ಮಡಿಕೇರಿ NEWS DESK ಮಾ.15 : ಕುಶಾಲನಗರ ಪಟ್ಟಣದ ಚಿಕ್ಕಣ್ಣ ಬಡಾವಣೆಯಲ್ಲಿ ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಕುಶಾಲನಗರ ಜನಪ್ರತಿನಿಧಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ NEWS DESK ಮಾ.15 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪುತ್ತೂರು ವಿಭಾಗದ ಮಡಿಕೇರಿ ಘಟಕದ ಡಿಪೋ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡಿರುವ ರಾಮ್ ಚಂದ್ ದರ್ಶನ್ ಅವರನ್ನು ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್ (ಎಐಟಿಯುಸಿ) ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಹಾಗೂ ಪದಾಧಿಕಾರಿಗಳು ಭೇಟಿಯಾಗಿ ಅಭಿನಂದಿಸಿದರು.ಈ ಸಂದರ್ಭ ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ಎಟಿಸಿ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು. ರಾಮ್ ಚಂದ್ ದರ್ಶನ್ ಅವರು ಈ ಹಿಂದೆ ಪಿರಿಯಾಪಟ್ಟಣ ಘಟಕದಲ್ಲಿ ಘಟಕ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು.
ಮಡಿಕೇರಿ NEWS DESK ಮಾ.15 : ಥೈಲ್ಯಾಂಡ್ ನ ರಚ್ಚುಪುರಿ ಸ್ಟೇಡಿಯಂ ನಲ್ಲಿ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಮಟ್ಟದ 30ನೇ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ 60 ವಯೋಮಿತಿಯ ವಿಭಾಗದಲ್ಲಿ ಮಡಿಕೇರಿಯ ನಿವೃತ್ತ ಶ್ರುಶೂಷಕಿ ಅಧೀಕ್ಷಕಿ ಬಂಗಾಡುಮನೆ ವಸಂತಿ ಅವರು 1 ಚಿನ್ನ ಮತ್ತು 1 ಬೆಳ್ಳಿಯ ಪದಕವನ್ನು ಗೆದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯಿಂದ ಬಂಗಾಡುಮನೆ ವಸಂತಿ ಸೇರಿದಂತೆ ಇಬ್ಬರು ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಭಾರತ, ಫಿಲಿಫೈನ್ಸ್, ಯುಎಸ್‌ಎ, ನೆದರ್ ಲ್ಯಾಂಡ್, ಇಸ್ರೇಲ್, ಮಲೇಶಿಯಾ, ಸಿಂಗಾಪುರ್, ಶ್ರೀಲಂಕಾ, ಥೈಲ್ಯಾಂಡ್ ಸೇರಿದಂತೆ 10 ದೇಶಗಳ ಒಟ್ಟು 1024 ಕ್ರೀಡಾಪಟುಗಳು ಭಾಗವಹಿಸಿದ್ದರು.
ಮಡಿಕೇರಿ ಮಾ.13 NEWS DESK : ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷೆ ಸವಿತಾ ಭಟ್ ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮುಂದಿದ್ದಾರೆ. ನಮಗೆ ಮಾದರಿಯಾದ ಮಹಿಳೆಯರನ್ನು ದೂರದಲ್ಲಿ ಹುಡುಕಬೇಕಾಗಿಲ್ಲ, ನಮ್ಮ ಸುತ್ತಮುತ್ತಲೇ ಅನೇಕ ಮಹಿಳೆಯರಿದ್ದಾರೆ. ಮಹಿಳೆಗೆ ಮುಖ್ಯವಾಗಿಬೇಕಾದದ್ದು ಸ್ವಾತಂತ್ರ್ಯ, ನೆಮ್ಮದಿಯ ಜೀವನ ಮತ್ತು ಮನೆಯವರಿಂದ ತಾವು ಮಾಡುವ ಕೆಲಸಕ್ಕೆ ಪ್ರೋತ್ಸಾಹ. ಇಷ್ಟಿದ್ದರೆ ಮಹಿಳೆ ಏನು ಬೇಕಾದರೂ ಸಾಧಿಸಬಲ್ಲಳು, ಸಮಾಜಕ್ಕೆ ಕೊಡುಗೆಯನ್ನು ನೀಡಬಲ್ಲಳು ಎಂದರು. ಮಹಿಳಾ ದಿನಾಚರಣೆಯನ್ನು ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಿದೆ, ವರ್ಷದ ಎಲ್ಲಾ ದಿನಗಳಲ್ಲೂ ಗೌರವ ಮತ್ತು ಒಳ್ಳೆಯ ಸ್ಥಾನ ಮಾನಗಳು ಸಿಗುವಂತಾಗಬೇಕು ಎಂದು ಸವಿತಾ ಭಟ್ ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯೆಯರಾದ ವಸುಂಧರಾ ಪ್ರಸನ್ನ, ಆಯಿಷಾ ಹಮೀದ್, ಉಮಾ ಈಶ್ವರ್, ಪ್ರೇಮಾ ರಾಘವಯ್ಯ, ಜಯಶೀಲಾ ಪ್ರಕಾಶ್, ವಸಂತಿ ಪೂಣಚ್ಚ ಉಪಸ್ಥಿತರಿದ್ದರು. ದೀಪಾಂಜಲಿ ತಂಡದವರು ಪ್ರಾರ್ಥಿಸಿದರು. ವಿದ್ಯಾ ದೇವರಾಜ್ , ಮೇಘಾ ಸುಜಯ್, ಶೈಲಾ…
ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ ಮಾತ್ರವಲ್ಲದೆ ಸಮಾಜದ ಪ್ರಗತಿಗೂ ಪ್ರಮುಖ ಪಾತ್ರವಹಿಸುತ್ತಾಳೆ ಎಂದು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಕೆ.ಹೆಚ್.ಧನಲಕ್ಷ್ಮೀ ಅಭಿಪ್ರಾಯಿಸಿದರು. ಕೊಡಗು ಜಿಲ್ಲೆ ಮತ್ತು ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ ದಿ.ಸೀತಾಬಾಯಿ ಮತ್ತು ರಾಮಚಂದ್ರ ಕಾಮತ್ ಸ್ಮರಣಾರ್ಥ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಪ್ರತಿಯೊಂದು ಕುಟುಂಬವೂ ಹೆಣ್ಣು ಮಕ್ಕಳ ಶಿಕ್ಷಣವನ್ನು ಅತ್ಯಂತ ಮಹತ್ವದ ಕರ್ತವ್ಯವೆಂದು ಪರಿಗಣಿಸಬೇಕು. ಇಂದಿನ ದಿನಗಳಲ್ಲಿ ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ಸಂತಸದ ವಿಚಾರವಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಉನ್ನತ ಶಿಕ್ಷಣ ಪಡೆಯಲು ಕೆಲ ತೊಂದರೆಗಳು ಎದುರಾಗುತ್ತಿವೆ. ಸಾರಿಗೆ, ಆರ್ಥಿಕ ಸಮಸ್ಯೆ ಮತ್ತು ಸಾಮಾಜಿಕ ಮನೋಭಾವನೆಗಳಂತಹ ಅಡೆತಡೆಗಳನ್ನು ನಿವಾರಿಸುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು. ಪ್ರಾಚೀನ ಕಾಲದಲ್ಲಿ ಹೆಣ್ಣು…
ಮಡಿಕೇರಿ ಮಾ.13 NEWS DESK : ಕೊಡಗು ಅಖಿಲ ಅಮ್ಮಕೊಡವ ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆಯಾದ ರೂ.20 ಲಕ್ಷಗಳ ಚೆಕ್ ನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸಮಾಜದ ಅಧ್ಯಕ್ಷರಾದ ಬಾನಂಡ ಪ್ರಥ್ಯು ಅವರಿಗೆ ವಿಧಾನ ಸೌಧದಲ್ಲಿ ಹಸ್ತಾಂತರ ಮಾಡಿದರು. ಈ ಸಂದರ್ಭ ಅಮ್ಮ ಕೊಡವ ಸಮಾಜದ ಪ್ರಮುಖರಾದ ಪುತ್ತಾಮನೆ ಅನಿಲ್ ಪ್ರಸಾದ್, ನೇರಿಯಂಡಮ್ಮನ ಸುಬ್ರಮಣಿ, ಜನಾರ್ದನ, ಬಾನಂಡ ಸುನೀತ್, ಸೂದನ್, ಹೆಮ್ಮಚ್ಚಿಮನೆ ಎನ್ ಹರೀಶ್, ಹೆಚ್.ಎಂ.ಹರೀಶ್, ಮನ್ನಕಮನೆ ಎ.ಬಾಲಕೃಷ್ಣ, ಎಂ.ಎಂ.ಬಾಲಕೃಷ್ಣ, ಹೆಚ್.ಆರ್.ಮದನ್, ಪುತ್ತಾಮನೆ ಪರ್ವತ್, ಯತೀಶ್, ಹೆಚ್.ಎಂ.ಪ್ರಶಾಂತ್, ಕೊಡಿಂಜಮ್ಮನ ಬಾಲಕೃಷ್ಣ, ಶರಣು, ವಿಜು ಸೇರಿದಂತೆ ಇತರರು ಇದ್ದರು.
