ಲೇಖಕ: admin

ವಿರಾಜಪೇಟೆ ಏ.19 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಎ ಮನ್ಸೂರ್ ಆಲಿ ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಮೆರವಣಿಗೆಯ ಮೂಲಕ ಬಂದ ಮನ್ಸೂರ್ ಆಲಿ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಶಬಾನಾ ಎಂ.ಶೇಖ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್ ಖಾನ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಂಜುನಾಥ್, ಜೆಡಿಎಸ್‍ನ ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷ ಪಾಣತಲೆ ವಿಶ್ವನಾಥ್ ಹಾಜರಿದ್ದರು. :: ಮೆರವಣಿಗೆ :: ನಾಮಪತ್ರ ಸಲ್ಲಿಕೆಗೂ ಮೊದಲು ವಿರಾಜಪೇಟೆ ಪಟ್ಟಣದ ಗಡಿಯಾರ ಕಂಬದ ಬಳಿಯಿಂದ ಚುನಾವಣಾಧಿಕಾರಿ ಕಚೇರಿವರೆಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ, ವಿರಾಜಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ಎ.ಮಂಜುನಾಥ್, ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ವಿಶ್ವ, ಪ್ರಧಾನ ಕಾರ್ಯದರ್ಶಿ ಜಾಸೀರ್ ಮೂರ್ನಾಡು, ಜಿಲ್ಲಾ ಜೆಡಿಎಸ್ ಖಜಾಂಜಿ ಡೆನ್ನಿ…

Read More

ಮಡಿಕೇರಿ ಏ.19 : ವಿಧಾನಸಭಾ ಚುನಾವಣೆ ಸಂಬಂಧ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಬುಧವಾರ 4 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ 13 ಮಂದಿ ನಾಮಪತ್ರ ಸಲ್ಲಿಸಿದ್ದು, 19 ನಾಮಪತ್ರ ಸಲ್ಲಿಕೆಯಾಗಿದೆ. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬುಧವಾರ 3 ಮಂದಿ ನಾಮಪತ್ರ ಸಲ್ಲಿಸಿದ್ದು, ಇದುವರೆಗೆ 6 ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಸಂಬಂಧಪಟ್ಟ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Read More

ಮಡಿಕೇರಿ ಏ.19 :  ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್-10 ಕುಂಡಾಮೇಸ್ತ್ರಿ ಮತ್ತು ಎಫ್-11 ಗಾಳಿಬೀಡು ಫೀಡರ್ ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಏ.20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕುಂಡಾಮೇಸ್ತ್ರಿ, ಒಣಚಲು, ಗಾಳಿಬೀಡು, ಕಾಲೂರು, ಮೊಣ್ಣಂಗೇರಿ, ಮಾಂದಲ್‍ಪಟ್ಟಿ ರಸ್ತೆ, ದೇವಸ್ತೂರು, ಹೆಬೆಟ್ಟಗೇರಿ, ಅಬ್ಬಿಫಾಲ್ಸ್, ಆರ್‌ಟಿಓ ಹತ್ತಿರ, ನಂದಿಮೊಟ್ಟೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಏ.19 : ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಲ್ಲಾ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಸಹಯೋಗದೊಂದಿಗೆ ಅಗ್ನಿ ಅನಾಹುತ ತಡೆಯುವ ಬಗ್ಗೆ ಅಣಕು ಕಾರ್ಯಾಚರಣೆಯು ನಡೆಯಿತು. ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ನೇತೃತ್ವದಲ್ಲಿ ಅಣಕು ಕಾರ್ಯಾಚರಣೆ ನಡೆಯಿತು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರ ಮಾರ್ಗದರ್ಶನದಲ್ಲಿ, ಮಡಿಕೇರಿ ಅಗ್ನಿಶಾಮಕ ಠಾಣೆಯ ಲೀಡ್ ಫೈರ್‍ಮೆನ್ ನಾಗರಾಜ ಪಲ್ಲೇದ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. ನಂತರ ವಿವಿಧ ರೀತಿಯ ಅಗ್ನಿ ಅನಾಹುತ ಹಾಗೂ ಅಗ್ನಿ ನಂದಿಸುವಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರದರ್ಶನ ಮೂಲಕ ಮಾಹಿತಿ ನೀಡಲಾಯಿತು. ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಅರ್ಜುನ್ ಸಿಂಗ್ ಹಾಗೂ ಶಿಕ್ಷಕರು ಹಾಜರಿದ್ದರು.

