ಮಡಿಕೇರಿ ಮೇ 25 : ಗ್ರಾಹಕರ ವ್ಯಾಜ್ಯಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಜುಲೈ, 8 ರಂದು ಲೋಕ್ ಅದಾಲತ್ ನಡೆಯಲಿದೆ. ಆ ದಿನದಂದು ಸಂಬಂಧಪಟ್ಟವರು ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ಗುರುತಿಸಿಕೊಂಡು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಹಾಗೂ ಸಹಾಯಕ ರಿಜಿಸ್ಟ್ರಾರ್ ಶಾರದ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಮೇ.25 : ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ‘ಗ್ರಾಹಕ ಸಂರಕ್ಷಣಾ ಕಾಯ್ದೆ 2019’ ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್, 1 ರಂದು ರಾತ್ರಿ 8 ರಿಂದ 8.30 ಗಂಟೆ ವರೆಗೆ ಆಕಾಶವಾಣಿಯಲ್ಲಿ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮ ನಡೆಯಲಿದೆ. ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 080-22370477 / 22370488 /22370499 ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು. ಹಾಗೆಯೇ ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಮಿಂಚಂಚೆ consumergrievances.queries@gmail.com ಮೂಲಕ ಮೇ 31 ರೊಳಗೆ ಕಳುಹಿಸಿಕೊಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.
ಮಡಿಕೇರಿ ಮೇ.25 : ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ತರಗತಿಯು ಇದೇ ಮೇ, 29 ರಿಂದ ಆರಂಭವಾಗಲಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ 2023-24 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಮೇ, 29 ರಿಂದ ಆರಂಭವಾಗಲಿದ್ದು, ರಾಜ್ಯಾದ್ಯಂತ ಏಕರೂಪ ಯಶಸ್ವಿ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿಯನ್ನು ಸರ್ಕಾರ ಸಿದ್ಧಪಡಿಸಿದೆ ಎಂದು ತಿಳಿಸಿದರು. ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆಗಳು, ಪರೀಕ್ಷೆ ಮತ್ತು ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶ ಮುಖಿ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದಲ್ಲಿನ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯಕವಾಗುವಂತೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ. ರಾಜ್ಯ/ ಜಿಲ್ಲಾ ಕಚೇರಿಗಳಿಂದ ನಿಯೋಜಿಸಿದ ಜಿಲ್ಲಾ ಮತ್ತು ತಾಲ್ಲೂಕು ನೋಡಲ್ ಅಧಿಕಾರಿಗಳು, ಕ್ಲಸ್ಟರ್ ಹಂತದ ಸಿಆರ್‍ಪಿಗಳು ಬ್ಲಾಕ್ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಹಂತದಲ್ಲಿ ಉಪ ನಿರ್ದೇಶಕರು…