ವಿರಾಜಪೇಟೆ ಮಾ.13 NEWS DESK : ಪೂರ್ವಜರು ಪ್ರಕೃತಿಯೊಂದಿಗೆ ಒಡನಾಟದೊಂದಿಗೆ ಬಾಳಿ ಬದುಕು ಕಂಡಿದ್ದರು. ಸುಖಿ ಜೀವನ ನಡೆಸುತ್ತಿದ್ದರು. ಇದೀಗ ಆಧುನಿಕತೆ ಎಲ್ಲಡೆ ಪಸರಿಸಿ ಪೂರ್ವಜರು ನಡೆಸಿಕೊಂಡು ಬಂದ ಜೀವನ ಪದ್ಧತಿಯು ಕಣ್ಮರೆಯಾಗುತ್ತಿರುವುದನ್ನು ನಾವು ಮನ ಕಾಣುತ್ತಿದ್ದೇವೆ ಎಂದು ಮಡಿಕೇರಿ ಆಕಾಶವಾಣಿಯ ಉದ್ಘೋಷಕ ವಿನೋದ್ ಮೂಡಗದ್ದೆ ಅವರು ವಿಷಾದ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ ಆಶ್ರಯದಲ್ಲಿ ಕಲ್ತೋಡು ನಾಂಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 06 ದಿನಕಾಲ ವಾರ್ಷಿಕ ವಿಶೇಷ ಶಿಬಿರ ಆಯೋಜನೆಗೊಂಡಿತ್ತು. ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಸಮಾರಂಭ ಉದ್ದೇಶಿಸಿ ಮಾತನಾಡಿದ ವಿನೋದ್ ಅವರು ಸೇವೆ ಎಂಬುದು ಜೀವನದ ಅವಿಭಾಜ್ಯ ಅಂಗ ಎಂದು ಪರಿಗಣಿಸುವಂತಾಗಬೇಕು. ಸೇವಾ ಮನೋಭಾವ ಮತ್ತು ಪರಿಸರ ಜಾಗೃತಿ ವಿದ್ಯಾರ್ಥಿಗಳ ಜೀವನದಲ್ಲಿ ಜಾಗೃತವಾಗಬೇಕು ಎನ್ನುವ ಸದುದ್ದೇಶದಿಂದ ಗಾಂಧಿಜೀ ಅವರ ತತ್ವ ಸಿದ್ದಾಂತ ಜೀವಂತವಾಗಿರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಅರಂಭಿಸಿತು.…
ಗೋಣಿಕೊಪ್ಪ ಮಾ.13 NEWS DESK : ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಸ್ಪಂದಿಸಿ ಕರಾಟೆ, ನೃತ್ಯ, ಯೋಗ ತರಬೇತಿಗಳನ್ನು ನೀಡಿದ ಶಿಕ್ಷಕರುಗಳನ್ನು ಮತ್ತು ಶಾಲೆಯ ಕಾರ್ಯಕ್ರಮಗಳಿಗೆ ಬಳಸಲು ಅನುಕೂಲಕರವಾದ ಪೋಡಿಯಂ ವಿತರಿಸಿದ ದಾನಿಯ ವೇಣುಗೋಪಾಲ್‍ಕಣ್ಣನ್ ಅವರನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಶಾಲೆಯ ಕಾರ್ಯಕ್ರಮಗಳಿಗೆ ಅನುಕೂಲಕ್ಕೆ ಅನುವು ಮಾಡಿಕೊಡುವ ಉದ್ದೇಶದೊಂದಿಗೆ ಕಣ್ಣನ್‍ಟೈರ್ಸ್ ಮಾಲೀಕ ವೇಣುಗೋಪಾಲ್ ಕಣ್ಣನ್ ತಮ್ಮ ತಂದೆ ಕಣ್ಣನ್ ಅವರ ಜ್ಞಾಪಕಾರ್ಥವಾಗಿ ಪೋಡಿಯಂ ಅನ್ನು ಶಾಲೆಗೆ ನೀಡಿದರು. ಕಳೆದ ಒಂದು ವರ್ಷಗಳಿಂದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಯೋಗ ಶಿಕ್ಷಣವನ್ನ ನೀಡಿದ ಯೋಗ ಶಿಕ್ಷಕಿ ನಾಮೇರ ಶರ್ಲಿ ಬೋಪಣ್ಣ, ಕರಾಟೆ ಶಿಕ್ಷಣವನ್ನು ನೀಡಿದ ಕಿಶೋರ್ ಕೆ.ಎ ಮತ್ತು ನೃತ್ಯ ತರಗತಿಯನ್ನು ನೀಡಿದ ವಿಘ್ನೇಶ್ ಅವರನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್‍ಜೋಡುಬೀಟಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಕೆ.ಕುಮಾರ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಶಾಲಾ ಅಭಿವೃದ್ಧಿ…
