ಲೇಖಕ: admin

ಮಡಿಕೇರಿ ಮೇ 19 : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 2023-24ನೇ ಸಾಲಿಗೆ ಪ್ರಥಮ ಬಿಎ ಮತ್ತು ಬಿಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ನೂತನವಾಗಿ ಪ್ರಾರಂಭವಾಗಿರುವ ಕೊಡಗು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಈ ಕಾಲೇಜಿಗೆ ಪ್ರವೇಶ ಪಡೆಯಲು ಇಚ್ಛಿಸಿರುವ ವಿದ್ಯಾರ್ಥಿನಿಯರು ಆದಷ್ಟು ಬೇಗ ಕಚೇರಿಯಿಂದ ಅರ್ಜಿ ಪಡೆದುಕೊಂಡು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಪ್ರವೇಶ ಪಡೆಯಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.9945185783, 9845907344, 9008180049, 9538506370 ನ್ನು ಸಂಪರ್ಕಿಸಬಹುದು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಜವರಪ್ಪ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 19 : ಕೊಡಗು ಜಿಲ್ಲೆಯಲ್ಲಿ ಮೇ 20 ಮತ್ತು 21 ರಂದು ನಡೆಯುವ ಸಿಇಟಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಸಂತ ಜೋಸೆಪರ ಬಾಲಕಿಯರ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.…

Read More

ಮಡಿಕೇರಿ ಮೇ 19 : ರೋಟರಿ ಮಡಿಕೇರಿ ವತಿಯಿಂದ ಜಲಸಿರಿ ಯೋಜನೆಯಡಿ ಪಾರಾಣೆ ಪ್ರೌಢಶಾಲೆಗೆ ರೂ.50 ಸಾವಿರ ಮೌಲ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಲಾಯಿತು. ರೋಟರಿ ಮಡಿಕೇರಿ ಅಧ್ಯಕ್ಷ ಕೆ.ಸಿ.ಕಾರ್ಯಪ್ಪ, ಸಹಾಯಕ ಗವರ್ನರ್ ರತನ್ ತಮ್ಮಯ್ಯ, ಪಿಡಿಜಿ ಸುರೇಶ್ ಚೆಂಗಪ್ಪ, ರೋಟರಿಯನ್ ಎಂ.ಎಂ.ಕಾರ್ಯಪ್ಪ, ಪ್ರಾಂಶುಪಾಲರಾದ ರಜನಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.

Read More

ಮಡಿಕೇರಿ ಮೇ 19 :  ಕೊಡಗಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 125 ಮಂದಿ ರ‍್ಯಾಲಿ ಪಟುಗಳನ್ನು ಒಳಗೊಂಡ ‘ರ‍್ಯಾಲಿ ಆಫ್ ಕೂರ್ಗ್-2023’ ಆಫ್ ರೋಡ್ ಬೈಕ್ ರ‍್ಯಾಲಿಯನ್ನು ಮೇ21 ರಂದು ಆಯೋಜಿಸಲಾಗುತ್ತಿದೆ ಎಂದು ಎಂಆರ್‍ಎಫ್ ರ‍್ಯಾಲಿ ಆಯೋಜಕ  ಆಕಾಶ್ ಐತಾಳ್ ಮತ್ತು ತಂಡದ ಪ್ರಮುಖರು ಮಾಹಿತಿ ನೀಡಿದ್ದಾರೆ. ನಗರದಲ್ಲಿ  ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಷ್ಟ್ರೀಯ ಚಾಂಪಿಯನ್ ಆಕಾಶ್ ಐತಾಳ್, ಅಂದು ದೇವಸ್ತೂರು ಗ್ರಾಮದ ಖಾಸಗಿ ಕಾಫಿ ತೋಟಗಳ ಮಧ್ಯೆ ದ್ವಿಚಕ್ರ ವಾಹನಗಳ ಆಫ್ ರೋಡ್ ರ‍್ಯಾಲಿ ನಡೆಯಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು. ರ‍್ಯಾಲಿ 9 ವಿಭಾಗಗಳಲ್ಲಿ ನಡೆಯಲಿದ್ದು, ಇದರಲ್ಲಿ ರಾಷ್ಟ್ರದ ಪ್ರಖ್ಯಾತ ರ‍್ಯಾಲಿ ಪಟುಗಳು ಪಾಲ್ಗೊಳ್ಳಲಿದ್ದಾರೆ. ಪ್ರಮುಖವಾಗಿ ಟಿವಿಎಸ್ ರೇಸಿಂಗ್ ತಂಡದಿಂದ ಫಾರಿನ್ ಓಪನ್ ಕ್ಲಾಸ್‍ನಲ್ಲಿ ಆರ್.ಇ ರಾಜೇಂದ್ರ, ಸ್ಯಾಮುಯೆಲ್, ತನ್ವೀರ್ ಅಹಮ್ಮದ್ ಮತ್ತು ಇದೇ ವಿಭಾಗದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಮಹಿಳಾ ಸ್ಪರ್ಧಿ ಐಶ್ವರ್ಯ ಪಿಸೆ ಅವರು ಪುರುಷರೊಂದಿಗೆ ಸ್ಪರ್ಧಿಸಲಿದ್ದಾರೆ ಎಂದು…

