ಲೇಖಕ: admin

ಮಡಿಕೇರಿ, NEWS DESK ಸೆ.21: ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ಮಡಿಕೇರಿ ರೋಟರಿ ವತಿಯಿಂದ ಮೂರ್ನಾಡು ಎಂ.ಇ.ಎಸ್. ಪ್ರೌಢಶಾಲೆಯ ರೋಟರಿ ಇಂಟರಾಕ್ಟ್ ಕ್ಲಬ್ ಸಹಯೋಗದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಇಂಟರಾಕ್ಟ್ ಅಧ್ಯಕ್ಷೆ ಜಿಯಾ ಫಾತಿಮಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ಉದ್ದೇಶದಿಂದ ಮಡಿಕೇರಿ ರೋಟರಿಯ ರೋ. ಈಶ್ವರ್ ಭಟ್ ಅವರು ಶಾಲೆಗೆ ಪ್ರೊಜೆಕ್ಟರ್ ಹಾಗೂ ಸ್ಕ್ರೀನ್‌ಗಳನ್ನು ಕೊಡುಗೆಯಾಗಿ ಶಾಲಾ ಪ್ರತಿನಿಧಿಗಳಿಗೆ ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು, ಇಂದಿನ ಶೈಕ್ಷಣಿಕ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ಪ್ರೊಜೆಕ್ಟರ್ ಹಾಗೂ ಸ್ಕ್ರೀನ್‌ಗಳಂತಹ ಸೌಲಭ್ಯಗಳು ವಿದ್ಯಾರ್ಥಿಗಳ ಕಲಿಕೆಯನ್ನು ಪರಿಣಾಮಕಾರಿ ಹಾಗೂ ಆಸಕ್ತಿದಾಯಕವಾಗಿಸಲು ಸಹಕಾರಿಯಾಗಲಿವೆ. ವಿದ್ಯಾರ್ಥಿಗಳು ಸೌಲಭ್ಯಗಳನ್ನು ಜವಾಬ್ದಾರಿಯಿಂದ ಬಳಸಿಕೊಂಡು ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಮೂರ್ನಾಡು ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಪುದಿಯೊಕ್ಕಡ ಹರೀಶ್ ದೇವಯ್ಯ ಹಾಗೂ ಖಜಾಂಚಿ ನೆರವಂಡ ಮುತ್ತಪ್ಪ ಮಾತನಾಡಿ, ಶಾಲೆಗೆ ಅಗತ್ಯವಾಗಿದ್ದ ಪ್ರೊಜೆಕ್ಟರ್ ಹಾಗೂ ಸ್ಕ್ರೀನ್‌ಗಳನ್ನು ಒದಗಿಸಿದ ರೋ. ಈಶ್ವರ್…

Read More

ಮಡಿಕೇರಿ, NEWS DESK ಸೆ.21: ತುಳು ಮತ್ತು ಕೊಂಕಣಿ ಭಾಷೆಗಳಂತೆಯೇ ಕೊಡವರ ಮಾತೃಭಾಷೆಯಾದ ಕೊಡವ ಭಾಷೆಗೂ ರಾಜ್ಯ ಭಾಷೆಯ ಮಾನ್ಯತೆ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸರ್ಕಾರವನ್ನು ಆಗ್ರಹಿಸಿದೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮನವಿ ಸಲ್ಲಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯ ಭಾಷೆಯ ಮಾನ್ಯತೆ ನೀಡಿರುವುದನ್ನು ಸಿಎನ್‌ಸಿ ಸ್ವಾಗತಿಸಿದೆ. 1956ರ ರಾಜ್ಯ ಪುನರ್‌ರಚನೆ ಕಾಯ್ದೆಯ 7ನೇ ತಿದ್ದುಪಡಿಯ ಆಶಯ ಹಾಗೂ ಸಂವಿಧಾನದ ವಿಧಿ 345, 347 ಮತ್ತು 348ರ ಅಡಿಯಲ್ಲಿ ಕೊಡವ ಭಾಷೆಗೂ ರಾಜ್ಯ ಭಾಷೆಯ ಸ್ಥಾನಮಾನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಕೊಡವ ಭಾಷೆ ಜೀವಂತ, ಸಮೃದ್ಧ ಹಾಗೂ ಪ್ರಾಚೀನ ಭಾಷೆಯಾಗಿದ್ದು, ಭಾಷಾ ತಜ್ಞ ಡಾ. ಪಂಡಿತ್ ಸೀತಾಕಾಂತ್ ಮಹಾಪಾತ್ರ ಅವರು ಕೊಡವ ಭಾಷೆಯನ್ನು 8ನೇ ಶೆಡ್ಯೂಲ್‌ಗೆ ಸೇರಿಸಲು ಶಿಫಾರಸು ಮಾಡಿದ್ದರು. ಬಿ.ಕೆ.ಹರಿಪ್ರಸಾದ್…

