ಮಡಿಕೇರಿ ಜೂ.2 : ಜಿಲ್ಲೆಯ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಸರ್ಕಾರ ಎಂ.ಎಲ್.ಸಿ ಹಾಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದು ಹಾಲುಗುಂದ ಗ್ರಾ.ಪಂ ಸದಸ್ಯ ಅಬ್ದುರಹಮಾನ್ (ಅಂದಾಯಿ) ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಶೇಕಡಾ 98 ರಷ್ಟು ಮುಸ್ಲಿಂ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿ ಮತ ಚಲಾಯಿಸಿದ್ದಾರೆ. ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪ್ರಮುಖ ಪಾತ್ರವಹಿಸಿದ ದೊಡ್ಡ ಸಮುದಾಯ ಮುಸ್ಲಿಮರಾಗಿದ್ದಾರೆ. ಅಲ್ಪಸಂಖ್ಯಾತರು ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಬೂತ್ ಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಅಂತರದ ಮತಗಳ ಲೀಡ್ ಬಂದಿದೆ. ಜಿಲ್ಲೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಆದರೆ ಇದುವರೆಗೆ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನ ದೊರೆತಿಲ್ಲ. ಜಿಲ್ಲೆಯ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ನಾಯಕರನ್ನು ಗುರುತಿಸಿ ಕಾಂಗ್ರೆಸ್ ಪಕ್ಷ ಎಂ.ಎಲ್.ಸಿ ಹಾಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು. ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯದ ಬೆಳವಣಿಗೆಗೆ ಕಾಂಗ್ರೆಸ್…
ಲೇಖಕ: admin
ನಾಪೋಕ್ಲು ಜೂ.2 : ಲಯನ್ಸ್ ಕ್ಲಬ್ ವತಿಯಿಂದ ನಾಪೋಕ್ಲು ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಪ್ರಾಂತೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪುರುಷರ ಡಬಲ್ಸ್ ವಿಭಾಗದಲ್ಲಿ ಕೆ.ಪಿ.ಲಯನ್ ಸುಬ್ರಹ್ಮಣಿ ಮತ್ತು ಕಿರಣ್ ಚಂಗಪ್ಪ ಪ್ರಥಮ ಸ್ಥಾನ ಗಳಿಸಿದರು. ದ್ವಿತೀಯ ಸ್ಥಾನವನ್ನು ಲಯನ್ ಬಾಚಮಂಡ ಅಪ್ಪಣ್ಣ ಮತ್ತು ಮಾದೆಯಂಡ ಕುಟ್ಟಪ್ಪ ಗಳಿಸಿದರು. ವಿಜೇತರಿಗೆ ಟ್ರೋಫಿದಾನಿಗಳಾದ ಅಪ್ಪಚೆಟ್ಟೋಳಂಡ ಪಿ ವಸಂತ ಮತ್ತು ಕನ್ನಂಬೀರ ಸುಧಿ ತಿಮ್ಮಯ್ಯ ಹಾಗೂ ಶಿವಚಾಳಿಯಂಡ ಕಾಳಪ್ಪ ನೀಡಿದ ಟ್ರೋಫಿಯನ್ನು ವಿತರಿಸಲಾಯಿತು. ಮಿಕ್ಸೆಡ್ ಡಬಲ್ಸ್ ನಲ್ಲಿ ಲಯನ್ ಪೆಮ್ಮುಡಿಯಂಡ ಅಪ್ಪಣ್ಣ ಮತ್ತು ಇಂದಿರಾ ಅಪ್ಪಣ್ಣ ಪ್ರಶಸ್ತಿ ಗಳಿಸಿದರು.ಇವರಿಗೆ ಲಯನ್ ಅಪ್ಪುಮಣಿಯಂಡ ಬನ್ಸಿ ಭೀಮಯ್ಯ ನೀಡಿದ ಟ್ರೋಫಿಯನ್ನು ವಿತರಿಸಲಾಯಿತು. ಮಹಿಳೆಯರ ವಿಭಾಗದಲ್ಲಿ ಲಯನ್ ವಿದ್ಯಾ ವಿಶಾಲ್ ಹಾಗೂ ಮಾನ್ಯ ಕಾಳಪ್ಪ ಪ್ರಥಮ ಸ್ಥಾನ ಗಳಿಸಿದರು. ಇಂದಿರಾ ಅಪ್ಪಣ್ಣ ಮತ್ತು ಶುಭ ದ್ವಿತೀಯ ಸ್ಥಾನ ಗಳಿಸಿದರು ಇವರಿಗೆ ಬಿದ್ದಾಟಂಡ ಮೇರಿ ಚಿಟಿಯಪ್ಪ ಹಾಗೂ ಚಿಟಿಯಪ್ಪ ನೀಡಿದ ಟ್ರೋಫಿಯನ್ನು ವಿತರಿಸಲಾಯಿತು. ನಾಪೋಕ್ಲು ಲಯನ್ಸ್ ಕ್ಲಬ್ ಗೆ ವಲಯ ಅಧ್ಯಕ್ಷ …
