ಲೇಖಕ: admin

ಮಡಿಕೇರಿ ಫೆ.27 : ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಆಸ್ತಿಯನ್ನು ಘೋಷಿಸಿಕೊಳ್ಳಬೇಕು ಎನ್ನುವ ನಿಯಮ ಜಾರಿಯಲ್ಲಿದೆ. ಇದರ ಪಾಲನೆಯೊಂದಿಗೆ 5 ವರ್ಷಗಳ ಅವಧಿ ಪೂರ್ಣಗೊಳ್ಳುವ ಸಂದರ್ಭವೂ ಎಲ್ಲಾ ಜನಪ್ರತಿನಿಧಿಗಳು ತಮ್ಮ ಆಸ್ತಿಯನ್ನು ಸಾರ್ವಜನಿಕವಾಗಿ ಘೋಷಿಸಿಕೊಳ್ಳಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ನ ಜಿಲ್ಲಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾರ್ಯಾಂಗವನ್ನು ಹಿಡಿತದಲ್ಲಿಟ್ಟು ಪಾರದರ್ಶಕ ಆಡಳಿತ ನೀಡುವ ಜವಾಬ್ದಾರಿಯನ್ನು ಹೊತ್ತಿರುವ ಶಾಸಕಾಂಗ ಇಂದು ಹಾದಿ ತಪ್ಪುತ್ತಿದೆ. ರಾಜಕೀಯ ಕ್ಷೇತ್ರ ಕಲುಷಿತವಾಗುತ್ತಿದೆ, ಇದರಿಂದ ಜನ ಬೇಸತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ಗೆಲ್ಲುವುದಕ್ಕಾಗಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು 10 ರಿಂದ 100 ಕೋಟಿ ರೂ.ಗಳವರೆಗೆ ಖರ್ಚು ಮಾಡಲು ಸಿದ್ಧರಿದ್ದಾರೆ. ನ್ಯಾಯಯುತವಾಗಿ ಬೆವರು ಸುರಿಸಿ ದುಡಿದ ಹಣವನ್ನು ಈ ರೀತಿ ಖರ್ಚು ಮಾಡಲು ಸಾಧ್ಯವೇ ಎನ್ನುವ ಪ್ರಶ್ನೆ ಮತದಾರರನ್ನು ಕಾಡುತ್ತಿದೆ. ಆದ್ದರಿಂದ ಭ್ರಷ್ಟ ವ್ಯವಸ್ಥೆಗೆ ಕಡಿವಾಣ ಹಾಕಲು ಚುನಾವಣೆಗೆ ಸ್ಪರ್ಧಿಸುವಾಗ ನೀಡಿದ ಆಸ್ತಿಯ ಮೌಲ್ಯಕ್ಕೂ…

Read More

ಮಡಿಕೇರಿ ಫೆ.27 : ಕನ್ನಡ ಸಾಹಿತ್ಯ ಜಿಲ್ಲಾ ಸಮ್ಮೇಳನವು ಮಾರ್ಚ್, 4 ಮತ್ತು 5 ರಂದು ಗೋಣಿಕೊಪ್ಪದಲ್ಲಿ ಜರುಗಲಿದ್ದು, ಎಲ್ಲಾ ಹಂತದ ಅಧಿಕಾರಿಗಳು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಶಾಸಕ  ಕೆ.ಜಿ.ಬೋಪಯ್ಯ  ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕರು ಕನ್ನಡ ನಾಡು-ನುಡಿ, ಭಾಷೆ ಅಭಿವೃದ್ಧಿಗೆ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ತೊಡಗಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕು ಎಂದು ಶಾಸಕರು ತಿಳಿಸಿದರು. ಕನ್ನಡ ಭಾಷೆ, ನಾಡು-ನುಡಿ ಎಲ್ಲೆಡೆ ಪಸರಿಸುವಲ್ಲಿ ಶ್ರಮಿಸಬೇಕು. ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು, ಇತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕರು ಮನವಿ ಮಾಡಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಕನ್ನಡ ನಾಡು ನುಡಿಗೆ ಜಿಲ್ಲಾಡಳಿತ ಸದಾ ಸಹಕಾರ ನೀಡುತ್ತದೆ. ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನಗಳಿಗೆ ಮತ್ತಷ್ಟು ಹೆಚ್ಚಿನ ಸಹಕಾರ ಜಿಲ್ಲಾಡಳಿತ ವತಿಯಿಂದ ನೀಡಲಾಗುವುದು ಎಂದರು. ಪೊನ್ನಂಪೇಟೆ ತಾಲ್ಲೂಕಿನ ವಿದ್ಯಾರ್ಥಿಗಳು ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ…

