ಮಡಿಕೇರಿ ಮೇ 17 : ಅಭಿವೃದ್ಧಿ ಶೂನ್ಯ ವ್ಯವಸ್ಥೆ ಮತ್ತು ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಜನರ ಹಾದಿ ತಪ್ಪಿಸುವುದಕ್ಕಾಗಿ ಬಿಜೆಪಿ ಮಾಡಿದ ಪ್ರಯತ್ನಗಳು ವಿಫಲವಾಗಿದ್ದು, ಜನರು ಪರಿವರ್ತನೆ ಬಯಸಿದ ಪರಿಣಾಮ ಕಾಂಗ್ರೆಸ್ ಭರ್ಜರಿ ಗೆಲುವನ್ನು ಸಾಧಿಸಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಗೆಲ್ಲಲು ಸಾಧ್ಯವಾಗದಿದ್ದ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮಡಿಕೇರಿ ಕ್ಷೇತ್ರದ ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಅವರು ಉತ್ಸಾಹಿ ಶಾಸಕರುಗಳಾಗಿದ್ದಾರೆ. ಈ ಗೆಲುವು ನನ್ನ ಒಬ್ಬನಿಂದ ಸಾಧ್ಯವಾಗಿಲ್ಲ, ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ಪ್ರತಿಯೊಬ್ಬ ಪದಾಧಿಕಾರಿ ಹಾಗೂ ಮೇಲ್ಮಟ್ಟದ ನಾಯಕರಿಗೂ ಯಶಸ್ಸಿನ ಕೀರ್ತಿ ಸಲ್ಲಬೇಕು ಎಂದರು. ಬಿಜೆಪಿ ಸ್ಟಾರ್ ಪ್ರಚಾರಕನ್ನು ಕರೆತಂದರೂ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಜಿಲ್ಲೆಯ ಇಬ್ಬರು ನೂತನ ಶಾಸಕರು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಿದ್ದಾರೆ. ಚುನಾವಣೆ ಪೂರ್ವದಲ್ಲೇ ಮಂತರ್ ಗೌಡ ಹಾಗೂ ಪೊನ್ನಣ್ಣ…
ಲೇಖಕ: admin
ಮಡಿಕೇರಿ ಮೇ.17 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕಲಾ ವೈಭವ ಉತ್ಸವದ ಲೋಗೋವನ್ನು ಬಿಡುಗಡೆ ಮಾಡಲಾಯಿತು. ಪ್ರಾಂಶುಪಾಲರಾದ ಮೇಜರ್ ಡಾ. ರಾಘವ.ಬಿ ಅವರು ಜೂನ್, 3 ರಂದು ನಡೆಯುವ ಕಲಾ ಉತ್ಸವ ‘ಕಲಾ ವೈಭವ’ ಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭ ಮಾತನಾಡಿದ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಅವರು, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ, ಸೃಜನಶೀಲತೆ ಹೆಚ್ಚಿಸಲು ಅನುಕೂಲ ಆಗುತ್ತದೆ. ಜೊತೆಗೆ ಸ್ಪರ್ಧಾತ್ಮಕ ಯುಗದಲ್ಲಿಯೂ ಯಶಸ್ಸಿನ ಗುರಿಯತ್ತ ಸಾಗಲು ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿದರು.
ಮಡಿಕೇರಿ ಮೇ 17 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮಡಿಕೇರಿ-ಕುಟ್ಟ ರಸ್ತೆಯ 8.30 ಕಿ.ಮೀ.ನಿಂದ 10 ಕಿ.ಮೀ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಸೋಮವಾರಪೇಟೆ ತಾಲ್ಲೂಕು ಮಡಿಕೇರಿ-ಕುಟ್ಟ ರಸ್ತೆಯ 8.30 ಕಿ.ಮೀ.ನಿಂದ 10 ಕಿ.ಮೀ.ವರೆಗಿನ ರಸ್ತೆಯಲ್ಲಿ ಮೇ, 22 ರಿಂದ ಜುಲೈ, 10 ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಬದಲಿ ರಸ್ತೆಯಾದ ಮಡಿಕೇರಿ-ಸುಂಟಿಕೊಪ್ಪ-ಚೆಟ್ಟಳ್ಳಿ ಮಾರ್ಗವನ್ನು ಬಳಸುವುದು. ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳು 1989 ರ (ತಿದ್ದುಪಡಿ ನಿಯಮಗಳು 1990) ನಿಯಮ 221 ಎ (2) ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ…
ಮಡಿಕೇರಿ ಮೇ 17 : ಇದೇ ಮೇ, 20 ಮತ್ತು 21 ರಂದು ನಡೆಯುವ ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮೇ, 20 ಮತ್ತು 21 ರಂದು ಬೆಳಗ್ಗೆ 10.30 ಯಿಂದ 11.50 ಗಂಟೆವರೆಗೆ ಮತ್ತು ಮಧ್ಯಾಹ್ನ 2.30 ರಿಂದ 3.50 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಷೆಯು ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ 722 ವಿದ್ಯಾರ್ಥಿಗಳು, ಸಂತ ಮೈಕಲರ ಶಾಲೆ 240 ವಿದ್ಯಾರ್ಥಿಗಳು, ಸಂತ ಜೋಸೆಫರ ಶಾಲೆ 312 ವಿದ್ಯಾರ್ಥಿಗಳು ಒಟ್ಟು 1274 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಇರಬೇಕು ಎಂದು ಅವರು ಹೇಳಿದರು.
