ಮಡಿಕೇರಿ ಮೇ 20 : ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಮತ್ತು ತೆಲಂಗಾಣ ದಕ್ಷಿಣ ರಾಜ್ಯಗಳ ವಿದ್ಯುತ್ ನಿಯಂತ್ರಣ ಆಯೋಗದ ಸದಸ್ಯರ ತಂಡವು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಕರ್ನಾಟಕ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ರವಿಕುಮಾರ್ ನೇತೃತ್ವದಲ್ಲಿ ದಕ್ಷಿಣ ರಾಜ್ಯಗಳ ವಿದ್ಯುತ್ ನಿಯಂತ್ರಣ ಆಯೋಗದ ಸದಸ್ಯರ ತಂಡವು ಭೇಟಿ ನೀಡಿ, ಮಾಹಿತಿ ಪಡೆದರು. ಭಾರತೀಯ ಸೇನಾ ಕ್ಷೇತ್ರದಲ್ಲಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಕೊಡುಗೆ ಅಪಾರವಾಗಿದೆ. ಭಾರತೀಯ ಸೇನೆಯ ಮಹತ್ವ ಹಾಗೂ ಯುವ ಜನರು ಸೇನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ಸ್ಫೂರ್ತಿಯಾಗಿದೆ ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾ ಬಾಯಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಸಂಪತ್ ಇತರರು ಇದ್ದರು.
ಲೇಖಕ: admin
ಮಡಿಕೇರಿ ಮೇ 20 : ಕೊಡಗು ಗೌಡ ಯುವ ವೇದಿಕೆ ಆಶ್ರಯದಲ್ಲಿ ಅರೆಭಾಷಿಕ ಗೌಡ ಜನಾಂಗದವರಿಗೆ ಆಯೋಜಿಸಿರುವ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಿತು. ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡರ ಕ್ರಿಕೆಟ್ ಸಂಭ್ರಮಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್‍ನ ಅಂಡರ್ 15 ಆಟಗಾರ್ತಿ ಜೈನೀರ ತಾನಿಷ್ಕಾ ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕೊಡಗು ಗೌಡ ಸಮಾಜ ಅಧ್ಯಕ್ಷ ಪೇರಿಯನ ಜಯಾನಂದ್ ಮಾತನಾಡಿ, ಅರಂಭದಲ್ಲಿ ಗೌಡ ಜನಾಂಗ ಬಾಂಧವರಿಗೆ ಟೆನ್ನಿಸ್ ಬಾಲ್ ಪಂದ್ಯ ಆಯೋಜಿಸಲಾಗುತ್ತಿತ್ತು. ಬದಲಾವಣೆಗಾಗಿ ಈ ಬಾರಿ ಯುವ ವೇದಿಕೆ ವತಿಯಿಂದ ಲೆದರ್ ಬಾಲ್ ಪಂದ್ಯಾವಳಿಯನ್ನು ಆಯೋಜಿಸಿರುವುದು ಸಂತೋಷ. ಪ್ರಸ್ತುತ ದಿನಗಳಲ್ಲಿ ಬದಲಾವಣೆಯ ಅಗತ್ಯವಿದ್ದು, ಯುವ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆಯಾಗಿದೆ ಎಂದ ಅವರು ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿ, ಕೊಡಗಿನ ಜನತೆಗೆ ಉತ್ತೇಜನ ನೀಡುವ ಕಾರ್ಯಕ್ರಮ…
