ಮಡಿಕೇರಿ ಮೇ 10 : ವಿಧಾನಸಭಾ ಚುನಾವಣೆ ಗೆ ಮುಂಜಾನೆ 7 ಗಂಟೆಯಿಂದಲೇ ಮತದಾನ ಪ್ರಕೃಯೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 26.49ರಷ್ಟು ಮತದಾನ ನಡೆದಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.26.27 ರಷ್ಟು ಮತದಾನ ನಡೆದಿದ್ದು, ವಿರಾಜಪೇಟೆ ಕ್ಷೇತ್ರದಲ್ಲಿ 26.71ರಷ್ಟು ಮತದಾನ ನಡೆದಿದೆ. ಮತದಾರರು ಮತಗಟ್ಟೆಯಲ್ಲಿ ಸಾಲುಗಟ್ಟಿ ನಿಂತು ಉತ್ಸಾಹದಿಂದ ಮತದಾನ ಮಾಡಿದರು.
ಲೇಖಕ: admin
ಮಡಿಕೇರಿ ಮೇ 10 : ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರು ತಮ್ಮ ಪತ್ನಿಯೊಂದಿಗೆ ಆಗಮಿಸಿ ಮಡಿಕೇರಿ ಸಂತ ಮೈಕಲರ ಶಾಲಾ ಆವರಣದ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಮಡಿಕೇರಿ ಮೇ 10 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್ ಪೊನ್ನಣ್ಣ ಅವರು ತಮ್ಮ ಕುಟುಂಬದೊಂದಿಗೆ ಆಗಮಿಸಿ ಹುದಿಕೇರಿಯ ಬೇಳೂರುವಿನ ಮತಗಟ್ಟೆ 246ರಲ್ಲಿ ಮತ ಚಲಾಯಿಸಿದರು. ಈ ಸಂದರ್ಭ ಪತ್ನಿ ಕಾಂಚನ ಪೊನ್ನಣ್ಣ, ಸಹೋದರ ನರೇನ್ ಕಾರ್ಯಪ್ಪ ಹಾಗೂ ಮತ್ತಿತರರು ಇದ್ದರು.
ಮಡಿಕೇರಿ ಮೇ 10 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಸೋಮವಾರಪೇಟೆ ತಾಲೂಕಿನ ಕುಂಬೂರು ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಪತ್ನಿ ಶೈಲಾ ರೊಂದಿಗೆ ಮತಚಲಾಯಿಸಿದರು.
ಮಡಿಕೇರಿ ಮೇ 10 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಮತಚಲಾಯಿಸಿದರು. ಪತ್ನಿ ಕುಂತಿ ಬೋಪಯ್ಯ ಹಾಗೂ ಪುತ್ರಿ ಯಶಿಕ ರೊಂದಿಗೆ ನಗರದ ಜೂನಿಯರ್ ಕಾಲೇಜು ಆವರಣದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.
ಮಡಿಕೇರಿ ಮೇ 10 : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ನಗರದ ಸಂತ ಮೈಕಲರ ಶಾಲೆಯ ಮತಗಟ್ಟೆಯಲ್ಲಿ ಹಿರಿಯ ರಾಜಕಾರಣಿ ಮಿಟ್ಟು ಚಂಗಪ್ಪ ಹಾಗೂ ಪತ್ನಿ ಯಶಿ ಚಂಗಪ್ಪ ಅವರು 30ನೇ ಬಾರಿಗೆ ಮೊದಲಿಗರಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಕ್ಕು ಚಲಾಯಿಸಿದ್ದಾರೆ. ಎಐಸಿಸಿ ಸದಸ್ಯ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹಲವು ಹುದ್ದೆಗಳನ್ನು ನಿರ್ವಹಿಸಿರುವ 82 ವರ್ಷದ ಮಿಟ್ಟು ಚಂಗಪ್ಪ ಅವರು ಯುವ ಮತದಾರರಿಗೆ ಸ್ಫೂರ್ತಿಯಾಗಿದ್ದಾರೆ.
ಮಡಿಕೇರಿ ಮೇ 10 : ಮುಂಜಾನೆಯಿಂದಲೆ ವಿಧಾನ ಪರಿಷತ್ ಚುನಾವಣೆಗೆ ಬಿರುಸಿನ ಮತದಾನ ನಡೆಯುತ್ತಿದ್ದು, ಸಿದ್ದಲಿಂಗಪುರದ ಮತಗಟ್ಟೆ ಸಂಖ್ಯೆ 96 ರಲ್ಲಿ ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಮತ ಚಲಾಯಿಸಿದರು.
ಮಡಿಕೇರಿ ಮೇ 10 : ಪೊನ್ನಂಪೇಟೆ ತಾಲ್ಲೂಕಿನ ನಾಗರಹೊಳೆ ಬಳಿಯ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯ ಮತಗಟ್ಟೆಯಲ್ಲಿ ಆದಿವಾಸಿಗಳು ಮತದಾನ ಮಾಡಿ ಗಮನ ಸೆಳೆದರು.
ಮಡಿಕೇರಿ ಮೇ 10 : ನಗರದ ತಾಲೂಕು ಪಂಚಾಯತ್ ಮತಗಟ್ಟೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತು ರೂಪಶ್ರೀ ಸತೀಶ ಅವರು ಮತದಾನ ಮಾಡಿದರು.
ಮಡಿಕೇರಿ ಮೇ 9 : ಶಸ್ತ್ರ ಚಿಕಿತ್ಸೆಯ ನಂತರ ಎರಡೂ ಕಣ್ಣುಗಳ ದೃಷ್ಟಿಯನ್ನು ಕಳೆದುಕೊಂಡಿರುವ ತರುಣೇಶ ಡಿ.ಎಸ್ ದೇವಗೋಂಡಿ ಅವರಿಗೆ ಮಡಿಕೇರಿ ಇನ್ನರ್ ವೀಲ್ ಸಂಸ್ಥೆ ಆರ್ಥಿಕ ನೆರವನ್ನು ನೀಡಿತು. ನಗರದ ಬಾಲಭವನದಲ್ಲಿ ಧನ ಸಹಾಯ ಹಸ್ತಾಂತರಿಸುವ ಸಂದರ್ಭ ಸಂಸ್ಥೆಯ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾರ್ಯದರ್ಶಿ ಲಲಿತಾ ರಾಘವನ್, ಸದಸ್ಯರುಗಳಾದ ಉಮಾಗೌರಿ, ಮಲ್ಲಿಗೆ ಪೈ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ತರುಣೇಶ ಅವರು 4 ವರ್ಷಗಳ ಹಿಂದೆ ದೃಷ್ಟಿಯನ್ನು ಕಳೆದುಕೊಂಡಿದ್ದರು.






