ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಇಂದು 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಸಕರಾದ ಎಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ, ಎಚ್.ಸಿ.ಮಹದೇವಪ್ಪ ಮತ್ತು ಇತರರು ಪ್ರಮಾಣ ವಚನ ಸ್ವೀಕರಿಸಿದರು. ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಎನ್. ಚಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಹೆಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಮಂಕಾಳು ವೈದ್ಯ, ಸಂತೋಷ್ ಲಾಡ್, ಎನ್ ಎಸ್ ಬೋಸೆರಾಜು, ಬೈರತಿ ಸುರೇಶ್, ಮಧು ಬಂಗಾರಪ್ಪ, ಎಂ.ಸಿ.ಸುಧಾಕರ್, ಬಿ.ನಾಗೇಂದ್ರ, ಲಕ್ಷ್ಮೀ ಹೆಬ್ಬಾಳ್ಕರ್, ರಹೀಂ ಖಾನ್, ಡಾ. ಸುಧಾಕರ್, ರಹೀಂ ಖಾನ್ ಪ್ರಮಾಣ ವಚನ ಸ್ವೀಕರಿಸಿದರು.
ಲೇಖಕ: admin
ಮಡಿಕೇರಿ ಮೇ 27 : ಕಟ್ಟೆಮಾಡು ಗ್ರಾಮದ ಚೊಕ್ಕಂಡ ದೇವಿ ಉತ್ತಪ್ಪ ಅವರ ಮನೆಯ ಕೋಳಿಗೂಡಿನಲ್ಲಿ ಸೇರಿಕೊಂಡಿದ್ದ 6 ಅಡಿ ಉದ್ದದ ಗೋಧಿ ನಾಗರ ಹಾವನ್ನು ಉರಗ ತಜ್ಞ ಪಿಯೂಸ್ ಪೆರೆರಾ ರಕ್ಷಿಸಿ, ಸಂಪಾಜೆ ಅರಣ್ಯಕ್ಕೆ ಬಿಟ್ಟರು.
ಮಡಿಕೇರಿ ಮೇ 27 : ಸುಂಟಿಕೊಪ್ಪದ ಬ್ಲೂ ಬಾಯ್ಸ್ ಯೂತ್ ಕ್ಲಬ್ ಆಶ್ರಯದಲ್ಲಿ ಜಿಎಂಪಿ ಶಾಲಾ ಮೈದಾನದಲ್ಲಿ ನಡೆಯುತ್ತಿರುವ 25 ನೇ ವರ್ಷದ ಡಿ. ಶಿವಪ್ಪ ಸ್ಮಾರಕ ರಾಜ್ಯಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಟೂರ್ನಿಯ ಫೈನಲ್ ಹಣಾಹಣಿ ಮೇ 28 ರಂದು ನಡೆಯಲಿದೆ. ಅಪರಾಹ್ನ 3 ಗಂಟೆಗೆ ನಡೆಯಲಿರುವ ಅಂತಿಮ ಪಂದ್ಯವನ್ನು ಬೆಟ್ಟಗೇರಿ ಗ್ರೂಪ್ ಆಫ್ ಎಸ್ಟೇಟ್ಸ್ ನ ಮಾಲೀಕ ಡಿ. ವಿನೋದ್ ಶಿವಪ್ಪ ಉದ್ಘಾಟಿಸಲಿದ್ದಾರೆ. ನಂತರ ಬಹುಮಾನ ವಿತರಣೆಯನ್ನು ಬೆಟ್ಟಗೇರಿ ಗ್ರೂಪ್ ಆಫ್ ಎಸ್ಟೇಟ್ಸ್ ನ ವಿಶಾಲ್ ಶಿವಪ್ಪ ವಿತರಿಸುವರು. ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮೈಸೂರು ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಚಲನಚಿತ್ರ ನಟಿ ಶುಭ್ರ ಅಯ್ಯಪ್ಪ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಗ್ರಾ.ಪಂ ಅಧ್ಯಕ್ಷ ಶಿವಮ್ಮ ಮಹೇಶ್, ಉಪಾಧ್ಯಕ್ಷ ಕೆ. ಪ್ರಸಾದ್…
ಸೋಮವಾರಪೇಟೆ ಮೇ 27 : ಸೋಮವಾರಪೇಟೆ ಟೀಚರ್ಸ್ ಕ್ವಾರ್ಟರ್ಸ್ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದ ಹಿರಿಯ ಪತ್ರಕರ್ತ ಡಿ.ಎಂ.ಚಿಣ್ಣಪ್ಪ (82) ನಿಧನರಾದರು. ಸೋಮವಾರಪೇಟೆಯಿಂದ ಪ್ರಕಟವಾಗುತ್ತಿದ್ದ ಸಿಡಿಲು ವಾರ ಪತ್ರಿಕೆಯ ಸಂಪಾದಕರಾಗಿ ಚಿಣ್ಣಪ್ಪ ಕರ್ತವ್ಯ ನಿರ್ವಹಿಸಿದ್ದರು. ವಯೋಸಹಜ ಖಾಯಿಲೆಯಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಶಕುಂತಲಾ ಸೇರಿದಂತೆ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಸೋಮವಾರಪೇಟೆ ಮೇ 27 : ವಾಹನ ಚಾಲಕರು ಮತ್ತು ಮೋಟರು ಕೆಲಸಗಾರರ ಸಂಘದ ವತಿಯಿಂದ ನಿರ್ಮಾಣವಾಗಿರುವ ನೂತನ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಉದ್ಘಾಟಿಸಿದರು. ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ನಿರುದ್ಯೋಗದ ಬಗ್ಗೆ ಯೋಚನೆ ಮಾಡದೆ, ಸ್ವಯಂ ಉದ್ಯೋಗ ಕಂಡುಕೊಂಡು ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ವಾಹನ ಚಾಲಕರನ್ನು ನಾವೆಲ್ಲರೂ ಅಭಿನಂಧಿಸಬೇಕಾಗಿದೆ. ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳು ವಾಹನ ಚಾಲಕರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಸಂಘದ ಪದಾಧಿಕಾರಿಗಳು ಗಮನಹರಿಸಬೇಕು ಎಂದರು. ನೂತನ ಕಟ್ಟಡ ನಿರ್ಮಾಣಕ್ಕೆ ತಮ್ಮ ಅನುದಾನದಲ್ಲಿ 5ಲಕ್ಷ ರೂ.ಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು. ವಾಹನ ಚಾಲಕರು ಮತ್ತು ಮೋಟರು ಕೆಲಸಗಾರರ ಸಂಘದವರು ಕಳೆದ 30 ವರ್ಷಗಳಿಂದ ಪಟ್ಟಣದಲ್ಲಿ ಅದ್ದೂರಿ ಆಯುಧ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ. ಗ್ರಾಮೀಣ ಜನರಿಗೆ ಪ್ರತಿವರ್ಷ ಮನರಂಜನಾ ಕಾರ್ಯಕ್ರಮವನ್ನು ಏರ್ಪಡಿಸುತ್ತಾರೆ. ಜೊತೆಗೆ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು. ಸಂಘದ ಅಧ್ಯಕ್ಷ ಕೆ.ಜಿ.ಸುರೇಶ್ ಮಾತನಾಡಿ, ವಾಹನ ಚಾಲಕರ ಕನಸ್ಸಿನ…
ಮಡಿಕೇರಿ ಮೇ 27 : ತಿತಿಮತಿ ಗ್ರಾ.ಪಂ ವ್ಯಾಪ್ತಿಯ ನೊಕ್ಯ ಗ್ರಾಮದ ಶ್ರೀ ಬಸವೇಶ್ವರ, ಗಣಪತಿ ಮತ್ತು ನಾಗದೇವರುಗಳ 13ನೇ ವಾರ್ಷಿಕೋತ್ಸವವು ಮೇ 28 ರಂದು ನಡೆಯಲಿದೆ. ಮುಂಜಾನೆ 10 ಗಂಟೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ಜರುಗಲಿದ್ದು, ಮಧ್ಯಾಹ್ನ 12.30ಕ್ಕೆ ಅನ್ನದಾನ ಕಾರ್ಯಕ್ರಮ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಮನವಿ ಮಾಡಿದ್ದಾರೆ.
ಮಡಿಕೇರಿ ಮೇ 27 : ಕೊಡಗು ಗೌಡ ಯುವ ವೇದಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರ್ಪಿಸುವ ಟಿವಿಎಸ್ ಜಿಪಿಎಲ್ ಗೌಡ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸಮಾರೋಪ ಸಮಾರಂಭವು ಮೇ, 28 ರಂದು ಸಂಜೆ 4 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೈನಲ್ ಪಂದ್ಯಾವಳಿಯ ಉದ್ಘಾಟನೆಯು ಮೇ, 28 ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಮೇ.27 : ಮೂರ್ನಾಡು 33/11ಕೆವಿ ಎಂಯುಎಸ್‍ಎಸ್ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ, 29 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ, ಪಾರಾಣೆ, ನಾಪೋಕ್ಲು, ಹೊದ್ದೂರು, ಮರುಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊದವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್ 1 ನಲ್ಲೂರು, ಎಫ್ 2 ಬಾಳೆಲೆ, ಎಫ್2 ರಾಜಾಪುರ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಮೇ, 29 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬಾಳೆಲೆ, ರಾಜಾಪುರ, ಮಳ್ಳೂರು, ನಿಟ್ಟೂರು, ಕೊಟ್ಟಗೇರಿ, ಬಿಳೂರು, ದೇವನೂರು ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್…
ಮಡಿಕೇರಿ ಮೇ.27 : ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ, 29 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಕ್ಲಬ್ ಮಹೀಂದ್ರ ರೆಸಾರ್ಟ್, ಮಡಿಕೇರಿ, ಹಿಮತ್ಸಂಗ ಲೈನ್ಸ್, ಹಾಸನ, ಹ್ಯೂಂಡಾಯಿ ಕಾರ್ ಶೋರೂಮ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ನಾಪೋಕ್ಲು ಮೇ 29 : ಬಿ. ಶೆಟ್ಟಿಗೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪೊನ್ನೀರ ಗಗನ್ ರಕ್ಷಿಸಿದ್ದಾರೆ. ಗ್ರಾಮದ ಚೇರಂಡ ರಕ್ಷಿತ ದೇವಯ್ಯ ಅವರ ಹತ್ತಿರ ಇದ್ದ 12 ಅಡಿ ಉದ್ದದ ಬಾರಿ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪೊನ್ನೀರ ಗಗನ್ ರಕ್ಷಿಸಿ ಕುಟಿಯಲ ಅರಣ್ಯಕ್ಕೆ ಬಿಟ್ಟರು. ಪೊನ್ನೀರ ಸ್ನೇಕ್ ಗಗನ್ ಈಗಾಗಲೇ 67 ಕಾಲಿಂಗ ಸರ್ಪ ಸೇರಿದಂತೆ 8 ಸಾವಿರಕ್ಕೂ ಅಧಿಕ ವಿವಿಧ ಜಾತಿಯ ಹಾವುಗಳನ್ನು ಸೆರೆಹಿಡಿದಿದ್ದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ವರದಿ : ದುಗ್ಗಳ ಸದಾನಂದ






