ಮಡಿಕೇರಿ ಮೇ 31 : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ ವಿಶ್ವ ಪರಿಸರ ದಿನಾಚರಣೆ-2023 ರ ಅಂಗವಾಗಿ ಶಾಲಾ ಮಕ್ಕಳಿಗೆ ಜೂ.2 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಸಂತ ಮೈಕಲರ ಶಾಲೆಯಲ್ಲಿ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ `ಪರಿಸರ ಕುರಿತು ಸ್ಥಳದಲ್ಲೇ ಚಿತ್ರ ಬರೆಯುವ ಹಾಗೂ ಪ್ರಬಂಧ ಸ್ಪರ್ಧೆ’ ನಡೆಯಲಿದೆ. ಈ ವರ್ಷದ ಘೋಷ ವಾಕ್ಯವು `ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರಗಳು(ಸೊಲ್ಯೂಷನ್ಸ್ ಟು ಪ್ಲಾಸ್ಟಿಕ್ ಪೊಲ್ಯೂಷನ್)(ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರ ಕಲೆಗೆ ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು). ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಎಸ್.ಪ್ರದೀಪ್, ಮಮದಾಪುರ, ಉಪ ಪರಿಸರ ಅಧಿಕಾರಿಗಳು 7348983888, ಕೆ.ಎ.ಆಸ್ಟಿನ್, ಯೋಜನಾ ಸಹಾಯಕರು 9986729289(ಕಚೇರಿ 08272-221855) ಹಾಗೂ ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಮೇ 31 : ಕೊಡಗು ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು, ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರದಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತ ಬಂದಿದೆ. ಈ ಯೋಜನೆಯಡಿ ಬಿಪಿಎಲ್ ಕುಟುಂಬ ವರ್ಗದವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕುಟುಂಬ ವರ್ಗದವರಿಗೆ ಪ್ಯಾಕೇಜ್ ದರದ ಶೇ.30 ರಿಯಾಯಿತಿ ಇದೆ. ಈ ಸೇವೆಗಳನ್ನು ಪಡೆದುಕೊಳ್ಳಲು ಆರೋಗ್ಯ ಇಲಾಖೆಯಿಂದ ಹಾಗೂ ಗ್ರಾಮ ಒನ್ ಕೇಂದ್ರಗಳಿಂದ ನೀಡಿರುವ ಆರೋಗ್ಯ ಕಾರ್ಡ್‍ಗಳು. ಬಿಪಿಎಲ್, ಎಪಿಎಲ್, ಆಧಾರ್ ಕಾರ್ಡ್‍ಗಳು ಅವಶ್ಯಕವಾಗಿ ಬೇಕಾಗಿರುತ್ತದೆ. ಹಾಗೂ ಜಿಲ್ಲೆಯ ರೋಗಿಗಳು ಮತ್ತು ಸಾರ್ವಜನಿಕರು ಎಬಿಎಆರ್‍ಕೆ ಯೋಜನೆಯಡಿ ಹೆಚ್ಚಿನ ಚಿಕಿತ್ಸೆಗೆ ಹೊರ ಜಿಲ್ಲೆಗಳಿಗೆ ತೆರಳುವ ಸಂದರ್ಭದಲ್ಲಿ ಕಡ್ಡಾಯವಾಗಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ರೆಫರಲ್ ನಮೂನೆಗಳನ್ನು ಪಡೆದುಕೊಂಡು ತೆರಳಬೇಕು ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆಗಾಗಿ ಸಾರ್ವಜನಿಕರು ಹಾಗೂ…