Read More

ಮಡಿಕೇರಿ ಫೆ.27 : ಜಿಲ್ಲೆಯ 542 ಮತಗಟ್ಟೆ ವ್ಯಾಪ್ತಿಯಲ್ಲಿ ಈಗಾಗಲೇ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮತ್ತು ವಿವಿ ಪ್ಯಾಟ್ ಅರಿವು ಕುರಿತು ಪ್ರಾತ್ಯಕ್ಷಿಕೆಯು ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ. ನಗರದ ಉಪ ವಿಭಾಗಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಯುವ ಮತದಾರರಿಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಹೊಸದಾಗಿ ಮತದಾರರ ಗುರುತಿನ ಚೀಟಿ ಪಡೆದವರು ಪ್ರಾತ್ಯಕ್ಷಿಕೆಯ ಅವಕಾಶವನ್ನು ಬಳಸಿಕೊಳ್ಳಬೇಕು. ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವವರೆಗೂ ಈ ಅಣಕು ಮತದಾನ ನಡೆಯಲಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು. ಈಗಾಗಲೇ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ಅಣಕು ಪ್ರದರ್ಶನವು ಜಿಲ್ಲಾಧಿಕಾರಿ ಕಚೇರಿ ಹಾಗೂ ಎರಡು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರ ಕಚೇರಿಯಲ್ಲಿ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ ಎಂದರು. ಹಾಗೆಯೇ ಮತಗಟ್ಟೆ ವ್ಯಾಪ್ತಿಯಲ್ಲಿ ನಿಗದಿತ ಅವಧಿಯಲ್ಲಿ ಅಣಕು ಪ್ರದರ್ಶನ ನಡೆಯಲಿದೆ ಎಂದರು. 18 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು. ರಾಜಕೀಯ…

Read More

ಮಡಿಕೇರಿ ಫೆ.27 : ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಸೋಮವಾರ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಿಸಲಾಯಿತು. 6 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶೈಕ್ಷಣಿಕ ಕಿಟ್ ಗಳನ್ನು, 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶ್ರಮಿಕ್ ಟ್ಯಾಬ್‍ಗಳನ್ನು ನೀಡಲಾಯಿತು. ಬಣ್ಣ ಬಳಿಯುವವರಿಗೆ, ಮರದ ಕೆಲಸಗಾರರಿಗೆ ಮತ್ತು ಪ್ಲಂಬರ್ ಗೆ ಸಂಬಂಧಪಟ್ಟ ಕಿಟ್ ಗಳನ್ನು ವಿತರಿಸಲಾಯಿತು. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ.ಯತ್ನಟ್ಟಿ ಸರ್ಕಾರದ ಸೌಲಭ್ಯವನ್ನು ಅರ್ಹರಿಗೆ ನೀಡಿದರು.

Read More

ಮಡಿಕೇರಿ ಫೆ.27 : ಸವಿತಾ ಸಮಾಜವು ಅತ್ಯಂತ ಶ್ರೀಮಂತ ಪರಂಪರೆ ಹೊಂದಿದ್ದು, ಆ ನಿಟ್ಟಿನಲ್ಲಿ ಸವಿತಾ ಮಹರ್ಷಿಯವರ ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ‘ಶ್ರೀ ಸವಿತಾ ಮಹರ್ಷಿ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶ್ರೀ ಸವಿತಾ ಮಹರ್ಷಿಯು ರಥಸಪ್ತಮಿಯ ದಿನ ಮಾಘ ಮಾಸದ ಶುಕ್ಲ ಪಕ್ಷದಲ್ಲಿ ಜನಿಸಿದರು ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು. ಸವಿತಾ ಸಮಾಜವು ಸಮಾಜದಲ್ಲಿ ವಿಶಿಷ್ಟ ಇತಿಹಾಸ ಹೊಂದಿದೆ. ಶಿವನ ದಿವ್ಯದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿ ಅವರು ಪುರಾಣ ಗ್ರಂಥದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದಾರೆ ಎಂದು ಶಾಸಕರು ಹೇಳಿದರು. ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗಪುರುಷ, ಸವಿತಾ ಮಹರ್ಷಿ ಅವರು ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಯನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ…

