ಲೇಖಕ: admin

ವಿರಾಜಪೇಟೆ ಫೆ.27 :  ಕೇಂದ್ರ ಮತ್ತು ರಾಜ್ಯ ಸರಕಾರ ಈ ಬಾರಿಯ ಬಜೆಟ್‍ನಲ್ಲಿ ಕೊಡಗನ್ನು ಕಡೆಗಣಿಸಿ ಕಾರ್ಮಿಕರಿಗೆ ಮತ್ತು ರೈತರಿಗೆ ಪ್ರತ್ಯೇಕ ಯೋಜನೆಗಳನ್ನು ಘೋಷಿಸಿಲ್ಲ ಎಂದು ಭಾರತ ಕಮ್ಯುನಿಸ್ಟ್ ಪಕ್ಷ [ಮಾರ್ಕ್ಸ್‌ವಾದಿ]ದ ವತಿಯಿಂದ  ವಿರಾಜಪೇಟೆ ಗಡಿಯಾರ ಕಂಬದ ಬಳಿ ಜನಾಂದೋಲನ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಪಕ್ಷದ ಪ್ರಮುಖರಾದ ಡಾ. ಐ.ಆರ್.ದುರ್ಗಾಪ್ರಸಾದ್ ಮಾತನಾಡಿ, ಕೊಡಗಿನಲ್ಲಿ ಕೋವಿಡ್-19 ನಂತರ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಕೇಂದ್ರ ಸರಕಾರದ ಹಣಕಾಸು ಮಂತ್ರಿ ಮತ್ತು ರಾಜ್ಯದ ಮುಖ್ಯ ಮಂತ್ರಿಗಳು ಕೊಡಗನ್ನು ಕಡೆಗಣಿಸಿದ್ದಾರೆ. ಕೊಡಗು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಕೃಷಿಕರು ಬೆಳೆದ ಬೆಳೆಗೆ ನ್ಯಾಯವಾದ ಬೆಲೆ ಸಿಗುತ್ತಿಲ್ಲ. ಆದಾಯ ಕಡಿಮೆ, ಖರ್ಚು ಜಾಸ್ತಿಯಾಗುತ್ತಿದೆ. ಬಜೆಟ್‍ನಲ್ಲಿ ಕಳೆದ ಭಾರಿಗಿಂತ ಕಡಿಮೆ ಅನುದಾನ ನೀಡಿದ್ದಾರೆ. ಕಾರ್ಮಿಕರ ಪರವಾದ ಯಾವುದೆ ಯೋಜನೆಗಳೆ ಇಲ್ಲ. ಈಗಾಗಲೇ 18 ಸಾವಿರ ಜನರನ್ನು ಕಂಪೆನಿ ಉದ್ಯೋಗದಿಂದ ಕೈಬಿಡಲಾಗಿದೆ ಈ ಹಿನ್ನಲೆಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಹೋರಾಟದ ಅನಿವಾರ್ಯವಿದೆ ಎಂದು ಅಭಿಪ್ರಾಯಪಟ್ಟರು. ಸಿಪಿಐ[ಎಂ] ಜಿಲ್ಲಾ ಸಮಿತಿಯ ಎ.ಸಿ.ಸಾಬು ಮಾತನಾಡಿ ಬಜೆಟ್‍ನಲ್ಲಿ…