ಮಡಿಕೇರಿ ಮೇ 31 : ಪ್ರಸಕ್ತ (2023-24) ಸಾಲಿನಲ್ಲಿ ಮೀನುಗಾರಿಗೆ ಇಲಾಖೆಯಿಂದ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯವಲಯ ಯೋಜನೆಗಳ ಅಡಿಯಲ್ಲಿ ಅನುದಾನ ಲಭ್ಯವಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಜಿಲ್ಲಾ ಪಂಚಾಯತ್ ಯೋಜನೆಗಳಡಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗಧಿಪಡಿಸಿದ ದರಗಳಲ್ಲಿ ಬಿತ್ತನೆಗೆ ಯೋಗ್ಯವಾದ, ಮೀನುಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದು. ಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂದಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ನೊಂದಾಯಿಸಿಕೊಳ್ಳಬೇಕು. ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಮೀನುಗಾರಿಕೆಗೆ ಅಗತ್ಯವಿರುವ ಸಲಕರಣೆಗಳನ್ನು ವಿತರಣೆ ಮಾಡಲಾಗುವುದು. ರಾಜ್ಯವಲಯ/ ಕೇಂದ್ರ ಯೋಜನೆಗಳಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ, ಮೀನುಗಾರಿಕೆಗೆ ಅಗತ್ಯವಿರುವ ಸಲಕರಣೆಗಳನ್ನು ಉಚಿತ ವಿತರಣೆ ಮಾಡಲಾಗುವುದು. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನು ಕೃಷಿ ಕೊಳ ನಿರ್ಮಾಣ, ಐಸ್ ಪೆಟ್ಟಿಗೆಯೊಂದಿಗೆ ಸೈಕಲ್ ದ್ವಿಚಕ್ರ, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ ಹಾಗೂ ಇತರೆ ಯೋಜನೆಗಳ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಕಚೇರಿಗಳಿಗೆ ಕಚೇರಿ ಸಮಯದಲ್ಲಿ ಹಾಗೂ ಮಡಿಕೇರಿ ತಾಲ್ಲೂಕು 9769070850,…
ಮಡಿಕೇರಿ ಮೇ 31 : ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂ.1 ರಿಂದ ಜು.30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ. ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ, ಮೀನುಗಳನ್ನು ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣಿಯಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಮೇ 31 : ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಶಿಕ್ಷಣ ಪಡೆಯುವುದರ ಜೊತೆಗೆ ತಂಬಾಕು ಮುಕ್ತ ವಾತಾವರಣವನ್ನಾಗಿಸಲು ಶ್ರಮಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ “ನಮಗೆ ಆಹಾರ ಬೇಕು, ತಂಬಾಕು ಅಲ್ಲ” ಎಂಬ ಧ್ಯೇಯ ವಾಕ್ಯದೊಂದಿಗೆ ನಗರದ ಸರ್ಕಾರಿ ಪ್ರೌಢ ಶಾಲಾ ಸಭಾಂಗಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ನಡೆಯಿತು. ಆರೋಗ್ಯ, ಶಿಕ್ಷಣ, ಸಂಸ್ಕøತಿ ಈ ಎಲ್ಲವೂ ಪ್ರಾರಂಭವಾಗುವುದು ಶಾಲಾ ದಿನಗಳಲ್ಲಿ. ವಿದ್ಯಾರ್ಥಿಗಳ ಜೀವನ ಪ್ರಾರಂಭವಾಗುವುದೇ ಶಾಲಾ ದಿನಗಳಲ್ಲಿ, ಆದ್ದರಿಂದ ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೆ ತಮ್ಮನ್ನು ತಾವು ರಕ್ಷಿಸಿಕೊಂಡು ಕುಟುಂಬವನ್ನು ರಕ್ಷಿಸುವುದರ ಜೊತೆಗೆ ಸಮಾಜವನ್ನು ರಕ್ಷಿಸಬೇಕು ಎಂದು ಪ್ರಸಾದ್ ಹೇಳಿದರು. ಇಂತಹ ದುಶ್ಚಟಗಳನ್ನು ಸಮಾಜದಿಂದ ಹೋಗಲಾಡಿಸಲು ಜಿಲ್ಲಾ ಆರೋಗ್ಯ…