ನಾಪೋಕ್ಲು ಮೇ 25 : ನಾಪೋಕ್ಲು ವ್ಯಾಪ್ತಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಬಿರುಸಿನ ಮಳೆಯಾಗಿದ್ದು ಅಲ್ಲಲ್ಲಿ ಮರದ ರೆಂಬೆಗಳು ಮುರಿದುಬಿದ್ದು ಮನೆಗಳಿಗೆ ಹಾನಿಯಾಗಿದೆ. ಸಮೀಪದ ಎಮ್ಮೆಮಾಡು ಗ್ರಾಮದ ಪಿ.ಎ.ಅಬ್ದುಲ್ ಗಫೂರ್ ಅವರ ಮನೆಯ ಮೇಲೆ ನಂದಿ ಮರದ ಕೊಂಬೆ ಬಿದ್ದುದರ ಪರಿಣಾಮವಾಗಿ ಅಡುಗೆಮನೆಯ ಮೇಲ್ಛಾವಣಿಯ 4 ಶೀಟುಗಳು ಹಾನಿಗೊಂಡಿದೆ. ಮನೆಯೊಳಗೆ ಮಳೆ ನೀರು ಹರಿಯುತ್ತಿದ್ದು ಸಮಸ್ಯೆ ಎದುರಾಗಿದೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ದಾನೇಶ್ವರಿ ಮತ್ತು ಸಿಬ್ಬಂದಿ ಸೋಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಮೇ 25 : ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ ಮೊದಲ ಅವಧಿಯ ಎರಡೂವರೆ ವರ್ಷಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಧಿಕಾರವಧಿ ಮೆ.8ಕ್ಕೆ ಮುಗಿದಿದ್ದು, ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ. ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಎಸ್.ವಿ.ನರಗುಂದ ಅಧಿಕಾರ ವಹಿಸಿಕೊಂಡಿದ್ದಾರೆ. ಮುಂದಿನ ಎರಡೂವರೆ ವರ್ಷಕ್ಕೆ ಅಧ್ಯಕ್ಷರ, ಉಪಾಧ್ಯಕ್ಷರ ಮೀಸಲಾತಿಯ ಆದೇಶವನ್ನು ಸರ್ಕಾರ ಹೊರಡಿಸಬೇಕಾಗಿದೆ. ಪಂಚಾಯಿತಿಯ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಸಿಎಂ(ಎ) ಮೀಸಲಾತಿ ಬಂದಿದ್ದು, ಬಿಜೆಪಿಯ ನಳಿನಿಗಣೇಶ್ ಅಧ್ಯಕ್ಷರಾಗಿ, ಕಾಂಗ್ರೆಸ್‍ನ ಬಿ.ಸಂಜೀವ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕೋವಿಡ್ ಸಂದರ್ಭದಲ್ಲಿ ನಳಿನಿ ಮೃತಪಟ್ಟ ನಂತರ ಪಿ.ಕೆ.ಚಂದ್ರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಮಡಿಕೇರಿ ಮೇ 25 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಕೊಡವ ಜನಾಂಗದ ಏಕೈಕ ಪ್ರತಿನಿಧಿಯಾಗಿರುವ ಎ.ಎಸ್ ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಬೇಕು, ತಪ್ಪಿದ್ದಲ್ಲಿ ಜಿಲ್ಲೆಯಲ್ಲಿ ಪಕ್ಷಭೇದ ಮರೆತು ಬೃಹತ್ ಹೋರಾಟ ನಡೆಸುವುದಾಗಿ ಅಖಿಲ ಕೊಡವ ಸಮಾಜಗಳ ಮುಖಂಡರು ಎಚ್ಚರಿಕೆ ನೀಡಿದರು. ಶಾಸಕ ಎ.