ಲೇಖಕ: admin

ದೇಹವನ್ನು ಸದೃಢವಾಗಿಡಲು ಹಲವು ಪ್ರಕಾರಗಳಲ್ಲಿ ಕಾಳಜಿ ವಹಿಸಬೇಕಾಗುತ್ತದೆ. ಆಹಾರ ಕ್ರಮ, ಜೀವನಶೈಲಿ, ಯೋಗಾಭ್ಯಾಸ, ವಾಕಿಂಗ್ ಹೀಗೆ ಹಲವು ಅಂಶಗಳು ಸೇರ್ಪಡೆಯಾಗುತ್ತವೆ. ಆರ್ಯುರ್ವೇದ ಮತ್ತು ಯೋಗವು ಸದೃಢ ಆರೋಗ್ಯಕ್ಕೆ ಹಲವು ಆಸನ ಮತ್ತು ಮುದ್ರೆಗಳ ಬಗ್ಗೆ ಹೇಳುತ್ತದೆ. ಒಂದು ಮುದ್ರೆಯನ್ನು ಅಭ್ಯಾಸ ಮಾಡುವುದರಿಂದ ಹಲವು ಕಾಯಿಲೆಗಳನ್ನು ಹೊಡೆದೋಡಿಸಬಹುದು ಎಂದು ಹೇಳಲಾಗುತ್ತದೆ. ಅವುಗಳಲ್ಲಿ ಒಂದು ಸೂರ್ಯ ಮುದ್ರೆ ಆಗಿದೆ. ಸಂಸ್ಕೃದಲ್ಲಿ ಸೂರ್ಯ ಎಂದರೆ ಸೂರ್ಯ ಮತ್ತು ಮುದ್ರೆ ಎಂದರೆ ಸನ್ನೆ ಎಂದರ್ಥ. ಸೂರ್ಯ ಮುದ್ರೆ ಮಾಡುವ ವಿಧಾನ: ಉಂಗುರದ ಬೆರಳಿನ ತುದಿಯನ್ನು ಹೆಬ್ಬೆರಳಿನ ಬುಡದಲ್ಲಿರಿಸಿ, ಹೆಬ್ಬೆರಳನ್ನು ಉಂಗುರ ಬೆರಳಿನ ಮೇಲೆ ಹಗುರವಾಗಿ ಒತ್ತಿ ಇಡಿ. ಉಳಿದ ಬೆರಳುಗಳು ನೇರವಾಗಿರಲಿ. ಇದನ್ನು ಸುಮಾರು 10 ರಿಂದ 20, 40 ನಿಮಿಷ ಮಾಡಿದರೂ ಉಪಯೋಗ ಕಾಣಬಹುದು. ಅಥವಾ ಹತ್ತರಿಂದ ಹದಿನೈದು ನಿಮಿಷಗಳ ವರೆಗೆ ಮೂರು ಬಾರಿ ಸಹಾ ಅಭ್ಯಾಸ ಮಾಡಬಹುದು. ಬಳಿಕ 10 ನಿಮಿಷ ಪ್ರಾಣ ಮುದ್ರೆಯನ್ನು ಮಾಡಿ. ಮುದ್ರೆಯನ್ನು ಎರಡೂ ಕೈಯಲ್ಲಿ ಅಭ್ಯಾಸ ಮಾಡಬೇಕು. ಹೇಳಬೇಕಾದ…

Read More

ಬೆಂಗಳೂರು ಮೇ 22 :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿ ಬೆಂಗಳೂರಿನ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು. ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ ನೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Read More

ಮಡಿಕೇರಿ ಮೇ 21 : ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಝೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಝೀರೋ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ. (ಸಿದ್ದರಾಮಯ್ಯ, ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯ)

Read More

ಮಡಿಕೇರಿ ಮೇ 21 : ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. (ಸಿದ್ದರಾಮಯ್ಯ, ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯ)

Read More

ಮಡಿಕೇರಿ ಮೇ 21 : ಭಾರೀ ಬಿರುಗಾಳಿ ಮಳೆಗೆ ಮನೆಗಳ ಮೇಲ್ಚಾವಣಿಗಳು ಹಾರಿ, ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಹುಣುಸೂರು ತಾಲ್ಲೂಕು ವ್ಯಾಪ್ತಿಯಲ್ಲಿ ನಡೆದಿದೆ. ಹಲವು ಗ್ರಾಮಗಳಲ್ಲಿ 25ಕ್ಕೂ ಹೆಚ್ಚು ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ. ಮರಗಳು ಧರೆಗುರುಳಿವೆ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ.  ಹನಗೋಡು ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಎಚ್.ಡಿ.ಕೋಟೆ  ಹಾಗೂ ಹನಗೋಡು ಮುಖ್ಯ ರಸ್ತೆಯಲ್ಲಿ ಮರಗಳು ವಿದ್ಯುತ್ ಮಾರ್ಗದ ಮೇಲೆ ಬಿದ್ದಿದೆ. ಜೋಳದ ಬೆಳೆ ಮಳೆ ನೀರಿನಿಂದ ಆವೃತವಾಗಿದೆ. ಹುಣಸೂರು-ಎಚ್.ಡಿ.ಕೋಟೆ ಮುಖ್ಯರಸ್ತೆ ವ್ಯಾಪ್ತಿಯಲ್ಲೂ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ.

