ಲೇಖಕ: admin

ಚೆಯ್ಯಂಡಾಣೆ  ಮೇ 31 :ವಿರಾಜಪೇಟೆ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ವಾರ್ಷಿಕ ಮಹಾಸಭೆ ಗೋಣಿಕೊಪ್ಪ ಮದರಸದಲ್ಲಿ ನಡೆಯಿತು. ಖತೀಬ್ ಮುಹಮ್ಮದಲಿ ಫೈಝಿ ಸಭೆಯನ್ನು ಉದ್ಘಾಟಿಸಿದರು. ಅಬ್ದುಲ್ ರಹ್ಮಾನ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2023-24 ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎಂ.ಅಬ್ದುಲ್ ರಹಮಾನ್ ಮುಸ್ಲಿಯಾರ್, ಉಪಾಧ್ಯಕ್ಷರಾಗಿ ಪಿ.ಬಿ.ಇಸ್ಮಾಯಿಲ್ ಮುಸ್ಲಿಯಾರ್, ಎಂ.ಸಿ.ಅಶ್ರಫ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹನೀಫ್ ಫೈಝಿ, ಸಹ ಕಾರ್ಯದರ್ಶಿಯಾಗಿ ಮುಹಮ್ಮದ್ ಶುಹೈಬ್ ಫೈಝಿ ಹಾಗೂ ರಫೀಕ್ ಬಾಖವಿ, ಕೋಶಾಧಿಕಾರಿಯಾಗಿ ಕೆ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ನೇಮಕ ಮಾಡಲಾಯಿತು. ಪರೀಕ್ಷಾ ಬೋರ್ಡ್ ಅಧ್ಯಕ್ಷರಾಗಿ ಅಬ್ದುಲ್ಲ ಮುಸ್ಲಿಯಾರ್, ಉಪಾಧ್ಯಕ್ಷರಾಗಿ ರಶೀದ್ ದಾರಿಮಿ, ಐಟಿ ಸಂಯೋಜಕರಾಗಿ ಮಜೀದ್ ಬಾಖವಿ, ಮುಸಾಬಕ ಅಧ್ಯಕ್ಷರಾಗಿ ರಶೀದ್ ದಾರಿಮಿ, ಸಂಚಾಲಕರಾಗಿ ಜುನೈದ್ ಫೈಝಿ, ಎಸ್‍ಕೆಎಸ್‍ಬಿವಿ ಅಧ್ಯಕ್ಷರಾಗಿ ಅಬ್ದುಲ್ ಹಕೀಂ ಅಲ್ ಹಿಶಾಮಿ, ಸಂಚಾಲಕರಾಗಿ ಸಹದ್ ಫೈಝಿ, ಮುಹಲಿಮ್ ಡೇ ಸಂಚಾಲಕರಾಗಿ ಮುಹಮ್ಮದ್ ರೌಫ್ ಹುದವಿ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಕಾರ್ಯದರ್ಶಿ ಅಶ್ರಫ್ ಮುಸ್ಲಿಯಾರ್ ಸ್ವಾಗತಿಸಿದರು. ನೂತನ ಪ್ರಧಾನ…

Read More

ವಿರಾಜಪೇಟೆ ಮೇ 31 : ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಿ ಮಕ್ಕಳನ್ನು ಸ್ವಾಗತಿಸಲಾಯಿತು. ಶಾಲೆಯನ್ನು ತಳಿರು ತೋರಣ ಹಾಗೂ ಹೂವುಗಳಿಂದ ಶೃಂಗರಿಸಲಾಗಿತ್ತು. ಸಂತ ಅನ್ನಮ್ಮ ದೇವಾಲಯದ ಗುರುಗಳಾದ ರೆ. ಫಾ. ದಯಾನಂದ ಪ್ರಭು ಆಶೀರ್ವಚನವನ್ನು ನೀಡಿದರು. ಸಹಾಯಕ ಗುರುಗಳಾದ ರೆ.ಫಾ. ಯೇಸು ಪ್ರಸಾದ್ ಧಾರ್ಮಿಕ ಗ್ರಂಥವನ್ನು ಪಠಿಸಿದರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಕರ್ ಮಾತನಾಡಿ, ಈ ವಿದ್ಯಾಸಂಸ್ಥೆಯಲ್ಲಿ ಎರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮೌಲ್ಯಯುತ ಶಿಕ್ಷಣವನ್ನು ಮಕ್ಕಳಿಗೆ ನೀಡಲಾಗುತ್ತಿದೆ. ಮತ್ತು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಲಾಗುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಈ ಬಾರಿ ಒಂದು ಹೊಸ ಶಾಲಾ ಬಸ್‍ನ್ನು ಖರೀದಿಸಿ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಿಕೊಡಲಾಗಿದ್ದು, ಪ್ರಸ್ತುತದಲ್ಲಿ ಎರಡು ಶಾಲಾ ಬಸ್‍ಗಳು ಗ್ರಾಮೀಣ ಭಾಗಕ್ಕೆ ಸಂಚಾರ ಮಾಡುತ್ತಿದೆ ಎಂದರು. ಇದೇ ಸಂದರ್ಭ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಫಲಿತಾಂಶಕ್ಕೆ ಕಾರಣರಾದ ಶಿಕ್ಷಕರನ್ನು ಅಭಿನಂದಿಸಲಾಯಿತು. ಅಲ್ಲದೇ ಎಸ್.ಎಸ್.ಎಲ್.ಸಿ.ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ…

