ಲೇಖಕ: admin

ನಾಪೋಕ್ಲು ಮೇ 27 : ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಶಾಸಕ ಎ.ಎಸ್ ಪೊನ್ನಣ್ಣ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ತಕ್ಕರಾದ ಪರದಂಡ ಲಾಲಾ ನರೇಂದ್ರ ಪ್ರಾರ್ಥನೆ ಸಲ್ಲಿಸಿ ಶಾಸಕರಾಗಿ ಆಯ್ಕೆಯಾದ ಎ.ಎಸ್.ಪೊನ್ನಣ್ಣ ಅವರಿಗೆ ಮಂತ್ರಿ ಪದವಿಯು ದೊರಕುವಂತಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಪ್ರಮುಖರಾದ ಬಾಚಮಂಡ ಲವ ಚಿಣ್ಣಪ್ಪ, ಬಡಕಡ ದೀನಾ ಪೂವಯ್ಯ, ಕಲಿಯಂಡ ಸಂಪನ್ ಅಯ್ಯಪ್ಪ ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ  

Read More

ನಾಪೋಕ್ಲು ಮೇ 27 : ಪಾಲೂರು ಗ್ರಾಮದ ಶ್ರೀ ಕಾಳಿಕಾಂಬ ದೇವಿಯ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ ವಾದ್ಯಗೋಷ್ಠಿಯೊಂದಿಗೆ ಭಕ್ತರು ಮೆರವಣಿಗೆ ತೆರಳಿ ದೇವರ ಜಳಕ ಕೈಗೊಂಡರು. ಬಳಿಕ ದೇವಾಲಯದಲ್ಲಿ ಮಹಾಪೂಜೆ ನಡೆಯಿತು. ಪ್ರಸಾದ ವಿತರಣೆಯ ಬಲಿಕ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ಭಕ್ತಾದಿಗಳು ತಮ್ಮ ಇಷ್ಟಾರ್ಥ ಸಿದ್ದಿಗೆ ವಿವಿಧ ಹರಕೆ, ಕಾಣಿಕೆ ಒಪ್ಪಿಸಿರು. ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ತಕ್ಕ ಮುಖ್ಯಸ್ಥರು ಊರ ಮತ್ತು ಪರವೂರಿನ ಕಾಲಿಕಾಂಬ ಭಕ್ತಾದಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ   

Read More

ಮಡಿಕೇರಿ ಮೇ 27  : ಕೊಡಗು ಪತ್ರಕತ೯ರ ಸಂಘ (ರಿ)ದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನಿಸಲಾಗಿದೆ. ಸಂಘದಿಂದ ಐದು ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ, ಕೃಷಿ ಹಾಗೂ ಗ್ರಾಮೀಣ ವರದಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ.ಇದರೊಂದಿಗೆ ಸಂಘದ ಹಿರಿಯ ಸಲಹೆಗಾರರಾದ ಶಕ್ತಿ ದಿನ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ದೃಶ್ಯ ಮಾಧ್ಯಮಕ್ಕೆ ಅತ್ಯುತ್ತಮ ಮಾನವೀಯ ವರದಿ ಮತ್ತು ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತಾದ ವರದಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.ಕೊಡಗು ಪತ್ರಕರ್ತರ ಸಂಘದ ಸದಸ್ಯರುಗಳಿಗೆ ಮಾತ್ರ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು , ವರದಿಗಳು 2022 ರ ಜನವರಿಯಿಂದ 2022ರ ಡಿಸೆಂಬರ್ ಅಂತ್ಯದೊಳಗೆ ಪ್ರಕಟವಾಗಿರಬೇಕು. ವರದಿಯಲ್ಲಿ ವರದಿಗಾರನ ಹೆಸರು ಇಲ್ಲದಿದ್ದರೆ ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ದೖಢೀಕರಣವಿರಬೇಕು.  ಒಬ್ಬರು ಒಂದು ಪ್ರಶಸ್ತಿಗೆ ತಮ್ಮ ಒಂದು ವರದಿಯನ್ನು ಮಾತ್ರ ಸಲ್ಲಿಸಬೇಕಾಗಿದೆ. ಟಿವಿ ಮಾಧ್ಯಮದವರು…