ಗೋಣಿಕೊಪ್ಪ ಮಾ.13 NEWS DESK : ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆ ಪ್ರಸ್ತುತ ವಿವಿಧ ಸಾಧನೆಗಳಿಗೆ ಆರು ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಂಡಿದೆ. ಬಿ.ಎನ್.ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿನ ತಂಡ ಕಳೆದ ಒಂದು ವರ್ಷ ಮಾಡಿದ ಸಾಮಾಜಿಕ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ. ಬೆಂಗಳೂರಿನ ಅತ್ತಿಗುಪ್ಪೆ ಬಂಟರ ಸಂಘದ ಸಭಾಂಗಣದಲ್ಲಿ ನಡೆದ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಇದರ 25ನೇ ನ್ಯಾಷನಲ್ ಕಾನ್‌ಕೋರ್ಸ್ ವಿಜಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಅತ್ಯುತ್ತಮ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮದ ವಿನ್ನರ್ಸ್ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಬಿ.ಎನ್.ಪ್ರಕಾಶ್ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಲೀಜನ್ ಅಧಿಕಾರಿ ರನ್ನರ್ ಪ್ರಶಸ್ತಿಯನ್ನು ಸೀನಿಯರ್ ಪಿಪಿಎಫ್ ಎಂ.ಎಂ.ನಾಗೇಶ್ ಪಡೆದುಕೊಂಡಿದ್ದಾರೆ. ::ಎನ್‌ಡಿ ಶ್ರೇಷ್ಠತೆ ಪ್ರಶಸ್ತಿ :: ಏರಿಯಾ ಡಿ ಗೋಣಿಕೊಪ್ಪಲು ಲೀಜನ್ ಪಾಲಾಗಿದೆ. ಜತೆಗೆ ಗೋಣಿಕೊಪ್ಪ ಸೀರಿಯಲ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆ, ಗಣನೀಯ ಸಾಧನೆಗಾಗಿ ಅಭಿನಂದನಾ ಪ್ರಶಸ್ತಿ ಮತ್ತು ಸ್ಪರ್ಧೆಯ ನಿಯಮ ಪಾಲನಾ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸೀನಿಯರ್ ಪಿಪಿಎಫ್ ಪೊನ್ನಲತಂಡ ಕಿರಣ್ ಪೊನ್ನಪ್ಪ ಅತ್ಯುತ್ತಮ ಲೀಜನ್ ಸದಸ್ಯರನ್ನರ್…
ಮಡಿಕೇರಿ ಮಾ.13 NEWS DESK : ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಅಮಾಯಕ ಮಾನವ ಜೀವಗಳು ಬಲಿಯಾಗುತ್ತಿದ್ದರೂ ರಾಜ್ಯ ಸರಕಾರ ಹಾಗೂ ಅರಣ್ಯ ಇಲಾಖೆ ಯಾವುದೇ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಅರಣ್ಯ ಭವನದ ಎದುರು ಪ್ರತಿಭಟನೆ ನಡೆಸಿತು. ಸಮೀಪದ ಹೆದ್ದಾರಿ ತಡೆದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಳೆದ ಎರಡು ವಾರಗಳಲ್ಲಿ ಸಿದ್ದಾಪುರ ವಿಭಾಗದಲ್ಲಿ ಇಬ್ಬರು ವ್ಯಕ್ತಿಗಳು ಹಾಗೂ ಬೆಟ್ಟತ್ತೂರು ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಸಾಲು ಸಾಲು ಸಾವುಗಳು ಸಂಭವಿಸಿದರೂ ಸರಕಾರ ಸಮಸ್ಯೆಯ ಗಂಭೀರತೆಯನ್ನು ಅರಿತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಪೊಲೀಸರ ಬ್ಯಾರಿಕೇಡ್ ಗಳನ್ನು ನೂಕಿ ಅರಣ್ಯ ಭವನದ ಕಚೇರಿಗೆ ನುಗ್ಗಲೆತ್ನಿಸಿದ ಘಟನೆಯೂ ನಡೆಯಿತು. *ಬಂದ್ ಗೂ ಸಿದ್ಧ* ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ 2 ವಾರದ ಅವಧಿಯಲ್ಲಿ ಮೂವರು ಕಾಡಾನೆ ದಾಳಿಗೆ ಬಲಿಯಾಗಿದ್ದರು, ಅರಣ್ಯ ಇಲಾಖೆ ಸೂಕ್ತ ಕ್ರಮ…