Read More

ಮಡಿಕೇರಿ 19 :   ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷಾತೀತ ಬೆಂಬಲ ನೀಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಬಹುಮತ ಬರಲು ಕಾರಣರಾದ ಮುಸ್ಲಿಂ ಸಮುದಾಯಕ್ಕೆ ನೂತನ ಸರ್ಕಾರದಲ್ಲಿ ಐದು ಸಚಿವ ಸ್ಥಾನಗಳನ್ನು ನೀಡಬೇಕೆಂದು ಕರ್ನಾಟಕ ಮುಸ್ಲಿಂ ಯೂನಿಟಿ(ಕೆಎಂಯು) ಸಂಘಟನೆಯ ರಾಜ್ಯ ಸಮಿತಿ ಸದಸ್ಯ ಇಸಾಕ್ ಖಾನ್ ಆಗ್ರಹಿಸಿದ್ದಾರೆ. ನಗರದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನೂತನ ಸರ್ಕಾರದಲ್ಲಿ ಉಪ ಮುಖ್ಯ ಮಂತ್ರಿ ಸ್ಥಾನವನ್ನು ಡಿ.ಕೆ. ಶಿವ ಕುಮಾರ್ ಅವರೊಬ್ಬರಿಗೆ ನೀಡಲು ಪಕ್ಷ ನಿರ್ಧರಿಸಿದೆ, ಈ ಹಿನ್ನೆಲೆ ಮುಸ್ಲಿಂ ಸಮುದಾಯದ ಜನ ಪ್ರತಿನಿಧಿಗಳಿಗೆ ಪ್ರಮುಖವಾದ ಗೃಹ ಇಲಾಖೆ, ಪ್ರೌಢ ಮತ್ತು ಉನ್ನತ ಶಿಕ್ಷಣ, ಕೈಗಾರಿಕಾ ಖಾತೆ ಸೇರಿದಂತೆ ಮೂರು ಖಾತೆಗಳೊಂದಿಗೆ ಐದು ಸಚಿವ ಸ್ಥಾನಗಳನ್ನು ನೀಡಬೇಕೆಂದು ಒತ್ತಾಯಿಸಿದರು. ಕಳೆದ ಏಳೆಂಟು ದಶಕಗಳಿಂದ ಮುಸ್ಲಿಂ ಸಮುದಾಯ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದು ಕೊಂಡೇ ಬಂದಿದೆ. ಈ ಬಾರಿ ಇಡೀ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಪಕ್ಷಾತೀತವಾಗಿ ಬೆಂಬಲಿಸಿದೆ. ನಮ್ಮ ಅಭಿವೃದ್ಧಿಗೆ ಯಾವುದೇ ‘ಭಾಗ್ಯ’ಗಳು ಬೇಡ,…