Read More

ಮಡಿಕೇರಿ ಮೇ 26 : ಯುನೈಟೆಡ್ ಕೊಡವ ಆರ್ಗನೈಸೇಷನ್ (ಯುಕೊ) ಸಂಘಟನೆಯ ನಿಯೋಗ ನೂತನ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರು. ವಿರಾಜಪೇಟೆಯ ಪೊನ್ನಣ್ಣ ಅವರ ನಿವಾಸದಲ್ಲಿ ಯುಕೋ ಸಂಘಟನೆಯ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರ ನೇತೃತ್ವದ ನಿಯೋಗ ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿತು. ಈಗಾಗಲೆ ಸರ್ಕಾರಿ ಆದೇಶದ ಮೂಲಕ ಘೋಷಣೆಯಾಗಿರುವ ‘ಕರ್ನಾಟಕ ರಾಜ್ಯ ಕೊಡವ ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಿ ನೂರು ಕೋಟಿ ರೂಪಾಯಿಗಳ ಅನುದಾನವನ್ನು ನೀಡಬೇಕೆಂದು ನಿಯೋಗ ಮನವಿ ಮಾಡಿತು. ಹಿಂದುಳಿದ ವರ್ಗಗಳ ಮೀಸಲಾತಿಯ ರಾಜ್ಯ ಪಟ್ಟಿಯಲ್ಲಿ ಕೊಡವರನ್ನು ಪ್ರವರ್ಗ 3ಎ ಯಲ್ಲಿ ಹಾಗೂ ಪ್ರವರ್ಗ 3ಎ ಯ ಕೇಂದ್ರ ಪಟ್ಟಿಯಲ್ಲಿ ಸೇರಿಸಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ನಿಯೋಗದ ಸದಸ್ಯರು ಕೋರಿದರು. ಕೊಡವರ ಪಾರಂಪರಿಕ ತಾಣಗಳಾದ ಮಂದ್ ಮಾನಿ, ಕ್ಯಾಕೊಳ, ಚೂಟ್‌ಂಗಳದoತಹ ಸಾಂಸ್ಕೃತಿಕ ಕೇಂದ್ರಗಳ ಕಂದಾಯ ದಾಖಲಾತಿಗಳನ್ನು ಸರಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಕೊoಡರು. ಬೇಡಿಕೆಗಳ…

Read More

ಮಡಿಕೇರಿ ಮೇ 26 : ನಾಡಿನ ವಿವಿಧೆಡೆಗಳಲ್ಲಿ ಬೆಳೆಯುವ ಅಪರೂಪದ ಮತ್ತು ಸ್ವಾದಿಷ್ಟವಾದ ಮಾವು ಮತ್ತು ಹಲಸಿನ ಮೇಳಕ್ಕೆ ನಗರದ ಹಾಪ್ ಕಾಮ್ಸ್ ನಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಚಾಲನೆ ನಿಡಿದರು. ಜಿಲ್ಲಾಡಳಿತ, ತೋಟಗಾರಿಕಾ ಇಲಾಖೆ, ಜಿಲ್ಲಾ ಪಂಚಾಯತ್ ಮತ್ತು ಹಾಪ್ ಕಾಮ್ಸ್ ವತಿಯಿಮದ ಆಯೋಜಿತ ದ್ವಿತೀಯ ವರ್ಷದ ಮೇಳ ಉದ್ಘಾಟಿಸಿದ ಶಾಸಕರು, ಮಧ್ಯವರ್ತಿಗಳನ್ನು ಹೊರಗಿಟ್ಟು ಬೆಳೆೆಗಾರರು ಮತ್ತು ಗ್ರಾಹಕರಿಗೆ ನೇರ ಸಂಪರ್ಕ ಕಲ್ಪಿಸುವ ಮೇಳ ನಿಜಕ್ಕೂ ಅಪರೂಪದ್ದೆಂದು ಮೆಚ್ಚುಗೆ ವ್ಯಕಪಡಿಸಿದರು. ಬೆಳೆಗಾರ ತಾನು ಬೆಳೆಯುವ ಹಣ್ಣು, ಹಂಪಲನ್ನು ಮಧ್ಯವರ್ತಿಗಳ ಮೂಲಕ ಮಾರಾಟಮಾಡಬೇಕಾದ ಪರಿಸ್ಥಿತಿ ಇದೆ. ಇದನ್ನು ತಪ್ಪಿಸಿ, ಬೆಳೆಗಾರನ ಉತ್ಪನ್ನಕ್ಕೆ ಯೋಗ್ಯ ಮಾರುಕಟ್ಟೆಯೊಂದಿಗೆ ಉತ್ತಮ ಧಾರಣೆ ಒದಗಿಸುವಲ್ಲಿ ಇಂತಹ ಮೇಳ ಸಹಕಾರಿಯಾಗಿದೆ. ಇಂತಹ ಮೇಳಗಳ ಮೂಲಕ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಸವಿಯುವ ಅವಕಾಶವೂ ಸಾರ್ವಜನಿಕರಿಗೆ ದೊರಕಲಿದೆ. ಜಿಲ್ಲೆಗೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಇವರುಗಳು ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದು ಅನಿಸಿಕೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು…