Read More

ಮಡಿಕೇರಿ ಮೇ 21 : ರಾಜ್ಯವ್ಯಾಪಿ ಸಿಡಿಲಿನಾರ್ಭಟದೊಂದಿಗೆ ಗಾಳಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಹುಣುಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಮಂಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಹರೀಶ್ (42) ಎಂಬುವವರೇ ಮೃತ ದುರ್ದೈವಿ. ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ. ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯುತ್ತಿದ್ದ ಕಾರಣ ಜಮೀನಿನಲ್ಲಿದ್ದ ಗುಡಿಸಲ ಬಳಿ ಆಶ್ರಯ ಪಡೆದಿದ್ದರು. ಈ ವೇಳೆ ಸಿಡುಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಶಾಸಕ ಜಿ.ಡಿ.ಹರೀಶ್‌ಗೌಡ ಭೇಟಿ ನೀಡಿ ಸಾಂತ್ವನ ಹೇಳಿದರು.

Read More

ಮಡಿಕೇರಿ ಮೇ 21 : ಗರ್ಭಿಣಿ ಕಾಡಾನೆಯೊಂದನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕುಶಾಲನಗರ ತಾಲ್ಲೂಕು ಗುಡ್ಡೆಹೊಸೂರು ಗ್ರಾಮದ ಬಾಳುಗೋಡು ಎಂಬಲ್ಲಿ ನಡೆದಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 18 ರಿಂದ 20 ವರ್ಷದ ಹೆಣ್ಣಾನೆಗೆ ಎರಡು ಗುಂಡು ತಗುಲಿದೆ ಎಂದು ಹೇಳಲಾಗಿದ್ದು, ಆನೆ ಸ್ಥಳದಲ್ಲೇ ಮೃತಪಟ್ಟಿದೆ. ಭಾನುವಾರ ಬೆಳಗ್ಗೆ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದ ಸಂದರ್ಭ ಕಾಡಾನೆ ಮೃತಪಟ್ಟ ಸ್ಥಳದಿಂದ ಅನತಿ ದೂರದಲ್ಲಿ ಖಾಲಿ ತೋಟಾಗಳು ಪತ್ತೆಯಾಗಿದೆ. ಆರೋಪಿಗಳ ಪತ್ತೆಗೆ ತನಿಖೆ ಮುಂದುವರೆಸಲಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಡಿಸಿಎಫ್ ಶಿವರಾಮ್ ಬಾಬು, ಕುಶಾಲನಗರ ವಲಯ ಅರಣ್ಯಾಧಿಕಾರಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿಗಳ ಅನಿಲ್ ಡಿಸೋಜ, ದೇವಯ್ಯ, ರಂಜನ್ ಹಾಗೂ ಆರ್.ಆರ್.ಟಿ ಸಿಬ್ಬಂದಿಗಳು ಭೇಟಿ ನೀಡಿ ಮಹಜರು ನಡೆಸಿದರು.

Read More

ಮಡಿಕೇರಿ ಮೇ 21 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಡಾ.ಮಂತರ್ ಗೌಡ ಅವರು ಆಯ್ಕೆಯಾಗಿರುವುದು ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆ ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ನಗರದ ಜಿಲ್ಲಾಸ್ಪತ್ರೆಯಲ್ಲಿ ಪಕ್ಷದ ನಗರಾಧ್ಯಕ್ಷ ಬಿ.ವೈ.ರಾಜೇಶ್ ಅವರ ಮಾರ್ಗದರ್ಶನದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಎಂ.ಜಿ ಅವರ ನೇತೃತ್ವದಲ್ಲಿ ರಕ್ತದಾನ ಮಾಡಿದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಪ್ರಮೋದ್ ಮಾತನಾಡಿ ಜನಪರವಾಗಿರುವ ಕಾಂಗ್ರೆಸ್ ಸರ್ಕಾರದಿಂದ ಕೊಡಗು ಜಿಲ್ಲೆ ಅಭಿವೃದ್ಧಿಯಾಗಲಿದೆ. ಅಲ್ಲದೆ ನೂತನ ಶಾಸಕ ಡಾ.ಮಂತರ್ ಗೌಡ ಅವರು ಮಡಿಕೇರಿ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read More