Read More

ಮೂರ್ನಾಡು ಫೆ.27 : ಬಂಟರ ಸಂಘದ ಏಳಿಗೆಗಾಗಿ ಶ್ರಮಿಸಲು ಬದ್ಧನಾಗಿದ್ದು, ಒಳ್ಳೆಯ ಕಾರ್ಯದ ವಿಚಾರದಲ್ಲಿ ಯಾರೂ ತೊಂದರೆ ಕೊಡಬಾರದು ಎಂದು ಜಿಲ್ಲಾಧ್ಯಕ್ಷ ಬಿ.ಡಿ. ಜಗದೀಶ್ ರೈ ಅಭಿಪ್ರಾಯಪಟ್ಟರು. ಮೂರ್ನಾಡು ಹೋಬಳಿ ಬಂಟರ ಸಂಘದ ವತಿಯಿಂದ ಎರಡು ದಿನ ಕಾಲ ಕಾಲೇಜು ಮೈದಾನದಲ್ಲಿ ನಡೆದ ‘ಸ್ವಜಾತಿ ಬಂಧುಗಳ ಸಮ್ಮಿಲನ-2023’ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಂಟರ ಸಂಘ ಹಾಗೂ ಸಮುದಾಯದ ಅಭಿವೃದ್ಧಿ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಹಾಕಿಕೊಕೊಳ್ಳಲಾಗಿದೆ. ಮುಂದಿನ ದಿನದಲ್ಲಿ ಒಂದೊಂದಾಗಿ ಕಾರ್ಯರೂಪಕ್ಕೆ ತರಲಾಗುವುದು. ಮುಖ್ಯವಾಗಿ ಬಂಟರ ಭವನ ನಿರ್ಮಾಣ ಕಾರ್ಯವನ್ನು ಶೀಘ್ರದಲ್ಲೇ ಆರಂಭಿಸಬೇಕೆಂಬ ಇರಾದೆ ಇದೆ. ಯಾರು ಕೂಡಾ ವಿನಾ ಕಾರಣ ಅಡ್ಡಗಾಲು ಹಾಕಬಾರದೆಂದು ಮನವಿ ಮಾಡಿದರು. ಜಿಲ್ಲಾ ಬಂಟರ ಶಾಂತಿ ಧಾಮಕ್ಕೆ ಸುಂದರ ರೂಪ ನೀಡಲಾಗಿದೆ. ಮುಂದೆ ಪ್ರತಿಭಾ ಪುರಸ್ಕಾರ, ಸಮುದಾಯದ ಸಾಧಕರನ್ನು ಗುರುತಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಸಮುದಾಯದವರ ಏಳಿಗೆಗಾಗಿ ಬಂಟರ ಸಂಘ ಸದಾ ಬೆಂಬಲವಾಗಿರುತ್ತದೆ. ಎಲ್ಲಾ ಹೋಬಳಿಯಲ್ಲೂ ಸಂಘದ ಘಟಕ ಆರಂಭಿಸಿ, ಕಾರ್ಯಚಟುವಟಿಕೆಯಿಂದ ಕೂಡಿರುವಂತೆ ಕಾಳಜಿ ವಹಿಸಬೇಕು. ಸಮುದಾಯದ…

Read More

ಮೂರ್ನಾಡು ಫೆ.27 : ಮೂರ್ನಾಡು ಹೋಬಳಿ ಬಂಟರ ಸಂಘದ ವತಿಯಿಂದ ನಡೆದ ‘ಸ್ವಜಾತಿ ಬಂಧುಗಳ ಸಮ್ಮಿಲನ-2023’ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಡಿಕೇರಿಯ ಚಕ್ರವರ್ತಿ ಬಂಟ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ನಗರದ ಕಾಲೇಜು ಮೈದಾನದಲ್ಲಿ ನಡೆದ ಪೈನಲ್ ಪಂದ್ಯದಲ್ಲಿ ಎನ್.ಪಿ. ಬಂಟ್ ವಾರಿಯರ್ಸ್ ಕುಂಜಿಲಗೇರಿ ತಂಡವನ್ನು ಮಣಿಸಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಚಕ್ರವರ್ತಿ ತಂಡ ನಿಗದಿತ 6 ಓವರ್‍ಗೆ ನಾಲ್ಕು ವಿಕೆಟ್ ಕಳೆದುಕೊಂಡು 59 ರನ್ ಗಳಿಸಿತು. 60 ರನ್ ಗುರಿ ಬೆನ್ನತ್ತಿದ ಎನ್.ಪಿ. ಬಂಟ್ ವಾರಿಯರ್ಸ್ ಕುಂಜಿಲಗೇರಿ ತಂಡ 6 ಓವರ್‍ಗೆ 32 ರನ್‍ಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡು ರನ್ನರಪ್ ಪ್ರಶಸ್ತಿಗೆ ತೃಪ್ತಿಪಟ್ಟಿತು. ಸೆಮಿ ಫೈನಲ್‍ನಲ್ಲಿ ಟೀಂ ವಿರಾಟ್ ತಂಡವನ್ನು 25 ರನ್ ಅಂತರದಿಂದ ಮಣಿಸಿ ಚಕ್ರವರ್ತಿ ಬಂಟ್ಸ್ ಮಡಿಕೇರಿ ಫೈನಲ್‍ಗೆ ಅರ್ಹತೆ ಪಡೆಯಿತು. ಮತ್ತೊಂದು ಸೆಮಿಫೈನಲ್‍ನಲ್ಲಿ ಯಂಗ್ ಬಂಟ್ ಪ್ಯಾಂಥರ್ಸ್ ತಂಡವನ್ನು 6 ವಿಕೆಟ್‍ನಿಂದ ಸೋಲಿಸಿ ಎನ್.ಪಿ. ಬಂಟ್ ವಾರಿಯರ್ಸ್ ಅಂತಿಮ ಪಂದ್ಯಕ್ಕೆ ಅವಕಾಶ ಗಿಟ್ಟಿಸಿತು.…