ಮಡಿಕೇರಿ ಜೂ.2 : ಕೊಡಗಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊನ್ನಣ್ಣ ಅವರನ್ನು ಈ ಜವಾಬ್ದಾರಿಗೆ ನೇಮಿಸಿ ಆದೇಶ ಹೊರಡಿಸಲು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಇದು ಸಂಪುಟ ದರ್ಜೆಯ ಸಚಿವರ ಸ್ಥಾನಮಾನವಾಗಿದ್ದು, ಇದೀಗ ಪೊನ್ನಣ್ಣ ಅವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳು ದೊರೆಯಲಿವೆ. ಈ ಬಾರಿಯ ಸಚಿವರ ಸಂಪುಟದಲ್ಲಿ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಸಿಗುವ ಆಶಾಭಾವನೆ ಜಿಲ್ಲೆಯ ಜನರಲ್ಲಿತ್ತು. ಆದರೆ ಇವರು ಸಚಿವ ಸ್ಥಾನದಿಂದ ವಂಚಿತರಾಗಿದ್ದರು. ಇದೀಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಸ್ಥಾನಮಾನ ಸಿಕ್ಕಿರುವುದು ಜಿಲ್ಲೆಗೆ ಪ್ರಾತಿನಿಧ್ಯ ದೊರೆತಂತಾಗಿದೆ.
ಮಡಿಕೇರಿ ಜೂ.1 : ಕೂಡುಮಂಗಳೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ರಹಿತ ದಿನ’ ಅಂಗವಾಗಿ “ನಮಗೆ ಆಹಾರ ಬೇಕು, ತಂಬಾಕು ಅಲ್ಲ”, ಎಂಬ ಘೋಷವಾಕ್ಯದೊಂದಿಗೆ’ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೊಡಗು ಜಿಲ್ಲೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಹಾಗೂ ವತಿಯಿಂದ ಎನ್.ಎಸ್.ಎಸ್.ಘಟಕದ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ್, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತ ಭಿತ್ತಿಫಲಕಗಳನ್ನು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ತಂಬಾಕಿನ ಯಾವುದೇ ಉತ್ಪನ್ನಗಳನ್ನು ಬಳಸದೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು. ತಂಬಾಕು ರಹಿತ ದಿನದ ಮಹತ್ವ ಕುರಿತು ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಪ್ರತಿ ವರ್ಷ ಮೇ 31 ಅನ್ನು ವಿಶ್ವ ತಂಬಾಕು ರಹಿತ ದಿನಾಚರಣೆ ಸಂದರ್ಭದಲ್ಲಿ ತಂಬಾಕು ಸೇವನೆಯಿಂದ ಆಗುವ…
