ಲೇಖಕ: admin

ಮಡಿಕೇರಿ ಮೇ 30 : 2023-24 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ತಿಳಿಸಿದ್ದಾರೆ. ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್‍ಎಟಿಎಸ್ಐ (SATS ID) ಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in/ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂ.15 ಕೊನೆಯ ದಿನ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ವಿಶೇಷ ಸೂಚನೆ: ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ ಎಸ್‍ಎಟಿಎಸ್ ಐಡಿ (SATS ID) ಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬೇಕು…

Read More

ಮಡಿಕೇರಿ ಮೇ 30 : ಜಿಲ್ಲೆಯ ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಜೊತೆಗೆ ಸೌಜನ್ಯ, ವಿನಯದಿಂದ ನಡೆದುಕೊಳ್ಳಬೇಕು, ಪ್ರವಾಸಿಗರ ಜೊತೆ ಅನುಚಿತವಾಗಿ ವರ್ತಿಸಿದರೆ ಕಾನೂನು ರೀತಿಯ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಸಿದ್ದಾರೆ. ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಜಿಲ್ಲಾ ಪ್ರವಾಸೋದ್ಯಮ ಸಮಿತಿ ಸಭೆ’ಯಲ್ಲಿ ಮಾತನಾಡಿದರು. ಪೊಲೀಸ್ ಇಲಾಖೆಯಿಂದ ಮುಂದಿನ 10 ದಿನದೊಳಗೆ ಜಿಲ್ಲೆಯ ಪ್ರತಿಯೊಂದು ಪ್ರವಾಸಿ ತಾಣದಲ್ಲಿ ‘ಪ್ರವಾಸಿ ಫಲಕ’ ಅಳವಡಿಸಲಾಗುವುದು. ಹಾಗೆಯೇ ಮುಖ್ಯ ಹೆದ್ದಾರಿಗಳಲ್ಲಿಯೂ ಸಹ ಸೂಚನಾ ಫಲಕ ಅಳವಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು. ಕೊಡಗು ಜಿಲ್ಲೆಗೆ ವಿವಿಧ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಅಂತವರನ್ನು ಯಾವ ರೀತಿ ಕಾಣಬೇಕು ಎಂಬುದು ತಿಳಿದಿರಬೇಕು. ಅದನ್ನು ಬಿಟ್ಟು ಪ್ರವಾಸಿಗರ ಜೊತೆ ಕೆಟ್ಟದಾಗಿ ವರ್ತಿಸಿದರೆ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಿದೆ ಎಂದು ಖಡಕ್ ಆಗಿ ನುಡಿದರು. ‘ಪ್ರವಾಸಿ ತಾಣಗಳಲ್ಲಿ ಯಾವುದೇ ರೀತಿಯ ತೊಂದರೆ ಉಂಟಾದಲ್ಲಿ ಪೊಲೀಸ್…

Read More

ಮಡಿಕೇರಿ ಮೇ 30 : ಮೈಸೂರು-ಕುಶಾಲನಗರ ನಾಲ್ಕು ಪಥದ ಹೆದ್ದಾರಿಯ ಕಾಮಗಾರಿಯನ್ನು ಒಂದು ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ನಗರದ ಜಿ.ಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮೈಸೂರು-ಕುಶಾಲನಗರ ನಾಲ್ಕು ಪಥದ ಹೆದ್ದಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದು, 4,130 ಕೋಟಿ ರೂ. ವೆಚ್ಚದಲ್ಲಿ 93 ಕಿ.ಮೀ. ಉದ್ದದ ಹೆದ್ದಾರಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಪ್ರತಾಪ್ ಸಿಂಹ ತಿಳಿಸಿದರು. ಕುಶಾಲನಗರ-ಸಂಪಾಜೆ ಮಾರ್ಗದಲ್ಲಿ ಅಪಘಾತ ಸ್ಥಳಗಳನ್ನು ಗುರುತಿಸಿ ವರದಿ ನೀಡಬೇಕು. ಇಂತಹ ಸ್ಥಳಗಳಲ್ಲಿ ಅಪಘಾತ ತಪ್ಪಿಸಲು ಅಗತ್ಯ ಕ್ರಮವಹಿಸುವಂತೆ ಹೆದ್ದಾರಿ ಇಲಾಖೆಯ ಎಂಜಿನಿಯರ್‍ಗಳಿಗೆ ಸಂಸದರು ಸೂಚಿಸಿದರು. ಮದೆನಾಡು ಬಳಿಯ ಕರ್ತೋಜಿ ಗುಡ್ಡ ಮೇಲ್ಭಾಗದಲ್ಲಿ ಬಿರುಕು ಬಿಟ್ಟಿದ್ದು, ಮಳೆಗಾಲದಲ್ಲಿ ಮಣ್ಣು ರಸ್ತೆಗೆ ಬರುವ ಸಾಧ್ಯತೆ ಇದೆ. ಆದ್ದರಿಂದ ತಡೆಗೋಡೆ ನಿರ್ಮಿಸಬೇಕಿದೆ. ಈ ಸಂಬಂಧ ಎಂಜಿನಿಯರ್‍ಗಳು ಸೂಕ್ತ ಕ್ರಮವಹಿಸಬೇಕು. ಹೆದ್ದಾರಿಯಲ್ಲಿ ಸಾರಿಗೆ ಸಂಚಾರಕ್ಕೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ…

