ಲೇಖಕ: admin

ಮಡಿಕೇರಿ ಏ.5 : ಬೇಸಿಗೆಯ ಹಿನ್ನೆಲೆ ಕೂಟುಹೊಳೆಯಲ್ಲಿ ನೀರಿನ ಪ್ರಮಾಣ ಕ್ಷೀಣಿಸಿರುವುದರಿಂದ ಮಡಿಕೇರಿ ನಗರಕ್ಕೆ ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲಾಗುವುದು ಎಂದು ಮಡಿಕೇರಿ ನಗರಸಭೆ ತಿಳಿಸಿದೆ.

Read More

ಮಡಿಕೇರಿ ಏ.5 : ಕೊಡಗಿನ ಪುರಾತನ ದೇವಾಲಯಗಳಲ್ಲಿ ಒಂದಾದ ಮಡಿಕೇರಿಯ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವವು ಏ.6 ರಿಂದ 8ರವರೆಗೆ ಶ್ರದ್ಧಾಭಕ್ತಿಯಿಂದ ನಡೆಯಲಿದೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ಮಾತನಾಡಿ, ಮೂರು ದಿನಗಳ ಕಾಲ ನಡೆಯಲಿರುವ ಪೂಜಾ ವಿಧಿವಿಧಾನಗಳು ಕುರಿತು ಮಾಹಿತಿ ನೀಡಿದರು. ಏ.6 ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಶಕ್ತಿಗಣಪತಿ ದೇವರಿಗೆ 21 ತೆಂಗಿನ ಕಾಯಿಗಳ ಮಹಾ ಗಣಪತಿ ಹೋಮ, 8 ಗಂಟೆಗೆ ಕಲಶ ಪೂಜೆ, ಶ್ರೀ ನಾಗದೇವರಿಗೆ ನೂರುಂಪಾಲುಂ (ನಾಗತಂಬಿಲ) ಸಮರ್ಪಣೆ, 10.30 ಗಂಟೆಗೆ ಕಲಶಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಪ್ರಸಾದ ವಿತರಣೆ ಜರುಲಿದೆ. ಸಂಜೆ 4.30 ಗಂಟೆಗೆ ಕೇರಳದ ಪರಿಶಿನಿಕಡವು ಶ್ರೀ ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್ ಶ್ರೀ ಬ್ಲಾತೂರ್ ಚಂದ್ರ್ ಮಡೆಯಚ್ಚನ್ ನೇತೃತ್ವದಲ್ಲಿ ಧ್ವಜಾರೋಹಣದ ಮೂಲಕ ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಸಂಜೆ 5 ಗಂಟೆಗೆ ಶ್ರೀ ಮುತ್ತಪ್ಪ ದೈವಕೋಲಗಳ ವೀಕ್ಷಣೆಗೆ ದಾನಿಗಳ ಸಹಾಯದಿಂದ…

Read More

ಮಡಿಕೇರಿ ಏ.5 : ಪೊನ್ನಂಪೇಟೆ ತಾಲ್ಲೂಕು ಹುದಿಕೇರಿ ಗ್ರಾ.ಪಂ.ವ್ಯಾಪ್ತಿಯ ಬೆಳ್ಳೂರು ಗ್ರಾಮದ ಹೆಮ್ಮಾಡು ಕಾಲೋನಿಯಲ್ಲಿ ಕುಡಿಯುವ ನೀರಿನ ಬವಣೆಯನ್ನು ಪರಿಹರಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಕುಮಾರ್  ತಿಳಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಸಂಬಂಧಿಸಿದಂತೆ ಇತ್ತೀಚೆಗೆ ಸಾರ್ವಜನಿಕರು ಜಿಲ್ಲಾಡಳಿತ ಗಮನಕ್ಕೆ ತಂದಿದ್ದರು. ಆ ದಿಸೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ನಿರ್ದೇಶನ ನೀಡಿದ್ದರು. ಅದರಂತೆ ಪೊನ್ನಂಪೇಟೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಸ್ಥಳದಲ್ಲಿಯೇ ‘ನಾನ್ ರಿಟರ್ನ್ ವಾಲ್’ ನಿಂದ ಸಮಸ್ಯೆ ಉಂಟಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸಿ ಗ್ರಾಮಕ್ಕೆ ಕುಡಿಯುವ ನೀರನ್ನು ಒದಗಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