ಮಡಿಕೇರಿ ಜೂ.1 : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಜೂನಿಯರ್ ಕಾಲೇಜು ಆವರಣ ಇಲ್ಲಿ 2023-24 ನೇ ಸಾಲಿನ ಬಿಎ, ಬಿಕಾಂ, ಬಿಬಿಎ ಪದವಿ ಪ್ರವೇಶಾತಿ ಆರಂಭಗೊಂಡಿದೆ. ಅನುಭವಿ ಉಪನ್ಯಾಸಕರು ಮತ್ತು ಎಲ್‍ಎಂಎಸ್ ತಂತ್ರಜ್ಞಾನದ ಮೂಲಕ ಬೋಧನೆ, ವಿದ್ಯಾರ್ಥಿ ವೇತನ ಸೌಲಭ್ಯದೊಂದಿಗೆ ಮಹಿಳಾ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ, ಸರ್ಕಾರಿ ವಿದ್ಯಾರ್ಥಿ ನಿಲಯ, ಉದ್ಯೋಗ ಮಾರ್ಗದರ್ಶನ, ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನಕ್ಕೆ ಪೂರಕವಾದ ಅತ್ಯುತ್ತಮ ಗ್ರಂಥಾಲಯ, ಎನ್‍ಎಸ್‍ಎಸ್, ರೋವರ್ಸ್ ಮತ್ತು ರೇಂಜರ್ಸ್, ರೆಡ್‍ಕ್ರಾಸ್, ರೆಡ್ ರಿಬ್ಬನ್, ಸಾಂಸ್ಕೃತಿಕ ವೇದಿಕೆ, ಕ್ರೀಡೆ, ಐಕ್ಯುಎಸಿ ಮುಂತಾದ ವೇದಿಕೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ, ಮೊದಲಾದ ಸೌಲಭ್ಯಗಳೊಂದಿಗೆ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆಯಲು ಪ್ರವೇಶ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.08272-223913, ಮೊಬೈಲ್ ಸಂಖ್ಯೆ 9901234941 ನ್ನು ಸಂಪರ್ಕಿಸಬಹುದು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಡಾ.ನಿರ್ಮಲ ತಿಳಿಸಿದ್ದಾರೆ.
ಮಡಿಕೇರಿ ಜೂ.1 : ಪೊನ್ನಂಪೇಟೆ ಮತ್ತು ವಿರಾಜಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಜೂ.3 ರಂದು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆ ವರೆಗೆ 66/11 ಕೆವಿ ಪೊನ್ನಂಪೇಟೆ, 66/11 ಕೆವಿ ವಿರಾಜಪೇಟೆ, 33/11 ಕೆವಿ ಶ್ರೀಮಂಗಲ, 33/11ಕೆವಿ ಸಿದ್ದಾಪುರ ಹಾಗೂ 33/11 ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಜೂ.1 : ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ)ಗೆ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕ್ಯಾನಿಕ್(2 ವರ್ಷ) (ಎನ್‍ಸಿವಿಟಿ) ಮತ್ತು ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ (1 ವರ್ಷ) (ಎನ್‍ಸಿವಿಟಿ) ವೃತ್ತಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಜೂ.9 ರವರೆಗೆ ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ) ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಅಥವಾ ದೂ.ಸಂ.08274-200221 ಮತ್ತು 9036796935, 8971358220 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಮಡಿಕೇರಿ ಜೂ.1 : ಕೊಡಗು ವಿಶ್ವವಿದ್ಯಾನಿಲಯ, ಮಂಗಳೂರು ವಿಶ್ವವಿದ್ಯಾನಿಲಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಆರ್ಟ್ಸ್ ಫೆಸ್ಟ್ ಕಲಾವೈಭವದ ಉದ್ಘಾಟನಾ ಕಾರ್ಯಕ್ರಮವು ಜೂ.3 ರಂದು ಬೆಳಗ್ಗೆ 9.30 ಗಂಟೆಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಕೊಡಗು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರು, ಎಫ್‍ಎಂಕೆಎಂಸಿ ಕಾಲೇಜಿನ ಪ್ರಾಂಶುಪಾಲ ಮೆ.