Read More

ಮಡಿಕೇರಿ, NEWS DESK ಸೆ.21: ಯಾವುದೇ ಸಮಯದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಎದುರಿಸಲು ಧೈರ್ಯ ಮತ್ತು ಸಮಯಪ್ರಜ್ಞೆಯನ್ನು ಪ್ರದರ್ಶಿಸಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಕರೆ ನೀಡಿದರು. ನಗರದ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ವೈಆರ್‌ಸಿ ಘಟಕಗಳ ಸಹಯೋಗದಲ್ಲಿ ನಡೆದ **“ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ”**ದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೈಸರ್ಗಿಕವಾಗಿರಲಿ ಅಥವಾ ಮಾನವ ನಿರ್ಮಿತವಾಗಿರಲಿ, ವಿಪತ್ತುಗಳು ಯಾವುದೇ ಸಮಯದಲ್ಲಿ ಸಂಭವಿಸಬಹುದು. ಇಂತಹ ಸಂದರ್ಭಗಳನ್ನು ಎದುರಿಸಲು ಪ್ರತಿಯೊಬ್ಬರೂ ಜೀವ ರಕ್ಷಕ ತರಬೇತಿ ಹೊಂದಿರಬೇಕು. ವಿಪತ್ತು ನಿರ್ವಹಣೆಯಲ್ಲಿ ಸ್ವಂತ ಸುರಕ್ಷತೆಯನ್ನು ಖಚಿತಪಡಿಸಿಕೊಂಡು ಸಂತ್ರಸ್ತರ ಜೀವ ರಕ್ಷಣೆಗೆ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ಅಗತ್ಯ ಕೌಶಲ್ಯಗಳನ್ನು ಪಡೆದು ಧೈರ್ಯ, ಶಿಸ್ತು ಹಾಗೂ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸುವ ಮೂಲಕ ಸಮಾಜ ಮತ್ತು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಎನ್‌ಡಿಆರ್‌ಎಫ್‌ನ ಇನ್ಸ್ಪೆಕ್ಟರ್ ಪ್ರದೀಪ್ ಕುಮಾರ್ ಅವರು ವಿದ್ಯಾರ್ಥಿಗಳು ಹಾಗೂ…