Read More

ಸುಂಟಿಕೊಪ್ಪ ಫೆ.27 : ಗ್ರಾಮೀಣ ಪ್ರತಿಭೆಗಳು ಕ್ರೀಡಾಕೂಟವನ್ನು ಸದುಪಯೋಗಪಡಿಸಿಕೊಂಡಾಗ ಮಾತ್ರ ಕಾರ್ಯಕ್ರಮದ ಯಶಸ್ವಿಗೆ ದುಡಿದವರ ಶ್ರಮ ಸಾರ್ಥವಾಗುತ್ತದೆ ಎಂದು ನಾಕೂರು ಕಾನ್‍ಬೈಲ್ ಗ್ರಾ.ಪಂ ಅಧ್ಯಕ್ಷ ಮಂದೋಡಿ ಸಿ.ಜಗನ್ನಾಥ ತಿಳಿಸಿದರು. ನಾಕೂರು ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ವತಿಯಿಂದ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 23ನೇ ಕ್ರೀಡಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಕ್ರೀಡಾಕೂಟಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗಿದ್ದು, ಗ್ರಾಮೀಣ ಪ್ರತಿಭೆಗಳನ್ನು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದರು. ಕ್ರೀಡಾಪಟುಗಳಿಗೆ ಗ್ರಾ.ಪಂ ವತಿಯಿಂದ ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರವನ್ನು ನೀಡಿದ್ದು, ಗ್ರಾ.ಪಂ ಅನುದಾನದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಎಲ್ಲಿಯೂ ಕೂಡ ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿ.ಪಿ.ಶಶಿಧರ್, 23 ವರ್ಷಗಳಿಂದ ಯುವಕ ಸಂಘ ಕ್ರೀಡಾಕೂಟವನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ನಾಯಕತ್ವದ ಗುಣ ಸಂಘಟನೆಗೆ ಬಲ…

Read More

ಮಡಿಕೇರಿ ಫೆ.27 : ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ, ಆದರೆ ಪಕ್ಷ ಯಾರಿಗೆ ಸ್ಪರ್ಧಿಸಲು ಅವಕಾಶ ನೀಡಿದರೂ ಶಿಸ್ತಿನ ಸಿಪಾಯಿಯಂತೆ ಕಾಂಗ್ರೆಸ್ ಗೆಲುವಿಗಾಗಿ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ನಾನು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತೆಯಾಗಿ ಕಳೆದ 39 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ಇದರ ಪರಿಣಾಮವಾಗಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ವಿಧಾನ ಪರಿಷತ್ ಗೂ ನನ್ನನ್ನು ಕಳುಹಿಸಿಕೊಡಲಾಗಿದೆ. ಪ್ರಸ್ತುತ ವಿಧಾನಸಭೆಗೆ ನಾನೂ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದರು. ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿರುವುದರಿಂದ ಯಾರೇ ಅಭ್ಯರ್ಥಿಯಾದರು ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