ಡಾ.ಬಿ.ರಾಘವ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 3.30 ಗಂಟೆಗೆ ವ್ಯಾಲಿಡೆಕ್ಟರಿ(ಮೌಲ್ಯಾಧಾರಿತ) ಕಾರ್ಯಕ್ರಮ ನಡೆಯಲಿದೆ. ಕನ್ನಡ ಚಲನಚಿತ್ರ ನಟರಾದ ಎಂ.ಆದ್ಯ ತಿಮ್ಮಯ್ಯ, ಜಿ.ಪಂ ಮಾಜಿ ಸದಸ್ಯ ಪಿ.ಎಂ.ಅಬ್ದುಲ್ ಲತೀಫ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜೂ.1 : ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ಶಿಕ್ಷಣ ನೀತಿ ಆಧಾರಿತ ಮೂರು ವರ್ಷದ ಪದವಿ ತರಗತಿಗೆ ಪ್ರವೇಶಾತಿ ಆರಂಭವಾಗಿದೆ. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಯಾವುದೇ ಬೋಧನ ಶುಲ್ಕ ಇರುವುದಿಲ್ಲ. ಬಿಎ ಪದವಿ (ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಐಚ್ಛಿಕ ಕನ್ನಡ), ಬಿಕಾಂ ಪದವಿ, ಬಿಬಿಎ ಪದವಿ. ಆಸಕ್ತ ವಿದ್ಯಾರ್ಥಿಗಳು ಕಾಲೇಜು ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ತಿಳಿಸಿದ್ದಾರೆ.
ಮಡಿಕೇರಿ ಜೂ.1 : ಸಣ್ಣ ವಯಸ್ಸಿನಲ್ಲಿಯೇ ಹೆಚ್ಚು ಹೆಚ್ಚು ಜವಾಬ್ದಾರಿಯನ್ನು ನಿಭಾಯಿಸುವುದರಿಂದ ಭವಿಷ್ಯದಲ್ಲಿ ಸಾಧನೆ ಮಾಡಲು ಮುನ್ನುಡಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು. ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಹೊಸದಾಗಿ ಆಯ್ಕೆಗೊಂಡ ಗ್ರಾಮ ಲೆಕ್ಕಾಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಕೃತಿಕ ವಿಕೋಪ ಸೇರಿದಂತೆ ವಿವಿಧ ರೀತಿಯ ಸವಾಲುಗಳು ಹಾಗೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಎಲ್ಲರೂ ಹೆಚ್ಚು ವಿಚಾರಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹೇಳಿದ್ದಾರೆ. ಅಧಿಕಾರಿಗಳು ಯಾವ ರೀತಿಯಾಗಿ ಯಾವ ಸೆಕ್ಷನ್ ಅಡಿಯಲ್ಲಿ ಯಾರು ಜಾಗ ಮಂಜೂರು ಮಾಡಿದ್ದಾರೆ ಹಾಗೂ ಯಾವ ಸೆಕ್ಷನ್ ಅಡಿಯಲ್ಲಿ ಮಂಜೂರು ಮಾಡಬಹುದು ಎಂದು ತಿಳಿಸಲಾಗುವುದು ಹಾಗೂ ಕೆಲವೊಂದು ವಿಚಾರಗಳ ಬಗ್ಗೆ ತಿಳಿಯಲು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ಹೇಳಿಕೊಡಲಾಗುವುದು ಎಂದು ತಿಳಿಸಿದರು. ಸೆಕ್ಷನ್‍ಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ತಿಳಿದುಕೊಳ್ಳಲು ಪುಸ್ತಕ ಅಧ್ಯಯನ ಮಾಡಬೇಕು. ದಿನ ನಿತ್ಯ 2 ರಿಂದ 3 ಗಂಟೆ ಇದಕ್ಕೆ ಸಮಯ ಮೀಸಲಿಡಬೇಕು, ಹಾಗೂ ವಾಟ್ಸಪ್ ಗ್ರೂಪ್ ರಚಿಸಿಕೊಂಡು ಸಂದೇಶ ಹಾಗೂ ಯಾವುದಾದರು…