Read More

ಮಡಿಕೇರಿ ಏ.19 : ವಿಧಾನಸಭಾ ಚುನಾವಣಾ ಹಿನ್ನೆಲೆ ಭಾರತ ಚುನಾವಣಾ ಆಯೋಗವು ಕೊಡಗು ಜಿಲ್ಲೆಯ 208-ಮಡಿಕೇರಿ ವಿಧಾನಸಭಾ ಕ್ಷೇತ್ರ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ವಿಕ್ರಮ್ ಸಿಂಗ್ ಮಲಿಕ್ ಭಾ.ಆ.ಸೇ. ಅವರನ್ನು ನಿಯೋಜಿಸಿದ್ದು, ಏ.18 ರಂದು ಕೊಡಗು ಜಿಲ್ಲೆಯಲ್ಲಿ ವರದಿ ಮಾಡಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಭೇಟಿ ಮಾಡಿ ಚುನಾವಣೆ ಸಿದ್ಧತೆ ಬಗ್ಗೆ ಪರಿಶೀಲಿಸಿದರು. ವಿಧಾನಸಭಾ ಚುನಾವಣಾ ಸಂಬಂಧ ಹೆಚ್ಚಿನ ಮಾಹಿತಿಗೆ ಜಿಲ್ಲಾಡಳಿತ ಭವನದ ಮೊದಲ ಮಹಡಿಯ ಕೊಠಡಿ ಸಂಖ್ಯೆ 3 ರಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ನೇರವಾಗಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 6360041101 ಅಥವಾ ಸಾಮಾನ್ಯ ವೀಕ್ಷಕರ ಸಂಪರ್ಕ ಅಧಿಕಾರಿ ಡಾ.ಜೆ.ಆರ್.ಬಾಲಸುಬ್ರಮಣ್ಯಂ 9632953019 ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಸಿದ್ಧಾಪುರ ಏ.19 :  ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚುಮತಗಳಿಂದ  ಗೆಲವು ಸಾಧಿಸಲಿ ಎಂದು  ಸಿದ್ಧಾಪುರ ಬಿಜೆಪಿಯ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ  ಪ್ರವೀಣ್  ಅವರ ನೇತೃತ್ವದಲ್ಲಿ ಕೇರಳದ ಮಾಮಾನಿಕ್ಕುನ್ನು ದೇವಿ ಕ್ಷೇತ್ರ ಹಾಗೂ ಪರಶ್ಶಿನಿಕಡವು ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿ ಪೂಜೆ ಸಲ್ಲಿಸಿದರು. ಈ ಸಂದರ್ಭ  ಹಿಂದೂ ಮುಖಂಡರಾದ ರದೀಶ್, ಬಿಜೆಪಿ ಯುವಮೋರ್ಚಾ ವಿರಾಜಪೇಟೆ ತಾಲ್ಲೂಕು ಉಪಾಧ್ಯಕ್ಷ ವಿಜೇಶ್, ಯುವ ಮೋರ್ಚಾ ನಗರ ಅಧ್ಯಕ್ಷ ಯತೀಶ್ ರೈ, ಪವನ್, ಮೊದಲಾದವರು ಹಾಜರಿದ್ದರು.

