ಲೇಖಕ: admin

ಸುಂಟಿಕೊಪ್ಪ ಮೇ 22: ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿ 7 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಎಲ್ಲಾರೂ ಸೂಕ್ತ ಚಿಕಿತ್ಸೆಯ ಹಿನ್ನಲೆಯಲ್ಲಿ ಅಪಾಯದಿಂದ ಪಾರಾಗಿದ್ದು, ಜನತೆ ಯಾವುದೇ ಅಂತಕ ಪಡುವ ಅವಶ್ಯಕತೆ ಇಲ್ಲವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಕುಮಾರ್ ತಿಳಿಸಿದರು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತರೊಂದಿಗೆ ಚರ್ಚಿಸಿದರು. ನಂತರ ಮಾತನಾಡಿದ ಅವರು ಕಳೆದ 15 ದಿನಗಳಿಂದ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿ ಜ್ವರ ಪ್ರಮಾಣ ಹೆಚ್ಚಾಗಿ ಕಾಣಿಸಿಕೊಂಡಿದೆ. ನಿವಾಸಿಗಳಲ್ಲಿ ಅತಿಯಾಗಿ ಜ್ವರ, ಶೀತ, ಕೆಮ್ಮು ಸಾಮಾನ್ಯವಾಗಿ ಕಂಡುಬರುತ್ತಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಮನೆಯ ಸುತ್ತ ಮುತ್ತ ಸ್ವಚ್ಚ ಪರಿಸರವನ್ನು ಕಾಪಾಡಿಕೊಳ್ಳುವಂತೆ ನಿಂತ ನೀರು ಸೊಳ್ಳೆ ಕಾಟ ನಿರ್ಮೂಲನೆ ಮಾಡಲು ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕೆಂದು ಮನವಿ ಮಾಡಿದರು. ಪ್ರಾಥಮಿಕ ಆರೋಗ್ಯದ ವತಿಯಿಂದ ಆಯೋಜಿಸಲಾದ…

Read More

ಮಡಿಕೇರಿ ಮೇ 22 : ಕೊಡಗು ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಸೂಕ್ತ ರಕ್ಷಣೆ ನೀಡಿ ಪ್ರವಾಸಿಗರ ಸುರಕ್ಷತೆ ಹಾಗೂ ಅವರ ಪ್ರವಾಸ ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ಕೊಡಗು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕ್ರಮಕೈಗೊಳ್ಳುವಂತೆ ಕೊಡಗು ಜಿಲ್ಲಾ ಹೋಟೆಲ್ ರೆಸಾರ್ಟ್ ಮತ್ತು ರೆಸ್ಟೋರೆಂಟ್ ಸಂಘದ ಪ್ರಮುಖರು ಜಿ ಚೇಂಬರ್ ಆಫ್ ಕಾಮಸ್೯, ಹೋಂಸ್ಟೇ ಅಸೋಸಿಯೇಷನ್ ಪದಾಧಿಕಾರಿಗಳೊಂದಿಗೆ ಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಸಿಸಿದ್ದಾರೆ. ಕೊಡಗು ಜಿಲ್ಲಾ ಹೋಟೆಲ್ ರೆಸಾರ್ಟ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಪ್ರಮುಖರು ಜಿಲ್ಲಾ ಚೇಂಬರ್ ಆಫ್ ಕಾಮಸ್೯, ಕೊಡಗು ಹೋಂಸ್ಟೇ ಅಸೋಸಿಯೇಷನ್ ನ ಪ್ರಮುಖರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಪೊಲೀಸ್ ವರಿಷ್ಟಾಧಿಕಾರಿ ಕೆ ರಾಮರಾಜನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಮಡಿಕೇರಿ ವ್ಯಾಪ್ತಿಯ ಪ್ರವಾಸೀ ತಾಣ ಅಬ್ಬಿ ಫಾಲ್ಸ್ ನಲ್ಲಿ ಕೆಲವರು  ಪ್ರವಾಸಿಗರ ಮೇಲೆ ಹಲ್ಲೆ ನಡೆಸಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಸಂಘಸಂಸ್ಥೆಗಳ ಪ್ರಮುಖರು, ಪ್ರವಾಸಿಗರಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ…