ಮಡಿಕೇರಿ ಮೇ 31 : ಕೊಡಗು ಜಿಲ್ಲೆಯಲ್ಲಿ ಮೀನು ಕೃಷಿಗೆ ವಿಪುಲ ಅವಕಾಶಗಳಿದ್ದು, ಜಿಲ್ಲೆಯ ರೈತರು ಆಧುನಿಕ ತಂತ್ರಜ್ಞಾನದ ಮೂಲಕ ಮೀನು ಕೃಷಿಯಲ್ಲಿ ತೊಡಗಿಸಿಕೊಂಡಲ್ಲಿ ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬಹುದು ಎಂದು ಹಾರಂಗಿ ಮೀನು ಮರಿ ಉತ್ಪಾದನೆ ಮತ್ತು ಪಾಲನೆ ಕೇಂದ್ರದ ಸಹಾಯಕ ನಿರ್ದೇಶಕ ಎಂ.ಎಸ್. ಸಚಿನ್ ಅಭಿಪ್ರಾಯಪಟ್ಟರು. ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಬುಧವಾರ ಹಾರಂಗಿ ಮೀನು ಮರಿ ಉತ್ಪಾದನೆ ಮತ್ತು ಪಾಲನೆ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಮಾಧ್ಯಮ ಸಂವಾದ ಹಾಗೂ ಮೀನು ಮರಿ ಉತ್ಪಾದನೆ, ಪಾಲನಾ ಕೇಂದ್ರಕ್ಕೆ ಭೇಟಿಯ ಸಂದರ್ಭ ಮಾತನಾಡಿದ ಅವರು, ನಾವು ಭೂಮಿಯ ಮೇಲಿನ ಬೆಳೆಗಳ ಬಗ್ಗೆ ಮಾತ್ರ ಹೆಚ್ಚು ಒತ್ತು ನೀಡುತ್ತಿದ್ದೇವೆ. ಆದರೆ ನೀರಿನ ಒಳಗಿನ ಕೃಷಿಯ ಬಗ್ಗೆ ಆಸಕ್ತಿ ತೋರುತ್ತಿಲ್ಲ. ಆದರೆ ಮೀನು ಕೃಷಿಯಲ್ಲಿ ತೊಡಗಿಸಿಕೊಂಡಲ್ಲಿ ಅನ್ನವೇ ಚಿನ್ನವಾಗುವ ದಿನ ದೂರವಿಲ್ಲ ಎಂದು ನುಡಿದರು. ಕೊಡಗು ಸೇರಿದಂತೆ ಭಾರತದಲ್ಲಿ ಮೀನು ಕೃಷಿಗೆ ಉತ್ತಮ ಅವಕಾಶವಿದ್ದು, ರೈತರು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು…
ಮಡಿಕೇರಿ ಮೇ 31 : ಜಿಲ್ಲಾಡಳಿತ, ಜಿ.ಪಂ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಸಹಯೋಗದಲ್ಲಿ ಜಂಟಿಯಾಗಿ ಏರ್ಪಡಿಸಿದ್ದ ದಾಖಲಾತಿ ಆಂದೋಲನ ಮತ್ತು ಶಾಲಾ ಪ್ರಾರಂಭೋತ್ಸವಕ್ಕೆ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಹಾಗೂ ಕಲಿಕೆಯೊಂದಿಗೆ ಪೋಷಕರಿಗೆ ಗೌರವ ಸಲ್ಲಿಸಬೇಕು. ಮಕ್ಕಳು ಆಟ- ಪಾಠದೊಂದಿಗೆ ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಡಿಡಿಪಿಐ ಸಿ.ರಂಗಧಾಮಯ್ಯ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ಕಲಿಕೆಗೆ ಶಾಲಾ ಪ್ರಾರಂಭದಲ್ಲೇ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸಿ ಅವರಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದರು. ಬಿಇಓ ಕೆ.ವಿ.ಸುರೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲಾಗುತ್ತಿದೆ.…