Read More

ಮಡಿಕೇರಿ ಮೇ 30 :  ನೂತನ ಸರ್ಕಾರ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ನೂತನ ಕೊಡವ ಅಭಿವೃದ್ದಿ ನಿಗಮದ ಅಧ್ಯಕ್ಷ/ ಆಡಳಿತ ಮಂಡಳಿಯ ಆಯ್ಕೆಯಲ್ಲಿ ಪ್ರಬುದ್ದತೆಯೊಂದಿಗೆ, ರಾಜಕೀಯಾತೀತ ಅರ್ಹರನ್ನು ಆಯ್ಕೆ ಮಾಡಬೇಕೆಂದು ಕೊಡವಾಮೆರ ಕೊಂಡಾಟ ಸಂಘಟನೆ  ಆಗ್ರಹಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘಟನೆಯ ಪ್ರಮುಖ  ಚಾಮೆರ ದಿನೇಶ್ ಬೆಳ್ಯಪ್ಪ,  ಸರ್ಕಾರ ಬದಲಾಗಿ ನೂತನ ಸರ್ಕಾರ ಬಂದ ಸಂದರ್ಭದಲ್ಲಿ ವಿವಿಧ ನಿಗಮ ಹಾಗೂ ಸಾಹಿತ್ಯ ಅಕಾಡೆಮಿಗಳಿಗೂ ನೂತನ ಅಧ್ಯಕ್ಷರು ಹಾಗೂ ಸಮಿತಿಯನ್ನು ರಚಿಸುವುದು ವಾಡಿಕೆ. ಈ ಭಾರಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೂಡ ಮಂಡಳಿ, ಅಕಾಡೆಮಿಗಳಿಗೆ ನೂತನ ಆಡಳಿತ ಮಂಡಳಿ ರಚನೆಯನ್ನೂ ಮಾಡಬೇಕಿದೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾಗಲೂ ತನ್ನ ಕಾರ್ಯಕರ್ತರಿಗೆ ಅದರಲ್ಲೂ ಅಸಮದಾನಿತ ಮುಖಂಡರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ಕೊಡುವ ಮೂಲಕ ಸಮಾಧಾನ ಪಡಿಸುವ ಪದ್ಧತಿ ಇದೆ. ಇದರಿಂದಾಗಿ ಎಷ್ಟೋ ಬಾರಿ ಸಾಹಿತ್ಯ ಅಕಾಡೆಮಿ ಮತ್ತು ಜನಾಂಗೀಯ ಅಭಿವೃದ್ಧಿ ನಿಗಮಗಳಲ್ಲಿ ಕೇವಲ ಅಧಿಕಾರದ ಆಸೆಯಿಂದ, ಅರ್ಹತೆಯೇ ಇಲ್ಲದವರು ಆಸೀನರಾಗಿ…

Read More

ಮಡಿಕೇರಿ ಮೇ 30 : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ 30 ಮಂದಿ ಅಧಿಕಾರಿ ಸಿಬ್ಬಂದಿಯನ್ನೊಳಗೊಂಡ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿಂದ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆ ನಡೆಸುವ ಬಗ್ಗೆ ಅಭ್ಯಾಸ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನೇತೃತ್ವದಲ್ಲಿ ನಡೆದ ಅಭ್ಯಾಸ ಕಾರ್ಯಾಚರಣೆಯಲ್ಲಿ ಸೋಮವಾರಪೇಟೆ ಡಿವೈ.ಎಸ್.ಪಿ., ಕುಶಾಲನಗರ ಸಿಪಿಐ, ಮಡಿಕೇರಿ ಆರ್.ಪಿ.ಐ. ಡಿಎಆರ್ ಹಾಗೂ ಇನ್ನಿತರ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Read More

ಮಡಿಕೇರಿ ಮೇ 30 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ವತಿಯಿಂದ ನಡೆಯುವ ಸಂಕಲ್ಪ-2023 ಕಲೋತ್ಸವದ ಲೋಗೋ ಅನಾವಣಗೊಳಿಸಲಾಯಿತು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ರಾಘವ ಬಿ. ಮತ್ತು ವಿಭಾಗ ಮುಖ್ಯಸ್ಥರಾದ ಡಾ.ಶೈಲಶ್ರೀ ಕೆ.ಲೋಗೋವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Read More

ಮಡಿಕೇರಿ ಮೇ 30 : ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಮತ್ತು ಅರಣ್ಯ ಕಾಲೇಜಿನ ಸಹಯೋಗದಲ್ಲಿ ರೈತರು ಮತ್ತು ಕಾಫಿ ಬೆಳೆಗಾರರಿಗೆ ಕೃಷಿ ಮತ್ತು ಕಾಫಿ ಆಧಾರಿತ ವ್ಯವಸ್ಥೆಯಲ್ಲಿ ಕಾರ್ಬನ್ ಕ್ರೆಡಿಟ್‍ಗೆ ಭವಿಷ್ಯ ಮತ್ತು ಅದರಿಂದ ಆರ್ಥಿಕ ಲಾಭ ಗಳಿಸಲು ಇರುವ ಅವಕಾಶಗಳ ಕುರಿತು ಕಾರ್ಯಾಗಾರ ನಡೆಯಿತು. ಪೊನ್ನಂಪೇಟೆಯ ಅರಣ್ಯ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಎಸ್‍ಇಸಿಯ ವಿಜ್ಞಾನಿಗಳಾದ ಡಾ.ಎಮ್.ಬಾಲಸುಬ್ರಮಣಿಯನ್, ಡಾ.ಜೇಮ್ಸ್ ಜೇಕಬ್ ಮತ್ತು ಡಾ.ಅಜ್ಜಿಕುಟ್ಟೀರ ಅದೀತ್ ಕಾರ್ಯಪ್ಪ ತಾಂತ್ರಿಕ ಭಾಷಣ ಮಾಡಿದರು. ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಪಿ.ಜಿ.ಚಂಗಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರಣ್ಯ ಕಾಲೇಜಿನ ಮುಖ್ಯಸ್ಥ ಡಾ.ಸಿ.ಜಿ.ಕುಶಾಲಪ್ಪ ಕಾರ್ಯಗಾರದ ಮುಖ್ಯ ಉದ್ದೇಶವನ್ನು ವಿವರಿಸಿದರು. ಅರಣ್ಯ ಕಾಲೇಜಿನ ಉಪನ್ಯಾಸಕ ಮತ್ತು ವಿಭಾಗದ ಮುಖ್ಯಸ್ಥ ಡಾ. ಜಿ.ಎಮ್.ದೇವಗಿರಿ ಕಾರ್ಬನ್ ಕ್ರೆಡಿಟ್ ನಿಂದ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರು ಆರ್ಥಿಕ ಲಾಭ ಗಳಿಸಲು ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ವಿವಿಧ ಭಾಗಗಳ ರೈತರು ಮತ್ತು ಬೆಳೆಗಾರರು ಅಧಿಕ ಸಂಖ್ಯೆಯಲ್ಲಿ…

