ಲೇಖಕ: admin

ಮಡಿಕೇರಿ ಜೂ.1 : ಕೊಡಗಿನ ಪ್ರವಾಸಿ ತಾಣಗಳಾದ ಮಾಂದಲ ಪಟ್ಟಿ, ಅಬ್ಬಿಫಾಲ್ಸ್ ಮೊದಲಾದೆಡೆಗಳಿಗೆ ಪ್ರವಾಸಿಗರನ್ನು ಕರೆದೊಯ್ಯಲು ಯಾವುದೇ ಕಾರಣಕ್ಕೂ ಖಾಸಗಿ ವಾಹನಗಳನ್ನು ಬಾಡಿಗೆಗೆ ಬಳಸಲು ಅವಕಾಶವಿಲ್ಲವೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ ಎಸ್.ಎನ್. ತಿಳಿಸಿದ್ದಾರೆ. ಜಿಲ್ಲೆ ಪ್ರಮುಖ ಪ್ರವಾಸಿ ಕೇಂದ್ರವಾಗಿ ರೂಪುಗೊಂಡಿದೆ. ಪ್ರತಿನಿತ್ಯ ದೊಡ್ಡ ಪ್ರಮಾಣದಲ್ಲಿ ಪ್ರವಾಸಿಗರು ಜಿಲ್ಲೆಗಾಗಮಿಸುವುದಲ್ಲದೆ, ಮಡಿಕೇರಿ ಸಮೀಪದ ಅಬ್ಬಿಫಾಲ್ಸ್, ಮಾಂದಲಪಟ್ಟಿ ಪ್ರದೇಶಗಳಿಗೆ ತೆರಳುತ್ತಾರೆ. ಇದನ್ನು ಬಳಸಿಕೊಂಡು ಹಲ ಖಾಸಗಿ ಜೀಪ್‍ಗಳನ್ನು ಪ್ರವಾಸಿಗರನ್ನು ಪ್ರವಾಸಿ ತಾಣಗಳಿಗೆ ಕರೆದೊಯ್ಯುವ ಪ್ರಮಾಣ ಹೆಚ್ಚಾಗುತ್ತಾ ಸಾಗಿತ್ತು. ಇತ್ತೀಚೆಗೆ ಮಾಂದಲಪಟ್ಟಿ ಪ್ರವಾಸಿ ತಾಣಕ್ಕೆ ತೆರಳಿದ್ದ ಪ್ರವಾಸಿಗರ ಮೇಲೆ ಬಾಡಿಗೆ ಜೀಪ್ ಓಡಿಸುತ್ತಿದ್ದ ಮಂದಿ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮತ್ತು ಸಾರಿಗೆ ಪ್ರಾಧಿಕಾರಕ್ಕೆ ಬಂದ ದೂರಿನ ಹಿನ್ನೆಲೆಯಲ್ಲಿ ಪ್ರದೇಶಿಕ ಸಾರಿಗೆ ಅಧಿಕಾರಿ ಮಧುರ ಅವರು ತಮ್ಮ ಕಛೇರಿಯಲ್ಲಿ ಮಾಂದಲಪಟ್ಟಿ, ಅಬ್ಬಿಫಾಲ್ಸ್ ಪ್ರವಾಸಿ ತಾಣಗಳು ಬರುವ ಕೆ.ನಿಡುಗಣೆ ಪಮಚಾಯ್ತಿಯ ಅಧ್ಯಕ್ಷರು ಮತ್ತು ಖಾಸಗಿ ಜೀಪ್ ಮಾಲೀಕರುಗಳೊಂದಿಗೆ ಸಭೆ ನಡೆಸಿ, ಯಾವುದೇ ಕಾರಣಕ್ಕೂ…

Read More

ಮಡಿಕೇರಿ ಜೂ.1 : ಕೊಡಗು ಜಿಲ್ಲಾ ಪೊಲೀಸ್ ಘಟಕದ ವಿವಿಧ ಠಾಣೆ, ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸಿ ಮೇ 31 ರಂದು ನಿವೃತ್ತಿ ಹೊಂದಿದ ಹೆಚ್.ಇ ದೇವರಾಜು, ಟಿ.ಎಂ. ಸಾಬು, ಎಂ.ಯು. ಅಬ್ದುಲ್ ಮಜೀದ್, ಎ.ಎ.ಬಿದ್ದಪ್ಪ ಮತ್ತು ಎಂ.ಎ ಹಮೀದ್ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.

Read More

ಚಾಮರಾಜನಗರ ಜೂ.1 :  ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ತರಬೇತಿ ನಿರತ ಲಘು ವಿಮಾನವೊಂದು ಪತನವಾಗಿದ್ದು, ಇಬ್ಬರು ಪೈಲಟ್​ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

Read More

ಮಡಿಕೇರಿ ಜೂ.1 :  ಕಡಂಗ ಸರ್ಕಾರಿ ಶಾಲೆಯಲ್ಲಿ  2023-24 ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಿಕ್ಷಕರು  ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಬರಮಾಡಿಕೊಂಡರು. ಈ ಸಂದರ್ಭ  2023-24ನೇ ಸಾಲಿನ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷರಾದ  ಫಾತಿಮಾ, ಮುಖ್ಯಶಿಕ್ಷಕರಾ  ಪಿ. ಎಂ.ಶಾಂತಿಕುಮಾರಿ,  ಎಸ್,ಡಿಎಂಸಿ ಸದಸ್ಯರು, ಶಾಲಾ ಶಿಕ್ಷಕರು,  ಪೋಷಕರು,  ಹಳೆಯ ವಿದ್ಯಾರ್ಥಿಗಳು ಹಾಗೂ ಮಕ್ಕಳು ಹಾಜರಿದ್ದರು.  

Read More

ಮಡಿಕೇರಿ ಜೂ.1 : ಕಡಂಗ ವಿಜಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ಶಾಲಾ ಪುನರಾರಂಭ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯವರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಹೂಗುಚ್ಚ, ಸಿಹಿ ನೀಡಿ ಬರಮಾಡಿಕೊಂಡರು. ಈ ಸಂದರ್ಭ ಶಾಲೆಯ ಅಧ್ಯಕ್ಷರು ಮಾತನಾಡಿ ವಿದ್ಯಾರ್ಥಿಗಳ ಶಾಲೆಯಿಂದ ಪ್ರಮಾಣಿಕತೆ, ಸಮಗ್ರತೆ, ಉತ್ತಮ ನಡವಳಿಕೆಗಳನ್ನು ಕಲಿತು ಉತ್ತಮ ಪ್ರಜೆಯಾಗಿ ಹೊರಹೊಮ್ಮಲು ಸಲಹೆ ನೀಡಿದರು.

Read More

ಚೆಯ್ಯಂಡಾಣೆ  ಜೂ.1 :   ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಿಕ್ಷಕರು ಮಕ್ಕಳಿಗೆ ಹೂ ನೀಡಿ, ಆರತಿ ಬೆಳಗಿ ಸಿಹಿ ಹಂಚುವುದರ ಮೂಲಕ ಬರಮಾಡಿಕೊಂಡರು. ಗ್ರಾ.ಪಂ, ಸದಸ್ಯರಾದ ಎಂ.ಬಿ. ನೇತ್ರವತಿ,  ಬೇಪುಡಿಯಂಡ ವೀಲಿನ್   ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಈ ಸಂದರ್ಭ ಸರಕಾರದಿಂದ ನೀಡಲಾದ ಪಠ್ಯ ಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ಎಚ್.ಎಂ.ಲೋಕೇಶ್  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು. ಮುಖ್ಯ ಶಿಕ್ಷಕಿ ಡಿ.ಕೆ.ಲೀಲಾವತಿ ಸ್ವಾಗತಿಸಿ,ಸಹ ಶಿಕ್ಷಕಿ ಬಿ.ಎ.ದಮಯಂತಿ ವಂದಿಸಿದರು. ವರದಿ : ಅಶ್ರಫ್ 