Read More

ಮಡಿಕೇರಿ ಏ.5 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ್ ರಾಂ ಅವರ 116 ನೇ ಜನ್ಮ ದಿನಾಚರಣೆಯನ್ನು ಬುಧವಾರ ಸರಳವಾಗಿ ಆಚರಿಸಲಾಯಿತು. ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಇತರರು ಪುಷ್ಪನಮನ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ದೇಶದಲ್ಲಿ ತಲೆದೋರಿದ ಆಹಾರ ಸಮಸ್ಯೆ ಹೋಗಲಾಡಿಸಿದ ಕೀರ್ತಿ ಬಾಬು ಜಗಜೀವನ್ ರಾಂ ಅವರಿಗೆ ಸಲ್ಲುತ್ತದೆ ಎಂದರು. ದಮನಿತರ ಪರವಾಗಿ ಹೋರಾಟ ನಡೆಸಿದ ಮಾಜಿ ಉಪ ಪ್ರಧಾನಮಂತ್ರಿ ಬಾಬು ಜಗಜೀವನ್ ರಾಂ ಅವರು ಕೃಷಿ, ರಕ್ಷಣಾ ಸಚಿವರಾಗಿ ಸಲ್ಲಿಸಿದ ಸೇವೆ ಸ್ಮರಣೀಯವಾದದ್ದು ಎಂದು ಅವರು ಹೇಳಿದರು. ‘ಅಭಿವೃದ್ಧಿ ಹೊಂದುತ್ತಿರುವ…

Read More

ಮಡಿಕೇರಿ ಏ.5 : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್, 11 ರಿಂದ ಮೇ, 14 ರವರೆಗೆ 29 ದಿನಗಳ ಕಾಲ ನುರಿತ ತರಬೇತುದಾರರಿಂದ ದಿನಕ್ಕೆ ಎರಡು ಗಂಟೆಯಂತೆ ಈಜು ತರಬೇತಿ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ. ಈಜು ಕ್ರೀಡೆಗೆ 8 ವರ್ಷ ಮೇಲ್ಪಟ್ಟಿರಬೇಕು. ಸಮಯ ಬೆಳಗ್ಗೆ 9.30 ರಿಂದ 11.30 ರವರೆಗೆ ಶುಲ್ಕ ರೂ.3 ಸಾವಿರ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-229985, 08272-220986 ಹಾಗೂ ಮಣಿಕಂಠ: 9880989987 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಏ.5 : ಮೂರ್ನಾಡು 33/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಮರುಗೋಡು ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಏಪ್ರಿಲ್, 6 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಅರೆಕಾಡು, ಹೊಸ್ಕೇರಿ, ಮರಗೋಡು, ಕಟ್ಟೆಮಾಡು, ಐಕೋಳ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.  