Read More

ವಿರಾಜಪೇಟೆ ಮೇ 30 : ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದ ವಿಶ್ವ ದಾಖಲೆಯ ಕಾರ್ಯಕ್ರಮದಲ್ಲಿ ವಿರಾಜಪೇಟೆ ನಾಟ್ಯ ಮಯೂರಿ ನೃತ್ಯ ಶಾಲೆಯ ಹತ್ತು ವಿದ್ಯಾರ್ಥಿಗಳು ಭಾಗವಹಿಸಿ ವಿಶ್ವ ದಾಖಲೆ ಮಾಡಿದ್ದಾರೆ. ನೃತ್ಯ ಶಾಲೆಯ ವಿದ್ಯಾರ್ಥಿಗಳಾದ ಶಿವಾನಿ, ಶ್ರೀದೇವಿ, ಶ್ರೇಯಾ, ಹರ್ಷಿತ, ಸಾನಿಧ್ಯ, ಮಿಲನ್ಯ, ಭುವನ, ಟಿಯಾನ ಹಾಗೂ ಲಾವಣ್ಯ ನಿಗದಿತ ಸಮಯದಲ್ಲಿ ನೃತ್ಯವನ್ನು ಮಾಡಿ ವಿಶ್ವ ದಾಖಲಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರಿಗೆ ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರು ತರಬೇತಿ ನೀಡಿದ್ದಾರೆ.

Read More

ಮಡಿಕೇರಿ ಮೇ 30 :  ಇತಿಹಾಸ ಪ್ರಸಿದ್ಧ  ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲಿನಲ್ಲಿ (ಕೇರಳದ ಪುಳಿಙೋಂ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಔಲಿಯಾಕಳ ಹೆಸರಿನಲ್ಲಿ) ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ  ಉರೂಸ್‍ ಕಾರ್ಯಕ್ರಮವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಉರೂಸ್ ಕಾರ್ಯಕ್ರಮದ ಭಾಗವಾಗಿ ವಯಕೋಲ್ ಮಸ್ಜಿದುಲ್ ರಹ್ಮಾನ್ ಅಂಗಳದಲ್ಲಿ  ಸಾರ್ವಜನಿಕ ಸೌಹಾರ್ದ ಸಮಾವೇಶ  ನಡೆಯಿತು ಸಾಮೂಹಿಕ ಝಿಯಾರತ್, ಮೌಲಿದ್ ಪಾರಾಯಣ,  ಧಾರ್ಮಿಕ ಮತ ಪ್ರಭಾಷಣ, ಹಾಗೂ ಅನ್ನದಾನ ಮುಂತಾದ ಕಾರ್ಯಕ್ರಮ ಜರುಗಿತು. ಈ ಸಂದರ್ಭ  ಕುಂಜಿಲ ಪೈನರಿ ಮುಸ್ಲಿಂ ಜಮಾಅತ್ತಿನ ಅಧ್ಯಕ್ಷ  ಶೌಕತ್ ಮಕ್ಕಿ, ಖತೀಬರಾದ ನಿಝಾರ್ ಅಹ್ಸನಿ ಉಸ್ತಾದ್, ಮುಖ್ಯ ಅತಿಥಿಗಳಾಗಿ ಜಬ್ಬಾರ್ ಸಖಾಫಿ ಕೇರಳ, ವಯಕೋಲ್ ಆಡಳಿತ ಮಂಡಳಿ ಅಧ್ಯಕ್ಷ  ಹಂಸ, ಇಮಾಮ್ ರಫೀಕ್ ಸಖಾಫಿ, ಕಲಿಯಂಡ ಸಂಪನ್ ಅಯ್ಯಪ್ಪ, ಸಂತು ಸುಬ್ರಮಣಿ, ಅಬ್ದುಲ್ಲಾ ಸಹದಿ, ಕುಡಿಯರ ಮುತ್ತು, ಫಖ್ರುಮಾಸ್ಟರ್, ಖಲೀಲ್, ಅಬು, ನಿಸಾರ್ ವಯಕೋಲ್ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ಕೂನೆಯಲ್ಲಿ…

Read More