Read More

ಮಡಿಕೇರಿ ಮೇ 19 : ಕೊಡಗಿನಲ್ಲಿ ಕೃಷಿ ಮತ್ತು ಕಾಫಿ ಆಧಾರಿತ ವ್ಯವಸ್ಥೆಯಲ್ಲಿ ಕಾರ್ಬನ್ ಕ್ರೆಡಿಟ್ ನಿಂದ ಆರ್ಥಿಕ ಲಾಭಗಳಿಸಲು ಇರುವ ಅವಕಾಶಗಳ ಕುರಿತು ರೈತರು ಮತ್ತು ಕಾಫಿ ಬೆಳೆಗಾರರಲ್ಲಿ ಅರಿವು ಮೂಡಿಸುವ ಸಲುವಾಗಿ ಮೇ 23 ರಂದು ಪೊನ್ನಂಪೇಟೆಯಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ನಂದಾ ಬೆಳ್ಯಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಮತ್ತು ಪೊನ್ನಂಪೇಟೆಯ ಅರಣ್ಯ ಕಾಲೇಜಿನ ಸಹಯೋಗದಲ್ಲಿ ಬೆಳಿಗ್ಗೆ 9.30 ಗಂಟೆಗೆ ಕಾಲೇಜಿನ ಆವರಣದಲ್ಲಿ ಕಾರ್ಯಾಗಾರ ನಡೆಯಲಿದ್ದು, ಜಿಲ್ಲೆಯ ರೈತರು ಮತ್ತು ಬೆಳೆಗಾರರು ಈ ಉಪಯುಕ್ತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಕಾರ್ಯಾಗಾರವನ್ನು ಅರಣ್ಯ ಮತ್ತು ಪರಿಸರ ವಿಜ್ಞಾನ ಇಲಾಖೆಯ ರಾಜ್ಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಅರಣ್ಯ ಕಾಲೇಜಿನ ಮುಖ್ಯಸ್ಥರಾದ ಡಾ.ಸಿ.ಜಿ.ಕುಶಾಲಪ್ಪ, ಉಪನ್ಯಾಸಕ ಮತ್ತು ವಿಭಾಗದ ಮುಖ್ಯಸ್ಥ ಡಾ.ಜಿ.ಎಂ.ದೇವಗಿರಿ ಪಾಲ್ಗೊಳ್ಳಲಿದ್ದಾರೆ ಎಂದರು. ಕಾರ್ಬನ್ ಕ್ರೆಡಿಟ್…

Read More

ಮಡಿಕೇರಿ  ಮೇ 19 :  ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದಿಂದ ಅಭೂತಪೂರ್ವ ಗೆಲುವಿನೊಂದಿಗೆ ವಿಧಾನಸಭೆ ಪ್ರವೇಶಿಸಿರುವ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರಿಗೆ ನೂತನ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದರೊಂದಿಗೆ, ಅವರನ್ನು ಕೊಡಗು ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸಬೇಕೆಂದು ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ. ನಗರದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಮುಖರು ಹಾಗೂ ವಿರಾಜಪೇಟೆ ಪುರಸಭೆ ಸದಸ್ಯರಾದ ರಾಜೇಶ್ ಪದ್ಮನಾಭ ಅವರು ಮಾತನಾಡಿ, ಕಳೆದ ಎರಡು ದಶಕಗಳಿಂದ ವಿರಾಜಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಪ್ರತಿನಿಧಿಯ ಆಯ್ಕೆ ಸಾಧ್ಯವಾಗಿರಲಿಲ್ಲ. ಈ ಬಾರಿ ಕಾಂಗ್ರೆಸ್‍ನಿಂದ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರು ಆಯ್ಕೆಯಾಗಿದ್ದು, ಇವರಿಗೆ ಯಾವುದೇ ಖಾತೆಯನ್ನು ನೀಡಿದರು ಅದನ್ನು ನಿಭಾಯಿಸುವ ಸಾಮರ್ಥ್ಯವಿದೆ. ಈ ಹಿನ್ನೆಲೆ ಅವರಿಗೆ ಸಚಿವ ಸ್ಥಾನದೊಂದಿಗೆ ಉಸ್ತುವಾರಿಯ ಜವಾಬ್ದಾರಿ ನೀಡಬೇಕೆಂದು ಒತ್ತಾಯಿಸಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್‍ನ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ರಫೀಕ್ ಕೋಳುಮಂಡ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧವಾಗಿ ಅಲ್ಪಸಂಖ್ಯಾತ ಸಮುದಾಯದ ಪಕ್ಷೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಮತ ವಿಭಜನೆ ಮಾಡುವ ಪ್ರಯತ್ನಗಳು ನಡೆಯಿತು.…