Read More

ನಾಪೋಕ್ಲು, NEWS DESK ಸೆ. 20: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆಯು ನಾಪೋಕ್ಲುವಿನ ಕೆ.ಪಿ.ಎಸ್. ಸಭಾಂಗಣದಲ್ಲಿ ನಡೆಯಿತು. ಸಾಮೂಹಿಕ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯನ್ನು ಕೆ.ಪಿ.ಎಸ್. ಪ್ರೌಢಶಾಲೆಯ ಉಪಪ್ರಾಂಶುಪಾಲ ಶಿವಣ್ಣ ಅವರು ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯವೈಖರಿಯನ್ನು ಶ್ಲಾಘಿಸಿ ಶುಭ ಹಾರೈಸಿದರು. ಜಿಲ್ಲಾ ಸ್ಕೌಟ್ ತರಬೇತಿ ಆಯುಕ್ತ ರಂಜಿತ್ ಕೆ.ಯು. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಮವಸ್ತ್ರದ ಮಹತ್ವ, ವಿದ್ಯಾರ್ಥಿಗಳು ಕಲಿಯುವ ಜೀವನ ಕೌಶಲ್ಯಗಳು, ಶಿಸ್ತು, ಮೌಲ್ಯಗಳು ಹಾಗೂ ಸಮಾಜ ಸೇವಾ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ವತಿಯಿಂದ ಮಕ್ಕಳ ಮೇಳ, ರಕ್ತದಾನ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉತ್ತಮ ಸಂಸ್ಥೆ ಪ್ರಶಸ್ತಿಗೆ ಪಾತ್ರವಾಗಿರುವುದನ್ನು ತಿಳಿಸಿದರು. ಉಪಾಧ್ಯಕ್ಷ ಶ್ರೀಧರ್ ಎ.ಎಸ್. ಅವರು ಮಾತನಾಡಿ, ತರಬೇತಿ ಪಡೆದ ಎಲ್ಲಾ ಶಿಕ್ಷಕರು ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಯನ್ನು…

Read More

ವಿರಾಜಪೇಟೆ, NEWS DESK ಸೆ.21: ಕೊಡಗು ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಾಡಾನೆ ಹಾಗೂ ಹುಲಿ ದಾಳಿಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅಮ್ಮಣಿಚಂಡ ರಂಜಿ ಪೂಣಚ್ಚ, ಜನರು ಹಾಗೂ ಸಾಕುಪ್ರಾಣಿಗಳ ಜೀವ ರಕ್ಷಣೆಗೆ ಸರ್ಕಾರ ಮತ್ತು ಅರಣ್ಯ ಇಲಾಖೆ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ರೈತರು, ಕಾರ್ಮಿಕರು ಹಾಗೂ ಸಾಕುಪ್ರಾಣಿಗಳ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ನಿರಂತರವಾಗಿ ವನ್ಯಜೀವಿ ದಾಳಿಗಳು ನಡೆಯುತ್ತಿದ್ದರೂ ಸರ್ಕಾರ ಮತ್ತು ಅರಣ್ಯ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಜನರ ಜೀವ ಹೋದ ನಂತರ ಕೇವಲ ಪರಿಹಾರ ನೀಡುವುದಷ್ಟೇ ಸರ್ಕಾರದ ಜವಾಬ್ದಾರಿಯಲ್ಲ. ಜೀವಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಮೊದಲ ಆದ್ಯತೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದು ರಾಜಕೀಯ ಮಾಡುವ ಸಮಯವಲ್ಲ. ಜಿಲ್ಲೆಯ ಶಾಸಕರು ರಾಜಕೀಯವನ್ನು ಬದಿಗಿಟ್ಟು ಕೊಡಗಿನ ಜನರು ಹಾಗೂ ಸಾಕುಪ್ರಾಣಿಗಳ ಜೀವದ ಬಗ್ಗೆ ಗಂಭೀರವಾಗಿ ಚಿಂತಿಸಬೇಕು. ಜನರ ಜೀವ ಉಳಿಸಲು…

