ಲೇಖಕ: admin

ಕುಶಾಲನಗರ ಏ.9 NEWS DESK : ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ಬಿ.ಚಂದ್ರಪ್ಪ ಆಯ್ಕೆಯಾಗಿದ್ದಾರೆ.  ಚುನಾವಣಾ ಪ್ರಕ್ರಿಯೆಯಲ್ಲಿ ಎರಡು ಮಂದಿ ನಾಮಪತ್ರಗಳನ್ನು ಸಲ್ಲಿಸಿದರು. ನಂತರ ನಡೆದ ಚುನಾವಣೆಯಲ್ಲಿ ‌ ಒಟ್ಟು 12 ಮಂದಿ ನಿರ್ದೇಶಕರು ಹಾಜರಿದ್ದು , ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೆಚ್.ಬಿ.ಚಂದ್ರಪ್ಪ ಅವರಿಗೆ 7 ಮತಗಳು, ಪ್ರತಿಸ್ಪರ್ಧಿ ಕೆ.ಎಂ.ಪ್ರಸನ್ನ ಅವರಿಗೆ 5 ಮತಗಳು ಬಂದವು. ಚುನಾವಣಾ ಅಧಿಕಾರಿಯಾಗಿ ಸೋಮವಾರಪೇಟೆ ತಾಲ್ಲೂಕಿನ ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿ ಅಧಿಕಾರಿ ಪಿ. ಬಿ. ಮೋಹನ್ ಕಾರ್ಯನಿರ್ವಹಿಸಿದರು. ಸಂಘದ ಹಿರಿಯ ಸಹಕಾರಿ ಎಂ.ಎನ್.ಕುಮಾರಪ್ಪನವರು ನಿಧನದಿಂದಾಗಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷೆ ಚಂದ್ರಕಲಾ, ನಿರ್ದೇಶಕರಾದ ಬಿ.ಎಂ.ಪಾರ್ವತಿ, ಕೆ.ಎಸ್.ಮಂಜುನಾಥ್, ಎನ್‌.ಸಿ.ಪೊನ್ನಪ್ಪ, ಹೆಚ್‌.ಜೆ.ಶರತ್, ಬಿ.ಸಿ.ಮಲ್ಲಿಕಾರ್ಜುನ, ಹೆಚ್.ಡಿ.ನಂದಕುಮಾರ್, ಡಿ.ಕೆ.ಗಂಗಾಧರ್, ಹೆಚ್.ಎನ್.ಮಹಾದೇವ ಹಾಗೂ ಡಿಸಿಸಿ ಬ್ಯಾಂಕಿನ ಪ್ರತಿನಿಧಿ ಜಲಜಾ ಶೇಖರ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ.ಜಗದೀಶ್ ಹಾಜರಿದ್ದರು.

Read More

ಬೈಲಕೊಪ್ಪಾ ಏ.9 NEWS DESK : ಸಿದ್ದಾರ್ಥ ಗ್ಯಾಸ್ ಗೋದಾಮು ಘಟಕಕ್ಕೆ ಮಂಗಳೂರಿನ ಬಿಪಿಸಿಎಲ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಗ್ರಾಹಕರಿಗೆ ಗೃಹ ಬಳಕೆಯ ಸಿಲಿಂಡರ್ ಸರಬರಾಜಿನಲ್ಲಿ ಸಮಸ್ಯೆ ಇಲ್ಲ. ಹಾಗಾಗಿ ಯಾವುದೇ ಗ್ರಾಹಕರು ಭಯಭೀತರಾಗುವ ಅಗತ್ಯವಿಲ್ಲ. ಹಾಗೂ ಭಯಪೀಡಿತರಾಗಿ ಮುಂಗಡ ಬುಕ್ಕಿಂಗ್ ಮಾಡುವ ಅಗತ್ಯವೇ ಇಲ್ಲ ಎಂದು ಬಿಪಿಸಿಎಲ್ ಉಪವಿಭಾಗ ಅಧಿಕಾರಿ ಸಂದೀಪ್ ರೈನಾ ತಿಳಿಸಿದ್ದಾರೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಕಳೆದ 40 ದಿನಗಳಿಂದ ನಡೆಯುತ್ತಿದ್ದ ಯುದ್ಧ ದಿಂದಾಗಿ ಭಾರತ ದೇಶಕ್ಕೆ ಸರಬರಾಜು ಆಗುತ್ತಿದ್ದ ಗ್ಯಾಸ್ ಸರಬರಾಜು ಆರಂಭದಲ್ಲಿ ಒಂದಷ್ಟು ವಿಳಂಭ ವಾಗಿದ್ದುದು ಸರಿಯಷ್ಟೆ. ಆದರೆ ಈಗ ಆ ಸಮಸ್ಯೆ ಬಗೆಹರಿದಿದೆ. ಸಿದ್ದಾರ್ಥ ಗ್ಯಾಸ್ ಸಂಪರ್ಕ ಪಡೆದಿರುವ ಹಾರನಹಳ್ಳಿ ಹಾಗೂ ಬೈಲಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿನ ಗ್ರಾಹಕರು ಗ್ಯಾಸ್ ಸಿಲಿಂಡರ್ ಪಡೆಯಲು ಭಯಪಡುವ ಅಗತ್ಯವಿಲ್ಲ. ಸಕಾಲಕ್ಕೆ ಸಿಲಿಂಡರ್ ದೊರಕಲ್ಲಾ ಎಂಬ ಆತಂಕವೂ ಬೇಡ. ಹಲವು ಗ್ರಾಹಕರು ಭಯಭೀತರಾಗಿ ಮುಗಿಬಿದ್ದು ಗ್ಯಾಸ್ ಬುಕ್ಕಿಂಗ್ ಮಾಡುತ್ತಿದ್ದ ಕಾರಣ ನೈಜ ಗ್ರಾಹಕರಿಗೆ ಒಂದಷ್ಟು ಅನಾನುಕೂಲ…

