ಸಿದ್ದಾಪುರ ಫೆ.28 : ಆಟೋ ಚಾಲಕರು ಮತ್ತು ಮಾಲೀಕರು ಸಾರ್ವಜನಿಕ ವಲಯದಲ್ಲಿ ಬದುಕು ಕಂಡುಕೊಳ್ಳಲು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಬೇಕು ಎಂದು ಸಿದ್ದಾಪುರ ಗ್ರಾ.ಪಂ ಅಧ್ಯಕ್ಷರಾದ ತಿತಮಾಡ ರೀನಾ ತುಳಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಸಿದ್ದಾಪುರ ಮತ್ತು ನೆಲ್ಯಹುದಿಕೇರಿ ಆಟೋ ಚಾಲಕ ಮತ್ತು ಮಾಲೀಕರ ಸಂಘ ವತಿಯಿಂದ ಸಿದ್ದಾಪುರದ ಮೈಸೂರು ರಸ್ತೆಯ ಸಂಘ ಕಚೇರಿಯಲ್ಲಿ ನಡೆದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು ಮಹಾಸಭೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ಆಟೋ ಚಾಲಕರು ಸ್ನೇಹಜೀವಿಗಳು, ಕಡು ಬಡವರು, ಮಧ್ಯಮ ಕುಟುಂಬ ವರ್ಗಕ್ಕೆ ಬಡವನ ತೇರು. ಬದುಕನ್ನು ರೂಪಿಸಿಕೊಳ್ಳಲು ಸಮಾಜದ ಮುಖ್ಯವಾಹಿನಿಗೆ ಬಂದವರು. ಸಾರ್ವಜನಿಕರೊಂದಿಗೆ ಸೌಜನ್ಯದೊಂದಿಗೆ ವರ್ತನೆ ಮಾಡಬೇಕು. ಆರ್ಥಿಕವಾಗಿ ಸಫಲತೆ ಹೊಂದಬೇಕು. ಕುಟುಂಬ ನಿರ್ವಹಣೆ ಕಷ್ಟ ಸಾದ್ಯವಾದರು. ವೃತ್ತಿಗೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಸಂಘದ ಜಿಲ್ಲಾ ಉಪಾಧ್ಯಕ್ಷ ಶಶಿಧರನ್ ಮಾತನಾಡಿ, ಚಾಲಕರು ಸಂಘಟನೆಯಲ್ಲಿ ತೊಡಗಬೇಕು. ಚಾಲನೆಯಲ್ಲಿರುವ ಆಟೋಗಳಲ್ಲಿ ಎಲ್ಲಾ ದಾಖಲೆ ಪತ್ರಗಳನ್ನು ಹೊಂದಿಕೊಂಡು ತೆರಳಬೇಕು. ಇಲಾಖೆಯಿಂದ…
ಲೇಖಕ: admin
ಮಡಿಕೇರಿ ಫೆ.28 : ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್ ಸಿಸೋದಿಯಾ ಬಂಧನವನ್ನು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಖಂಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶಾದ್ಯಂತ ಎಎಪಿ ಬೆಳೆಯುತ್ತಿರುವುದನ್ನು ಸಹಿಸದ ಬಿಜೆಪಿ ಸರ್ಕಾರ ಹತಾಶ ಮನೋಭಾವದಿಂದ ಈ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ದೆಹಲಿಯ ಅಬಕಾರಿ ನೀತಿಯಲ್ಲಿ ಯಾವುದೇ ಅವ್ಯವಹಾರವಾಗಿಲ್ಲ. ನೂತನ ಅಬಕಾರಿ ನೀತಿಯನ್ನು ದೆಹಲಿಯಲ್ಲಿ ಇನ್ನೂ ಜಾರಿಗೆ ತಂದಿಲ್ಲ ಹಾಗೂ ಹಲವು ರಾಜ್ಯಗಳಲ್ಲಿ ಇದೇ ನೀತಿ ಜಾರಿಯಲ್ಲಿದೆ ಎಂಬುವುದನ್ನು ನಾವಿಲ್ಲಿ ಗಮನಿಸಬೇಕು. ಸುಮಾರು ಒಂದು ವರ್ಷದಿಂದ ಕೇಂದ್ರ ಸರ್ಕಾರದ ತನಿಖಾಧಿಕಾರಿಗಳು ಸಿಸೋದಿಯಾರವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದ್ದರೂ, ಆರೋಪವನ್ನು ಸಾಬೀತುಪಡಿಸುವಂತಹ ಯಾವುದೇ ಸಣ್ಣ ಸಾಕ್ಷಿ ಸಿಕ್ಕಿಲ್ಲ. ನಗದು ಅಥವಾ ಯಾವುದೇ ಅಕ್ರಮ ದಾಖಲೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಆಮ್ ಆದ್ಮಿ ಪಾರ್ಟಿಯೊಂದೇ ಬಿಜೆಪಿಯನ್ನು ಎದುರಿಸುವ ಏಕೈಕ ಶಕ್ತಿ ಎಂಬುವುದನ್ನು ಅರಿತಿರುವ ಕೇಂದ್ರ ಸರ್ಕಾರ ನಮ್ಮನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೇ, ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು…
ಮಡಿಕೇರಿ ಫೆ.28 : ಚಾಲಕನ ನಿಯಂತ್ರಣ ತಪ್ಪಿದ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮೇಕೇರಿ ಬಳಿ ನಡೆದಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಪೊನ್ನಂಪೇಟೆ ತಾಲೂಕಿನ ಹುದಿಕೇರಿಗೆ ಲಾರಿಯಲ್ಲಿ ಗೊಬ್ಬರ ಸಾಗಿಸಲಾಗುತ್ತಿತ್ತು. ಲಾರಿ ಚಾಲಕ ತಾಳತ್ತಮನೆ-ಮೇಕೇರಿ ಬೈಪಾಸ್ ರಸ್ತೆಯ ಮಾಹಿತಿ ಅರಿಯದೆ ಮಡಿಕೇರಿಗೆ ಆಗಮಿಸಿ ಜನರಲ್ ತಿಮ್ಮಯ್ಯ ವೃತ್ತದಿಂದ ವಿರಾಜಪೇಟೆ ಮಾರ್ಗಕ್ಕಾಗಿ ಹುದಿಕೇರಿ ಕಡೆಗೆ ಲಾರಿ ಚಲಾಯಿಸಿದ್ದಾರೆ. ಮೇಕೇರಿ ಮಸೀದಿ ಬಳಿಯ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಗೊಬ್ಬರ ಚೀಲಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು, ಕೆಲವು ಚೀಲಗಳಿಗೆ ಹಾನಿಯಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕ್ರೇನ್‍ಗಳ ಸಹಾಯದಿಂದ ಲಾರಿಯನ್ನು ಮೇಲೆತ್ತಲಾಗಿದೆ. ಕೆಲವು ದಿನಗಳ ಹಿಂದೆ ಇದೇ ಸ್ಥಳದಲ್ಲಿ ಸುಣ್ಣ ಸಾಗಿಸುತ್ತಿದ್ದ ಲಾರಿಯೊಂದು ಮಗುಚಿ ಬಿದ್ದಿತ್ತು.
ಹುಬ್ಬಳ್ಳಿ ಫೆ.28 : 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು. ಬಜೆಟ್ ನಲ್ಲಿ ಅದಕ್ಕಾಗಿ ಹಣವನ್ನೂ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಾಳೆಯಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿಗೆ ಮುಷ್ಕರ ನಡೆಸಲು ಆರಂಭಿಸಿರುವ ಬಗ್ಗೆ ಪ್ರತಿಕ್ರಿಯಿಸಿದರು. ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ ಮಾಡಬೇಕೆಂಬ ಸರ್ಕಾರಿ ನೌಕರರ ಬೇಡಿಕೆಯನ್ನು ಸರ್ಕಾರ ಒಪ್ಪಿದೆ. ನಾವು ಕೂಡಲೇ 7 ನೇ ಆಯೋಗಕ್ಕೆ ಸೂಚನೆ ನೀಡಿ ಮಧ್ಯಂತರ ವರದಿ ಪಡೆದು ಅದರ ಅನುಷ್ಠಾನಕ್ಕೆ ಸಿದ್ಧರಿದ್ದೇವೆ ಎಂದು ತಿಳಿಸಿದರು. ಸಿ.ಎ.ಆರ್ ಸಿಬ್ಬಂದಿ ಬಲ ಪಡಿಸುವ ಬಗ್ಗೆ ಡಿ.ಜಿ ಅವರಿಗೆ ಸೂಚನೆ ನೀಡಲಾಗಿದೆ ಎಂದರು.