ಮಡಿಕೇರಿ ಮೇ 20 : ಕೊಡಗಿನ ವೈಶಿಷ್ಟ್ಯಪರ್ಣ ಭಾಷಾ ಸಂಸ್ಕೃತಿ, ಆಚಾರ ವಿಚಾರಗಳ ಕುರಿತು ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ‘ಕೊಡವ ಯುವ ಮೇಳ’ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದಲ್ಲಿ, ಅತ್ಯಾಕರ್ಷಕ ಮೆರವಣಿಗೆ, ಕೊಡವ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯವಾಗಿ ನಡೆಯಿತು. ಕೊಡವ ಸಂಸ್ಕೃತಿಯ ಸಂರಕ್ಷಣೆ ಯುವ ಸಮೂಹದಿಂದ ಮಾತ್ರ ಸಾಧ್ಯವಾಗಬಲ್ಲುದು, ಈ ಹಿನ್ನೆಲೆ ಜಿಲ್ಲೆ ಹಾಗೂ ಕಾರ್ಯ ನಿಮಿತ್ತ ಹೊರ ಜಿಲ್ಲೆಗಳಲ್ಲಿರುವ ಯುವ ಸಮೂಹಕ್ಕೆ ಇಲ್ಲಿನ ಸಂಪದ್ಭರಿತ ಸಂಸ್ಕೃತಿಯ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್‍ನಿಂದ ದಿನಪೂರ್ತಿ ಕೊಡವ ಭಾಷಾ ಸಂಸ್ಕೃತಿಯ ಚೌಕಟ್ಟಿನಲ್ಲಿ ಅತ್ಯಾಕರ್ಷಕ ಕಾರ್ಯಕ್ರಮಗಳು ನಡೆದವು. ಆಕರ್ಷಕ ಮೆರವಣಿಗೆ- ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಚೊಟ್ಟೆಕ್‍ಮಾಡ ರಾಜೀವ್ ಬೋಪಯ್ಯ, ಟ್ರಸ್ಟ್‍ನ ಕಾರ್ಯದರ್ಶಿ ಅಣ್ಣೀರ ಹರೀಶ್ ಮಾದಪ್ಪ, ಪದಾಧಿಕಾರಿಗಳಾದ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ, ಸದಸ್ಯರಾದ ಮಲ್ಲಮಾಡ ಪ್ರಭು ಪೂಣಚ್ಚ, ಪಾಲೇಂಗಡ ಅಮಿತ್ ಭೀಮಯ್ಯ, ಅಪ್ಪಂಡೇರಂಡ ಯಶವಂತ್ ಕಾಳಪ್ಪ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಉಪಸ್ಥಿತಿಯಲ್ಲಿ ಶನಿವಾರ ಬೆಳಗ್ಗೆ…
ವಿರಾಜಪೇಟೆ ಮೇ 20 : ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ವಿರಾಜಪೇಟೆ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಗರದ ಗಡಿಯಾರ ಕಂಬ ಹಾಗೂ ಖಾಸಗಿ ಬಸ್ಸು ನಿಲ್ದಾಣದ ಬಳಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಈ ಸಂದರ್ಭ ವಿರಾಜಪೇಟೆ ಪುರಸಭೆ ಸದಸ್ಯ ಡಿ.ಪಿ.ರಾಜೇಶ್ ಮಾತನಾಡಿ, ಸಿದ್ದರಾಮಯ್ಯ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ಅಭಿವೃದ್ಧಿಗೆ ಪೂರಕವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ನಮ್ಮ ನಾಯಕರಾಗಿದ್ದು, ಇಬ್ಬರು ಜೋಡೆತ್ತುಗಳಂತೆ ಸರ್ಕಾರನ್ನು ಮುನ್ನಡೆಸಿ ಕಾಂಗ್ರೆಸ್ ಪಕ್ಷದ 5 ಪ್ರಮುಖ ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯಲಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಆರ್.ಕೆ.ಸಲಾಂ, ವಿರಾಜಪೇಟೆ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಪೊನ್ನಕ್ಕಿ ಇದೇ ಸಂದರ್ಭ ಮಾತನಾಡಿದರು. ಪುರಸಭೆ ಸದಸ್ಯ ಸಿ.ಕೆ.ಪೃಥ್ವಿನಾಥ್, ನಗರ ಘಟಕದ ಮಾಜಿ ಅಧ್ಯಕ್ಷ ಜಿ.ಜಿ. ಮೋಹನ್, ಡಿ.ಸಿ.ದ್ರುವ ಕುಮಾರ್, ಮಾಳೇಟಿರ…