Read More

ಮಡಿಕೇರಿ NEWS DESK ಸೆ.20 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ ನಾಪೋಕ್ಲುವಿನ ಕೆ.ಪಿ.ಎಸ್. ಸಭಾಂಗಣದಲ್ಲಿ ನಡೆಯಿತು. ಸಾಮೂಹಿಕ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯನ್ನು ಕೆ.ಪಿ.ಎಸ್. ಪ್ರೌಢಶಾಲೆಯ ಉಪಪ್ರಾಂಶುಪಾಲ ಶಿವಣ್ಣ ಅವರು ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯವೈಖರಿಯನ್ನು ಶ್ಲಾಘಿಸಿ ಶುಭ ಹಾರೈಸಿದರು. ಜಿಲ್ಲಾ ಸ್ಕೌಟ್ ತರಬೇತಿ ಆಯುಕ್ತ ರಂಜಿತ್ ಕೆ.ಯು. ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಸಮವಸ್ತçದ ಮಹತ್ವ, ವಿದ್ಯಾರ್ಥಿಗಳು ಕಲಿಯುವ ಜೀವನ ಕೌಶಲ್ಯ, ಶಿಸ್ತು, ಮೌಲ್ಯಗಳು ಹಾಗೂ ಸಮಾಜ ಸೇವಾ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ವತಿಯಿಂದ ಮಕ್ಕಳ ಮೇಳ, ರಕ್ತದಾನ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉತ್ತಮ ಸಂಸ್ಥೆ ಪ್ರಶಸ್ತಿಗೆ ಪಾತ್ರವಾಗಿರುವುದನ್ನು ತಿಳಿಸಿದರು. ಉಪಾಧ್ಯಕ್ಷ ಶ್ರೀಧರ್ ಎ.ಎಸ್. ಅವರು ಮಾತನಾಡಿ, ತರಬೇತಿ ಪಡೆದ ಎಲ್ಲಾ ಶಿಕ್ಷಕರು ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಯನ್ನು…

Read More

ಮಡಿಕೇರಿ, NEWS DESK ಸೆ. 20: ಮರಗೋಡು ಹೊಸಕೇರಿ ಗ್ರಾಮದ ಮಂಡೀರ (ಪಾಣತ್ತಲೆ) ವಿ. ಹರೀಶ್ ಮತ್ತು ವಿಮಾ ದಂಪತಿಯ ಪುತ್ರ ಹಾಗೂ ಮಡಿಕೇರಿಯ ಕೊಡಗು ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿ ಗೋಲ್ಡನ್ ಸಾರ್ಜೆಂಟ್ ಜೇಷ್ಠ ಸುಬ್ಬಯ್ಯ ಎಂ.ಹೆಚ್. ಅವರು ರಾಷ್ಟ್ರೀಯ ಕೆಡೆಟ್ ಕೋರ್ (NCC)ಗೆ ಆಯ್ಕೆಯಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ. ನವದೆಹಲಿಯಲ್ಲಿ ನಡೆದ **ಅಖಿಲ ಭಾರತ ಥಲ್ ಸೈನಿಕ ಶಿಬಿರ (AITSC)**ನಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಜೇಷ್ಠ ಸುಬ್ಬಯ್ಯ ಅವರು ಫೈರಿಂಗ್ (ಶೂಟಿಂಗ್) ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್ ಪಡೆದಿದ್ದಾರೆ. ಶಿಸ್ತು, ಏಕಾಗ್ರತೆ ಹಾಗೂ ಪರಿಶ್ರಮದ ಮೂಲಕ ಈ ಸಾಧನೆ ಮಾಡಿರುವ ಜೇಷ್ಠ ಸುಬ್ಬಯ್ಯ ಅವರಿಗೆ ಮುಂದಿನ ದಿನಗಳಲ್ಲೂ ಇನ್ನಷ್ಟು ಉನ್ನತ ಯಶಸ್ಸು ದೊರೆಯಲಿ ಹಾಗೂ ಅವರ ಭವಿಷ್ಯ ಉಜ್ವಲವಾಗಲಿ ಎಂದು ಕುಟುಂಬಸ್ಥರು ಹಾಗೂ ಹಿತೈಷಿಗಳು ಶುಭ ಹಾರೈಸಿದ್ದಾರೆ. ಶುಭ ಹಾರೈಸುವವರು:ಮಂಡೀರ (ಪಾಣತ್ತಲೆ) ಎಸ್. ರಾಜು ದೇವಯ್ಯ, ಭಾರತಿ ಮತ್ತು ಯತಿನ್ ಹಾಗೂ ಕೊಡಿಮನೆ ವಚನ ಮತ್ತು ಅಭಿಲಾಷ್.