ಮಡಿಕೇರಿ ಮೇ 17 : ಇದೇ ಮೇ, 20 ಮತ್ತು 21 ರಂದು ನಡೆಯುವ ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮೇ, 20 ಮತ್ತು 21 ರಂದು ಬೆಳಗ್ಗೆ 10.30 ಯಿಂದ 11.50 ಗಂಟೆವರೆಗೆ ಮತ್ತು ಮಧ್ಯಾಹ್ನ 2.30 ರಿಂದ 3.50 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಷೆಯು ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ 722 ವಿದ್ಯಾರ್ಥಿಗಳು, ಸಂತ ಮೈಕಲರ ಶಾಲೆ 240 ವಿದ್ಯಾರ್ಥಿಗಳು, ಸಂತ ಜೋಸೆಫರ ಶಾಲೆ 312 ವಿದ್ಯಾರ್ಥಿಗಳು ಒಟ್ಟು 1274 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಇರಬೇಕು ಎಂದು ಅವರು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು ಅವರು ಮಾಹಿತಿ ನೀಡಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ…
ಮಡಿಕೇರಿ ಮೇ 17 : ವಿರಾಜಪೇಟೆ ಕ್ಷೇತ್ರದ ನೂತನ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವ್ಯಾಲಿ ಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ಜಿಲ್ಲೆಗೆ ಸಚಿವ ಸ್ಥಾನ ದೊರೆಯದೆ ಹಲವು ವರ್ಷಗಳೇ ಕಳೆದಿದೆ. ಸುಮಾರು 20 ವರ್ಷಗಳ ನಂತರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಆದ್ದರಿಂದ ಸಚಿವ ಸಂಪುಟದಲ್ಲಿ ಕೊಡವರೊಬ್ಬರಿಗೆ ಪ್ರಾತಿನಿಧ್ಯ ನೀಡಬೇಕೆಂದು ಮನವಿ ಮಾಡಿದ್ದಾರೆ. ಕೊಡಗು ಪುಟ್ಟ ಜಿಲ್ಲೆಯಾದರು ಇಲ್ಲಿಯವರೆಗೆ ನಿರೀಕ್ಷಿತ ಅಭಿವೃದ್ಧಿಯನ್ನು ಕಂಡಿಲ್ಲ. ಜಿಲ್ಲೆಯನ್ನು ಪ್ರತಿನಿಧಿಸಲು ಸಚಿವರು ಕೂಡ ಇರಲಿಲ್ಲ. ಕೊಡಗಿನಲ್ಲಿ ಕೊಡವರ ಪರವಾಗಿ ಪ್ರಭಾವ ಬೀರಲು ಯಾವುದೇ ಮಠ, ಮಂದಿರಗಳಿಲ್ಲ. ಕೊಡವರು ಸೂಕ್ಷ್ಮ ಬುಡಕಟ್ಟು ಜನಾಂಗವಾಗಿದ್ದು, ಕೊಡವರೊಬ್ಬರಿಗೆ ಸಚಿವ ಸ್ಥಾನ ನೀಡುವುದು ಸೂಕ್ತವಾಗಿದೆ. ಜಿಲ್ಲೆಯವರೇ ಸಚಿವರು ಹಾಗೂ ಉಸ್ತುವಾರಿ ಸಚಿವರಾದರೆ ಸ್ಥಳೀಯ ಸಮಸ್ಯೆಗಳನ್ನು ಶೀಘ್ರ ಅರಿತು ಸೂಕ್ತ ಪರಿಹಾರವನ್ನು ತಕ್ಷಣ ಕೈಗೊಳ್ಳಬಹುದಾಗಿದೆ. ಕೊಡವರ ಕುಲ ಶಾಸ್ತ್ರ ಅಧ್ಯಯನ, ಕೊಡವರನ್ನು…