ಮಡಿಕೇರಿ ಫೆ 28 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತನ್ನ 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲಿನಲ್ಲಿ ನಡೆಸುತಿದೆ. ಮಾ4 ಮತ್ತು 5 ರಂದು ಗೋಣಿಕೊಪ್ಪಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸುವ ಸಾಹಿತಿ ಐ.ಮಾ.ಮುತ್ತಣ್ಣ ವೇದಿಕೆಯಲ್ಲಿ ಸಮ್ಮೇಳನ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಿಲ್ಲೆಯ ಹಿರಿಯ ಸಾಹಿತಿಗಳು ಮೈಸೂರಿನ ಯುವರಾಜ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರು ಡಾ. ಎಂ.ಪಿ.ರೇಖಾ ಆಯ್ಕೆಯಾಗಿದ್ದು, ಸಮ್ಮೇಳನವನ್ನು ನಡೆಸಿಕೊಡಲಿದ್ದಾರೆ. ಸಮ್ಮೇಳನದ ಯಶಸ್ಸಿಗಾಗಿ ಸ್ವಾಗತ ಸಮಿತಿ ರಚಿಸಲಾಗಿದ್ದು ಅದರೊಂದಿಗೆ ಹಲವಾರು ಉಪಸಮಿತಿಗಳನ್ನು ರಚಿಸಲಾಗಿದೆ. ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು, ಸರಕಾರಿ ಭೂ ಅತಿಕ್ರಮ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಕೆ.ಜಿ.ಬೋಪಯ್ಯ ಮತ್ತು ಗೌರವಾಧ್ಯಕ್ಷರಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಹಾಗೂ ವಿಧಾನಪರಿಷತ್ ಸದಸ್ಯರಾದ ಎಂ.ಪಿ ಸುಜಾ ಕುಶಾಲಪ್ಪ ಕಾರ್ಯ ನಿರ್ವಹಿಸಲಿದ್ದಾರೆ. ಮಹಾಪೋಷಕರುಗಳಾಗಿ ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ…
ಮಡಿಕೇರಿ ಫೆ.28 : ಭಾರತೀಯ ರೆಡ್ ಕ್ರಾಸ್ ನ ಕೊಡಗು ಘಟಕದ ವತಿಯಿಂದ ಸುಸಜ್ಜಿತ ವೈದ್ಯಕೀಯ ತಪಾಸಣಾ ಬಸ್ ನ್ನು ಮಾ.2 ರಂದು ಲೋಕಾಪ೯ಣೆ ಮಾಡಲಾಗುತ್ತದೆ. ಮಡಿಕೇರಿಯ ಗಾಂಧಿ ಮಂಟಪದ ಮುಂಬದಿ ಬೆಳಗ್ಗೆ 9 ಗಂಟೆಗೆ ರೂ.75 ಲಕ್ಷ ಮೌಲ್ಯದ ಸುಸಜ್ಜಿತ ಮೊಬೈಲ್ ಘಟಕವನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮತ್ತು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಲೋಕಾಪ೯ಣೆ ಮಾಡಲಿದ್ದಾರೆ. ಕಾಯ೯ಕ್ರಮದಲ್ಲಿ ರೆಡ್ ಕ್ರಾಸ್ ಸಭಾಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಮಡಿಕೇರಿ ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ, ಜಿ.ಪಂ ಮುಖ್ಯ ಕಾಯ೯ನಿವ೯ಹಣಾಧಿಕಾರಿ ಡಾ.ಎನ್. ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ನಂಜುಂಡೇಗೌಡ, ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ , ವೈದ್ಯಕೀಯ ಕಾಲೇಜಿನ ಡೀನ್ ಡಾ.ಕಾಯ೯ಪ್ಪ, ರೆಡ್ ಕ್ರಾಸ್ ಕೊಡಗು ಘಟಕದ ಸಭಾಪತಿ ಬಿ.ಕೆ.ರವೀಂದ್ರ ರೈ, ಉಪಾಧ್ಯಕ್ಷ ಎಚ್.ಟಿ.ಅನಿಲ್, ಕಾಯ೯ದಶಿ೯ ಮುರಳೀಧರ್ ಪಾಲ್ಗೊಳ್ಳಲಿದ್ದಾರೆ ಎಂದು ರೆಡ್ ಕ್ರಾಸ್ ಪ್ರಕಟಣೆ ತಿಳಿಸಿದೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಕೊಡಗು ರೆಡ್ ಕ್ರಾಸ್…