Read More

ಮಡಿಕೇರಿ ಮೇ 22 : ಎರಡೂ ನೇತ್ರಗಳ ದೃಷ್ಟಿಯನ್ನು ಕಳೆದುಕೊಂಡಿದ್ದ ತರುಣೇಶ್ ಎಂಬುವವರಿಗೆ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯಿಂದ ವೈದ್ಯಕೀಯ ಚಿಕಿತ್ಸೆಗಾಗಿ ಆಥಿ೯ಕ ನೆರವು ನೀಡಲಾಯಿತು. ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ತರುಣೇಶ್ ಅವರಿಗೆ ಇನ್ನರ್ ವೀಲ್ ಸಂಸ್ಥೆಯಿಂದ ಆಥಿ೯ಕ ನೆರವು ನೀಡಲಾಯಿತು. ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾಯ೯ದಶಿ೯ ಲಲಿತಾ ರಾಘವನ್, ಸದಸ್ಯೆಯರಾದ ಶಫಾಲಿ ರೈ, ಉಮಾಗೌರಿ, ಮಲ್ಲಿಗೆ ಪೈ,ರಾಧಿಕಾ ವಿಶ್ವನಾಥ್, ತೆಕ್ಕಡೆ ಗುಲಾಬಿ ಜನಾಧ೯ನ್ ಹಾಜರಿದ್ದರು.

Read More

ಮಡಿಕೇರಿ ಮೇ 22 :  ವಿಕೆ3 ಪಿಕ್ಚರ್ಸ್ ಬ್ಯಾನರ್ ನಡಿ ಈರಮಂಡ ಹರಿಣಿ ವಿಜಯ್ ಮತ್ತು ಕೊಟ್ಟುಕತ್ತಿರ ಯಶೋಧ ಪ್ರಕಾಶ್ ನೇತೃತ್ವದಲ್ಲಿ ನಿರ್ಮಾಣವಾದ ಕೊಡವ ಕಾದಂಬರಿ ಆಧಾರಿತ, ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಲನಚಿತ್ರ 77ನೇ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಗೋವಾದ ಯುಎಫ್‍ಎಂಸಿ ಸಹಯೋಗದಲ್ಲಿ ನಡೆದ ಗೋವಾ ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್-2023 ರಲ್ಲಿ “ನಾಡ ಪೆದ ಆಶಾ” ಕೊಡವ ಚಲನಚಿತ್ರ “ಅತ್ಯುತ್ತಮ ಸಾಮಾಜಿಕ ಚಲನಚಿತ್ರ” ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಕನ್ನಡದ ಖ್ಯಾತ ನಟಿ ಅನುಪ್ರಭಾಕರ್ ಮುಖರ್ಜಿ ಹಾಗೂ ಗೋವಾ ಸರ್ಕಾರದ ಸಮಾಜ ಕಲ್ಯಾಣ ಹಾಗೂ ಪುರಾತತ್ವಶಾಸ್ತ್ರ ಸಚಿವ ಸುಭಾಷ್ ಪೌಲ್ ದೇಸಾಯಿ ಅವರಿಂದ, “ನಾಡ ಪೆದ ಆಶಾ” ಚಿತ್ರದ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭ ಗೋವಾ-ಪಣಜಿ ಮೇಯರ್ ಸುರೇಂದ್ರ ಫೆರ್ಟಾಡೊ, ಯೂನಿವರ್ಸಲ್ ಫಿಲಂ ಮೇಕರ್ಸ್ ಕೌನ್ಸಿಲ್ ಅಧ್ಯಕ್ಷ ಮಮ್ಮಿಗಟ್ಟಿ, ಥೈಲ್ಯಾಂಡ್ ನ ಡ್ರೀಮ್ ಲ್ಯಾಂಡ್ ಉದ್ಯಮಿ ಹಾಗೂ ಹಲವು ರಾಜ್ಯಗಳ…