ಚೆಟ್ಟಳ್ಳಿ ಮೇ 20 : ಎಸ್ ವೈ ಎಸ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಸುಸಜ್ಜಿತವಾಗಿ ನವೀಕರಿಸಿದ ವರಕ್ಕಲ್ ಸಮಸ್ತ ಭವನ ಹಾಗೂ ಖಾಝಿ ಹೌಸ್ ಉದ್ಘಾಟನಾ ಸಮಾರಂಭ ಮೇ 21 ರಂದು ಸಿದ್ದಾಪುರದಲ್ಲಿ ನಡೆಯಲಿದ್ದು,ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾ ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ತಮ್ಲೀಕ್ ದಾರಿಮಿ ಕರೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ. ಕೊಡಗು ಖಾಝಿ ಸಯ್ಯಿದ್ ಮುಹಮ್ಮದ್ ಕೋಯ ತಂಙಳ್ ಜಮಲುಲ್ಲೈಲಿ ಹಾಗೂ ಕೊಡಗು ಉಪ ಖಾಝಿ ಶೈಖುನಾ ಎಂ. ಎಂ ಅಬ್ದುಲ್ಲಾ ಫೈಝಿ, ಅಬ್ದುಲ್ ರಹ್ಮಾನ್ ಮುಸ್ಲಿಯಾರ್, ಬಶೀರ್ ಹಾಜಿ ಹೀಗೆ ಸಮಸ್ತದ ಹಲವು ಉಲಮಾ, ಉಮರಾ ನೇತಾರರು ಭಾಗವಹಿಸಲಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಸ್.ಕೆ.ಎಸ್.ಎಸ್.ಎಫ್ ಕೊಡಗು ಜಿಲ್ಲಾ ಸಮಿತಿ ತಿಳಿಸಿದೆ.
ಸುಂಟಿಕೊಪ್ಪ ಮೇ 20 : ಬ್ಲೂಬಾಯ್ಸ್ ಯೂತ್ ಕ್ಲಬ್ ವತಿಯಿಂದ ಜಿ.ಯಂ.ಪಿ.ಶಾಲಾ ಮೈದಾನದಲ್ಲಿ 25ನೇ ವರ್ಷದ ಡಿ.ಶಿವಪ್ಪ ಸ್ಮಾರಕ ರಾಜ್ಯ ಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆ ದೊರೆಯಿತು. ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರೀಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್ ಧ್ವಜಾರೋಹಣ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು. ನಂತರ ಬ್ಲೂ ಬಾಯ್ಸ್ ಯೂತ್ ಕ್ಲಬ್ ಮತ್ತು ಪನ್ಯ ಎಫ್.ಸಿ. ಪನ್ಯ ತಂಡಗಳ ನಡುವಿನ ಪಂದ್ಯಾವಳಿಯನ್ನು ಚೆಂಡು ಹೊದೆಯುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಸುಂಟಿಕೊಪ್ಪ ಪಿಎಸ್‍ಐ ಶ್ರೀಧರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಸದಸ್ಯರಾದ ರಫೀಕ್ ಖಾನ್, ಪಿ.ಎಫ್.ಸಭಾಸ್ಟೀನ್, ಶಬೀರ್, ವಸಂತಿ, ಶಾಂತಿ, ಬ್ಲೂ ಬಾಯ್ಸ್ ಯುವಕ ಸಂಘದ ಸ್ಥಾಪಕಾಧ್ಯಕ್ಷ ಜೆರ್ಮಿ ಡಿಸೋಜ,ಅಧ್ಯಕ್ಷ ಆಲಿಕುಟ್ಟಿ, ಹಿರಿಯ ಆಟಗಾರರಾದ ಕೆ.