Read More

ವಿರಾಜಪೇಟೆ ಏ.9 NEWS DESK : ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸಂತ ಅನ್ನಮ್ಮ ಪಿ.ಯು ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸಾಧನೆಯನ್ನು ಮಾಡಿದ್ದು, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶವನ್ನು ಪಡೆದಿದೆ. ವಿಜ್ಞಾನ ವಿಭಾಗದಲ್ಲಿ 41 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 49 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಉತ್ತೀರ್ಣ ರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 48 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 78 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಮೂವರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಉತ್ತೀರ್ಣ ರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಜೆಸಿಕಾ ಎನ್. ಎಸ್. ಶೇ.97.67 ಅಂಕಗಳೊಂದಿಗೆ ಪ್ರಥಮ ಸ್ಥಾನ, ಪಿ.ಕೆ.ರಕ್ಷಿತ್ 95.83% ದ್ವಿತೀಯ ಸ್ಥಾನ, ಹಾಗೂ ತೇಜಸ್ವಿನಿ ಟಿ.ಎಂ ಶೇ.95.33 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ನಿಶಿಕ ದೇಚಮ್ಮ ಎಂ.ಎಲ್. ಶೇ.98 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ, ಕೆ. ಜೆ. ಮೇಘ ಶೇ.97.33 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಹರ್ಷಿತಾ ಎಸ್ …