Read More

ವಿರಾಜಪೇಟೆ, NEWS DESK ಸೆ.20: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 44ನೇ ವರ್ಷದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವವು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಏಳು ದಿನಗಳ ಕಾಲ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗಿತ್ತು. ವಿಸರ್ಜನೋತ್ಸವದಂದು ಬೆಳಗ್ಗಿನಿಂದಲೇ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ವಿಶೇಷ ಪೂಜೆ ಹಾಗೂ ಗಣಪತಿ ಪೂಜೆಯನ್ನು ಸಲ್ಲಿಸಿದರು. ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ ಸ್ವಾಮಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ವನದುರ್ಗ ಹಾಗೂ ಶ್ರೀ ನಾಗದೇವರಿಗೆ ಅರ್ಚಕರು ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿದರು. ವಿವಿಧ ಧಾರ್ಮಿಕ ಸೇವೆಗಳ ಬಳಿಕ ಶ್ರೀ ಮಹಾಗಣಪತಿ ಸ್ವಾಮಿ ಹಾಗೂ ಗೌರಿ ದೇವರಿಗೆ ಮಹಾ ಮಂಗಳಾರತಿಯನ್ನು ನೆರವೇರಿಸಲಾಯಿತು. ನಂತರ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನದ ಬಳಿಕ ವಿದ್ಯುತ್ ಹಾಗೂ ಹೂವಿನ ಅಲಂಕೃತ ತೇರಿನ ಮಂಟಪದಲ್ಲಿ ಶ್ರೀ ಗಣಪತಿ…

Read More

ಸೋಮವಾರಪೇಟೆ, NEWS DESK ಸೆ.20: SIR-2026 ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾನುವಾರ ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಾಥಾದಲ್ಲಿ ಮಲ್ಲಳ್ಳಿ ಜಲಪಾತಕ್ಕೆ ಆಗಮಿಸಿದ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ SIR-2026 ಕುರಿತು ಮಾಹಿತಿ ನೀಡಿ, ಅದರ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯಿತಿ ಸಿಬ್ಬಂದಿ, ಸಾರ್ವಜನಿಕರು, ಪ್ರವಾಸಿಗರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Read More

ವಿರಾಜಪೇಟೆ, NEWS DESK ಸೆ.20: ಸಮೀಪದ ಮಗ್ಗುಲ ಗ್ರಾಮದಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಎಲ್‌ಎಸ್‌ಎ ಕೇರ್ಸ್ ವತಿಯಿಂದ ಸಮಾಜಮುಖಿ ಚಟುವಟಿಕೆಯ ಅಂಗವಾಗಿ ನಾಂಗಾಲ ಗ್ರಾಮದ ಕಲ್ತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್‌ಗಳನ್ನು ವಿತರಿಸಲಾಯಿತು. ಇದರೊಂದಿಗೆ ವಿದ್ಯಾರ್ಥಿಗಳಿಗೆ ಕಲಿಕಾ ಹಾಗೂ ಆಟದ ಸಾಮಗ್ರಿಗಳನ್ನು ಸಹ ವಿತರಿಸಲಾಯಿತು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರು ಹಾಗೂ ಉದ್ಯಮಿ ಪೂಜಾ ಸಜೇಶ್ ಅವರು ವಿದ್ಯಾರ್ಥಿಗಳಿಗೆ ಸಾಮಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೂಜಾ ಸಜೇಶ್, “ನಮ್ಮ ಸಂಸ್ಥೆಯ ಎಲ್‌ಎಸ್‌ಎ ಕೇರ್ಸ್ ವತಿಯಿಂದ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಇದೊಂದು ಶೈಕ್ಷಣಿಕ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯಬಾರದು. ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಮಾನವೀಯತೆ ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ಬಾಳಿ ಬದುಕಬೇಕು” ಎಂದು ಕರೆ ನೀಡಿದರು. ಪರಸ್ಪರ ಸಹಕಾರ, ಸೇವಾ ಮನೋಭಾವ ಹಾಗೂ ಸಮಾನತೆಯನ್ನು ಬೆಳೆಸುವ ಉದ್ದೇಶದಿಂದ ಮುಂದಿನ…

Read More