ಮಡಿಕೇರಿ ಮೇ 14 : ವಿರಾಜಪೇಟೆ ಕ್ಷೇತ್ರವನ್ನು ಮುಂದಿನ ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮುಕ್ತ ಮತ್ತು ರಾಜ್ಯದಲ್ಲೆ ಮಾದರಿ ಕ್ಷೇತ್ರವನ್ನಾಗಿ ನೂತನ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ರೂಪಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಆಶೀರ್ವಾದದಿಂದ ಎ.ಎಸ್.ಪೊನ್ನಣ್ಣ ಅವರು ಆಯ್ಕೆಯಾಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಯ ಜೊತೆ ಜೊತೆಯಲ್ಲೆ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡುವ ಕಾರ್ಯ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದರು. ಪ್ರಸ್ತುತ ಸಮಾಜದ ಪ್ರತಿ ಹಂತದಲ್ಲೂ ಭ್ರಷ್ಟಾಚಾರವೆಂಬುದು ಹಾಸು ಹೊಕ್ಕಾಗಿ ಹೋಗಿದೆ. ಇನ್ನು ಮುಂದೆ ವಿರಾಜಪೇಟೆ ಕ್ಷೇತ್ರದಲ್ಲಿ ಭ್ರಷ್ಟಾಚಾರ ನಡೆಯದಂತೆ ನೋಡಿಕೊಳ್ಳಲಾಗುವುದು. ಜಿಲ್ಲೆಯ ಕಾಫಿ ಬೆಳೆಗಾರ ಎದುರಿಸುತ್ತಿರುವ ಹತ್ತು ಹಲವು ಸಮಸ್ಯೆಗಳಿಗೆ, ವನ್ಯಜೀವಿ ಮತ್ತು ಮಾನವ ಸಂಘರ್ಷ ನಿವಾರಣೆಗೆ ವೈಜ್ಞಾನಿಕವಾದ ಪರಿಹಾರಗಳನ್ನು ಕಂಡುಕೊಳ್ಳುವ ಪ್ರಯತ್ನ ನಡೆಯಲಿದೆ. ಈಗಾಗಲೆ ಬಿಡುಗಡೆ ಮಾಡಿರುವ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಅಂಶಗಳಿಗೆ ಒತ್ತು ನೀಡಿ…
ಲೇಖಕ: admin
ಮಡಿಕೇರಿ ಮೇ 14 : ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ, ಜನ ಸಮಸ್ಯೆಗಳನ್ನು ನೇರವಾಗಿ ಹೇಳಿಕೊಳ್ಳಬಹುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಏನಾಗಿದೆ ಎನ್ನುವ ಬಗ್ಗೆ ಯೋಚಿಸಲ್ಲ, ಮುಂದೆ ಏನಾಗಬೇಕು ಎನ್ನುವುದರ ಕುರಿತು ಚಿಂತನೆ ಮಾಡುತ್ತೇನೆ. ಎಲ್ಲರನ್ನು ಒಗ್ಗಟ್ಟಾಗಿ ಮುನ್ನಡೆಸುವ ಮೂಲಕ ಪ್ರತಿಯೊಂದು ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ಬಡವರ ಸೇವೆ ಮಾಡಬೇಕು ಎನ್ನುವುದು ನನ್ನ ಮೂಲ ಉದ್ದೇಶ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ನನ್ನ ಗೆಲುವಿಗಾಗಿ ತ್ಯಾಗ ಮಾಡಿದ್ದಾರೆ. ಅಪಪ್ರಚಾರಗಳಿಗೆ ತಲೆ ಕೆಡಿಸಿಕೊಳ್ಳದೆ ಅಭಿವೃದ್ಧಿಪರ ಚಿಂತನೆಯೊoದಿಗೆ ಮತಯಾಚಿಸಿದ ಪರಿಣಾಮ ಗೆಲುವು ಸಿಕ್ಕಿದೆ. ಜನ ನನಗೆ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಅಭಿವೃದ್ಧಿ ಕಾರ್ಯಗಳ ಮೂಲಕ ಉಳಿಸಿಕೊಳ್ಳುತ್ತೇನೆ. ಈ ಹಿಂದಿನ ಶಾಸಕರು ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಹೇಳುತ್ತಿಲ್ಲ. ಬಾಕಿ ಉಳಿದಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.…
ಮಡಿಕೇರಿ ಮೇ 13 : ಜನಾಭಿಪ್ರಾಯಕ್ಕೆ ತಲೆಬಾಗುತ್ತೇನೆ ಎಂದು ವಿರಾಜಪೇಟೆ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಹೇಳಿದ್ದಾರೆ. ನೂತನವಾಗಿ ಶಾಸಕರಾಗಿ ಆಯ್ಕೆಯಾಗಿರುವ ಎ.ಎಸ್.ಪೊನ್ನಣ್ಣ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಆಡಳಿತ ಪಕ್ಷದಲ್ಲಿ ಉತ್ತಮ ಜನಪರ ಕೆಲಸಗಳನ್ನು ಮಾಡಲು ದೇವರು ಅವರಿಗೆ ಶಕ್ತಿ ಕೊಡಲೆಂದು ಪ್ರಾರ್ಥಿಸುತ್ತೇನೆ ಎಂದರು.
