ಲೇಖಕ: admin

ಮಡಿಕೇರಿ ಜೂ.3 : 2022-23ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‍ಎಸ್‍ಎಲ್‍ಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಕರಿಕೆ ಸರಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕ ಮತ್ತು ಸಾಕ್ಷರತಾ ಇಲಾಖೆ, ಕೊಡಗು ಜಿ.ಪಂ ಹಾಗೂ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಕೆ.ಎಂ.ನಿನ್ನು ಮೋಳ್ (595), ಕೆ.ವಿ.ಜೋತ್ಸ್ನಾ (564), ಕೆ.ಆರ್.ಗೌತಮಿ (558), ಎಂ.ಆರ್.ಗೋಪಿಕಾ (548) ಅಭಿನಂದನೆಗೆ ಭಾಜನರಾದರು. ಈ ಸಂದರ್ಭ ಕರಿಕೆ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಎಸ್.ಡಿ.ಎಂ.ಸಿ ಪೋಷಕರು ಹಾಗೂ ಸಾರ್ವಜನಿಕರು ಹಾಜರಿದ್ದರು.

Read More

ಬೆಂಗಳೂರು :  ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ಅಗತ್ಯ ನೆರವು ನೀಡಲು ಹಾಗೂ ಸುರಕ್ಷತೆಯ ಮಾಹಿತಿ ಒದಗಿಸಲು ರಾಜ್ಯ ತುರ್ತು ನಿರ್ವಹಣಾ ಕೇಂದ್ರ (SEOC)ದಲ್ಲಿ ನಾಗರೀಕರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ. ದೂರವಾಣಿ ಸಂಖ್ಯೆ: 1070, 080-22253707, 080-22340676 ಕ್ಕೆ ಕರೆಮಾಡಿ ಮಾಹಿತಿ ಅಥವಾ ನೆರವು ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Read More

ಬೆಂಗಳೂರು :  ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅವರಿಗೆ ಅಗತ್ಯ ನೆರವನ್ನು ಒದಗಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ಸಂಪೂರ್ಣ ನೆರವು ನೀಡಲಾಗುವುದು. “ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ” ವಿದೆ ಎಂದರು.   

Read More

ನಾಪೋಕ್ಲು ಜೂ.3 :    ಅಕ್ರಮವಾಗಿ ಕಾಡುಕೋಣ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ. ನಾಪೋಕ್ಲು ಸಮೀಪದ ಕಕ್ಕಬ್ಬೆ ಕುಂಜಿಲ ಗ್ರಾಮದಿಂದ ಮದ್ಯರಾತ್ರಿ ಕೇರಳ ರಾಜ್ಯದ ನೊಂದಣಿ ಹೊಂದಿರುವ  ಕಾರಿನಲ್ಲಿ ಅಕ್ರಮವಾಗಿ ಕಾಡುಕೋಣ ಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ನಾಪೋಕ್ಲು ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ವಾಹನದೊಂದಿಗೆ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಸೆರೆ ಹಿಡಿಯಲು  ಬೆನ್ನಟ್ಟಿದ ನಾಪೋಕ್ಲು ಪೊಲೀಸರು ಮಡಿಕೇರಿ ಗ್ರಾಮಾಂತರ ಪೋಲೀಸರ ಸಹಕಾರದೊಂದಿಗೆ ಮಡಿಕೇರಿ ಸಮೀಪದ ಮೇಕೇರಿ ಸುಭಾಷ್ ನಗರ ಗ್ರಾಮದ ರಸ್ತೆಯಲ್ಲಿ ಸಂಚರಿಸುವಾಗ ಆರೋಪಿಗಳ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖನಗೊಂಡಿದ್ದರಿ0ದ ಸಂಚರಿಸಲಾಗದೆ ಆರೋಪಿಗಳು ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಇದೇ ಸಂದರ್ಭ ಸ್ಥಳಕ್ಕೆ ಧಾವಿಸಿದ ಪೊಲೀಸರು ವಾಹನ ಸಮೇತ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆಬಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ…

Read More

ಮಡಿಕೇರಿ ಜೂ.3 :  ವಿರಾಜಪೇಟೆ ಮತ್ತು‌ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮಳೆ ನೀರು ಸಾರಾಗವಾಗಿ ಹರಿಯುವಂತಾಗಲು ರಾಜ ಕಾಲುವೆ ಮಾರ್ಗ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

Read More

ಮಡಿಕೇರಿ ಜೂ.3 :  ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂ.ಆಲೂರ ಅವರು, ನೂತನ ವಿಶ್ವ ವಿದ್ಯಾಲಯಗಳ ಕುಲಪತಿಗಳ ನಿಯೋಗದ ಜತೆಗೂಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿ ಶುಭ ಕೋರಿದರು. ಈ ಸಂದರ್ಭ ಮಾತನಾಡಿದ ಮುಖ್ಯ ಮಂತ್ರಿ, ದೇಶದ ಭವಿಷ್ಯವನ್ನು ಹೆಚ್ಚು ವೈಜ್ಞಾನಿಕವಾಗಿ ರೂಪಿಸುವ ಶಕ್ತಿ ವಿಶ್ವವಿದ್ಯಾಲಯಗಳಿಗಿದೆ. ದೇಶದ ಮತ್ತು ವಿದ್ಯಾರ್ಥಿಗಳ ಹಿತಕ್ಕಾಗಿ ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಂಡು, ವೈಜ್ಞಾನಿಕ ತಳಹದಿಯ ಮೇಲೆ ಉನ್ನತ ಶಿಕ್ಷಣವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ವಿಶ್ವ ವಿದ್ಯಾಲಯಗಳಿಗೆ ಸಂಪೂರ್ಣ ಸಹಕಾರ ನೀಡಲು  ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಇದೇ ಸಂದರ್ಭದಲ್ಲಿ ಎಲ್ಲ ಹೊಸ ವಿಶ್ವವಿದ್ಯಾಲಯಗಳ ಕುಲಪತಿಗಳ ಪರವಾಗಿ ಪ್ರೋ.ಅಶೋಕ ಸಂ. ಆಲೂರ ಮಾತನಾಡಿ, ಈ ವರ್ಷದ ಆಯವ್ಯಯದಲ್ಲಿ ಹೊಸ ವಿಶ್ವವಿದ್ಯಾಲಯಗಳಿಗೆ ಕನಿಷ್ಟ ಒಂದು ಮಹಿಳಾ ವಿದ್ಯಾರ್ಥಿ ನಿಲಯ ಮತ್ತು ಪುರುಷ ವಿದ್ಯಾರ್ಥಿ ನಿಲಯ, ಶೈಕ್ಷಣಿಕ ಕಟ್ಟಡ ಹಾಗೂ ಪ್ರಯೋಗಾಲಯಗಳ ಸುಧಾರಣೆಗೆ ಅನುದಾನವನ್ನು ಒದಗಿಸುವಂತೆ ಕೋರಿದರು. ಹೊಸ ವಿಶ್ವವಿದ್ಯಾಲಯಗಳ ಕುಲಪತಿಗಳ ನಿಯೋಗದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.…

Read More

ನವದೆಹಲಿ: ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ನಲ್ಲಿ ಹಳಿತಪ್ಪಿದ ರೈಲಿನ ಬೋಗಿಗಳಿಗೆ ಮತ್ತೊಂದು ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು 900 ಜನರು ಗಾಯಗೊಂಡಿದ್ದಾರೆ. ಮೂರನೇ ಸರಕು ಸಾಗಣೆ ರೈಲು ಕೂಡ ಅಪಘಾತದಲ್ಲಿ ಸಿಲುಕಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪಿಕೆ ಜೆನಾ ಎನ್‌ಡಿಟಿವಿಗೆ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿನ ಅತ್ಯಂತ ಮಾರಣಾಂತಿಕ ಅಪಘಾತಗಳಲ್ಲಿ ಒಂದಾದ ಈ ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ.

Read More

ವಿರಾಜಪೇಟೆ ಜೂ.3 : ಕಳೆದ ನಾಲ್ಕು ವರ್ಷಗಳಿಂದ ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ಶ್ರೀಶೈಲ ಬೀಳಗಿ ಅವರನ್ನು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀಶೈಲ ಬೀಳಗಿ, ವಿದ್ಯಾರ್ಥಿಗಳ ಮುಂದಿನ ಜೀವನವು ಉತ್ತಮವಾಗಿ ರೂಪುಗೊಳ್ಳುವುದರಲ್ಲಿ ಶಿಕ್ಷಣದ ಪಾತ್ರವು ಬಹುಮುಖ್ಯವಾದುದ್ದು. ಮಕ್ಕಳ ವಿದ್ಯಾಭ್ಯಾಸಕ್ಕೆ ಪೋಷಕರು ಅವಿರತ ಶ್ರಮಪಟ್ಟು ಶಾಲೆಗೆ ಕಳಿಸುತ್ತಾರೆ. ಇದನ್ನರಿತ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಶಿಕ್ಷಣ ಪಡೆದು ಶಾಲೆಗೂ ಪೋಷಕರಿಗೂ ತಮ್ಮ ನಾಡಿಗೂ ಕೀರ್ತಿ ತರುವಂತಾಗಬೇಕು ಎಂದು ಸಲಹೆ ನೀಡಿದರು. ವಿದ್ಯೆ ಇದ್ದರೆ ನಾವು ಏನನ್ನೂ ಬೇಕಾದರೂ ಸಾಧನೆ ಮಾಡಬಹುದು. ವಿದ್ಯೆಯೊಂದಿಗೆ ವಿನಯವೂ ಅತಿ ಮುಖ್ಯ. ವಿದ್ಯಾರ್ಥಿಗಳಿಗೆ ಗುರುವಿನೊಂದಿಗೆ ಗುರಿಯೂ ಇರಬೇಕು ಎಂದರು. ಇತ್ತೀಚಿಗೆ ವಿದ್ಯಾರ್ಥಿಗಳು ಮೊಬೈಲ್ ಗೀಳು ಹಾಗೂ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಅದನ್ನು ಆದಷ್ಟು ಕಡಿಮೆ ಮಾಡಿ ಓದಿನತ್ತ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶದಲ್ಲಿ ಶೆ.100…

Read More

ಸಿದ್ದಾಪುರ  ಜೂ.2 :  ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಹೊತ್ತು ನೀಡುವುದರ ಮೂಲಕ ಗಂಭೀರ ಸಮಸ್ಯೆಗಳನ್ನ ತಕ್ಷಣವೇ ಬಗೆಹರಿಸಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭರವಸೆ ನೀಡಿದರು. ನೆಲ್ಯಹುದಿಕೇರಿಯ ಶಾದಿ ಮಹಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿ, ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿ ಕಾಂಗ್ರೆಸ್ ನತ್ತ ಒಲವು ತೊರುವುದರ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನ ನುಡಿದಂತೆ ನಡೆದುಕೊಂಡು ತಕ್ಷಣವೇ ಜಾರಿ ಮಾಡಲಿದ್ದು, ಪ್ರತಿ ಗ್ರಾಮದ ಎಲ್ಲಾ ಸಮಸ್ಯೆಗಳನ್ನು ಸದ್ಯದಲ್ಲೇ ಬಗೆಹರಿಸಲಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ವ್ಯವಸ್ಥೆಗೆ ಮುಂದಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳಿದ್ದರೂ ತಕ್ಷಣವೇ ಗಮನಕ್ಕೆ ತನ್ನಿ ಎಂದರಲ್ಲದೆ ಸಾರ್ವಜನಿಕರ ಸೇವೆ ಮಾಡಲು ಅಧಿಕಾರಿಗಳು ಪ್ರಾಮಾಣಿಕ ಕರ್ತವ್ಯ ನಿಷ್ಠೆ ತೋರಬೇಕಾಗಿದೆ ಎಂದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕ್ಷೇತ್ರದ ಮತದಾರರು ಆಶೀರ್ವಾದದಿಂದ ಹೆಚ್ಚಿನ ಬಹುಮತದೊಂದಿಗೆ ಮಂತರ್ ಗೌಡ ಅವರು ಗೆಲುವು…

Read More

ಬೆಂಗಳೂರು ಜೂ.2  : ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆಯನ್ನು ಜುಲೈ 1 ರಿಂದ ಜಾರಿ ಮಾಡಲಾಗುವುದು. 12 ತಿಂಗಳ ಸರಾಸರಿ ಆಧರಿಸಿ, ಅದಕ್ಕೆ ಶೇಕಡಾ 10 ರಷ್ಟು ಸೇರಿಸಿ, ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು ಎಂದರು. ಈ ಹಿಂದಿನ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು.ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ನಿಂದ ಅನ್ವಯವಾಗಲಿದೆ. ಬಾಡಿಗೆದಾರರಿಗೂ ಈ ಯೋಜನೆ ಅನ್ವಯವಾಗಲಿದೆ ಎಂದರು. ಯಾವುದೇ ಜಾತಿ, ಧರ್ಮಗಳ ತಾರತಮ್ಯ ಇಲ್ಲದೆ ಗ್ಯಾರಂಟಿ ಯೋಜನೆ ಜಾರಿ ಎಂದ ಸಿದ್ದರಾಮಯ್ಯ, ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿಗಳನ್ನು ಮಾಡುತ್ತೇವೆ ಎಂದು ತಿಳಿಸಿದರು. ‘ಗೃಹಲಕ್ಷ್ಮಿ’ ಯೋಜನೆ :  ಗೃಹಲಕ್ಷ್ಮಿ’ ಯೋಜನೆಯನ್ನು ಆ.15 ರಂದು ಅನುಷ್ಠಾನಕ್ಕೆ ತರಲಾಗುವುದು, ಈ ಯೋಜನೆಯಡಿ…

Read More