Read More

ಮಡಿಕೇರಿ ಮೇ 26 : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಇದರಿಂದ ಜನಪ್ರತಿನಿಧಿಗಳು ಜನರ ನಿರೀಕ್ಷೆಗೆ ತಕ್ಕಂತೆ ಹೆಚ್ಚು ಕೆಲಸ ಮಾಡಲು ಸಾಧ್ಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬoಧಿಸಿದoತೆ ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕರಿಗೆ ಸ್ಪಂದಿಸಬೇಕಾದ ಕೆಲಸಗಳ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಭರವಸೆಯ ಪ್ರಣಾಳಿಕೆಯನ್ನು ಈಡೇರಿಸಲು ಸಂಬoಧಪಟ್ಟ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪ್ರಣಾಳಿಕೆಯಲ್ಲಿ ಜನಪರ ಕಾರ್ಯಕ್ರಮಗಳು ಇದ್ದು, ಅವುಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸಬೇಕು ಎಂದು ನೂತನ ಶಾಸಕರು ತಿಳಿಸಿದರು. ಸರ್ಕಾರದ ವಿವಿಧ ಕಾಮಗಾರಿಗಳಿಗೆ ಸಂಬoಧಿಸಿದoತೆ ಇತ್ತೀಚೆಗೆ ಹೊಸ ಆದೇಶ ಹೊರಡಿಸಿದ್ದು,…

Read More

ಮಡಿಕೇರಿ ಮೇ 25 : ಅಭಿವೃದ್ಧಿಯ ಹೆಸರಿನಲ್ಲಿ ಹಣ ಕೊಳ್ಳೆ ಹೊಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲವೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸರಕಾರಿ ಇಲಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು ಮತ್ತು ಸಾರ್ವಜನಿಕರ ಕೆಲಸಗಳು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲಾಗುವುದು ಎಂದರು. ಜನಪರವಾದ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭಿವೃದ್ಧಿಯ ಹೆಸರಿನಲ್ಲಿ ಹಣ ದುರುಪಯೋಗ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ. ಜನರ ಕಷ್ಟಗಳಿಗೆ ಸಕಾಲದಲ್ಲಿ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲೆಯಲ್ಲಿ ಮುಂಗಾರು ಆರಂಭಗೊಳ್ಳಲಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕ್ರಮ ಮತ್ತು ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಲು ಈಗಾಗಲೇ ಮುಖ್ಯಮಂತ್ರಿಗಳು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿಯೂ ಸೂಕ್ತ ಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ…