Read More

ಚೆಯ್ಯಂಡಾಣೆ ಮೇ 31 :  ಶಾಲಾ ಪ್ರಾರಂಭೋತ್ಸವದ ಅಂಗವಾಗಿ  ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ  ಸಿಹಿ ನೀಡಿ  ಬರಮಾಡಿಕೊಂಡರು. ಮುಖ್ಯ ಶಿಕ್ಷಕಿ ಕೆ.ಸಿ.ಮೀನಾ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ವಿದ್ಯಾರ್ಥಿಗಳಿಗೆ ಕ್ರೀಡಾ ಪರಿಕರಗಳ ಮೂಲಕ ಆಟದ ಮೂಲಕ ಪಾಠ ಎಂಬಂತೆ ವಿಶಿಷ್ಟ ರೀತಿಯಲ್ಲಿ ಪ್ರಾರಂಭೋತ್ಸವ ಆಚರಿಸಲಾಯಿತು. ಈ ಸಂದರ್ಭ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರತ್ನಾ, ಸದಸ್ಯರು, ಶಿಕ್ಷಕ ವೃಂದವರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ :  ಅಶ್ರಫ್ 

Read More

ನಾಪೋಕ್ಲು ಮೇ 31 : ಕೊಡವ ಜನಾಂಗದ ಸಂಸ್ಕೃತಿ ಮತ್ತು ಪರಂಪರೆಯನ್ನು ಯುವ ಪೀಳಿಗೆಗೆ ತಿಳಿಸುವಂತಹ ಕಾರ್ಯ ಆಗಬೇಕು ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು. ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ನೆಲಜಿ ಫಾರ್ಮರ್ಸ್ ಡೆವಲಪ್ ಮೆಂಟ್ ಅಂಡ್ ರಿಕ್ರಿಯೆಶನ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಮೂರನೇ ವರ್ಷದ ರಾಜ್ಯಮಟ್ಟದ ಕೊಡವ ಕುಟುಂಬ ಕಪ್-“ತೆಂಗೆ ಬೊಡಿ ನಮ್ಮೆ” ಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಕೊಡವ ಸಂಸ್ಕೃತಿಯ ಭಾಗವಾದ ತೋಕುನಮ್ಮೆ ಇಂದು ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿದೆ. ಜನಾಂಗದ ಮಂದಿ ಇದರಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ನಮ್ಮ ಮಕ್ಕಳಿಗೆ ಶಿಕ್ಷಣದ ಮಹತ್ವ ತಿಳಿಸಬೇಕು, ಹಿರಿಯರು ಕಾಪಾಡಿಕೊಂಡು ಬಂದ ತೋಟ, ಜಾಗಗಳ ರಕ್ಷಣೆಯೊಂದಿಗೆ ಶಿಕ್ಷಣಕ್ಕೂ ಆದ್ಯತೆ ನೀಡುವಂತಾಗಬೇಕು, ಆಚಾರ ವಿಚಾರಗಳ ರಕ್ಷಣೆ ಮಾಡಿ ಸಂಸ್ಕೃತಿ ಉಳಿಯುವಂತಾಗಬೇಕು ಎಂದರು. ನಿವೃತ್ತ ಐಎಎಸ್ ಅಧಿಕಾರಿ ಮುರುವಂಡ ಅಯ್ಯಪ್ಪ ಮಾತನಾಡಿ, ಕೊಡವ ಸಂಸ್ಕೃತಿಯನ್ನು ಉಳಿಸುವ ಕೆಲಸ ಆಗಬೇಕು. ಕೊಡವ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಜವಾಬ್ದಾರಿ…