Read More

ಮಡಿಕೇರಿ ಫೆ.27 : ಸರ್ಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕೊಡಗು ಜಿಲ್ಲೆಯಲ್ಲಿ ಹುಲಿಗಳ ಉಪಟಳ ಹೆಚ್ಚಾಗುತ್ತಿದೆ. ಕಳೆದ 2 ವರ್ಷಗಳಲ್ಲಿ 6 ಮಾನವಜೀವ ಹಾನಿ ಮತ್ತು ಅನೇಕ ಜಾನುವಾರುಗಳು ಸಾವನ್ನಪ್ಪಿದ್ದರೂ ಎಚ್ಚೆತ್ತುಕೊಳ್ಳದ ಸರ್ಕಾರ ಕೊಡಗಿನ ಜನರ ಜೀವಕ್ಕೆ ಬೆಲೆ ಇಲ್ಲದಂತೆ ವರ್ತಿಸುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಡಾನೆಗಳು ತೋಟಗಳನ್ನೇ ಆವಾಸ ಸ್ಥಾನ ಮಾಡಿಕೊಂಡಿದ್ದರೆ, ಹುಲಿಗಳು ಮನುಷ್ಯರನ್ನೇ ಆಹಾರ ಮಾಡಿಕೊಳ್ಳುತ್ತಿವೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ಇದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ದುರಂತ. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆಗೆ ಕೋಟ್ಯಾಂತರ ಅನುದಾನ ಬರುತ್ತದೆ. ಆದರೆ ವನ್ಯಜೀವಿಗಳು ಆಹಾರವನ್ನು ಅರಸಿ ಜನವಾಸದ ಪ್ರದೇಶಗಳಿಗೆ ದಾಳಿ ಇಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ. ಕಳೆದ 25 ವರ್ಷಗಳಿಂದ ಬಿಜೆಪಿಯವರೇ ಶಾಸಕರುಗಳಾಗಿದ್ದಾರೆ. ಸಂಸದರು ಬಿಜೆಪಿಯವರೇ ಆಗಿದ್ದಾರೆ, ಆದರೆ ಕೊಡಗನ್ನು ಕಾಡುತ್ತಿರುವ…

Read More

ಮಡಿಕೇರಿ ಫೆ.27 :  ಹೊದ್ದೂರು ಗ್ರಾ.ಪಂ ಗೆ ಒಳಪಡುವ ಪಾಲೆಮಾಡು ಗ್ರಾಮಕ್ಕೆ ಸಮಪರ್ಕವಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ಆರೋಪಿಸಿ ಬಹುಜನ ಕಾರ್ಮಿಕ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಮೂರ್ನಾಡಿನಲ್ಲಿ ಪ್ರತಿಭಟನೆ ನಡೆಸಿದರು. ಮೂರ್ನಾಡಿನ ಸೆಸ್ಕ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಜಮಾಯಿಸಿದ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಬೇಡಿಕೆಯ ಈಡೇರಿಕೆಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ  ಸಂಘದ ಸದ್ಯಸ  ಮೊಣಪ್ಪ, ಈ ಭಾಗದಲ್ಲಿ 300ಕ್ಕೂ ಹೆಚ್ಚು ಕುಟುಂಬಗಳು ನೆಲೆಸಿದ್ದು, ದಿನವಿಡೀ ವಿದ್ಯುತ್ ಕಡಿತದಿಂದ ಶಾಲಾ ವಿದ್ಯಾರ್ಥಿಗಳಿಗೆ  ಸಮಸ್ಯೆ ಎದುರಾಗಿದೆ. ಕುಡಿಯುವ ನೀರು ಸರಬರಾಜಿಗೆ ಕೂಡ ತೊಂದರೆಯಾಗುತ್ತಿದ್ದು, ಜನರು ಸಂಕಷ್ಟದ ಬದುಕನ್ನು ಎದುರಿಸುವಂತಾಗಿದೆ ಎಂದರು. ತಕ್ಷಣವೇ ವಿದ್ಯುತ್ ಕಡಿತ  ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದರು.  ಹೊದ್ದೂರು  ಗ್ರಾ.ಪಂ ಅಧ್ಯಕ್ಷರಾದ ಕುಸುಮವತಿ, ಪ್ರಮುಖರಾದ ಆನಂದ ಮತ್ತಿತರು ಪಾಲ್ಗೊಂಡಿದ್ದರು. ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಬೇಡಿಕೆಯ  ಮನವಿ ಪತ್ರವನ್ನು  ಸೆಸ್ಕ್ ಅಭಿಯಂತರ ಪ್ರಕಾಶ್ ಅವರಿಗೆ ಸಲ್ಲಿಸಿದರು.  