Read More

ಮಡಿಕೇರಿ ಮೇ 25 : ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು ಮತ್ತು ಕೊಡವರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಿದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ, ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ನೂತನ ಸರ್ಕಾರಕ್ಕೆ ಸಲ್ಲಿಸಿದೆ. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಪ್ರಮುಖರು ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಪರ ಘೋಷಣೆಗಳನ್ನು ಕೂಗಿದರು. ಕೊಡವರ ನ್ಯಾಯ ಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ 33 ವರ್ಷಗಳಿಂದ ಸಿಎನ್‌ಸಿ ಸಂಘಟನೆ ಶಾಂತಿಯುತ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಆದರೆ ನಮ್ಮ ನೋವಿಗೆ ಸೂಕ್ತ ಸ್ಪಂದನೆ ನೀಡುವ ಕಾರ್ಯವನ್ನು ಯಾವ ಆಡಳಿತ ವ್ಯವಸ್ಥೆಯೂ ಮಾಡಿಲ್ಲ. ಇದೀಗ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಸರ್ಕಾರ ಹಾಗೂ ಜಿಲ್ಲೆಯ ಇಬ್ಬರು ಶಾಸಕರು ಬೇಡಿಕೆಗಳಿಗೆ ಸ್ಪಂದಿಸಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ನಾಚಪ್ಪ ತಿಳಿಸಿದರು. ಒಟ್ಟು 9 ಬೇಡಿಕೆಗಳ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುoಡೇ…

Read More

ಮಡಿಕೇರಿ ಮೇ.25 : ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯಲ್ಲಿ “ಆರೋಗ್ಯ ಅಮೃತ ಅಭಿಯಾನದಡಿ” ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಗೋಣಿಕೊಪ್ಪಲು ಗ್ರಾ.ಪಂ ಅಧ್ಯಕ್ಷರಾದ ಸೌಮ್ಯ ಬಾಲು ಚಾಲನೆ ನೀಡಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕೂಲಿ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ಕೈಗೊಂಡಿದ್ದು, ಇಂದಿನ ಆರೋಗ್ಯ ಶಿಬಿರದಲ್ಲಿ ಪ್ರಮುಖವಾಗಿ, ರಕ್ತ ಪರೀಕ್ಷೆ ಕೈಗೊಂಡು ಮಧುಮೇಹ, ರಕ್ತದೊತ್ತಡ, ಟಿಬಿ, ಕಣ್ಣಿನ ಪರೀಕ್ಷೆ, ಹೃದಯ ಸಂಬಂಧಿಸಿದಂತೆ ಆರೋಗ್ಯ ಶಿಬಿರದಲ್ಲಿ ತಪಾಸಣೆ ಕೈಗೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಶ್ರೀನಿವಾಸ್, ತಾಲ್ಲೂಕು ಐಇಸಿ ಸಂಯೋಜಕರಾದ ನರೇಂದ್ರ, ತಾಲ್ಲೂಕು ಆರೋಗ್ಯ ಸಂಯೋಜಕರಾದ ಅನಿತಾ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಮೇ 25 : ಅಮೂಲ್ಯ ಹರಳುಗಳನ್ನು ಒಳಗೊಂಡ ಆನೆ ದಂತದಿಂದ ಮಾಡಿರುವ 2 ಕಡಗ(ಕೈಗೆ ಧರಿಸುವ ಆಭರಣ)ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ. ಕೊಳ್ಳೇಗಾಲ ಮೂಲದ ಪಿ.ಪ್ರದೀಪ್ ಕುಮಾರ್(42) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಸಿದ್ದಾಪುರ ಕಡೆಗೆ ತೆರಳುವ ಮಾರ್ಗದ ಬಸ್ ತಂಗುದಾಣದ ಬಳಿ ಆನೆ ದಂತದಿಂದ ಮಾಡಿರುವ ಕೈ ಬಳೆ ಮಾದರಿಯ ನೀಲಿ ಮತ್ತು ಹಸಿರು ಬಣ್ಣದ ಅಮೂಲ್ಯ ಹರಳುಗಳನ್ನು ಒಳಗೊಂಡಿದ್ದ 2 ಕಡಗಗಳನ್ನು ಮಾರಾಟ ಮಾಡಲು ಈತ ಯತ್ನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಖಚಿತ ಮಾಹಿತಿಯ ಹಿನ್ನೆಲೆ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಸಂದರ್ಭ ಆರೋಪಿ ಮಾಲು ಸಹಿತ ಸೆರೆ ಸಿಕ್ಕಿದ್ದಾನೆ. ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ…

Read More