Read More

ಮಡಿಕೇರಿ ಏ.9 NEWS DESK : ಮಡಿಕೇರಿ ನಗರದ ಕನ್ನಂಡಬಾಣೆ ನಿವಾಸಿಗಳು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿ ತಡೆಗೋಡೆ ನಿರ್ಮಿಸುವಂತೆ ಮನವಿ ಸಲ್ಲಿಸಿದರು.  ಕನ್ನಂಡಬಾಣೆಗೆ ಸುಸಜ್ಜಿತವಾದ ಕಾಂಕ್ರೀಟ್ ರಸ್ತೆ ನಿರ್ಮಿಸಿದ ಹಿನ್ನಲೆಯಲ್ಲಿ ಧನ್ಯವಾದಗಳನ್ನು ಸಲ್ಲಿಸಿದ ನಿವಾಸಿಗಳು ರಸ್ತೆಯ ಅಂಚಿನಲ್ಲಿ(ಕನ್ನಂಡಬಾಣೆ ಕೃಷ್ಣ ಲೈನ್ ದಾರಿ) ಅಪಾಯಕಾರಿ ತಿರವು ಇದ್ದು ವಾಹನಗಳು ಗುಂಡಿಗೆ ಬೀಳುವ ಸಾಧ್ಯತೆ ಹೆಚ್ಚಿರುವುದರಿಂದ ತಡಗೋಡೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು. ಮನವಿಯನ್ನು ಆಲಿಸಿದ ಶಾಸಕರು ಈ ವರ್ಷದ ತಮ್ಮ ಶಾಸಕರ ನಿಧಿಯಿಂದ ತಡೆಗೋಡೆ ನಿರ್ಮಿಸಿಕೊಡುವ ಭರವಸೆ ನೀಡಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರೊಂದಿಗೆ ತೆರಳಿದ ನಿಯೋಗದಲ್ಲಿ ದೇವಯ್ಯ, ಪಿ.ಎಂ.ಜಗದೀಶ್,ಬಾಳಾಡಿ ಪ್ರತಾಪ್ ಕುಮಾರ್,ಪ್ರಸನ್ನ, ಭರತ್, ಯತೀನ್ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಏ.9 NEWS DESK : ನಗರದ ನಗರಸಭೆ ಆವರಣದಲ್ಲಿರುವ ಹಳೆಯ ಕಾವೇರಿ ಕಲಾಕ್ಷೇತ್ರ(ಟೌನ್ ಹಾಲ್) ಕಟ್ಟಡವನ್ನು ತೆರವುಗೊಳಿಸಿ ಸುಸಜ್ಜಿತವಾದ ಎರಡು ಅಂತಸ್ತಿನ ವಾಹನ ನಿಲುಗಡೆ ಹಾಗೂ 450 ಆಸನ ಒಳಗೊಂಡ ಸಭಾಭವನ ಕಟ್ಟಡ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಗುರುವಾರ ಭೂಮಿ ಪೂಜೆ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚುರಂಜನ್, ಎಂ.ಸಿ.ನಾಣಯ್ಯ, ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಮಂದ್ರೀರ ಮೋಹನ್‍ದಾಸ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಾಳಚಂಡ ಅಪ್ಪಣ್ಣ, ಎಸ್.ಸಿ.ಸತೀಶ್, ಅರುಣ್ ಶೆಟ್ಟಿ, ಶಾರದಾ ನಾಗರಾಜ್, ನಗರಸಭೆ…

Read More

ಮಡಿಕೇರಿ ಏ.9 NEWS DESK : ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕೊಡಗು ಜಿಲ್ಲೆ ರಾಜ್ಯದಲ್ಲಿ 3ನೇ ಸ್ಥಾನ ಪಡೆದ ಹಿನ್ನೆಲೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರನ್ನು ಅಭಿನಂದಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವಿಜಯ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿವಾಕರ, ಭೂ ದಾಖಲೆಗಳ ಉಪ ನಿರ್ದೇಶಕರು, ತಹಶಿಲ್ದಾರರು ಇತರರು ಈ ಸಂದರ್ಭದಲ್ಲಿ ಇದ್ದರು.

Read More

ಮಡಿಕೇರಿ ಏ.9 NEWS DESK : ಕೊಡವರ ಹೊಸ ವರ್ಷಾಚರಣೆ ಎಡ್ಮ್ಯಾರ್ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಏ.14ರಂದು ಗೋಣಿಕೊಪ್ಪನಲ್ಲಿ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ವಸಂತ ಋತು ಫೆ.15 ರಿಂದ ಆರಂಭಗೊಂಡು ಏ.14ಕ್ಕೆ ಕೊನೆಗೊಳ್ಳುವ “ಎಡ್ಮ್ಯಾರ್” ನ್ನು ಸಿಎನ್‍ಸಿ ಸಂಘಟನೆ ಪ್ರತಿವರ್ಷ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದ್ದು, ಇದು 32ನೇ ವರ್ಷದ ಕಾರ್ಯಕ್ರಮವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಏಪ್ರಿಲ್ 14 ರಂದು ಸಂಜೆ 6.30ಗಂಟೆಗೆ ಗೋಣಿಕೊಪ್ಪಲಿನ ಆರ್‍ಎಂಸಿ ಯಾರ್ಡ್ ಬಳಿಯಿಂದ ದುಡಿಕೊಟ್ಟ್ ಪಾಟ್ ನೊಂದಿಗೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಂಜಿನ ಮೆರವಣಿಗೆ ಸಾಗಿ ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ಕೊನೆಗೊಳ್ಳಲಿದೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗ ಕೊಡವರ ಹಕ್ಕುಗಳ ಕುರಿತು ಕಾರ್ಯಕ್ರಮದಲ್ಲಿ ಪ್ರತಿಪಾದನೆ ಮಾಡುವ ಮೂಲಕ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯಲಾಗುವುದು. ರಾಜ್ಯಾಂಗದತ್ತ ಹಕ್ಕೊತ್ತಾಯಗಳನ್ನು ಪ್ರಚುರಪಡಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ. ಕೊಡವರು ಪ್ರತ್ಯೇಕ ಮೂಲವಂಶಸ್ಥ ಜನಾಂಗವಾಗಿದ್ದು,…