Read More

ಮಡಿಕೇರಿ  ಮೇ 19 :   ಕೊಡಗು ಗೌಡ ಯುವ ವೇದಿಕೆ ವತಿಯಿಂದ ಮೇ 20 ರಿಂದ 28 ರವರೆಗೆ ಗೌಡ ಸಮುದಾಯದ ‘ಲೆದರ್ ಬಾಲ್ ಟಿ-10 ಪ್ರೀಮಿಯರ್ ಲೀಗ್ ಕ್ರಿಕೆಟ್ ಲೀಗ್’ ಪಂದ್ಯಾವಳಿ ನಡೆಯಲಿದೆ ಎಂದು ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ತಿಳಿಸಿದರು. ನಗರದಲ್ಲಿ  ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ  ಬೆಳಗ್ಗೆ 10.30 ಗಂಟೆಗೆ ಪಂದ್ಯಾವಳಿಯನ್ನು ಅಂಡರ್ 15 ಕರ್ನಾಟಕ ಕ್ರಿಕೆಟ್ ತಂಡದ ಆಟಗಾರರಾದ ತನಿಷ್ಕಾ ನವೀನ್ ಉದ್ಘಾಟಿಸಲಿದ್ದು, ಮಡಿಕೇರಿ ಗೌಡ ಸಮಾಜದ ಅಧ್ಯಕ್ಷರಾದ ಪೇರಿಯನ ಜಯಾನಂದ, ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷರಾದ ಪಾಣತ್ತಲೆ ಜಗದೀಶ್ ಮಂದಪ್ಪ, ಕ್ರೀಡಾ ಅಧ್ಯಕ್ಷರಾದ ಬಾಳಾಡಿ ಮನೋಜ್ ಪಾಲ್ಗೊಳ್ಳಲಿದ್ದಾರೆಂದು ಮಾಹಿತಿಯನ್ನಿತ್ತರು. 8 ತಂಡಗಳ ನಡುವೆ ಹಣಾಹಣಿ : ಕ್ರಿಕೆಟ್ ಪಂದ್ಯಾವಳಿಯಲ್ಲಿ ಒಟ್ಟು ಎಂಟು ತಂಡಗಳಾದ ಪ್ಲಾಂಟರ್ಸ್ ಕ್ಲಬ್ ಬಿಳಿಗೇರಿ, ಎಂಸಿಬಿ, ಜಿ. ಕಿಂಗ್ಸ್ ಸಿದ್ದಲಿಂಗಪುರ, ಟೀಂ ಭಗವತಿ, ಎಲೈಟ್ ಕ್ರಿಕೆಟ್ ಕ್ಲಬ್, ಕೆಜಿಎಸ್ ಸ್ಟ್ರೈಕರ್ಸ್, ಕುಕ್ಲೂರು…