ಎಸ್ ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ವಿರಾಜಪೇಟೆಯ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ನಡೆದ ಜಿಲ್ಲೆಯ ವಿವಿಧ ಕೊಡವ ಸಮಾಜ ಹಾಗೂ ಕೊಡವ ಸಂಘಟನೆಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಪೊನ್ನಣ್ಣನವರಿಗೆ ಸಚಿವ ಸ್ಥಾನ ನೀಡದಿದ್ದರೆ ಒಗ್ಗಟ್ಟಿನ ಹೋರಾಟ ನಡೆಸಲು ಸಭೆ ತಿರ್ಮಾನಿಸಿ ಸದ್ಯದಲ್ಲಿಯೇ ಮುಖ್ಯಮಂತ್ರಿ ಹಾಗೂ ವರಿಷ್ಟರ ಬಳಿ ನಿಯೋಗ ತೆರಳಲು ಸಭೆ ತಿರ್ಮಾನಿಸಿತು. ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಸುದೀರ್ಘ ಅವಧಿಯ ಮೇಲೆ ಕೊಡವ ಜನಾಂಗಕ್ಕೆ…
ಮಡಿಕೇರಿ ಮೇ 25 : ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಉಪಾಧ್ಯಕ್ಷ ಎಸ್.ಎಂ.ಚಂಗಪ್ಪ, ಪ್ರಧಾನ ಕಾರ್ಯದರ್ಶಿಗಳಾದ ವಿ.ಪಿ.ಸುರೇಶ್, ಮುನೀರ್ ಅಹಮ್ಮದ್, ನಗರಾಧ್ಯಕ್ಷ ಬಿ.ವೈ.ರಾಜೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಬ್ಲಾಕ್ ಅಧ್ಯಕ್ಷರುಗಳಾದ ಹೆಚ್.ಎ.ಹಂಸ, ಎನ್.ಇಸ್ಮಾಯಿಲ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ನಗರಾಧ್ಯಕ್ಷೆ ಫ್ಯಾನ್ಸಿ ಬೆಳ್ಯಪ್ಪ, ಎಸ್.ಸಿ.ಘಟಕದ ನಗರಾಧ್ಯಕ್ಷ ಮುದ್ದುರಾಜ್, ಪ್ರಮುಖರಾದ ಪ್ರಕಾಶ್ ಆಚಾರ್ಯ, ಚುಮ್ಮಿದೇವಯ್ಯ, ಕೊಲ್ಯದ ಗಿರೀಶ್, ಸದಾಮುದ್ದಪ್ಪ, ಕಲೀಲ್ ಬಾಷ, ಕೆ.ಜಿ.ಪೀಠರ್, ಜುಲೇಕಾಬಿ, ಪ್ರೇಮಕೃಷ್ಣಪ್ಪ, ಯೂತ್ ಕಾಂಗ್ರೆಸ್‍ನ ಪ್ರಮೋದ್, ದರ್ಶನ್(ಫೆಮ್) ಸೇರಿದಂತೆ ಮತ್ತಿತರ ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಮೇ 25 : ನಾಪೋಕ್ಲುವಿನಲ್ಲಿ ಸುರಿದ ಭಾರಿ ಮಳೆಗೆ ಇತ್ತೀಚೆಗೆ ನಿರ್ಮಿಸಿದ ರಸ್ತೆಯೊಂದು ಮಳೆ ನೀರಿನಲ್ಲಿ ಕೊಚ್ಚಿಹೋದ ಘಟನೆ ನಡೆದಿದೆ. ನಾಪೋಕ್ಲುವಿನಲ್ಲಿ ಎರಡು ಇಂಚಿಗೂ ಅಧಿಕ ಮಳೆ ಸುರಿದಿದ್ದು, ಇದರಿಂದ ನಾಪೋಕ್ಲು ಪಟ್ಟಣದಿಂದ ಚರಿಯಪರಂಬು ಗ್ರಾಮಕ್ಕೆ ಹೋಗುವ ರಸ್ತೆಯು ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಕಳೆದ ಒಂದು ತಿಂಗಳ ಹಿಂದೆ ಚೆರಿಯ ಪರಂಬುವಿನ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಪ್ಪಚೆಟ್ಟೋಳಂಡ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಆಗಿನ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಅವರು ಆಗಮಿಸುವ ಹಿನ್ನೆಲೆ ಈ ರಸ್ತೆಯನ್ನು ಡಾಂಬರೀಕರಣ ಮಾಡಲಾಗಿತ್ತು. ಆದರೆ ಧಾರಾಕಾರವಾಗಿ ಸುರಿದ ಮಳೆಯ ನೀರಿನ ರಬಸಕ್ಕೆ ರಸ್ತೆ ಕೊಚ್ಚಿಹೋಗಿದ್ದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಕಳಪೆ ಕಾಮಗಾರಿ ಆರೋಪ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ನಾಪೋಕ್ಲು ಕೆಪಿಎಸ್ ಶಾಲಾ ಆವರಣದಲ್ಲಿ ಅಂಬೇಡ್ಕರ್ ವಸತಿ ಶಾಲಾ ಕಟ್ಟಡ ನಿರ್ಮಾಣವಾಗುತ್ತಿದ್ದು ಇಲ್ಲಿಂದ ಬರುವ ಕೆಸರು ಮಿಶ್ರಿತ ಮಳೆನೀರು ಚರಂಡಿ ನಿರ್ಮಿಸದೆ ಇರುವುದರಿಂದ ನೇರವಾಗಿ ಮಡಿಕೇರಿ- ನಾಪೋಕ್ಲು ಮುಖ್ಯರಸ್ತೆಯಲ್ಲಿ ಹರಿಯುತ್ತಿದೆ. ಅಲ್ಲದೆ ರಸ್ತೆ…
ಮಡಿಕೇರಿ ಮೇ 25 : ದಕ್ಷಿಣ ಕೊಡಗಿನ ವಾಣಿಜ್ಯಕ ನಗರಿ ಗೋಣಿಕೊಪ್ಪಲಿನಿಂದ ಅನತಿ ದೂರದಲ್ಲಿರುವ ದೇವರಪುರದಲ್ಲಿ ಕಳೆದ ಎರಡು ದಿನಗಳಿಂದ ಆದಿವಾಸಿಗಳ ‘ಬೇಡು ಹಬ್ಬ’ ಮೇಳೈಸಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಹಾಡಿಗಳಲ್ಲಿ ವಾಸವಿರುವ ಬುಡಕಟ್ಟು ಜನಾಂಗದ ವಿಶೇಷ ಹಬ್ಬವೇ ‘ಬೇಡು ಹಬ್ಬ’. ಆದಿವಾಸಿಗಳು ತಮ್ಮ ಆರಾಧ್ಯ ದೇವರಾದ ಭದ್ರಕಾಳಿ ಅಯ್ಯಪ್ಪ ಸ್ವಾಮಿಯ ಹೆಸರಿನಲ್ಲಿ ನಡೆಸುವ ಈ ಹಬ್ಬಕ್ಕೆ ಪಿರಿಯಾಪಟ್ಟಣ ತಾಲೂಕಿನ ಕಾಡಂಚಿನ ವ್ಯಾಪ್ತಿಯಲ್ಲಿರುವ ಮೂವತ್ತಕ್ಕೂ ಹೆಚ್ಚಿನ ಹಾಡಿಯ ಗಿರಿಜನರು, ನಾಗರಹೊಳೆ ಉದ್ಯಾನವನದ ಅನೇಕ ಹಾಡಿಗಳ ಬುಡಕಟ್ಟು ಜನರು ಪಾಲ್ಗೊಳ್ಳುವುದು ವಿಶೇಷ. ದೇವರಪುರ ಆಸುಪಾಸಿನ ಗ್ರಾಮಗಳ ಆದಿವಾಸಿಗಳು, ಇತರೆ ಜನಾಂಗದವರು ಕೂಡ ಹರಕೆ ಹೊತ್ತು, ಕಾಡಿನಲ್ಲಿ ಸಿಗುವ ಸೊಪ್ಪು, ಹರಿದ ಹಳೆ ಬಟ್ಟೆ, ಗೋಣಿಚೀಲಗಳು, ಹೀಗೆ ಕೈಗೆ ಸಿಕ್ಕುವ ವಿವಿಧ ವಸ್ತುಗಳಿಂದ ವಿವಿಧ ವೇಷಗಳನ್ನು ತೊಟ್ಟು, ಒಣಗಿದ ಸೋರೆಕಾಯಿ ಬುರುಡೆ ಪ್ಲಾಸ್ಟಿಕ್ ಡಬ್ಬ ಹಾಗೂ ಟಿನ್ನುಗಳನ್ನು ತಾಳಮೇಳ ಮಾಡಿಕೊಂಡು ಡೊಳ್ಳಿನ ರೀತಿಯಲ್ಲಿ ಬಡಿದುಕೊಂಡು ಕುಣಿಯುತ್ತ ಸಾಗುವುದು ಹಬ್ಬದ ಸಂದರ್ಭ ಕಾಣುವ ಸಾಮಾನ್ಯ…
ನಾಪೋಕ್ಲು ಮೇ 25 : ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಮಧ್ಯಾಹ್ನ ಸುಮಾರು ಒಂದು ಗಂಟೆಗಳ ಕಾಲ ಬಿರುಸಿನ ಮಳೆಯಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಬೃಹತ್ ಕಟ್ಟಡ ನಿರ್ಮಾಣವಾಗುತ್ತಿದ್ದು, ಸುತ್ತಲಿನ ಮಣ್ಣು ಕಲ್ಲುಗಳೆಲ್ಲ ರಭಸದ ಮಳೆಗೆ ಕೊಚ್ಚಿಕೊಂಡು ಮುಖ್ಯ ರಸ್ತೆಗೆ ಬಂದ ಪರಿಣಾಮ ಚಾಲಕರು, ಜನಸಾಮಾನ್ಯರು ತೊಂದರೆ ಅನುಭವಿಸಿದರು. ಮುಖ್ಯ ರಸ್ತೆ ಉದ್ದಕ್ಕೂ ಕೆಸರು ನೀರು ಹರಿದ ಪರಿಣಾಮ ವಾಹನ ಸಂಚಾರ ದುಸ್ತರವಾಗಿ ಜನರು ಸಮಸ್ಯೆ ಅನುಭವಿಸಿದರು. ಮುಖ್ಯ ರಸ್ತೆ ಕೆಳಭಾಗದಲ್ಲಿದ್ದ ಮನೆಗಳ ಅಂಗಳಕ್ಕೆ ಕೆಸರು ನೀರು ಹರಿದು ಜನರು ಪರದಾಡವಂತಾಯಿತು. ವರದಿ : ದುಗ್ಗಳ ಸದಾನಂದ