Read More

ಮಡಿಕೇರಿ ಮೇ 22 : ಭಾರತೀಯ ಕ್ರೀಡಾ ಪ್ರಾಧಿಕಾರದ(ಸಾಯಿ) ತರಬೇತಿ ಕೇಂದ್ರದ ವತಿಯಿಂದ ಮಡಿಕೇರಿಯ ಬಾಲಕಿಯರ ಕ್ರೀಡಾ ಹಾಸ್ಟ್‌ಲ್‌ಗೆ ಪ್ರತಿಭಾವಂತ ಹಾಕಿ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಮೇ 27 ರಂದು ಬೆಳಗ್ಗೆ 9 ಗಂಟೆಗೆ ನಗರದ ರೇಸ್‍ಕೋರ್ಸ್ ರಸ್ತೆಯ ಸಾಯಿ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ. 12 ರಿಂದ 18 ವರ್ಷದೊಳಗಿನ ಬಾಲಕಿಯರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಭಾಗವಹಿಸುವ ಕ್ರೀಡಾ ಪಟುಗಳು ತಮ್ಮ ವೈಯಕ್ತಿಕ ಕ್ರೀಡಾ ಸಾಮಗ್ರಿಗಳನ್ನು ತರಬೇಕು. ವೈದ್ಯಕೀಯ ಅರ್ಹತಾ ಪತ್ರ ವೈದ್ಯಾಧಿಕಾರಿಯವರಿಂದ, ಕ್ರೀಡಾ ಸಾಧನೆಯ ಸರ್ಟಿಫಿಕೇಟ್(ಜಿಲ್ಲಾ, ವಿಭಾಗ, ರಾಜ್ಯ ಹಾಗೂ ಅದಕ್ಕಿಂತ ಮೇಲ್ಪಟ್ಟ 3 ವರ್ಷದ ಹಿಂದಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದು), ಜನ್ಮ ದಿನಾಂಕ ಪ್ರಮಾಣ ಪತ್ರ(ಜನನ ಮರಣ ನೋಂದಣಿ ಅಧಿಕಾರಿಗಳಿಂದ), ಇತ್ತೀಚಿನ 5 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ವಿಳಾಸ ದೃಢೀಕರಣಗೊಳಿಸಲು ಆಧಾರ್ ಕಾರ್ಡ್ ಈ ದಾಖಲಾತಿಗಳ ಮೂಲ ಪ್ರತಿಯೊಂದಿಗೆ ಒಂದು ಸೆಟ್ ಜೆರಾಕ್ಸ್ ಪ್ರತಿಯನ್ನು ತರಬೇಕು. ಈ ಆಯ್ಕೆ ಪ್ರಕ್ರಿಯೆಯನ್ನು ಹಿಂದಿನ 3 ವರ್ಷದ ಹಾಕಿ ಕ್ರೀಡಾ ಸಾಧನೆಯ…

Read More

ಮಡಿಕೇರಿ ಮೇ 22 : 66/11ಕೆವಿ ಮಡಿಕೇರಿ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್3 ಗದ್ದಿಗೆ ಮತ್ತು ಎಫ್ 11 ಗಾಳಿಬೀಡು ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ, 23 ರಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸಂಪಿಗೆಕಟ್ಟೆ, ಅಜಾದ್‍ನಗರ, ತ್ಯಾಗರಾಜ ಕಾಲೋನಿ, ಎ.ವಿ.ಶಾಲೆ, ರಾಣಿಪೇಟೆ ಮಹದೇವಪೇಟೆ ಭಗವತಿನಗರ ಕಾನ್ವೆಂಟ್ ಜಂಕ್ಷನ್, ಹೆಬೆಟ್ಟಗೇರಿ, ಕೂಟುಹೊಳೆ, ಗಾಳಿಬೀಡು, ಕಾಲೂರು, ಮೊಣ್ಣಂಗೇರಿ, ವಣಚಲು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಮೇ 22 : ಕೊಡಗು ಜಿಲ್ಲೆಯಲ್ಲಿ ಮೇ, 23 ರಿಂದ ಜೂನ್, 3 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ…

Read More

ಮಡಿಕೇರಿ ಮೇ 22 : ಸದ್ಯದಲ್ಲಿಯೇ ಮುಂಗಾರು ಆರಂಭವಾಗಲಿದ್ದು, ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಮಳೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಯಿಂದ ಜೀವಹಾನಿ, ಜಾನುವಾರು ಹಾನಿಯಾದಲ್ಲಿ ಕೂಡಲೇ ವರದಿ ನೀಡಿ, ಪರಿಹಾರ ವಿತರಿಸುವಂತೆ ಎಲ್ಲಾ ತಹಶೀಲ್ದಾರರಿಗೆ ಮತ್ತು ಬೆಳೆ ಹಾನಿ ಸಂಭವಿಸಿದ್ದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೂಕ್ತ ರೀತಿಯಲ್ಲಿ ಅಂದಾಜು ನಷ್ಟದ ವರದಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿರುವುದರ ಕುರಿತು ಮತ್ತೊಮ್ಮೆ ಪರಿಶೀಲಿಸಿ, ರಾಜಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಅರಣ್ಯ ಇಲಾಖೆಯಿಂದ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬೀಳುವ ಮರಗಳನ್ನು ಕೂಡಲೇ ತೆರವುಗೊಳಿಸಲು ಅಗತ್ಯವಿರುವ…