Read More

ನಾಪೋಕ್ಲು ಏ.19 : ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಪೆಬ್ಬಟ್ಟಿರ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಅಯ್ಯಂಗೇರಿ ಗ್ರಾ.ಪಂ  ವ್ಯಾಪ್ತಿಯ ದೊಡ್ಡ ಪುಲಿಕೋಟು ಗ್ರಾಮದ ಪೆಬ್ಬಟ್ಟಿರ ಕುಟುಂಬಸ್ಥರನ್ನು ಸರ್ಕಾರದ ವಿವಿಧ ಕಾಮಗಾರಿಗಳಿಂದ ವಂಚಿಸಲಾಗಿದೆ ಎಂದು ಆರೋಪಿಸಿದರು. ಕುಟುಂಬದಲ್ಲಿ 70 ಮತದಾರರಿದ್ದು,  ಈ ಬಾರಿ ನಾವು ಮತದಾನ ಮಾಡುವುದಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಕುಟುಂಬಸ್ಥರು, ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ. ವರದಿ : ಸಾಜಿದ್ ಪಯ್ಯಡಿ 

Read More

ಸುಂಟಿಕೊಪ್ಪ ಏ.19: ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 45ನೇ ವಾರ್ಷಿಕ ಮಹೋತ್ಸವವು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಏ.17 ರಂದು ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳು ಪ್ರಾರಂಭಗೊಂಡಿತು. ದೀಪರಾಧನೆ ಏಳು ಸುತ್ತಿನ ಪ್ರದಕ್ಷಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ನೆರವೇರಿತು. ನಂತರ ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆಯೊಂದಿಗೆ ಭಕ್ತರ ಹರಕೆ ಮತ್ತು ಬೇಡಿಕೆಗಳು ನಡೆದವು ರಾತ್ರಿ ವಿವಿಧ ದೈವಗಳ ಕೋಲ ಜರುಗಿದವು. ಮರುದಿನ ಅಜ್ಜಪ್ಪ ಕೋಲ, ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲಗಳು ನೆರವೇರಿದ್ದು, ಶ್ರೀದೇವಿ ನೈವೇದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವವು ಸಂಪನ್ನಗೊಂಡಿತು. ಜಾತ್ರಾಮೋಹತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ, ವಿದ್ಯುತ್ ದೀಪಾಂಲಕಾರಗಳಿಂದ ಸಿಂಗಾರಿಸಲಾಗಿತ್ತು. ಸುತ್ತ ಮುತ್ತಲ್ಲ ಗ್ರಾಮಗಳ ಭಕ್ತರು ಮೂರು ದಿನಗಳ ಕಾಲ ನಡೆದ ವಾರ್ಷಿಕ ಮಹೋತ್ಸವದಲ್ಲಿ ಭಾಗಿಯಾಗಿದ್ದರು.

Read More

ಮಡಿಕೇರಿ ಏ.19 : ಭಾರತೀಯ ವಾಯುಪಡೆಯಲ್ಲಿ ಕರ್ತವ್ಯದಲ್ಲಿರುವ ಜಿಲ್ಲೆಯವರಾದ ಯುವ ಅಧಿಕಾರಿ ವಿಂಗ್ ಕಮಾಂಡರ್ ಮಂದಪಂಡ ತಿಮ್ಮಯ್ಯ ಅವರಿಗೆ ವೆಲ್ಲಿಂಗ್ಟನ್ ಸ್ಟಾಫ್ ಕಾಲೇಜಿನಲ್ಲಿ ತೋರಿರುವ ಸಾಧನೆಗಾಗಿ ಜನರಲ್ ತಿಮ್ಮಯ್ಯ ಪ್ರಶಸ್ತಿಯನ್ನು ನೀಡಲಾಗಿದೆ. ಈ ಸ್ಟಾಫ್ ಕಾಲೇಜಿನಲ್ಲಿ ವಿವಿಧ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ತೋರುವ ಅಧಿಕಾರಿಗಳಿಗೆ ಪ್ರಥಮ ಸ್ಥಾನಕ್ಕೆ ಫೀ.ಮಾ.ಮಾಣಿಕ್ ಷಾ ಪ್ರಶಸ್ತಿ ಹಾಗೂ ಎರಡನೆಯ ಸ್ಥಾನಕ್ಕೆ ಜರರಲ್ ತಿಮ್ಮಯ್ಯ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೀಗ ತಿಮ್ಮಯ್ಯ ಅವರು ತಮ್ಮ ಸಾಧನೆಗಾಗಿ (ಬೆಸ್ಟ್ ಆಲ್‍ರೌಂಡ್ ಸಾಧನೆ) ಎರಡನೇ ಸ್ಥಾನ ಪಡೆಯುವುದರೊಂದಿಗೆ ಇವರಿಗೆ ಜನರಲ್ ತಿಮ್ಮಯ್ಯ ಪ್ರಶಸ್ತಿ ನೀಡಲಾಗಿದೆ. ಈ ಹಿಂದೆ ಸ್ಕ್ವಾಡ್ರನ್ ಲೀಡರ್ ಆಗಿದ್ದ ತಿಮ್ಮಯ್ಯ ವಿಂಗ್ ಕಮಾಂಡರ್ ಆಗಿ ಬಡ್ತಿಯನ್ನು ಪಡೆದಿದ್ದಾರೆ. ಇವರು ಬೇಂಗೂರಿನವರಾದ ಮಂದಪಂಡ ಚಂಗಪ್ಪ (ಸದ) ಹಾಗೂ ಗೌರಮ್ಮ (ರಜನಿ-ತಾಮನೆ : ಇಟ್ಟಿರ) ದಂಪತಿ ಪುತ್ರ.