Read More

ಮಡಿಕೇರಿ ಫ.27  : ಇನ್ನರ್ ವೀಲ್ ಸಂಸ್ಥೆಯಿಂದ ಮಡಿಕೇರಿಯ ಮಡಿಲು ದತ್ತು ಸ್ವೀಕಾರ ಕೇಂದ್ರಕ್ಕೆ ಫ್ರಿಡ್ಜ್ ನ್ನು ಕೊಡುಗೆಯಾಗಿ ನೀಡಲಾಯಿತು. ಇನ್ನರ್ ವೀಲ್ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾಯ೯ದಶಿ೯ ಲಲಿತಾ ರಾಘವನ್, ಸದಸ್ಯೆಯರಾದ ಶಫಾಲಿ ರೈ, ಮಲ್ಲಿಗೆ ಪೈ, ಜ್ಯುಬಿ ಗಣಪತಿ, ಲತಾ ಸುಬ್ಬಯ್ಯ, ಪೂಣಿ೯ಮಾ ರವಿ, ಲಕ್ಷ್ಮಿ ಈಶ್ವರ ಭಟ್, ಲತಾ ಚಂಗಪ್ಪ, ಉಮಾಗೌರಿ, ಕನ್ನು ದೇವರಾಜ್  ಶಿಶುಗಳ ಪ್ರಯೋಜನಕ್ಕಾಗಿ ಫ್ರಿಡ್ಜ್ ಗಳನ್ನು ಕೊಡುಗೆಯಾಗಿ ಹಸ್ತಾಂತರಿಸಿದರು.

Read More

ಮಡಿಕೇರಿ ಫೆ.27 : ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಆಸ್ತಿಯನ್ನು ಘೋಷಿಸಿಕೊಳ್ಳಬೇಕು ಎನ್ನುವ ನಿಯಮ ಜಾರಿಯಲ್ಲಿದೆ. ಇದರ ಪಾಲನೆಯೊಂದಿಗೆ 5 ವರ್ಷಗಳ ಅವಧಿ ಪೂರ್ಣಗೊಳ್ಳುವ ಸಂದರ್ಭವೂ ಎಲ್ಲಾ ಜನಪ್ರತಿನಿಧಿಗಳು ತಮ್ಮ ಆಸ್ತಿಯನ್ನು ಸಾರ್ವಜನಿಕವಾಗಿ ಘೋಷಿಸಿಕೊಳ್ಳಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ನ ಜಿಲ್ಲಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾರ್ಯಾಂಗವನ್ನು ಹಿಡಿತದಲ್ಲಿಟ್ಟು ಪಾರದರ್ಶಕ ಆಡಳಿತ ನೀಡುವ ಜವಾಬ್ದಾರಿಯನ್ನು ಹೊತ್ತಿರುವ ಶಾಸಕಾಂಗ ಇಂದು ಹಾದಿ ತಪ್ಪುತ್ತಿದೆ. ರಾಜಕೀಯ ಕ್ಷೇತ್ರ ಕಲುಷಿತವಾಗುತ್ತಿದೆ, ಇದರಿಂದ ಜನ ಬೇಸತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ಗೆಲ್ಲುವುದಕ್ಕಾಗಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು 10 ರಿಂದ 100 ಕೋಟಿ ರೂ.ಗಳವರೆಗೆ ಖರ್ಚು ಮಾಡಲು ಸಿದ್ಧರಿದ್ದಾರೆ. ನ್ಯಾಯಯುತವಾಗಿ ಬೆವರು ಸುರಿಸಿ ದುಡಿದ ಹಣವನ್ನು ಈ ರೀತಿ ಖರ್ಚು ಮಾಡಲು ಸಾಧ್ಯವೇ ಎನ್ನುವ ಪ್ರಶ್ನೆ ಮತದಾರರನ್ನು ಕಾಡುತ್ತಿದೆ. ಆದ್ದರಿಂದ ಭ್ರಷ್ಟ ವ್ಯವಸ್ಥೆಗೆ ಕಡಿವಾಣ ಹಾಕಲು ಚುನಾವಣೆಗೆ ಸ್ಪರ್ಧಿಸುವಾಗ ನೀಡಿದ ಆಸ್ತಿಯ ಮೌಲ್ಯಕ್ಕೂ…

