ಮಡಿಕೇರಿ ಜೂ.2 : ವಿಶ್ವ ಬೈಸಿಕಲ್ ದಿನ ಪ್ರಯುಕ್ತ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜೂ.3 ರಂದು ಬೆಳಗ್ಗೆ 8 ಗಂಟೆಗೆ ಸೈಕ್ಲೋಥಾನ್ ಜಾಥ ಕಾರ್ಯಕ್ರಮ ನಡೆಯಲಿದೆ. ಸೈಕ್ಲೋಥಾನ್ ಜಾಥವು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಆರಂಭವಾಗಿ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ ಮೂಲಕ ಜಿಲ್ಲಾ ಸರ್ವೇಕ್ಷಣಾ ಘಟಕದ ಮುಂಭಾಗದವರೆಗೆ ಸಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜೂ.2 : ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿವಕುಮಾರ ರಂಗಪ್ರಯೋಗ ಶಾಲೆಯ 2023-24ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿದ್ದು ಮತ್ತು ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕು. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ-ವಸತಿ ವ್ಯವಸ್ಥೆ ದೊರೆಯುತ್ತದೆ. ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅತಿಥ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಒಳ್ಳೆಯ ಗ್ರಂಥಭಂಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ 577515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿ ತರಿಸಿಕೊಳ್ಳಬಹುದು ಅಥವಾ ರಂಗಶಾಲೆಯ ವೆಬ್‍ಸೈಟ್ www.theatreschoolsanehalli.org ನಲ್ಲಿ ಪ್ರವೇಶ…
ಮಡಿಕೇರಿ ಜೂ.2 : ಮೂರ್ನಾಡು ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ, ರಕ್ತನಿಧಿ ಕೇಂದ್ರ ಮಡಿಕೇರಿ, ಮೂರ್ನಾಡು ಪದವಿ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್, ರೋಟರ್ಯಾಕ್ಟ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಮೂರ್ನಾಡು ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ಸಾರ್ವಜನಿಕರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಸುಮಾರು 50 ಮಂದಿ ರಕ್ತದಾನ ಮಾಡುವುದರ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಜಿ.ಮಾದಪ್ಪ, ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ನಿರ್ದೇಶಕ ನಂದೇಟಿರ ರಾಜಾ ಮಾದಪ್ಪ, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ರೇಖಾ ಚಿಣ್ಣಪ್ಪ, ರೋಟರಿ ಮಡಿಕೇರಿ ವುಡ್ಸ್‍ನ ಕಾರ್ಯದರ್ಶಿ ವಸಂತ್ ಕುಮಾರ್, ವಿಕ್ರಂ, ಕಿಗ್ಗಾಲು ಹರೀಶ್, ಎನ್.ಸಿ.ನವೀನ್, ಬೋಪಣ್ಣ, ರೋಟರ್ಯಾಕ್ಟ್ ಕ್ಲಬ್‍ನ ಪದಾಧಿಕಾರಿಗಳು, ಸದಸ್ಯರು ಇದ್ದರು.
ಮಡಿಕೇರಿ ಜೂ.2 : ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 11 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂ.8 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ.10 ಸಾವಿರ ನಿಗಧಿಪಡಿಸಿದೆ. ಕಡ್ಡಾಯವಾಗಿ ಇಂಗ್ಲೀಷ್ ಐಚ್ಚಿಕ ವಿಷಯದಲ್ಲಿ ಡಿ.ಎಡ್ ಅಥವಾ ಬಿ.ಎಡ್ ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು. ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿನ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ, ಜಿಲ್ಲಾ ಪಂಚಾಯತ್ ಕಟ್ಟಡ ಇಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-200500 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಅವರು ತಿಳಿಸಿದ್ದಾರೆ.
ಮಡಿಕೇರಿ ಜೂ.2 : ಪ್ಲಾಸ್ಟಿಕ್ ಅನ್ನು ಪೂರ್ಣ ಪ್ರಮಾಣದಲ್ಲಿ ತ್ಯಜಿಸುವುದರ ಮೂಲಕ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಂಡು ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಹೊಣೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ “ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರಗಳು” ಎಂಬ ವಿಷಯದ ಕುರಿತು ನಗರದ ಸಂತ ಮೈಕಲರ ಶಾಲಾ ಆವರಣದಲ್ಲಿ ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆ ನಡೆಯಿತು. ಮನುಷ್ಯನ ಜೀವನದಲ್ಲಿ ಉತ್ತಮವಾದ ವಾತಾವರಣ ಹಾಗೂ ಗಾಳಿ ಅತಿ ಅವಶ್ಯಕವಾಗಿದೆ. ಉತ್ತಮವಾದ ವಾತಾವರಣ, ಗಾಳಿ ಬೇಕಾದಲ್ಲಿ ಒಳ್ಳೆಯ ಪರಿಸರವನ್ನು ನಿರ್ಮಾಣ ಮಾಡಬೇಕು. ಪರಿಸರ ಶುಚಿತ್ವ ನಮ್ಮೆಲ್ಲರ ಹೊಣೆ. ಆದ್ದರಿಂದ ಪ್ರತಿಯೊಬ್ಬರಲ್ಲಿಯೂ ಪರಿಸರ ಸಂರಕ್ಷಣೆ ಕುರಿತು…
ನಾಪೋಕ್ಲು ಜೂ.2 : ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಮಳೆಗಾಲ ಆರಂಭಕ್ಕೂ ಮೊದಲೇ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು, ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ನಾಪೋಕ್ಲು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಾಪೋಕ್ಲು ವ್ಯಾಪ್ತಿಯಲ್ಲಿ ಮುಂಗಾರು ಆರಂಭಕ್ಕೂ ಮೊದಲೇ ಸೆಸ್ಕ್ ಇಲಾಖೆಯವರು ವಿದ್ಯುತ್ ರಸ್ತೆಬದಿಗಳಲ್ಲಿ ಮತ್ತು ತೋಟಗಳಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗಳಿಗೆ ಹೊಂದಿಕೊಂಡಿರುವ ಮರಗಳನ್ನು ತೆರವು ಗೊಳಿಸಬೇಕು, ಅದರಂತೆ ಹಳೆಯ ಕಂಬಗಳನ್ನು ಬದಲಿಸಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ಪೂರ್ವ ಸಿದ್ಧತೆಗಳನ್ನು ನಡೆಸಬೇಕಾಗಿತ್ತು. ಆದರೆ ನಾಪೋಕ್ಲು ವಿಭಾಗದಲ್ಲಿ ಇದರಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದೆರುವುದರಿಂದ ಸಣ್ಣ ಮಳೆಗೆ ವಿದ್ಯುತ್ ಕಡಿತಗೊಂಡು ಜನರು ವಿದ್ಯುತ್ ಸಮಸ್ಯೆಯನ್ನು ಎದುರಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದ್ದಾರೆ. ನಾಪೋಕ್ಲು ನಾಲ್ಕುನಾಡು ವ್ಯಾಪ್ತಿಯಲ್ಲಿ ಬರುವ ಬಹುತೇಕ ಎಲ್ಲಾ ಕಡೆ ವಿದ್ಯುತ್ ಸಮಸ್ಯೆಯಿಂದ ಜನ ಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಈ ಸಮಸ್ಯೆ ಮುಂಗಾರು ಪ್ರವೇಶಕ್ಕೂ…
ಮಡಿಕೇರಿ ಜೂ.2 : ನಗರದ ರಾಜಾಸೀಟು-ಮುನೀಶ್ವರ ದೇವಾಲಯದ ಸಂಪರ್ಕ ರಸ್ತೆಯನ್ನು ಶೀಘ್ರ ದುರಸ್ತಿಪಡಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ವೀರನಾಡು ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು. ನಗರದ ರಾಜಾಸೀಟು-ಮುನೀಶ್ವರ ದೇವಾಲಯದ ಸಂಪರ್ಕ ರಸ್ತೆಯಲ್ಲಿ ಜಮಾಯಿಸಿದ ವೇದಿಕೆಯ ಪ್ರಮುಖರು ಹಾಗೂ ಸ್ಥಳೀಯರು, ನಗರಸಭೆಯ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ವೇದಿಕೆಯ ಜಿಲ್ಲಾಧ್ಯಕ್ಷ ಹರೀಶ್ ಜಿ.ಆಚಾರ್ಯ ಮಾತನಾಡಿ, ಹಾನಿಗೀಡಾದ ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸದೆ ಮಡಿಕೇರಿ ನಗರಸಭೆ ನಿದ್ರಾವಸ್ಥೆಗೆ ಜಾರಿದೆ ಎಂದು ಆರೋಪಿಸಿದ ಅವರು, ಈ ಹಿಂದೆ ಹಲವು ಭಾರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಮನವಿ ಮಾಡಲಾಗಿದ್ದರು, ಇಲ್ಲಿಯವೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ದೂರಿದರು. ಈಗಾಗಲೇ ಈ ರಸ್ತೆಯಲ್ಲಿ ವಾಹನ ಸವಾರರು, ಪಾದಚಾರಿಗಳು ಸಂಚರಿಸಲು ಹರಸಾಹಸ ಪಡುವಂತಾಗಿದ್ದು, ತಕ್ಷಣ ದುರಸ್ತಿ ಪಡಿಸುವಂತೆ ಒತ್ತಾಯಿಸಿದರು. ಮುಂಗಾರು ಪ್ರಾರಂಭವಾಗಲಿದ್ದು, ನಗರದ ಸ್ಟೋನ್‍ಹಿಲ್‍ನಲ್ಲಿ ಸುರಿಯಲಾಗುತ್ತಿರುವ ಕಸದಿಂದ ಸಾಂಕ್ರಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆ ನಗರದಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ…
ಮಡಿಕೇರಿ ಜೂ.2 : ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಗಿಡ ನೆಟ್ಟು ಪೋಷಿಸಿ ಬೆಳೆಸುವುದರ ಮೂಲಕ ಪರಿಸರ ಉಳಿಸಲು ಕೊಡಗು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ್ ಕರೆ ನೀಡಿದ್ದಾರೆ. ಕೊಡಗು ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಹಾಗೂ ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವತಿಯಿಂದ ಕೂಡುಮಂಗಳೂರು ಸರಕಾರಿ ಪ್ರೌಢಶಾಲೆಯ ಜೆ.ಸಿ.ಬೋಸ್ ಇಕೋ ಕ್ಲಬ್ ಮತ್ತು ಎನ್.ಎಸ್.ಎಸ್.ಘಟಕ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದ ಸಹಯೋಗದಲ್ಲಿ “ಗೋ ಗ್ರೀನ್” ಅಭಿಯಾನದ ಅಂಗವಾಗಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನಡೆದ ಪರಿಸರ ಜಾಗೃತಿ ಆಂದೋಲನದಲ್ಲಿ ಗಿಡ ನೆಟ್ಟು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ನಾವು ನಮ್ಮ ಸುತ್ತಲಿನ ಪರಿಸರ ಸೇರಿದಂತೆ ಪ್ರತಿ ಶಾಲಾ ಕಾಲೇಜು, ಆಸ್ಪತ್ರೆ, ಹಾಸ್ಟೆಲ್ ಮತ್ತಿತರ ಸರ್ಕಾರಿ ಜಾಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ ಪರಿಸರವನ್ನು ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.…
ಮಡಿಕೇರಿ ಜೂ.2 : ಜಿಲ್ಲೆಯ ಹೊಸ್ಕೇರಿ ಗ್ರಾ.ಪಂ ವ್ಯಾಪ್ತಿಯ ಅರೆಕಾಡು, ನೇತಾಜಿ ನಗರಕ್ಕೆ ಕಳೆದ ಒಂದು ವಾರದಿಂದ ಸೆಸ್ಕ್ ನಿಂದ ಅಳವಡಿಸಲಾದ ಟಿಸಿ ಚಾರ್ಚ್ ಮಾಡಲು ವಿಳಂಭವಾದ ಕಾರಣ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾ.ಪಂ.ಪಿಡಿಒತಿಳಿಸಿದ್ದಾರೆ. ಸದ್ಯ ಸ್ಥಳೀಯ ವ್ಯಾಪ್ತಿಯಲ್ಲಿ ಮತ್ತೊಂದು ವಿದ್ಯುತ್ ಪರಿವರ್ತಕ ಅಳವಡಿಸಲಾಗಿದೆ ಎಂದು ಗ್ರಾ.ಪಂ.ಅಧಿಕಾರಿ ಹಾಗೂ ಸೆಸ್ಕ್ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ.
ಮಡಿಕೇರಿ ಜೂ.2 : ಮುಂಗಾರು ಹಿನ್ನೆಲೆ ಮಡಿಕೇರಿ ನಗರ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪೂರ್ವ ನಿವೇಚಿತ ಕೆಲಸ ಕಾರ್ಯಗಳಲ್ಲಿ ಒಂದಾದ ರಾಜ ಕಾಲುವೆ ಮತ್ತು ತೋಡುಗಳ ಹೂಳೆತ್ತುವ ಮತ್ತು ಸ್ವಚ್ಛಗೊಳಿಸುವ ಕೆಲಸ ಕಾರ್ಯಗಳ ಕಾಮಗಾರಿ ಕೈಗೊಳ್ಳಲಾಗಿದೆ.