ನಾಪೋಕ್ಲು ಮೇ 17 : ಬಲ್ಲಮಾವಟಿಯ ಭಜರಂಗಿ ಯೂತ್ ಕ್ಲಬ್ ವತಿಯಿಂದ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ದ್ವಿತೀಯ ವರ್ಷದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶರತ್ ಫ್ರೆಂಡ್ಸ್ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಫೈನಲ್ ಪಂದ್ಯದಲ್ಲಿ ಕೆ.ಎ.12 ವಾರಿಯರ್ಸ್ ಕೊಡಗು ತಂಡದ ವಿರುದ್ಧ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಕೆಎ 12 ತಂಡ ಏಳು ವಿಕೆಟ್ ನಷ್ಟಕ್ಕೆ 26 ರನ್ ಗಳಿಸಿತು. ಇದನ್ನು ಸುಲಭವಾಗಿ ಬೆನ್ನತ್ತಿದ ಶರತ್ ಫ್ರೆಂಡ್ಸ್ ತಂಡ 2.3 ಓವರ್ ನಲ್ಲಿ ಒಂದು ವಿಕೆಟ್ ನಷ್ಟಕ್ಕೆ 29 ರನ್ ಗಳಿಸಿ ಗೆಲುವು ಸಾಧಿಸಿತು. ವಿಜೇತ ಶರತ್ ಫ್ರೆಂಡ್ಸ್ ತಂಡಕ್ಕೆ ರೂ. 25555 ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು ದ್ವಿತೀಯ ಸ್ಥಾನ ಪಡೆದ ಕೆಎ 12 ಕೊಡಗು ವಾರಿಯರ್ಸ್ ತಂಡಕ್ಕೆ ರೂ.13,333 ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ನೇತಾಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿಎಸ್ ಸುರೇಶ್,ಟ್ರೋಫಿ ದಾನಿ ಎಂ.ಎಂ.ಅಪ್ಪಣ್ಣ,ಎಡಿಕೇರಿ…
ಮಡಿಕೇರಿ ಮೇ 17 : ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದೆ ಎನ್ನುವ ಕಾರಣಕ್ಕೆ ಮುಸ್ಲಿಂ ಯುವ ಸಮೂಹ ಯಾವುದೇ ಕಾರಣಕ್ಕೂ ಉದ್ವೇಗ ಮತ್ತು ಪ್ರಚೋದನೆಗೆ ಒಳಗಾಗಬಾರದು. ಈ ನಾಡಿನ ಕಾನೂನನ್ನು ಗೌರವಿಸುವ ಮೂಲಕ ಶಾಂತಿಯನ್ನು ಕಾಪಾಡಬೇಕು,ಅಪಪ್ರಚಾರ ಮಾಡುವವರಿಗೆ ಆಹಾರವಾಗಬಾರದು ಎಂದು ಟಿ.ಎಂ.ಶಾಹಿದ್ ಮನವಿ ಮಾಡಿದರು. ಮುಸ್ಲಿಂ ಧ್ವಜವನ್ನು ಹಾರಿಸಿದರೆ ಪಾಕಿಸ್ತಾನದ ಧ್ವಜವೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಜನರ ಹಾದಿ ತಪ್ಪಿಸಲು ಮತ್ತು ಅಶಾಂತಿಯನ್ನು ಮೂಡಿಸಲು ಈ ರೀತಿಯ ಅಪಪ್ರಚಾರಗಳು ಆರಂಭಗೊಂಡಿದೆ. ಆದ್ದರಿಂದ ರಾಜ್ಯದ ಮುಸಲ್ಮಾನರು ಹಾಗೂ ಕ್ರೈಸ್ತರು ಜಾಗೃತಗೊಳ್ಳಬೇಕು. ಪ್ರಚೋದನೆ ಮತ್ತು ಆಮಿಷಗಳಿಗೆ ಒಳಗಾಗಬಾರದು, ಯಾವುದೇ ಅನ್ಯಾಯ ಅಥವಾ ಗೊಂದಲಗಳಾದಲ್ಲಿ ಶಾಸಕರುಗಳ ಗಮನಕ್ಕೆ ತರುವ ಪ್ರಯತ್ನ ಮಾಡಿ. ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಬೇಡಿ ಎಂದು ಮನವಿ ಮಾಡಿದರು. ಎಲ್ಲಾ ಸಮುದಾಯದಲ್ಲೂ ಕೆಲವರು ಕೋಮುವಾದಿಗಳಿದ್ದಾರೆ, ಯಾವುದೇ ಸಮುದಾಯ ಅಥವಾ ಸಂಘಟನೆ ಇರಲಿ. ಕಾನೂನು ಮೀರಿ ವರ್ತಿಸಿದರೆ ನೂತನ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಮುಂಬರುವ ಜಿ.ಪಂ, ತಾ.ಪಂ ಮತ್ತು ಲೋಕಸಭಾ…