Read More

ಮಡಿಕೇರಿ ಮೇ 19 : ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿ ಇಬ್ಬರು ನೂತನ ಶಾಸಕರು ಆಯ್ಕೆಯಾಗಿದ್ದು, ಹೊಸ ಸರ್ಕಾರ ರಚನೆ ಸಂದರ್ಭ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ರಕ್ಷಣಾ ವೇದಿಕೆ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ, ನೂತನವಾಗಿ ಆಯ್ಕೆಯಾಗಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ವೈದ್ಯರಾಗಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಕೀಲರಾಗಿ ಸಾಕಷ್ಟು ಹೆಸರು ಮಾಡಿದ್ದಾರೆ. ಇಬ್ಬರೂ ವಿದ್ಯಾವಂತರು, ಮಾತ್ರವಲ್ಲದೆ ಅಭಿವೃದ್ಧಿಪರ ಚಿಂತನೆಯ ಉತ್ಸಾಹಿ ಯುವಕರಾಗಿದ್ದಾರೆ. ಸಚಿವ ಸ್ಥಾನವನ್ನು ನಿಭಾಯಿಸಲು ಇವರು ಅರ್ಹರಾಗಿದ್ದು, ಕನಿಷ್ಠ ಒಬ್ಬರಿಗಾದರು ಮಂತ್ರಿಗಿರಿ ನೀಡಬೇಕೆಂದು ಆಗ್ರಹಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಜಿಲ್ಲೆಯವರಿಗೆ ಸಚಿವ ಸ್ಥಾನ ದೊರೆಯದೆ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿವೆ. ಜಿಲ್ಲೆಯ ಜನರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ದೊರೆಯದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಸರ್ಕಾರ ರಚಿಸುತ್ತಿದ್ದು, ಸಚಿವ ಸಂಪುಟದಲ್ಲಿ ಕೊಡಗಿನವರಿಗೆ ಸ್ಥಾನ ಕಲ್ಪಿಸಬೇಕು.…

Read More

ಮಡಿಕೇರಿ ಮೇ 19 :  ಇತಿಹಾಸ ಪ್ರಸಿದ್ಧ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು “ಶ್ರೀ ಭದ್ರಕಾಳಿ ಹಾಗೂ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್ ನಮ್ಮೆಯು ಮೇ 20 ಹಾಗೂ 21 ರಂದು ನಡೆಯಲಿದೆ  ಎಂದು ತಕ್ಕಮುಖ್ಯಸ್ಥರು ಹಾಗೂ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಮ್ಮಟೀರ ಸುಗುಣ ಮುತ್ತಣ್ಣ ಹಾಗೂ ಕಾರ್ಯದರ್ಶಿ ಮೂಕಳೇರ ರಮೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,  ವಾರದ ಹಿಂದೆ ಶನಿವಾರ ಸಂಜೆ ಊರಿನ ಅಂಬಲದಲ್ಲಿ “ದೇವ ಕಟ್ಟ್” ಬೀಳುವ ಮೂಲಕ ಊರಿನಲ್ಲಿ ವಿವಿಧ ಕಟ್ಟುಪಾಡುಗಳಿಗೆ ಚಾಲನೆ  ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಮೇ 20 ರಂದು ಅಪರಾಹ್ನ 2 ರಿಂದ 2-30ಗಂಟೆಗೆ ಊರು ತಕ್ಕರಾದ ಚಮ್ಮಟೀರ ಕುಟುಂಬಸ್ಥರ ಬಲ್ಯಮನೆಯಿಂದ “ಪೊಲವಂದೆರೆ” ಹೊರಡುವ ಮೂಲಕ ಹಬ್ಬಕ್ಕೆ ಚಾಲನೆ ದೊರೆಯಲಿದೆ. ನಂತರ ಊರಿನ ನಿಗದಿತ ಅಂಬಲಗಳಲ್ಲಿ ವಿವಿಧ ಕಟ್ಟುಪಾಡಿನೊಂದಿಗೆ ಸಾಂಪ್ರದಾಯಿಕ ಆಚರಣೆಗಳು ನಡೆದು ಅಪರಾಹ್ನ 3.30ರ ಸುಮಾರಿಗೆ ಊರಿನ ಪ್ರಮುಖ ದೇವಾಲಯಗಳಲ್ಲೊಂದಾದ “ಪೊಲವಪ್ಪಂಡ ಕೋಟ”ದಲ್ಲಿ ಜಿಲ್ಲೆಯ ಮೂಲನಿವಾಸಿಗಳಲ್ಲೊಬ್ಬರಾದ ಪಣಿಕ ಜನಾಂಗದ ವ್ಯಕ್ತಿಯೊಬ್ಬರಿಗೆ…

Read More