ನಾಪೋಕ್ಲು ಮೇ 21 :   ಇಂದು ನಾಪೋಕ್ಲಿನಲ್ಲಿ 21ನೇ ಕೌಟುಂಬಿಕ ಕ್ರಿಕೆಟ್ ಹಬ್ಬವು ಮುಕ್ತಾಯವಾಯಿತು. ಈ ವರ್ಣರಂಜಿತ ಕ್ರಿಕೆಟ್ ಫೈನಲ್ ನಲ್ಲಿ ಹಲವು ದಾಖಲೆಗಳು ನಿರ್ಮಾಣವಾದವು. ಹಾಕಿಯ ನಕ್ಷತ್ರಗಳಾದ 1975ನೇ ಹಾಕಿ ವಿಶ್ವಕಪ್ ನ ಚಿನ್ನ ಗೆದ್ದ ಅಸ್ಲಾಂ ಶೇರ್ ಖಾನ್, ಅರ್ಚರಣ್ ಸಿಂಗ್, ವಿ.ಜೆ.ಫಿಲಿಪ್ಸ್, ಗೋವಿಂದ, ಕಾಳಯ್ಯ ಹಾಗೂ ಒಲಂಪಿಯನ್ ಎಂ.ಎಂ.ಸೋಮಯ್ಯ ಅವರ ಸಮ್ಮುಖದಲ್ಲಿ ಇಂದೆಂದೂ ಕಂಡು-ಕೇಳರಿಯದ ಬಹಳ ಉತ್ತಮ ಮಟ್ಟದ ಪಂದ್ಯಾವಳಿಯು ನಡೆಯಿತು. ಬಹಳಷ್ಟು ಕ್ರೀಡಾ ಪ್ರೇಮಿಗಳು ಹಾಕಿ ದಿಗ್ಗಜರನ್ನು ನೋಡಲು ತುದಿಗಾಲಿನಲ್ಲಿ ನಿಂತಿದ್ದರು. ಅವರೊಂದಿಗೆ ಸೆಲ್ಫಿ ಹಾಗೂ ಫೋಟೋ ತೆಗೆಯಲು ಕಾತರರಾಗಿದ್ದರು. ಅದ್ಭುತವಾದ ತಾಂತ್ರಿಕ ಸಮಿತಿ, ಒಳ್ಳೆಯ ವೀಕ್ಷಕ ವಿವರಣೆ ಹಾಗೂ ವೇದಿಕೆ ತುಂಬಿದ ಟ್ರೋಫಿಗಳು ನೋಡುವವರ ಕಣ್ಣು ಕುಕ್ಕುವಂತಿತ್ತು. ಇದೆಲ್ಲವೂ ಬಾಳೆಯಡ ಕುಟುಂಬದಲ್ಲಿ ಇಂದು ನಡೆಯಿತು.     ಯಾವುದಕ್ಕೂ ಕಪ್ಪು ಚುಕ್ಕೆ  ಬಾರದಂತೆ ಸಂಘಟನೆಗಾರರು ಶಿಸ್ತು ಬದ್ಧರಾಗಿದ್ದರು. ಪ್ರತಿಯೊಬ್ಬರಿಗೂ ಕಿರು ಕಾಣಿಕೆಯನ್ನು ಕೊಟ್ಟು ತಮ್ಮ ಗೌರವವನ್ನು ವ್ಯಕ್ತಪಡಿಸಿದರು. ಕ್ರಿಕೆಟ್ ಹಬ್ಬದಲ್ಲಿ ಮುಖ್ಯ ಅತಿಥಿಗಳು ಎಲ್ಲರ ಮನ ಗೆದ್ದರು.ಅವರು …

Read More

ಮಡಿಕೇರಿ ಮೇ 21 : ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲವು ಮೇ 22 ರಿಂದ ಆರಂಭಗೊಳ್ಳಲಿದೆ. ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಮೇ 22 ರಂದು ಸಂಜೆ 6 ಗಂಟೆಗೆ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಮೇ 23 ರಂದು ಬೆಳಿಗ್ಗೆ 6 ಗಂಟೆಯಿಂದ ಮಹಾಗಣಪತಿ ಹೋಮ, ನವಕ ಪಂಚಗವ್ಯ, ಕಳಸ ಪೂಜೆ, ಕಳಶಾಭಿಷೇಕ, ಸರ್ವಾಲಂಕಾರ, ಮಹಾಪೂಜೆ ಹಾಗೂ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಮತ್ತು ಮಂಗಳಾರತಿ ನಡೆಯಲಿದೆ. ::: ನಾಗದರ್ಶನ ::: ಬೆಳಿಗ್ಗೆ 8 ಗಂಟೆಗೆ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭೀಷೇಕ ನಡೆಯಲಿದ್ದು, ಪೂವಾಹ್ನ 11 ಗಂಟೆಗೆ ನಾಗದರ್ಶನ,…

Read More