ಮಡಿಕೇರಿ ಮೇ 13 : ಕಾರ್ಯಕರ್ತರ ಒಗ್ಗಟ್ಟಿನ ಹೋರಾಟದ ಪರಿಶ್ರಮವೇ ನನ್ನ ಗೆಲುವಿಗೆ ಕಾರಣವಾಗಿದೆ. ನನ್ನನ್ನು ಹೊರಗಿನ ಅಭ್ಯರ್ಥಿ ಎಂದು ವ್ಯಂಗ್ಯವಾಡಿದವರಿಗೆ ಮತದಾರರೇ ತಕ್ಕ ಉತ್ತರ ನೀಡುವ ಮೂಲಕ ಅವರನ್ನೇ ಹೊರ ಕಳುಹಿಸಿದ್ದಾರೆ ಎಂದು ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ತಿರುಗೇಟು ನೀಡಿದರು. ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪೊನ್ನಣ್ಣ, ತಮ್ಮ ಗೆಲುವಿಗೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರು ಮತ್ತು ಮತದಾರರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು. ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದೇವೆ. ಆ ಮೂಲಕ ಬಿಜೆಪಿಯ ಭದ್ರಕೋಟೆಯನ್ನು ಬೇಧಿಸಿದ್ದೇವೆ. ಚುನಾವಣೆ ಸಂದರ್ಭ ಕ್ಷೇತ್ರದ ಪ್ರಗತಿಯ ಕುರಿತು ಮತದಾರರಿಗೆ ಭರವಸೆ ನೀಡಿದ್ದೇನೆ. ಅದರಂತೆ ಅಭಿವೃದ್ದಿ ಕಾರ್ಯಗಳನ್ನು ಮಾಡುವುದಾಗಿ ಪೊನ್ನಣ್ಣ ಹೇಳಿದರು. ::: ಪ್ರೀತಿಯಿಂದ ಕೊಡಗಿನ ಹುಡುಗನ ಕೈ ಹಿಡಿದಿದ್ದಾರೆ ::: ಮಡಿಕೇರಿ ಕ್ಷೇತ್ರದ ವಿಜೇತ ಅಭ್ಯರ್ಥಿ ಡಾ.ಮಂಥರ್ ಗೌಡ ಮಾತನಾಡಿ, ನನ್ನ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು, ಮುಖಂಡರು ಮತ್ತು ಮತದಾರರಿಗೆ ಧನ್ಯವಾದ ಸಲ್ಲಿಸಿದರು. ಈಗಾಗಲೇ ನೀಡಿರುವ ಭರವಸೆಯಂತೆ ಮಡಿಕೇರಿ…
ಮಡಿಕೇರಿ ಮೇ 13 : ಸುದೀರ್ಘ ಅವಧಿಯ ಬಳಿಕ ಕೊಡಗಿನ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಮೂಲಕ ತನ್ನ ಅಧಿಪತ್ಯ ಸ್ಥಾಪಿಸಿದ್ದು, ಚುನಾವಣಾ ಮತ ಎಣಿಕೆ ಮುಕ್ತಾಯವಾಗಿ ವಿಜೇತ ಅಭ್ಯರ್ಥಿಗಳ ಘೋಷಣೆಯಾಗುತ್ತಿದ್ದಂತೆ ಮತ ಎಣಿಕಾ ಕೇಂದ್ರದ ಹೊರ ಆವರಣದಲ್ಲಿದ್ದ ನೂರಾರು ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಹಷೋದ್ಘಾರಗಳನ್ನು ಮಾಡಿ, ವಿಜೇತ ಅಭ್ಯರ್ಥಿಗಳಿಗೆ ಪುಷ್ಪಾಹಾರ ತೊಡಿಸಿ ಸಂಭ್ರಮಿಸಿದರು. ಮಡಿಕೇರಿ ಕ್ಷೇರತ್ರದಿಂದ ಕಾಂಗ್ರೆಸ್ ಗೆಲುವು ಖಚಿತವಾದ ಬಳಿಕವಷ್ಟೆ ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ ಅವರು ತಮ್ಮ ಪತ್ನಿ ಹಾಗೂ ಕಟುಂಬಸ್ಥರೊಂದಿಗೆ ಮತ ಎಣಿಕಾ ಕೇಂದ್ರಕ್ಕೆ ಆಗಮಿಸಿ ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರೊಂದಿಗೆ ಸಂತಸ ಹಂಚಿಕೊಂಡರು. ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಅವರು ಮತ ಎಣಿಕೆಯ ಸಂದರ್ಭ ಸಣಿಕಾ ಕೇಂದ್ರ್ರದಲ್ಲಿ ಪಕ್ಷದ ಪ್ರಮುಖರೊಂದಿಗೆ ಹಾಜರಿದ್ದು ಗಮನ ಸೆಳೆದರು. ಬೆಳಗ್ಗೆ 8 ಗಂಟೆಗೆ ಮತ ಎಣಿಕಾ ಕಾರ್ಯ ಆರಂಭವಾಗಿ ಸರಿ ಸುಮಾರು ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಎರಡೂ ಕ್ಷೇತ್ರಗಳ ವಿಜೇತ ಅಭ್ಯರ್ಥಿಗಳ ಘೋಷಣೆಯಾಯಿತು.…
ಮಡಿಕೇರಿ ಮೇ 13 : ಜನರ ತೀರ್ಪಿಗೆ ತಲೆಬಾಗುವುದಾಗಿ ಮಡಿಕೇರಿ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ. ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಮತ ಎಣಿಕೆ ಕೇಂದ್ರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಕ್ಷೇತ್ರದ ಮತದಾರರು ನನಗೆ ಆಶೀರ್ವಾದ ಮಾಡಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಅಧಿಕಾರದ ಅವಧಿಯಲ್ಲಿ ಯಾರಿಗೂ ತೊಂದರೆಯಾಗದಂತೆ ಅಭಿವೃದ್ಧಿ ಕಾರ್ಯ ನಿರ್ವಹಿಸಿದ ತೃಪ್ತಿ ಇದೆ. ಇದೀಗ ಕಾಂಗ್ರೆಸ್’ನ ಗ್ಯಾರಂಟಿ ಕಾರ್ಡ್ ಹಾಗೂ ಉಚಿತ ಅಕ್ಕಿ ನೀಡುವ ಘೋಷಣೆಯ ಪರಿಣಾಮದಿಂದಾಗಿ ಮತಗಳು ಕಾಂಗ್ರೆಸ್’ಗೆ ಹೋಗಿದೆ. ಇದರಿಂದಾಗಿ ಈ ಬಾರಿ ಸೋಲು ಉಂಟಾಗಿದೆ ಎಂದು ಹೇಳಿದರು. ಚುನಾವಣೆ ಸಂದರ್ಭ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದ ಎಲ್ಲರಿಗೂ ತಾನು ಆಭಾರಿಯಾಗಿರುವುದಾಗಿ ಅಪ್ಪಚ್ಚು ರಂಜನ್ ಹೇಳಿದರು.
ಮಡಿಕೇರಿ ಮೇ 13 : ನಗರದ ಸಂತ ಜೋಸೆಫರ ಶಾಲೆಯ ಮತ ಎಣಿಕಾ ಕೇಂದ್ರದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಉಸ್ತುವಾರಿಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕಾ ಕಾರ್ಯ ಆರಂಭಗೊಂಡಿತು. ಮಧ್ಯಾಹ್ನ 1 ಗಂಟೆಯ ವೇಳೆಗೆ ಎರಡೂ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬಿದ್ದಿತು. ಜಿಲ್ಲಾ ಪೊಲೀಸ್, ಕೈಗಾರಿಕಾ ಭದ್ರತಾ ಪಡೆ ಪೊಲೀಸರ ಬಿಗಿ ಭದ್ರತೆಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.