Read More

ಮಡಿಕೇರಿ ಮೇ 30 :  ಕೊಡಗು ಜಿಲ್ಲಾ ಅನುದಾನ ರಹಿತ ಶಾಲೆಯ ವತಿಯಿಂದ  ನೂತನವಾಗಿ ಆಯ್ಕೆಯಾದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು  ಅಭಿನಂದಿಸಲಾಯಿತು. ಶಾಲೆಯ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಕೋಟ್ರಂಗಡ  ಹಾಗೂ ಎಂ.ಎಸ್. ಪೂವಯ್ಯ  ಹೂವು ನೀಡಿ  ಶುಭಕೋರಿದರು. ಈ ಸಂದರ್ಭ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ  ಶ್ರೀಶೈಲ ಬೆಳಗಿ ಹಾಗೂ ಇಸಿ ಓ ಅಯ್ಯಪ್ಪ ಉಪಸ್ಥಿತರಿದ್ದರು.

Read More

ಮಡಿಕೇರಿ ಮೇ 31 :  ಪೊಲೀಸ್ ಠಾಣೆಗಳಿಗೆ ತೆರಳಿ ದೂರು ನೀಡುವ ದೂರುದಾರರ ನೆರವಿಗೆ ಪೊಲೀಸ್ ಕಂಟ್ರೋಲ್ ರೂಂ ಸಿದ್ಧವಿದೆ ಎಂದು ಎಸ್.ಪಿ ಕೆ ರಾಜರಾಮನ್ ತಿಳಿಸಿದ್ದಾರೆ.ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳೆದುಕೊಂಡ 23 ಮಂದಿಗೆ ಮೊಬೈಲ್‍ಗಳನ್ನು ಹಿಂತಿರುಗಿಸಿ  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ದೂರು ನೀಡಲು ತೆರಳುವವರ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆ ಮಾಹಿತಿಯನ್ನು ಕಂಟ್ರೋಲ್ ರೂಂ ಪಡೆದುಕೊಂಡು ದೂರುದಾರರನ್ನು ಸಂಪರ್ಕಿಸುತ್ತದೆ. ಬಳಿಕ ಠಾಣೆಗೆ ತೆರಳಿದ ಉದ್ದೇಶ, ದೂರಿನ ಮಾಹಿತಿ ಪಡೆದು ಕೊಳ್ಳಲಾಗುತ್ತದೆ. ಅಲ್ಲದೇ ಠಾಣೆಗಳಲ್ಲಿ ಸೂಕ್ತ ಸ್ಪಂದನೆ ದೊರೆತಿದೆಯೇ ? ಅಧಿಕಾರಿ, ಸಿಬ್ಬಂದಿ ಗೌರವಯುತವಾಗಿ ನಡೆದುಕೊಂಡಿದ್ದಾರೆಯೇ, ನೀಡಿರುವ ದೂರಿಗೆ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಮಾಹಿತಿಯನ್ನು ದೂರುದಾರರಿಂದ ಪಡೆದುಕೊಳ್ಳಲಾಗುತ್ತದೆ. ಈ ಸಂದರ್ಭ ಯಾವುದಾದರೂ ಠಾಣೆಗಳಲ್ಲಿ ಸೂಕ್ತ ಸ್ಪಂದನೆ ದೊರೆತ್ತಿಲ್ಲ ಎಂಬ ಬಗ್ಗೆ ದೂರುದಾರರು ತಿಳಿಸಿದರೆ, ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ ಅವರು,…