Read More

ಮಡಿಕೇರಿ ಫೆ.27 : ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮತ್ತು ಅಣಕು ಮತದಾನ ಕಾರ್ಯದ ವೇಳಾಪಟ್ಟಿ ವಿವರ ಇಂತಿದೆ. ಮಾರ್ಚ್, 3 ರಿಂದ 06 ರವರೆಗೆ ಮಲ್ಲಿಕಾರ್ಜುನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊತ್ನಳ್ಳಿ, ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಳ್ಳಿ ಅಂಗನವಾಡಿ ಕೇಂದ್ರ, ಹರಗ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಶಾಂತಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ತಾಳ್ತಾರೆಶೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಬ್ಬಿಮಠ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ತೋಳೂರುಶೆಟ್ಟಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಕೂತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ದೊಡ್ಡತೋಳೂರು ಮತ್ತು ಚಿಕ್ಕತೋಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ನಡೆಯಲಿದೆ. ಮಾರ್ಚ್, 07 ರಿಂದ 09 ರವರೆಗೆ ಯಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಸೋಮವಾರಪೇಟೆ(ಎಲ್‍ಡಬ್ಲ್ಯು) ಒಎಲ್‍ವಿ ಕಾನ್ವೆಂಟ್, ಸೋಮವಾರಪೇಟೆ ಆರ್‍ಡಬ್ಲ್ಯು ಒಎಲ್‍ವಿ…

Read More

ಮಡಿಕೇರಿ ಫೆ.27 :  ಕಾರ್ಮಿಕ ಇಲಾಖೆ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ  10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಟ್ಯಾಬ್, ಸ್ಕೂಲ್ ಕಿಟ್ ಹಾಗೂ ಕಟ್ಟಡ ಕಾರ್ಮಿಕರಿಗೆ ಪೈಂಟಿಂಗ್ ಕಿಟ್, ಕಾರ್ಪೆಂಟರ್ ಕಿಟ್  ಅನ್ನು ಶಾಸಕ ಕೆ.ಜಿ.ಬೋಪಯ್ಯ ವಿತರಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಇಲಾಖೆ ಸಿಬ್ಬಂದಿಗಳು, ಫಲಾನುಭವಿಗಳು ಹಾಜರಿದ್ದರು.

Read More

ಮಡಿಕೇರಿ ಫೆ.27 :  ಚಿತ್ರದುರ್ಗ ನವೋದಯ ಪ್ರಕಾಶದ ವತಿಯಿಂದ ನಡೆಸಲಾದ ಸಾಮಾನ್ಯ ಜ್ಞಾನ ಪರೀಕ್ಷೆ, ಗಣಿತ ಪ್ರತಿಭಾನ್ವೇಷಣಾ ಪರೀಕ್ಷೆ, ಹಾಗೂ ಚಿತ್ರಕಲಾ ಪರೀಕ್ಷೆಗಳಲ್ಲಿ  ಕೊಟ್ಟೂರು-ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಎಂ.ಪಿ.ಧನ್ವಿ ರಾಷ್ಟ್ರಮಟ್ಟದ ಶ್ರೇಣಿಯನ್ನುಗಳಿಸಿ ಸಾಧನೆ ಮಾಡಿದ್ದು, ಹನ್ಸಿಕಾ ರಾಜ್ಯಮಟ್ಟದ ಶ್ರೇಣಿಯನ್ನು ಗಳಿಸಿದ್ದಾಳೆ. ಗಣಿತ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ  ಕೆ.ಕೆ.ಇಂಚರ ರಾಜ್ಯಮಟ್ಟದ ಶ್ರೇಣಿಗಳಿಸಿದ್ದು, ಚಿತ್ರಕಲಾ ಸ್ಪರ್ಧೆಯಲ್ಲಿ ಕೆ.ಎಸ್.ವೃಷ್ಟಿ ರಾಷ್ಟ್ರಮಟ್ಟದ ಶ್ರೇಣಿಯನ್ನು ಗಳಿಸಿದ್ದಾಳೆ. ಎಂ.ಎ.ಜನನಿ ರಾಜ್ಯಮಟ್ಟದ ಶ್ರೇಣಿಯನ್ನು ಗಳಿಸಿ ಸಾಧನೆಯನ್ನು ಮಾಡಿದ್ದಾರೆ. ಮಾರ್ಗದರ್ಶಕರಾಗಿ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶಿಕ್ಷಕಿ ಜಸ್ಮಿ ಹಾಗೂ ಟೀನಾ ಕಾರ್ಯನಿರ್ವಹಿಸಿದ್ದಾರೆ.  

Read More