ಪಿ.ಜಗನ್ನಾಥ್, ಪ್ಯಾಟ್ರಿಕ್, ಎನ್.ಎಸ್.ದೇವಪ್ಪ, ಶುಂಠಿ ರಾಮಣ್ಣ, ಎನ್.ಎಸ್.ಸೋಮಣ್ಣ, ಆದಿಶೇಷ, ಬೆಟ್ಟಗೇರಿ ತೋಟದ ವ್ಯವಸ್ಥಾಪಕ ಚಂಗಪ್ಪ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಪಂದ್ಯಾವಳಿಯ ಸಂಚಾಲಕ ಟಿ.ವಿ. ಪ್ರಸನ್ನ ಹಾಜರಿದ್ದರು.…
ಮಡಿಕೇರಿ ಮೇ 20 : ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ 8 ಸಚಿವರುಗಳ ಪದಗ್ರಹಣ ಹಿನ್ನೆಲೆ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯೋತ್ಸವ ನಡೆಯಿತು. ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಡಿಸಿಸಿ ಸದಸ್ಯರಾದ ಪುಷ್ಪ ಪೂಣಚ್ಚ, ಕೆ.ಯು.ಅಬ್ದುಲ್ ರಜಾಕ್, ಪ್ರಕಾಶ್ ಆಚಾರ್ಯ, ಚುಮ್ಮಿದೇವಯ್ಯ, ಕಲೀಲ್ ಬಾಷ, ಜುಲೇಕಾಬಿ, ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಬಿ.ಎನ್.ಪ್ರತ್ಯು, ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಎಸ್.ಸಿ.ಘಟಕದ ನಗರಾಧ್ಯಕ್ಷ ಮುದ್ದುರಾಜ್, ಮಹಿಳಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಪ್ರಮುಖರಾದ ಪ್ರಭುರೈ, ಸದಾಮುದ್ದಪ್ಪ, ಯಾಕುಬ್, ಮುತ್ತು ಬೇಗಂ, ಬಿ.ಗಣೇಶ್, ಗೀತಾ ಸೇರಿದಂತೆ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.
ಬೆಂಗಳೂರು ಮೇ 20 : ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಉಭಯ ನಾಯಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿಕೆ ಶಿವಕುಮಾರ್ ಅವರು ಸ್ವಾಮಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಿದ 8 ಸಚಿವರ ವಿವರ ಎಂ. ಬಿ. ಪಾಟೀಲ್ ಡಾ. ಜಿ. ಪರಮೇಶ್ವರ್ ಪ್ರಿಯಾಂಕ ಖರ್ಗೆ ಕೆ.ಎಚ್. ಮುನಿಯಪ್ಪ ಕೆ. ಜೆ. ಜಾರ್ಜ್ ಸತೀಶ್ ಜಾರಕಿಹೊಳಿ ಜಮೀರ್ ಅಹ್ಮದ್ ಖಾನ್ ರಾಮಲಿಂಗಾ ರೆಡ್ಡಿ
ಮಡಿಕೇರಿ ಮೇ 20 : ನಿವೃತ್ತ ಸಬ್ ಇನ್‌ಸ್ಪೆಕ್ಟರ್ ಬೊಳ್ಳಜಿರ ಬೋಪಯ್ಯ ಹಾಗೂ ಯಶೋಧ ಬೋಪಯ್ಯ (ತಾಮನೆ : ಅಜ್ಜಮಾಡ) ಇದೀಗ ಬಿಟ್ಟಂಗಾಲದಲ್ಲಿ ವಾಸವಿರುವ ದಂಪತಿಗಳ ಪ್ರಥಮ ಪುತ್ರನಾದ ಬೊಳ್ಳಜಿರ ಬಿ. ಅಯ್ಯಪ್ಪ (40 ವರ್ಷ) ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಬಿ.ಕಾಂ (ಸಿ.