Read More

ಮಡಿಕೇರಿ ಮೇ 30 : ರಾಜ್ಯದಲ್ಲಿ ಸಧ್ಯದಲ್ಲಿಯೇ ಜಿ.ಪಂ ಮತ್ತು ತಾ.ಪಂ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷ ಕೊಡಗು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನಲ್ಲಿ ಕ್ಷೇತ್ರ ಮಟ್ಟದಲ್ಲಿ ಚುನಾವಣೆಗೆ ತಯಾರಿ ಆರಂಭಿಸಿದ್ದು, ಸ್ಪರ್ಧಿಸಲು ಆಸಕ್ತಿ ಹೊಂದಿರುವ ಕಾರ್ಯಕರ್ತರ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ. ಖಾಲಿ ಇರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆದಿದೆ ಎಂದು ಹೇಳಿದ್ದಾರೆ. ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮೂಲಕ ಸ್ಪರ್ಧಿಸಲು ಆಸಕ್ತಿ ಹೊಂದಿರುವವರು ಭರ್ತಿ ಮಾಡಿದ ಅರ್ಜಿಯೊಂದಿಗೆ ಜೂ.15 ರೊಳಗೆ ಪಕ್ಷದ ಪ್ರಮುಖರಾದ ಹೆಚ್.ಬಿ.ಪೃಥ್ವಿ-98800 73440, ಎಂ.ಕೆ.ಅಪ್ಪಯ್ಯ-98806 54179, ಭೋಜಣ್ಣ ಸೋಮಯ್ಯ-7483991359, ಸಿ.ಎಸ್.ರವೀಂದ್ರ – 93422 57506, ಕೆ.ಪಿ.ಬೋಪಣ್ಣ -78992 73938 ಅವರನ್ನು ಸಂಪರ್ಕಿಸಬಹುದು. ಅರ್ಹ ಅಭ್ಯರ್ಥಿಗಳ ಅರ್ಜಿಯನ್ನು ಜಿಲ್ಲೆ ಮತ್ತು ರಾಜ್ಯ ನಾಯಕರುಗಳ ಸಮ್ಮುಖದಲ್ಲಿ ಪರಿಶೀಲಿಸಲಾಗುವುದು ಎಂದು ಭೋಜಣ್ಣ ಸೋಮಯ್ಯ…

Read More

ಮಡಿಕೇರಿ ಮೇ 30 : ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಸೇರಿದಂತೆ ವಿವಿಧ ಖಾಸಗಿ ಶಾಲೆಗಳು  ಪ್ರಾರಂಭಗೊಂಡಿದ್ದು ವಿದ್ಯಾರ್ಥಿಗಳನ್ನು ಶಿಕ್ಷಕರು ಆತ್ಮೀಯವಾಗಿವಾಗಿ  ಬರಮಾಡಿಕೊಂಡರು. ಇಲ್ಲಿನ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆ, ಶಾಂತಿಭವನ, ಕೊಡಗರಹಳ್ಳಿ ಶಾಂತಿನಿಕೇತನ ವಿದ್ಯಾಸಂಸ್ಥೆಗಳಲ್ಲಿ ತರಗತಿಗಳು ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಬಹು ಉತ್ಸುಕತೆ ಮತ್ತು ಸಂತೋಷದಿಂದಲೇ ಹೆಜ್ಜೆ ಹಾಕಿದರು‌. ಶಾಲೆಯ ಮುಂಭಾಗ ಮತ್ತು ಆವರಣವನ್ನು ಬಾಳೆಕಂಬ, ತಳೀರು ತೋರಣ, ಹೂವುಗಳಿಂದ ಅಲಂಕರಿಸಲಾಗಿತ್ತು. ಶಾಲೆಯ ಎಲ್ಲ ಶಿಕ್ಷಕರು ಶಾಲಾ ಮಹಾದ್ವಾರ ಅಕ್ಕಪಕ್ಕದಲ್ಲಿ ನಿಂತು ಚಪ್ಪಾಳೆ ತಟ್ಟೆ, ಹೂವು, ಸಿಹಿ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ಮುಖ್ಯ ದ್ವಾರದಿಂದ ತಮ್ಮ ಮಕ್ಕಳನ್ನು ವಾದ್ಯದೊಂದಿಗೆ ಕರೆ ತರಲಾಯಿತು‌. ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ಮುಖ್ಯಸ್ಥ  ಫಾ.ಅರುಳ್ ಸೆಲ್ವಕುಮಾರ್, ಮುಖ್ಯ ಶಿಕ್ಷಕ ಸೆಲ್ವರಾಜ್, ಶಿಕ್ಷಕರು ಇದ್ದರು. ಸಮೀಪದ ಕೊಡಗರಹಳ್ಳಿ ಶಾಂತಿನಿಕೇತನ‌ ಶಾಲೆಯಲ್ಲೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಪ್ರೀತಿಯಿಂದ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಪಾತಿಮಾ, ಶಿಕ್ಷಕರು, ಆಡಳಿತ ಮಂಡಳಿ ಪದಾಧಿಕಾರಿಗಳು…