Read More

ಮಡಿಕೇರಿ ಏ.5 : ಚೆಟ್ಟಂಗಡ ಕುಟುಂಬ ಆಶ್ರಯದಲ್ಲಿ ನಡೆದ ಕೊಡವ ಕೌಟುಂಬಿಕ ಕೇರ್‌ಬಲಿ ನಮ್ಮೆಯು ಟಿ.ಶೆಟ್ಟಿಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಪುರುಷರ ವಿಭಾಗದಲ್ಲಿ ಮಾಳೇಟಿರ ತಂಡ ಹಾಗೂ ಮಹಿಳೆಯರ ವಿಭಾಗದ ಅಣ್ಣಳಮಾಡ ತಂಡ ಚಾಂಪಿಯನ್ ಪಟ್ಟ ಪಡೆಯುವ ಮೂಲಕ ತಲಾ ರೂ.50 ಸಾವಿರ ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡಿತು. ರನ್ನರ್ಸ್ ಪ್ರಶಸ್ತಿ ಹಾಗೂ ತಲಾ ರೂ.30 ಸಾವಿರ ನಗದನ್ನು ಪುರುಷರ ವಿಭಾಗದಲ್ಲಿ ಮಾಳೇಟಿರ ತಂಡ ಮತ್ತು ಮಹಿಳೆಯರ ವಿಭಾಗದಲ್ಲಿ ಅಜ್ಜಮಾಡ ತಂಡ ಪ್ರಶಸ್ತಿ ಪಡೆಯಿತು. ಮೂರನೇ ಸ್ಥಾನವನ್ನು ಪುರುಷರ ವಿಭಾಗದಲ್ಲಿ ಚಂಗಲಂಡ ತಂಡ ಮತ್ತು ಮಹಿಳೆಯರ ವಿಭಾಗದಲ್ಲಿ ಕಾಂಡಂಡ ತಂಡ ತಲಾ ರೂ.20 ಸಾವಿರ ನಗದು ಮತ್ತು ಪ್ರಶಸ್ತಿ ಪಡೆಯಿತು. ಪಂದ್ಯಾವಳಿಯಲ್ಲಿ 102 ಪುರುಷರ ಮತ್ತು 75 ಮಹಿಳೆಯರ ತಂಡ ಭಾಗವಹಿಸಿದ್ದವು. ಸಮಾರೋಪ : ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮಾಜಿ ಒಲಂಪಿಯನ್ ನಿವೃತ್ತ ಕರ್ನಲ್ ಬಾಳೆಯಡ ಸುಬ್ರಮಣಿ ಮಾತನಾಡಿ, ಕ್ರೀಡೆ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಗೆ…

Read More

ನಾಪೋಕ್ಲು ಏ.5 :  ಇತಿಹಾಸ ಪ್ರಸಿದ್ಧ ನಾಪೋಕ್ಲುವಿನ ಶ್ರೀ ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಮೊದಲದಿನವಾದ ಏ.3ರ ಬೆಳಗ್ಗೆ ಗಣಪತಿ ಹೋಮ, ರಾತ್ರಿ ಗುರು ಪೂಜೆ, ದೇವಿ ಪೂಜೆ ನಡೆಯಿತು. ಏ.4  ರಂದು ಅಪರಾಹ್ನ ಪೈಂಗುತ್ತಿ ನಡೆದ ಬಳಿಕ ಶ್ರೀ ಪೊನ್ನು ಮುತ್ತಪ್ಪ ದೇವರ ಕಳಸವನ್ನು ಹೊತ್ತು ಪವಿತ್ರ ಕಾವೇರಿ ನದಿಯಲ್ಲಿ ಸ್ನಾನದ ನಂತರ ಪ್ರಖ್ಯಾತ ಕೇರಳದ ಚಂಡೆಯೊಂದಿಗೆ ನಾಪೋಕ್ಲು ಪಟ್ಟಣದ ಮುಖ್ಯಬೀದಿಯಲ್ಲಿ ನಡೆದ ಮೆರವಣಿಗೆ, ಬಳಿಕ ದೇವಾಲಯದಲ್ಲಿ ನಡೆದ ಮುತ್ತಪ್ಪ ದೇವರ ವೆಳ್ಳಾಟಂ, ಕುಟ್ಟಿಚ್ಚಾತ, ಗುಳಿಗ ದೇವರ ಕೋಲಗಳು ನೋಡುಗರ ಗಮನ ಸೆಳೆಯಿತು.  ಬಳಿಕ ಪ್ರಸಾದ ವಿತರಣೆ ನಡೆಯಿತು. ಇಂದು ಪ್ರಾತಕಾಲ  ದೇವರ ಚರಿತ್ರೆ ಹಾಡಿನ ನೃತ್ಯ,  ಗುಳಿಗ ದೇವರ ಕೋಲ ನಡೆಯಿತು. ಮುಂಜಾನೆ  ಕುಟ್ಟಿಚಾತ ದೇವರ ಕೋಲ, ತಿರುವಪ್ಪ ಮತ್ತು ಮುತ್ತಪ್ಪ ದೇವರ ಕೋಲ ನಡೆದು ಉತ್ಸವ ಸಂಪನ್ನಗೊಂಡಿತು. ಉತ್ಸವದಲ್ಲಿ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಊರಿನ…

Read More

ಮಡಿಕೇರಿ ಏ.5 : ಶಿಕ್ಷಣ ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹರಿದು ಹಂಚಿ ಹೋಗಿರುವ ಜನಾಂಗ ಬಾಂಧವರು ಒಗ್ಗೂಡಲು ಕ್ರೀಡಾಕೂಟಗಳು ಸಹಕಾರಿ ಆಗಿವೆ ಎಂದು ಮಕ್ಕಳ ತಜ್ಞ ಮೇಜರ್ ಡಾ.ಕುಶ್ವಂತ್ ಕೋಳಿಬೈಲು ಹೇಳಿದರು. ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಕುದುಕುಳಿ ಕ್ರಿಕೆಟ್ ಸಮಿತಿ ಆಯೋಜಿಸಿದ ಗೌಡ ಕುಟುಂಬಗಳ ನಡುವಿನ ಕ್ರಿಕೆಟ್ ಪಂದ್ಯಾವಳಿ “ಕುದುಕುಳಿ ಐನ್‍ಮನೆ ಕ್ರಿಕೆಟ್ ಕಪ್-2023” ಅನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ. ಅರೆಭಾಷೆ ಗೌಡರ ಸಂಖ್ಯೆ ಕೊಡಗಿನಲ್ಲಿ ಅಧಿಕ ಇದ್ದು, ಜನಾಂಗದವರು ತಮ್ಮ ಶಕ್ತಿಯನ್ನು ಅರಿತುಕೊಂಡಾಗ ಉತ್ತಮ ಕ್ರೀಡಾಕೂಟವನ್ನು ದೊಡ್ಡ ಮಟ್ಟದಲ್ಲಿ ಸಂಘಟಿಸಲು ಸಾಧ್ಯ ಎಂದರು. ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಕುಶಾಲಪ್ಪ ಟ್ರೋಫಿ ಅನಾವರಣಗೊಳಿಸಿ, ಕೌಟುಂಬಿಕ ಪಂದ್ಯಾವಳಿಯು ಜನಾಂಗವನ್ನು ಒಗ್ಗೂಡಿಸಲು ಒಂದು ಉತ್ತಮ ವೇದಿಕೆ ಎಂದರು. ಕಾವೇರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಆನೆರ ಜಾನಕಿ ಮೋಹನ್ ಮಾತನಾಡಿ, ಸಾಮರಸ್ಯ ಸಹಕಾರ ಮನೋಭಾವನೆ ಬೆಳೆಯಲು…

Read More

ಮಡಿಕೇರಿ ಏ.5 : ಇದೇ ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದಾಗಿ ಹೊದ್ದೂರು ಗ್ರಾ.ಪಂ ಸದಸ್ಯ ಕೊಟ್ಟಮುಡಿ ಕೆ.ಎಂ.ಮೊಯ್ದು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜಕೀಯ ಪಕ್ಷಗಳು ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದಾರೆ. ಗ್ರಾ.ಪಂ ಸದಸ್ಯನಾಗಿ ಕೊಟ್ಟಮುಡಿ ಮತ್ತು ಹೊದವಾಡ ಭಾಗದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಸರ್ಕಾರದಿಂದ ನೀಡಲಾಗುವ ಅನುದಾನವನ್ನು ಜನಪರವಾಗಿ ಸದ್ಬಳಕೆ ಮಾಡುವಲ್ಲಿ ಯಶಸ್ವಿಯಾಗಿದ್ದೇನೆ. ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಡಳಿತ ನೀಡುವುದಕ್ಕಾಗಿ ಅಭಿವೃದ್ಧಿಪರ ಚಿಂತನೆಯೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದಾಗಿ ಮೊಯ್ದು ಸ್ಪಷ್ಟಪಡಿಸಿದ್ದಾರೆ.  

Read More