ನಾಪೋಕ್ಲು ಮೇ 31 : ನಾಪೋಕ್ಲು ಗ್ರಾ.ಪಂ ಗೆ ಒಳಪಟ್ಟ ಬೇತು ಗ್ರಾಮದಿಂದ ಇಂದಿರಾ ನಗರಕ್ಕೆ ತೆರಳುವ ರಸ್ಥೆಗೆ ನಿರ್ಮಿಸಲಾದ ಮೋರಿ ಕುಸಿದು ಅಪಾಯಕ್ಕೆ ಅಹ್ವಾನ ನೀಡುವಂತಿದ್ದು, ಶೀಘ್ರದಲ್ಲಿ ದುರಸ್ಥಿ ಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಳೆದ ಒಂದು ವಾರದ ಹಿಂದೆಯೇ ರಸ್ತೆಯ ಮೋರಿ ಕುಸಿದಿದ್ದು, ಇದರ ಬಗ್ಗೆ ಸಂಬಂಧಪಟ್ಟ ಪಂಚಾಯಿ ಅಧಿಕಾರಿ, ಜನಪ್ರತಿನಿದಿನಗಳ ಗಮನಕ್ಕೆ ತಂದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ಹಲವಾರು ವಾಹನಗಳು ಸಂಚರಿಸುತ್ತಿದ್ದು, ರಸ್ತೆಯ ಮಧ್ಯ ಭಾಗದಲ್ಲೇ ಮೋರಿ ಕುಸಿದ ಕಾರಣ ಅಪಾಯ ಸಂಭವಿಸುವ ಸಾಧ್ಯತೆ ಎಚ್ಚಾಗಿದೆ ಎಂದರು. ಮುಂದಿನ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗಲಿದ್ದು, ಗ್ರಾಮದ ರಸ್ತೆ ಬದಿಯಲ್ಲಿ ನಿರ್ಮಿಸಲಾದ ಚರಂಡಿಗಳು ತ್ಯಾಜ್ಯ ಮತ್ತು ಮಣ್ಣುಗಳಿಂದ ತುಂಬಿಕೊಂಡಿದ್ದು ಇದರಿಂದ ಮಳೆನೀರು ರಸ್ತೆಯಲ್ಲೇ ಪ್ರವಾಹದಂತೆ ಹರಿಯುವಂತ್ತಾಗಿದೆ. ಇದರಿಂದ ರಸ್ತೆಯಲ್ಲಿ ಪಾದಾಚಾರಿಗಳು, ಶಾಲಾಮಕ್ಕಳು ನಡೆದಾಡಲು ಬವಣೆ ಪಡುವ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಆದ್ದರಿಂದ ಸಂಬಂಧಪಟ್ಟ…
ಮಡಿಕೇರಿ ಮೇ 31 : ಮಡಿಕೇರಿ ತಾಲೂಕು ಬಂಟರ ಸಂಘದ ಅಧ್ಯಕ್ಷರಾಗಿ ಬಿ.ಐ.ರಮೇಶ್ ರೈ ಪುನರಾಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿ ರಚನೆ ಸಂಬಂಧ ನಗರದ ಜಿಲ್ಲಾ ಬಂಟರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಬಿ.ಆರ್.ಸದಾಶಿವ ರೈ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಕೆ. ವಿಠಲ ರೈ, ಖಜಾಂಜಿಯಾಗಿ ಬಿ.ಬಿ. ದಿವೇಶ್ ರೈ, ಗೌರವ ಸಲಹೆಗಾರರಾಗಿ ಬಿ.ಸಿ.ಹರೀಶ್ ರೈ ಕೂಟುಹೊಳೆ ನೇಮಕಗೊಂಡಿದ್ದಾರೆ. ನಿರ್ದೇಶಕರಾಗಿ ಶರತ್ ಕುಮಾರ್ ಶೆಟ್ಟಿ, ಗಿರೀಶ್ ರೈ ಮೂರ್ನಾಡು, ಲತೇಶ್ ಆಳ್ವ ಗಾಳಿಬೀಡು, ಶಶಿಕಲ ಲೋಕೇಶ್ ರೈ(ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ), ಯಶೋಧ ಶಂಭು ಶೆಟ್ಟಿ (ತಾಲೂಕು ಮಹಿಳಾ ಘಟಕದ ಖಜಾಂಜಿ), ಚಂದ್ರಶೇಖರ್ ರೈ (ಮೂರ್ನಾಡು ಘಟಕ ಅಧ್ಯಕ್ಷ), ಜಯಂತಿ ಲವ ರೈ (ಮೂರ್ನಾಡು ಮಹಿಳಾ ಘಟಕದ ಅಧ್ಯಕ್ಷೆ), ರಾಧಾಕೃಷ್ಣ ರೈ (ನಾಪೋಕ್ಲು ಘಟಕದ ಅಧ್ಯಕ್ಷ), ಎಂ.ಡಿ. ಸುಭಾಶ್ ಆಳ್ವ (ಗಾಳಿಬೀಡು ಘಟಕ ಅಧ್ಯಕ್ಷ), ಬಿ.ಡಿ. ಲೋಕೇಶ್ ರೈ (ತಾಳತ್ತಮನೆ ಘಟಕದ ಅಧ್ಯಕ್ಷ), ಕಮಲಾಕ್ಷಿ ರೈ…
ಮಡಿಕೇರಿ ಮೇ 31 : ತಾಳತ್ತಮನೆಯ ಕೆ.ಬಿ.ಪ್ರೀತಂ ಎಂಬವರ ಮನೆಯ ಒಳಗೆ ಇದ್ದ 4 ಅಡಿ ಉದ್ದದ ನಾಗರ ಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೆರಾ ರಕ್ಷಿಸಿ ಸಂಪಾಜೆ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.