Read More

ವಿರಾಜಪೇಟೆ ಮೇ 22 : ವಿಜ್ಞಾನ ತಂತ್ರಜ್ಞಾನ ವಾಣಿಜ್ಯ ಮತ್ತು ನಿರ್ವಹಣೆಗಳು ಒಂದೇ ದಾರದಲ್ಲಿ ಪೋಣಿಸಿರುವ ಮಣಿಗಳಂತೆ. ಹೊಸ ದೃಷ್ಟಿಕೊನದೊಂದಿಗೆ ಹೊಸ ಅವಿಷ್ಕಾರಗಳು ಹುಟ್ಟುಹಾಕುವ ಅನಿವಾರ್ಯತೆ ಯುವ ಸಮಾಜಕ್ಕೆ ಬೇಕಾಗಿದೆ ಎಂದು ಜ್ಞಾನ ಕಾವೇರಿ ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಅಶೋಕ್ ಸಂಗಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜಿನ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ “ವಿಜ್ಞಾನ ತಂತ್ರಜ್ಞಾನ ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ಪ್ರಸ್ತುತ ಜಾಗತಿಕ ಮಟ್ಟದ ಹೊಸ ದೃಷ್ಟಿಕೊನ” ಎಂಬ ವಿಷಯದ ಬಗ್ಗೆ ಒಂದು ದಿನದ ಅಂತರ್ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ದೇಶ ಮತ್ತು ವಿಶ್ವವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಹಳಷ್ಟು ಸಾಧನೆಗೈದಿದೆ. ದಿನದಿಂದ ದಿನಕ್ಕೆ ಹೊಸ ಹೊಸ ಅವಿಷ್ಕಾರಗಳು ಉಗಮವಾಗುತ್ತಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ನೂತನವಾದ ಅವಿಷ್ಕಾರಗಳು ಉದಯವಾದರು. ಪರಿಸರಕ್ಕೆ ಮಾರಕವಾಗುವ ವಿಷಯಗಳು ವಸ್ತುಗಳಿಗೆ ಪೂರಕವಾಗಿ ಸಮಾಜವು ನಿಲ್ಲಬಾರದು. ತಂತ್ರಜ್ಞಾನ ಬಳಕೆಯು ಮಾನವ ನಿರ್ಮಿತವಾಗಿದೆ. ತಂತ್ರಜ್ಞಾನದಿಂದ ಪರಿಸರದಿಂದ ಲಭಿಸುವ…

Read More

ನಾಪೋಕ್ಲು ಮೇ 22 :  ಚೆರಿಯಪರಂಬುವಿನ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬಾಳೆಯಡ ಕಪ್ ಕ್ರಿಕೆಟ್ ನಮ್ಮೆಯ ಅಂತಿಮ ಪಂದ್ಯದಲ್ಲಿ ಚೆಕ್ಕೆರ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.ಅಟ್ರಂಗಡ ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತು. ಕ್ರಿಕೆಟ್  ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆಕ್ಕೆರ ತಂಡ ಒಂದು ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿ ಅಟ್ರಂಗಡ ತಂಡಕ್ಕೆ 153 ರನ್ ಗುರಿ ನೀಡಿತು. ಉತ್ತರವಾಗಿ ಆಡಿದ ಅಟ್ರಂಗಡ ತಂಡ 3 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿ ಸೋಲನ್ನು ಅನುಭವಿಸಿತು. ಆ ಮೂಲಕ ಅಟ್ರಂಗಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತು. ವಿಜೇತ ತಂಡಕ್ಕೆ ರೂ. 75,000 ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು. ರನ್ನರ್ ಅಪ್ ಸ್ಥಾನ ಪಡೆದ ಅಟ್ರಂಗಡ ತಂಡಕ್ಕೆ ರೂ.50,000 ನಗದು ಮತ್ತು ಟ್ರೋಫಿಯನ್ನು ವಿತರಿಸಲಾಯಿತು. ಇದಕ್ಕೂ ಮುನ್ನ ಮೂರು ಮತ್ತು ನಾಲ್ಕನೇ ಸ್ಥಾನಕ್ಕಾಗಿ ಮಂಡುವಂಡ ಹಾಗೂ ಮಾಳೇಟಿರ ತಂಡಗಳ ನಡುವೆ ಪಂದ್ಯ ನಡೆಯಿತು. ಮಂಡುವಂಡ…

Read More