Read More

ಮಡಿಕೇರಿ ಜೂ.1 :  ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಆರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾಸಂಸ್ಥೆಯ ಅಧ್ಯಕ್ಷ  ಅಳಮೆಂಗಡ ಬೋಸ್ ಮಂದಣ್ಣ ಮತ್ತು ಅಧ್ಯಪಕರು ವಿದ್ಯಾರ್ಥಿಗಳಿಗೆ ಸಿಹಿಹಂಚಿ  ಬರಮಾಡಿಕೊಂಡರು. ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್, ಅಧ್ಯಾಪಕರಾದ ಬೆಂಡಿಕ್ಟಪರ್ನಾಡಿಸ್, ರಾಘವೇಂದ್ರ ಪ್ರಭು ಕುಮಾರ್, ಜಯಪ್ಪ, ಸುಬ್ಬಯ್ಯ ಮತ್ತು ಪೋಷಕರು ಹಾಜರಿದ್ದರು.

Read More

ಮಡಿಕೇರಿ ಜೂ. 1 : ಉಡೋತ್ ಮೊಟ್ಟೆಯ ಶ್ರೀ ಆಧಿಶಕ್ತಿ ದೇವಿಯ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವವು ಜೂ.7 ರಿಂದ 9ರ ನಡೆಯಲಿದೆ. ಶ್ರೀ ವೇದಮೂರ್ತಿ ವೇದವ್ಯಾಸ ತಂತ್ರಿಗಳ ಮಾರ್ಗದರ್ಶನದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಜೂ.7 ರಂದು ಬೆಳಿಗ್ಗೆ 9 ಗಂಟೆಗೆ ಮಹಾಪ್ರಾರ್ಥನೆ ಸ್ವಸ್ತಿ ಪುಣ್ಯಾಹ ವಾಚನ, ಗಣಪತಿ ಹೋಮ, ಕಂಕಣ ಬಂಧನ, ಉಗ್ರಾಣ ಪೂಜೆ ನಡೆಯಲಿದ್ದು, ಮಧ್ಯಾಹ್ನ ಅನ್ನದಾನ ನೆರವೇರಲಿದೆ. ಸಂಜೆ 4.30 ರಿಂದ ಕಳಶ ಮೆರವಣಿಗೆ ಹಾಗೂ ಹೊರೆಕಾಣಿಕೆ, 5.30ಕ್ಕೆ ಬಿಂಬ ಶುದ್ಧಿ, ಬಿಂಬಿ ಶುದ್ಧಿ ಹೋಮ, ಆಧಿವಾಸ ಹೋಮ, ಆಧಿವಾಸ ಪೂಜೆ, ಪ್ರಸಾದ ಶುದ್ಧಿ ಹಾಗೂ ಮಹಾಪೂಜೆ ನಡೆಯಲಿದೆ. ಜೂ.8 ರಂದು ಬಿಂಬದಲ್ಲಿ ತತ್ವನ್ಯಾಸ ಮತ್ತು ತತ್ವನ್ಯಾಸ ಹೋಮ, ಬಿಂಬ ಆಧಿವಾಸ ಪೂಜೆ, ಧಾನ್ಯಾದಿವಾಸ ನೆರವೇರಲಿದ್ದು, ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಹಾಗೂ ಅನ್ನದಾನ ಜರುಗಲಿದೆ. ಸಂಜೆ 5.30 ರಿಂದ ಕಳಸ ಪ್ರತಿಷ್ಠೆ, ಕಳಶಾಧಿವಾಸ ಹೋಮ, ವಾಸ್ತು ರಾಕ್ಷೋಘ್ನ ಹೋಮ, ಬಿಂಬ…