Read More

ಸಿದ್ದಾಪುರ ಏ.19 : ಕೋಟ್ಯಂತರ ಜನ-ಜಾನುವಾರುಗಳ ದಾಹ ನೀಗಿಸುವ ಕಾವೇರಿ ನದಿ ತವರಿನಲ್ಲೇ ಮಲಿನವಾಗುತ್ತಿದ್ದು, ಕುಡಿಯುವ ನೀರಿನ ಹಾಹಾಕಾರ ಸೃಷ್ಟಿಯಾಗುತ್ತಿದ್ದರೂ ಎಚ್ಚೆತ್ತುಕೊಳ್ಳದ ಆಡಳಿತ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಜ್ಞಾವಂತ ನಾಗರಿಕರ ಪ್ರವೃತ್ತಿಯಿಂದ ಒಡಲು ಮಲಿನಗೊಳ್ಳುತ್ತಿದ್ದು, ಕೋಟ್ಯಂತರ ಜಲಚರಗಳು ಹಾಗೂ ಸಾರ್ವಜನಿಕರು ಈ ಕೊಳಕು ನೀರನ್ನು ಕುಡಿದು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ಕರಡಿಗೋಡು  ಗ್ರಾಮದಲ್ಲಿ ಮದ್ಯ ಸೇವಿಸಿ ಬಾಟಲಿ ಹಾಗೂ ಪ್ಲಾಸ್ಟಿಕ್ ಸಾಮಾಗ್ರಿಗಳನ್ನು ನದಿಗೆ ಎಸೆದು ಇಡೀ ವಾತಾವರಣವನ್ನೆ ಕಲುಷಿಗೊಳಿಸುತ್ತಿದ್ದಾರೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಸ್ವಚ್ಚತಾಕಾರ್ಯ ನಡೆಸಲಾಗಿತ್ತು. ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಿದರ ಪರಿಣಾಮ ಗ್ರಾ.ಪಂ ಶುಚಿತ್ವ ಕಾಪಾಡಲು ಸೂಚಿಸಿದರೂ ನದಿ ಸಂರಕ್ಷಣೆಗೆ ಕಾಳಜಿ ವಹಿಸುವಲ್ಲಿ ವಿಫಲವಾಗಿರುವ ಆಡಳಿತ ಮಂಡಳಿ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕರಡಿಗೋಡು ಗ್ರಾಮದಲ್ಲಿ ರೆಸಾರ್ಟ್ ಸೇರಿದಂತೆ ಹೋಂಸ್ಟೇಗಳು ಪ್ರವಾಸಿಗರಿಗೆ ಆಶ್ರಯ ಕಲ್ಪಿಸುತ್ತಿವೆ. ಇಲ್ಲಿಗೆ ಬರುವ ಪ್ರವಾಸಿಗರು ವಾಯು ವಿವಾಹರಕ್ಕೆ ಬಂದು ನದಿ ತೀರದಲ್ಲಿ…

Read More