Read More

ಮಡಿಕೇರಿ ಮೇ : 30 ಚೆನೈನ ಕೇಂದ್ರೀಯ ಪಿಂಚಣಿ ಕಾರ್ಯಾಲಯದ ವತಿಯಿಂದ ನಗರದ ಮೈತ್ರಿ ಪೊಲೀಸ್ ಭವನದಲ್ಲಿ ಸ್ಪರ್ಶ್‍ಗೆ ವರ್ಗಾಯಿಸಲ್ಪಟ್ಟ ಮಿಲಿಟರಿ ಪಿಂಚಣಿ ಪಡೆಯುವ ಮಾಜಿ ಸೈನಿಕರು/ ಕುಟುಂಬ ಪಿಂಚಣಿದಾರರ ಕುಂದುಕೊರತೆ ನಿವಾರಣಾ ಕಾರ್ಯಕ್ರಮವು ಮಂಗಳವಾರ ನಡೆಯಿತು. ಹಾಗೂ ಈ ಕಾರ್ಯಕ್ರಮವು ಮೇ 31 ರಂದು ಕೂಡ ನಡೆಯಲಿದೆ. ಬೆಂಗಳೂರು ಡಿಪಿಡಿಒ ವಿ.ಭುವನೇಶ್ವರಿ ಅವರು ಸ್ಪರ್ಶ್ ಹಾಗೂ ಸ್ಪರ್ಶ್‍ಗೆ ವರ್ಗಾಯಿಸಲ್ಪಟ್ಟ ಮಿಲಿಟರಿ ಪಿಂಚಣಿದಾರರು ಎದುರಿಸುತ್ತಿರುವ ಕುಂದುಕೊರತೆಗಳ ಕುರಿತು ಹಾಗೂ ಅವುಗಳ ನಿವಾರಣೆ ಕುರಿತು ಈ ಕಾರ್ಯಕ್ರಮದಲ್ಲಿ ಕೈಗೊಳ್ಳುವ ಕ್ರಮದ ಕುರಿತು ವಿವರಿಸಿದರು. ಲೇ ಕರ್ನಲ್ ಕಿರಣ್ ಕುಮಾರ್ ಗೆಡೇಲಾ ಡಿಎಸ್‍ಸಿ ಕಣ್ಣೂರು, ಮೇಜರ್ ಬಾಲಸುಬ್ರವ್ಮಣ್ಯಂ, ಜಂಟಿ ನಿರ್ದೇಶರು, ಸೈನಿಕ ಕಲ್ಯಾಣ ಇಲಾಖೆ, ಮಡಿಕೇರಿ, ಮೇಜರ್ ಉಮೇದ್ ಸಿಂಗ್, ಎಎಸ್‍ಸಿ ಅಭಿಲೇಖಾಲಯ, ಬೆಂಗಳೂರು, ಲೆಫ್ಟಿನೆಂಟ್ ಅನುಜ್ ರಾಣಾ, ಡಿಎಸ್‍ಸಿ ಅಭಿಲೇಖಾಲಯ, ಇವರುಗಳು ಸದರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ಪರ್ಶ್ ಹಾಗೂ ಈ ಕಾರ್ಯಕ್ರಮದ ಸದುಪಯೋಗ ಪಡೆಯಲು ಕೋರಿದರು. ಈ ಕಾರ್ಯಕ್ರಮದಲ್ಲಿ ಸುಮಾರು ನೂರೈವತ್ತು ಮಿಲಿಟರಿ…

Read More

ಮಡಿಕೇರಿ ಮೇ 25 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ ಶಿಶಿಕ್ಷು ಅಧಿನಿಯಮ 1961 ರನ್ವಯ ಪೂರ್ಣ ಅವಧಿಯ ತಾಂತ್ರಿಕ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಿದ ಮೆಕ್ಯಾನಿಕಲ್ ಡೀಸೆಲ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರೀಷಿಯನ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್, ವೆಲ್ಡರ್, ಫಿಟ್ಟರ್ ಈ ಶಿಶಿಕ್ಷು ವೃತ್ತಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜೂ. 8 ರಂದು ನೇರ ಸಂದರ್ಶನ ನಡೆಯಲಿದೆ. ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ: ಮೆಕ್ಯಾನಿಕಲ್ ಡೀಸೆಲ್ (43 ಸ್ಥಾನ), ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (10 ಸ್ಥಾನ), ಎಲೆಕ್ಟ್ರೀಷಿಯನ್(20 ಸ್ಥಾನ), ಮೋಟಾರ್ ಮೆಕ್ಯಾನಿಕ್ ವೆಹಿಕಲ್ (19 ಸ್ಥಾನ), ವೆಲ್ಡರ್(05 ಸ್ಥಾನ), ಫಿಟ್ಟರ್(5 ಸ್ಥಾನ), ಪಾಸಾ(10 ಸ್ಥಾನ). ತರಬೇತಿ ಅವಧಿ ಒಂದು ವರ್ಷ ಆಗಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ…

Read More