ಮಡಿಕೇರಿ ಮೇ 13 : ಕೊಡಗಿನ ವಿಧಾನಸಭಾ ಕ್ಷೇತ್ರಗಳಲ್ಲಿ ನೋಟಾಕ್ಕೆ ಅಧಿಕ ಮತಗಳು ಚಲಾವಣೆಯಾಗಿದೆ. ವೀರಾಜಪೇಟೆ ಕ್ಷೇತ್ರದಲ್ಲಿ 1636 ಮಂದಿ ನೋಟಾಕ್ಕೆ ಮತ ಚಲಾಯಿಸುವ ಮೂಲಕ ಮೂರನೇ ಸ್ಥಾನ ಮತ್ತು ಮಡಿಕೇರಿ ಕ್ಷೇತ್ರದಲ್ಲಿ 1516 ಮಂದಿ ನೋಟಾಕ್ಕೆ ಮತಹಾಕಿ ನಾಲ್ಕನೇ ಸ್ಥಾನ ನೀಡಿದ್ದಾರೆ. ಕಳೆದ ಬಾರಿಯು ಮಡಿಕೇರಿ ಕ್ಷೇತ್ರದಲ್ಲಿ 1615 ಮತ ಮತ್ತು ವೀರಾಜಪೇಟೆ ಕ್ಷೇತ್ರದಲ್ಲಿ 1733 ಮತಗಳು ನೋಟಾಕ್ಕೆ ಚಲಾವಣೆಯಾಗಿದ್ದವು.
ಮಡಿಕೇರಿ ಮೇ 13 : ಕೊಡಗು ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ ಪಡೆಯುವಲ್ಲಿ ತೀವ್ರ ಹಿನ್ನಡೆ ಸಾಧಿಸಿರುವುದು ಮತ್ತು ಪಕ್ಷದ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕೆ.ಎಂ.ಗಣೇಶ್ ರಾಜಿನಾಮೆ ಸಲ್ಲಿಸಿದ್ದಾರೆ. ಚುನಾವನಾ ಫಲಿತಾಂಶ ಹೊರ ಬಿದ್ದ ತಕ್ಷಣವೇ ನಡೆದ ಬೆಳವಣಿಗೆಗಳ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ಕೆ.ಎಂ.ಗಣೇಶ್ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಗಣೇಶ್, ಕಾಂಗ್ರೆಸ್ ಗೆಲುವಿಗೆ ಜೆಡಿಎಸ್ ಅಭ್ಯರ್ಥಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಜೆಡಿಎಸ್ ಸಕ್ರೀಯವಾಗಿ ಇರುತ್ತಿದ್ದರೆ ಇಂದು ಕಾಂಗ್ರೆಸ್ ಗೆಲ್ಲುತ್ತಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಿನ 15 ದಿನಗಳಲ್ಲಿ ತನ್ನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ಕೆ.ಎಂ.ಗಣೇಶ್ ಹೇಳಿದ್ದಾರೆ.
ಮಡಿಕೇರಿ ಮೇ 13 : ಕಳೆದ 25 ವರ್ಷಗಳಿಂದ ಬಿಜೆಪಿ ಶಾಸಕರುಗಳ ಹಿಡಿತದಲ್ಲಿದ್ದ ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು ಕೈವಶವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಕಳೆದ 25 ವರ್ಷಗಳ ಬಳಿಕ ಬಿಜೆಪಿಯ ಭದ್ರಕೋಟೆಯನ್ನು ಛಿದ್ರಗೊಳಿಸಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಡಾ.ಮಂಥರ್ ಗೌಡ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಎಂ.ಪಿ.ಅಪ್ಪಚ್ಚುರಂಜನ್ ಅವರನ್ನು 4,402 ಮತಗಳಿಂದ ಪರಾಭವಗೊಳಿಸಿದ್ದಾರೆ. ವೀರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎ.ಸ್.ಪೊನ್ನಣ್ಣ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರನ್ನು 4,291ಮತಗಳಿಂದ ಸೋಲಿಸಿದ್ದಾರೆ. ಕ್ಷೇತ್ರ ಪುನರ್ ವಿಂಗಡಣೆಯ ಬಳಿಕ ಮಡಿಕೇರಿ ಮತ್ತು ವೀರಾಜಪೇಟೆ ಕ್ಷೇತ್ರಗಳಲ್ಲಿ ಬಿಜೆಪಿ ಸತತ ಗೆಲುವು ಸಾಧಿಸುತ್ತಾ ಬಂದಿದ್ದು, ಇದೀಗ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಕಾಂಗ್ರೆಸ್ ಬ್ರೇಕ್ ಹಾಕಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಮಂಥರ್ ಗೌಡ ಅವರು 84,879 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದು, ಪ್ರತಿಸ್ಪರ್ಧಿ ಅಪ್ಪಚ್ಚುರಂಜನ್ ಅವರು 80,477 ಮತಗಳನ್ನು ಪಡೆದರು. ಜೆಡಿಎಸ್ ನ ನಾಪಂಡ ಮುತ್ತಪ್ಪ ಕೇವಲ…