ಎ) ಪದವಿ ಪಡೆದಿದ್ದಾರೆ. ಇದೀಗ ಅದೇ ಕಾಲೇಜಿನಲ್ಲಿ ಎಂ.ಎ. (ಕೊಡವ) ವ್ಯಾಸಾಂಗ ಮಾಡುತ್ತಿದ್ದಾರೆ. ನಿವೃತ್ತ ಸಬ್ ಇನ್‌ಸ್ಪೆಕ್ಟರ್ ಮನ್ನೇರ ನಂಜಪ್ಪ ಹಾಗೂ ರಾಣಿ ನಂಜಪ್ಪ (ತಾಮನೆ: ಅಪ್ಪಾರಂಡ) ದಂಪತಿಗಳ ನಾಲ್ಕನೇ ಮಗಳು ಯಮುನಾಳನ್ನು ವಿವಾಹವಾದ ಇವರಿಗೆ ದೇಚಮ್ಮ ಮತ್ತು ಬೋಪಣ್ಣ ಎಂಬ ಇಬ್ಬರು ಮಕ್ಕಳಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿಯೇ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಬೊಳ್ಳಜಿರ ಬಿ. ಅಯ್ಯಪ್ಪ ಎನ್. ಸಿ. ಸಿ ಯಲ್ಲಿ ಉತ್ತಮ ಸಾಧನೆ ಮಾಡಿರುತ್ತಾರೆ. ಸೈನ್ಯಕ್ಕೆ ಸೇರುವುದು ಇವರ ಕನಸಾಗಿತ್ತದರೂ ಕಾರಣಾಂತರಗಳಿಂದ ಅದು ಫಲಿಸಲಿಲ್ಲ. ಮುಂದೆ ಪ್ರತಿಷ್ಠಿತ ಹಣಕಾಸು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಜನಾನುರಾಗಿದ್ದಾರೆ. ಉತ್ತಮ ನಡವಳಿಕೆ…
ಕೊಡ್ಲಿಪೇಟೆ ಮೇ 20 : ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಹಾಗೂ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಜಮಾಅತ್ ವ್ಯಾಪ್ತಿಯಲ್ಲಿ ಅತ್ಯುತ್ತಮ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‍ಕೆಎಸ್‍ಎಸ್‍ಎಫ್ ಹಾಗೂ ಎಸ್‍ವೈಎಸ್ ಕೊಡ್ಲಿಪೇಟೆ ಶಾಖೆಯ ವತಿಯಿಂದ ಬಹುಮಾನ ವಿತರಿಸಲಾಯಿತು. ಕೊಡ್ಲಿಪೇಟೆ ಸಮೀಪದ ನೂರ್ ಮಹಲ್ ನಲ್ಲಿ ಆಯೋಜಿಸಿದ ಮಾಸಿಕ ಮಜ್ಲಿಸುನ್ನೂರ್ ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಫಾತಿಮತ್ ಸಫ್ನಾ ಪ್ರಥಮ ಹಾಗೂ ಸನಾ ದ್ವಿತೀಯ ಮತ್ತು ದ್ವಿತೀಯ ಪಿಯುಸಿ ಯಲ್ಲಿ ವಿಜ್ಞಾನ ವಿಭಾಗದಲ್ಲಿ ಸಫಾ ಹಾಗೂ ಕಲಾ ವಿಭಾಗದಲ್ಲಿ ನಫೀಸತ್ ನಾಫಿಯಾ ಅವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ತಜಲ್ಲಿಯಾತ್ ಮದರಸ ಮುಖ್ಯೋಪಾಧ್ಯಾಯ ರಝಾಕ್ ಫೈಝಿ, ಸಮದ್ ಫೈಝಿ, ಮಸ್ಜಿದುನ್ನೂರ್ ಅಧ್ಯಕ್ಷ ಸುಲೈಮಾನ್, ಪ್ರಧಾನ ಕಾರ್ಯದರ್ಶಿ ಹಾಗೂ ಗ್ರಾ.ಪಂ ಸದಸ್ಯ ಹನೀಫ್, ಎಸ್‍ಕೆಎಸ್‍ಎಸ್‍ಎಫ್ ಕೊಡಗು ಜಿಲ್ಲಾ ಕೋಶಾಧಿಕಾರಿ ಸಿದ್ದೀಕ್ ಹಾಜಿ, ಎಸ್‍ವೈಎಸ್ ಕೊಡ್ಲಿಪೇಟೆ ಶಾಖಾಧ್ಯಕ್ಷ ಇಬ್ರಾಹಿಂ, ಎಸ್‍ಕೆಎಸ್‍ಎಸ್‍ಎಫ್ ಅಧ್ಯಕ್ಷ ಬಾಸಿತ್ ಹಾಜಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಝಹೀರ್ ನಿಝಾಮಿ ನಿರೂಪಿಸಿದರು.