ಮಡಿಕೇರಿ ಮೇ 17 : ರಾಜ್ಯದ ಜನ ಕೋಮು ಭಾವನೆಯನ್ನು ತಿರಸ್ಕರಿಸಿ ಅಭಿವೃದ್ಧಿ ಪರ ಮತ ಚಲಾಯಿಸಿದ ಪರಿಣಾಮ ಅಭೂತಪೂರ್ವ ಯಶಸ್ಸಿನ ಮೂಲಕ ಅಧಿಕಾರಕ್ಕೆ ಬರುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಸಲ್ಮಾನರಿಗೆ ಉಪ ಮುಖ್ಯಮಂತ್ರಿ ಹಾಗೂ ಐದು ಸಚಿವ ಸ್ಥಾನವನ್ನು ನೀಡಬೇಕೆಂದು ಕೆಪಿಸಿಸಿ ಮುಖ್ಯ ವಕ್ತಾರ ಮತ್ತು ಕೊಡಗು ಜಿಲ್ಲಾ ಮಾಜಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತಿ, ಧರ್ಮ, ಭೇದ ಮರೆತು ರಾಜ್ಯದ ಸರ್ವ ಧರ್ಮೀಯರು ಕಾಂಗ್ರೆಸ್ ಪಕ್ಷವನ್ನು ಬೆಂಬಲಸಿ ಅಧಿಕಾರಕ್ಕೆ ತಂದಿದ್ದಾರೆ. ಮುಸಲ್ಮಾನರು ಸಂಪೂರ್ಣವಾಗಿ ಕಾಂಗ್ರೆಸ್ ಗೆ ಮತ ಚಲಾಯಿಸುವ ಮೂಲಕ ಪಕ್ಷವನ್ನು ಬಲಗೊಳಿಸಿದ್ದಾರೆ ಎಂದರು. ಸರ್ಕಾರ ರಚಿಸುವ ಸಂದರ್ಭ ಓರ್ವ ಮುಸಲ್ಮಾನ ಶಾಸಕರಿಗೆ ಉಪ ಮುಖ್ಯಮಂತ್ರಿ ಹುದ್ದೆ ಹಾಗೂ ಐವರು ಮುಸಲ್ಮಾನರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಪಕ್ಷದ ವರಿಷ್ಠರ ಬಳಿಯೂ ಕೋರುವುದಾಗಿ ಹೇಳಿದರು. ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಡಾ.ಮಂತರ್ ಗೌಡ ಅವರು ಅಭಿವೃದ್ಧಿ ಪರ ಚಿಂತನೆಯ ಉತ್ಸಾಹಿ…
ಮಡಿಕೇರಿ ಮೇ 17 : ಡಿ.ಶಿವಪ್ಪ ಸ್ಮರಣಾರ್ಥ ಸುಂಟಿಕೊಪ್ಪದ ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ಮೇ 19 ರಿಂದ ಮೇ 28ರ ವರೆಗೆ ರಾಜ್ಯಮಟ್ಟದ 25ನೆ ಬೆಳ್ಳಿ ಮಹೋತ್ಸವದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಪ್ರವರ್ತಕರು ಹಾಗೂ ಗೋಲ್ಡ್ ಕಪ್ ದಾನಿ ಬಿ.ವಿನೋದ್ ಶಿವಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪದ ಪ್ರಾಥಮಿಕ ಸರ್ಕಾರಿ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಮೇ 19 ರಂದು ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತು ಎ.ಎಸ್.ಪಿ. ಸುಂದರ್ ರಾಜ್, ಬ್ಲೂಬಾಯ್ಸ್ ಯುವಕ ಸಂಗದ ಸ್ಥಾಪಕರಾದ ಜೆರ್ಮಿ ಡಿಸೋಜ, ಹಿರಿಯ ಆಟಗಾರ ಪ್ಯಾಟ್ರಿಕ್ ಸೇರಿದಂತೆ ಹಲವಾರು ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಬಾರಿ ಪಂದ್ಯಾವಳಿಯಲ್ಲಿ ಬೆಂಗಳೂರು, ಮಂಡ್ಯ, ಮೈಸೂರು, ಕೇರಳದ ಕ್ಯಾಲಿಕಟ್, ಮಲಪುರಂ, ಕೂತುಪರಂಬು, ಕಂಬ್ಳೆ, ಉಪ್ಪಳ, ನಂಜನಗೂಡು, ಕೆಜಿಎಫ್‍ನ ವಾರಿಯರ್ಸ್ ಪುಟ್ಬಾಲ್ ಕ್ಲಬ್, ಕೊಡಗಿನ ಪ್ರತಿಷ್ಟಿತ ತಂಡಗಳಾದ…