Read More

ಪಾರಾಣೆ ಜೂ.1 : ಗ್ರಾಮೀಣಾ ಮಹಿಳೆಯರ ಆರ್ಥಿಕ ಮಟ್ಟ ಸುಧಾರಣೆಗಾಗಿ ರಾಜ್ಯ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಹಿಳೆಯರು ಯೋಜನೆ ಸದುಪಯೋಗಪಡಿಸಿಕೊಂಡು ಮುನ್ನಡೆಯಬೇಕು ಎಂದು ಪದ್ಮಶ್ರೀ ಪುರಸ್ಕೃತ ಎಂ.ರಾಣಿ ಮಾಚಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೊಡಗು ಜಿ.ಪಂ, ಮಡಿಕೇರಿ ತಾ.ಪಂ ಮತ್ತು ಕೊಣಂಜಗೇರಿ ಪಾರಾಣೆ ಗ್ರಾ.ಪಂ ಹಾಗೂ ಸಂಜೀವಿನಿ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಪಾರಾಣೆ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ, ಕರಕುಶಲ ಉತ್ಪಾದನೆಗಳ ಪ್ರದರ್ಶನ ಮೇಳ ಮತ್ತು ಮಹಿಳಾ ಸಂಘಗಳ ವಿವಿಧ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿ ಮಾಚಯ್ಯ, ಪಟ್ಟಣ ನಗರ ಭಾಗಗಳಲ್ಲಿ ನೆಲೆಸಿರುವ ಮಹಿಳೆಯರು ಮಾತ್ರ ಅಭಿವೃದ್ಧಿ ಹೊಂದುತ್ತಿರುವುದು ಎನ್ನುವುದು ದೂರದ ಮಾತಾಗಿದೆ. ಗ್ರಾಮೀಣಾ ಭಾಗದ ಮಹಿಳೆಯರು ತಮ್ಮ ಪ್ರತಿಭೆಯನ್ನು ಇಂತಹ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಬೇಕು. ಸರ್ಕಾರವು ಗ್ರಾಮೀಣಾ ಭಾಗದ ಮಹಿಳೆಯರಿಗೆ ಆರ್ಥಿಕ ಮಟ್ಟ ಸುಧಾರಿಸಲು ಹಲವಾರು ಯೋಜನೆಗಳಿಗೆ ಅನುದಾನಗಳನ್ನು ಬಿಡುಗಡೆ ಮಾಡುತ್ತದೆ.…

Read More

ಮಡಿಕೇರಿ ಜೂ.1 : ಪಕ್ಷದ ಪರವಾಗಿ ದುಡಿದವರಿಗೆ ಅಕಾಡಮಿ, ನಿಗಮ ಮಂಡಳಿಯಲ್ಲಿ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಕೊಡಗಿನಲ್ಲಿ ಇದೀಗ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಇಬ್ಬರು ಶಾಸಕರೂ ಪರಿಣತರಾಗಿದ್ದು, ಒಬ್ಬರಿಗಾದರೂ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಬಿಜೆಪಿಗೆ ಹೆಚ್ಚು ಮತ ಬರುತ್ತಿದ್ದ ಕಡೆಗಳಲ್ಲಿ ಕಾಂಗ್ರೆಸ್ ಗೆ ಹೆಚ್ಚು ಮತ ಬಂದಿದೆ. ಸಂಪಾಜೆ ಪೆರಾಜೆ ಭಾಗದಲ್ಲಿ ಒಂದಂಕಿ ಇಂದ ಎರಡಂಕಿಗೆ ಮತ ಏರಿಕೆಯಾಗಿದೆ ಆದ್ದರಿಂದ ಮುಂದಿನ ಅಕಾಡೆಮಿ, ನಿಗಮ ಮಂಡಳಿಗಳಿಗೆ ಪಕ್ಷದಲ್ಲಿ ನಿರಂತರವಾಗಿ ತೊಡಗಿಕೊಂಡಿರುವ, ಪಕ್ಷಪರ ದುಡಿದವರಿಗೆ ಸ್ಥಾನ ನೀಡುವಂತೆ ಮನವಿ ಮಾಡಿದರು. ಕಾಂಗ್ರೆಸ್ ವಕ್ತಾರ ಪಿ.ಎಲ್.ಸುರೇಶ್ ಮಾತನಾಡಿ, ಕಾಂಗ್ರೆಸ್ ಗೆಲುವಿನಲ್ಲಿ ಸಂಪಾಜೆ, ಚೆಂಬು, ಬೆಟ್ಟಗೇರಿ ಭಾಗಗಳಲ್ಲಿ ಬಹುಸಂಖ್ಯತರಾದ ಅರೆಭಾಷಿಕ ಸಮುದಾಯದವರು ಮಹತ್ತರ ಪಾತ್ರವಹಿಸಿದ್ದಾರೆ. ಬದಲಾವಣೆ ದೃಷ್ಠಿಯಿಂದ ಪ್ರಬುದ್ಧ ಅಭ್ಯರ್ಥಿಗೆ…

Read More