Read More

ಮಡಿಕೇರಿ ಫೆ.27 : ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್ ಮೌರ್ಯ ಆಯ್ಕೆಯಾಗಿದ್ದಾರೆ. ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರ ಆದೇಶದ ಮೇರೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಜವಾಬ್ದಾರಿ ವಹಿಸುವಂತೆ ಕೆ.ಎಂ.ಗಣೇಶ್ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.27 : ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವಗೆ ಕಾವೇರಿ ಎಕ್ಸ್‌ಪ್ರೆಸ್ ಹೈವ ಎಂದು ಹೆಸರಿಡಲು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಮನವಿ ಪತ್ರ ಬರೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು, ಮೈಸೂರು, ಮಡಿಕೇರಿಗೆ ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಾಗಿದೆ. ಈಗಾಗಲೇ ಮೈಸೂರು, ಬೆಂಗಳೂರು ತಲುಪುವ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ. ಕಾವೇರಿ ನದಿಯು ಕೊಡಗಿನಲ್ಲಿ ಹುಟ್ಟಿ ತಮಿಳುನಾಡು ಸೇರಿದಂತೆ ಮೈಸೂರು ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸುತ್ತಿದೆ. ಕೊಡಗು ಸೇರಿದಂತೆ ಈ ಭಾಗದ ಎಲ್ಲಾ ಜನರಿಗೆ ಕಾವೇರಿ ನದಿಯು ಕಾವೇರಿ ಮಾತೆ ಎಂದು ಪೂಜ್ಯ ಭಾವನೆ ಇರುತ್ತದೆ. ಹಾಗಾಗಿ ಜನರ ಪೂಜ್ಯ ಭಾವನೆ ಗುರುತಿಸಲು ಕನ್ನಡ ನಾಡಿಗೆ ಅನ್ನದಾತೆಯಾಗಿರುವ ಕೊಡಗಿನ ಕಾವೇರಿ ಮಾತೆಯ ಹೆಸರನ್ನು ಹೆದ್ದಾರಿಗೆ ಇಡಬೇಕೆಂದು ಮನವಿಯಲ್ಲಿ ಕೋರಿದ್ದಾರೆ.

Read More

ಚೆಯ್ಯಂಡಾಣೆ ಫೆ.27 : ನರಿಯಂದಡದ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಚೇಲಾವರದ ಶ್ರೀನಿವಾಸ ಸ್ವಸಹಾಯ ಸಂಘದ ಮಹಿಳೆಯರು ಸ್ಥಳೀಯ ಗ್ರಾಮಸ್ಥರ ಸಹಕಾರದೊಂದಿಗೆ  ಸ್ವಚ್ಛತಾ ಶ್ರಮದಾನ ನಡೆಸಿದರು. ನರಿಯಂದಡ ಗ್ರಾ.ಪಂ ಗೆ ಒಳಪಟ್ಟ ಚೇಲಾವರ ಗ್ರಾಮದ ಪೊನ್ನೋಲ, ಪುದಿಯೋದಿ ದೇವಾಲಯಕ್ಕೆ ತೆರಳುವ ರಸ್ತೆ  ಬದಿಯ ಕಾಡುಗಳನ್ನು  ಕಡಿದು ಸ್ವಚ್ಛಗೊಳಿಸದರು. ಈ ಸಂದರ್ಭ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳಾದ  ಬಿ.ಕೆ.ವಸಂತಿ, ಪಿ.ಎನ್.ಜಯ ಮಣಿ , ಎಚ್.ಎಂ.ಗಾಯತ್ರಿ ,ಎಚ್.ಎ.ಬೆಳ್ಳಿಯಮ್ಮ , ಸವಿತಾ, ಸತೀಶ್, ರಮೇಶ್, ಲೋಕೇಶ್, ಮೈಕಲ್,  ಗ್ರಾಮಸ್ಥರು ಮತಿತ್ತರರು ಇದ್ದರು. ವರದಿ : ಅಶ್ರಫ್

Read More