ನೀರು ಕುಡಿಯುವ ಭರದಲ್ಲಿ ಕೆರೆಯಲ್ಲಿ ಮಾಲ್ಕಕ್ಕೂ ಹೆಚ್ಚಿನ ಕಾಡಾನೆಗಳು ಸಿಲುಕಿ ಕೊಂಡಿದ್ದವು. ಇತರ ಆನೆಗಳು ಹರ ಸಾಹಸ ಪಟ್ಟು ಕೆರೆಯಿಂದ ಹೊರ ಬರುವಲ್ಲಿ ಯಶಸ್ವಿಯಾಗಿದ್ದರೆ, ಒಂದು ಕಾಡಾನೆಗೆ ಮಾತ್ರ ಕೆರೆಯಿಂದ ಹೊರ ಬರಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ತೋಟ ಮಾಲೀಕರು ಮಾಹಿತಿ ನೀಡಿದ ಮೇರೆ ವಿರಾಜಪೇಟೆ ಅರಣ್ಯ ವಲಯದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಕೆರೆಯ ಒಂದು ಭಾಗವನ್ನು ಅಗೆದು, ಮರದ ದಿಮ್ಮಿಗಳನ್ನು ಜೋಡಿಸಿ, ಕಾಡಾನೆ ಕೆರೆಯಿಂದ ಹೊರ ಬರುವುದಕ್ಕೆ ಅನುವು ಮಾಡಿಕೊಟ್ಟರು. ಇಲಾಖಾ ಸಿಬ್ಬಂದಿಗಳ ಮೂರು ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ…