ಮಡಿಕೇರಿ ಫೆ.28 : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ನಿಮಾ) ಕೊಡಗು ಜಿಲ್ಲಾ ಶಾಖೆಯು ಚೆಯ್ಯಂಡಾಣೆ ಸಮೀಪದ ಚೋಮನ ಕುಂದ್ ಬೆಟ್ಟದಲ್ಲಿ ಚಾರಣ ನಡೆಸಿ ಪರಿಸರ ಉಳಿಸುವ ಸಂದೇಶ ಫಲಕಗಳನ್ನು ಇಲಾಖೆಗೆ ಹಸ್ತಾಂತರಿಸಿತು. ಚೋಮನ ಕುಂದ್ ಅತ್ಯಂತ ಸುಂದರ ಪ್ರವಾಸಿ ತಾಣವಾಗಿದ್ದು, ಅದರ ಶಿಖರದ ಮೇಲೆ ಮದ್ಯದ ಬಾಟಲಿಗಳು, ಪ್ಲಾಸ್ಟಿಕ್ ತ್ಯಾಜ್ಯ ಗಳು ಎಸೆಯುವ ಪ್ರವೃತ್ತಿಯನ್ನು ಖಂಡಿಸಿದ ನಿಮಾ ಅಧ್ಯಕ್ಷ ಡಾ.ರಾಜಾರಾಮ್ ಈ ಕುರಿತು ಎಚ್ಚರ ಮೂಡಿಸಲು ಕಿರು ಪ್ರಯತ್ನ ಮಾಡಲಾಗಿದೆ ಎಂದರು. ಜಿಲ್ಲೆಯಲ್ಲಿ ನಶಿಸಿಹೋಗುತ್ತಿರುವ ಔಷಧ ಸಸ್ಯಗಳ ಸಂರಕ್ಷಣೆಯ ಉದ್ದೇಶದಿಂದ ವನಸ್ಪತಿ ಉದ್ಯಾನವೊಂದನ್ನು ನಿರ್ಮಿಸುವ ನಮ್ಮ ಆಶಯಕ್ಕೆ ಜಿಲ್ಲಾಡಳಿತವು ಪೂರಕವಾಗಿ ಸ್ಪಂದಿಸುತ್ತಿದೆ ಎಂದರು. ಕೊಡಗು ಜಿಲ್ಲಾ ಆರೋಗ್ಯ ಭಾರತಿ ಮತ್ತು ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಈ ಸಂಘಟನೆಗಳ ಪರವಾಗಿ ಮಾತನಾಡಿದ ಪ್ರಸಾದ್ ಗೌಡ, ನಿಮಾದ ಪರಿಸರ ರಕ್ಷಣೆಯ ಯೋಜನೆಗಳಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಕೊಡಗು ಹವ್ಯಕ ವಲಯದ ಮುಖಂಡರಾದ ನಾರಾಯಣ ಮೂರ್ತಿ ಚಾರಣಿಗರಿಗೆ…
ಮಡಿಕೇರಿ ಫೆ.28 : ಪ್ರತಿ ಮನುಷ್ಯನಿಗೆ ನೇತ್ರ ಪ್ರಮುಖವಾಗಿದ್ದು, ಎಲ್ಲರೂ ನೇತ್ರ ಸಂರಕ್ಷಣೆಗೆ ಮುಂದಾಗಬೇಕು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಕೆ.ರೋಹಿತ್ ಹೇಳಿದರು. ಪಟ್ಟಣದ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಕ್ಕಮಗಳೂರಿನ ಡೆಲ್ಟಾ ಕಣ್ಣಿನ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಆಫ್ ಸೋಮವಾರಪೇಟೆ ಆಶ್ರಯದಲ್ಲಿ ನಡೆದ ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ವರ್ಷಕೊಮ್ಮೆಯಾದರೂ ನೇತ್ರ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮುಂಜಾಗ್ರತೆ ವಹಿಸಬೇಕು ಎಂದರು. ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಕೆ.ಎನ್.ತೇಜಸ್ವಿ, ಖಜಾಂಚಿ ಜಿ.ಟಿ.ಯೋಗೇಂದ್ರ, ನಿಕಟಪೂರ್ವ ಅಧ್ಯಕ್ಷ ಸಿ.ಕೆ.ಮಲ್ಲಪ್ಪ, ನಿರ್ವಾಣಿ ಶೆಟ್ಟಿ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ.ಚಂದ್ರಾಜು, ಕಾರ್ಯದರ್ಶಿ ವೆಂಕಟೇಶ್, ಎ.ಎಸ್.ಮಹೇಶ್, ಶಾಲಾ ಮುಖ್ಯಶಿಕ್ಷಕಿ ಲಕ್ಷ್ಮಿ, ಚಿಕ್ಕಮಗಳೂರಿನ ಡೆಲ್ಟಾ ಕಣ್ಣಿನ ಕೇಂದ್ರದ ಪ್ರಮುಖರಾದ ಜ್ಯೋತಿ ಹಾಜರಿದ್ದರು.