Read More

ಮಡಿಕೇರಿ ಏ.9 NEWS DESK : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆ 3 ಸ್ಥಾನ ಪಡೆದು ಉತ್ತಮ ಸಾಧನೆ ತೋರಿದೆ. ಕಳೆದ ಬಾರಿ ಶೇ.83.84 ರಷ್ಟು ಫಲಿತಾಂಶ ದಾಖಲಿಸಿ ರಾಜ್ಯದಲ್ಲಿ 4ನೇ ಸ್ಥಾನ ಪಡೆದಿದ್ದರೆ, ಈ ಬಾರಿ ಶೇ.92.34 ಫಲಿತಾಂಶದೊಂದಿಗೆ 3ನೇ ಸ್ಥಾನಕ್ಕೇರಿದೆ. ಈ ಬಾರಿಯೂ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲೆಯಲ್ಲಿ 4745 ವಿದ್ಯಾರ್ಥಿಗಳ ಪೈಕಿ 1898 ಗಂಡು ಹಾಗೂ 2847 ಹೆಣ್ಣು ಮಕ್ಕಳು ಪರೀಕ್ಷೆ ಬರೆದಿದ್ದು, ಈ ಪೈಕಿ ಒಟ್ಟು 4380 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಜಿಲ್ಲೆಯ ಒಟ್ಟು 13 ಪಿ.ಯು ಕಾಲೇಜುಗಳು ಶೇ.100ರಷ್ಟು ಫಲಿತಾಂಶ ದಾಖಲಿಸಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. *ಕಲಾ ವಿಭಾಗ* ಕಲಾ ವಿಭಾಗದಲ್ಲಿ ಶನಿವಾರಸಂತೆ ಭಾರತಿ ಪದವಿ ಪೂರ್ವ ಕಾಲೇಜಿನ ಫಾತಿಮಾ ಎಸ್.ಎ.(592) ಪ್ರಥಮ, ಕೂಡಿಗೆ ಸರಕಾರಿ ಪದವಿ ಪೂರ್ವ ಕಾಲೇಜಿನ ನಂದಿತಾ(584) ದ್ವಿತೀಯ ಸ್ಥಾನ, ಮೂರ್ನಾಡು ಪಿ.ಯು ಕಾಲೇಜು ಮೂರ್ನಾಡುವಿನ ಕೆ.ಎಂ.ಜುಹಾರ(570) ತೃತೀಯ ಸ್ಥಾನ…

Read More

ಮಡಿಕೇರಿ ಏ.9 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.9ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಮುಕ್ಕಾಟಿರ (ಕಡಗದಾಳು) ಮತ್ತು ಕನ್ನಂಡ ತಂಡಗಳ ನಡುವಿನ ಪಂದ್ಯದಲ್ಲಿ ಕನ್ನಂಡ 9 ವಿಕೆಟ್‍ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಕ್ಕಾಟಿರ ತಂಡ 6 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 29 ರನ್ ಗಳನ್ನು ಗಳಿಸಿತು. ಕನ್ನಂಡ ಕೇವಲ 2.4 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 30 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು. ಮಂಡೀರ (ನೆಲಜಿ) ಮತ್ತು ಕೆಚ್ಚೆಟ್ಟಿರ (ಬೇಗೂರು) ನಡುವಿನ ಪಂದ್ಯದಲ್ಲಿ ಮಂಡೀರ 3 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂಡೀರ 6 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 76 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಕೆಚ್ಚೆಟ್ಟಿರ…

Read More

ಮಡಿಕೇರಿ ಏ.9 NEWS DESK : ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪ ಸಮೀಪದ ಹಾಲೇರಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಹಾಲೇರಿ ಗ್ರಾಮದ ನಿವಾಸಿ ರವಿ ರೈ(67) ಎಂಬುವವರೇ ಮೃತ ದುರ್ದೈವಿ. ಮನೆ ಬಳಿಯ ತೋಟದಲ್ಲಿನ ಮರವನ್ನೇರಿ ಕೊಂಬೆಗಳನ್ನು ಕಡಿಯುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More