ಚೆಟ್ಟಳ್ಳಿ ಫೆ.28 : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ರೈತರಿಗೆ ಪ್ರಯೋಜನಕಾರಿಯಾಗಿದೆ ಎಂದು ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ, ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಚೆಟ್ಟಳ್ಳಿಯ ವಿಶ್ವಗುರು ಶ್ರೀ ನರೇಂದ್ರ ಮೋದಿ ಸಹಕಾರ ಭವನದಲ್ಲಿ ನಡೆದ ನಬಾರ್ಡ್ ಪ್ರಾಯೋಜಿತ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ಹಾಗೂ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಆರ್ಥಿಕ ಸಾಕ್ಷರತೆ ಹಾಗೂ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯ ಕಾರ್ಯಗಾರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಸಹಕಾರ ಸಂಘಗಳಲ್ಲಿ ರೈತರಿಗೆ ಶೇ.40 ರಷ್ಟು ಆರ್ ಟಿಸಿಯಿಂದ ಸಾಲ ಸೌಲಭ್ಯ ಪಡೆಯುತ್ತಿದ್ದು, ಸರಕಾರದ ಸೌಲಭ್ಯಗಳನ್ನು ಪಡೆಯಲು ತೀವ್ರ ತೊಂದರೆಯಾಗುತ್ತಿದೆ ಎಂದರು. ಜಾಗದಾಖಲೆ ಸರಿಪಡಿಸಲು ರೈತರಿಂದ ಪ್ರತೀ ಏಕರೆಗೆ 25 ಸಾವಿರ ಲಂಚ ಪಡೆಯುತ್ತಿರುವುದು ವಿಷಾದನೀಯ ಎಂದ ಅವರು, ಬ್ಯಾಂಕ್ ವ್ಯವಹಾರದಲ್ಲಿ…
ನಾಪೋಕ್ಲು ಫೆ.28 : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕುರುಚಲು ಕಾಡು ಹಾಗೂ ಗಿಡಗಳು ಭಸ್ಮವಾಗಿವೆ. ಸುಮಾರು ಮೂರುವರೆ (3.5)ಎಕ್ರೆ ವ್ಯಾಪ್ತಿಯ ಕಾಲೇಜಿನ ಆವರಣ ಬೆಂಕಿಗೆ ಆಹುತಿಯಾಗಿದ್ದು, ನಷ್ಟ ಸಂಭವಿಸಿದೆ. ಅಗ್ನಿಶಾಮಕ ದಳ ಹಾಗೂ ಸಾರ್ವಜನಿಕರ ನೆರವಿನೊಂದಿಗೆ ವ್ಯಾಪಕವಾಗಿ ಹಬ್ಬಿದ ಬೆಂಕಿಯನ್ನು ಸಹಬಂದಿಗೆ ತರಲಾಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ಕಾವೇರಿ ಮಾತನಾಡಿ, ಕಾಲೇಜಿನ ಆವರಣದಲ್ಲಿ ಮೊಬಿಯಸ್ ಕಂಪನಿಯ ಸಹಯೋಗದೊಂದಿಗೆ ನೂರಕ್ಕೂ ಅಧಿಕ ಹಣ್ಣಿನ ಗಿಡಗಳನ್ನು ನೆಟ್ಟು ಸಂರಕ್ಷಿಸಲಾಗಿತ್ತು. ಆದರೆ, ಕುರುಚಲು ಕಾಡಿನೊಂದಿಗೆ ಹಣ್ಣಿನ ಗಿಡಗಳು ಅಗ್ನಿ ಗಾಹುತಿಯಾಗಿದ್ದು, ನಷ್ಟ ಸಂಭವಿಸಿದೆ ಎಂದು ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ






