ಸೋಮವಾರಪೇಟೆ NEWS DESK ಮಾ.13 : ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಸರಕಾರ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹಿಸಿದ್ದಾರೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ನಾಡಿನ ಮೊದಲ ಮಹಿಳಾ ಕವಯತ್ರಿ ಅಕ್ಕಮಹಾದೇವಿಯವರು ಈ ಕನ್ನಡ ನಾಡಿನ ಹೆಮ್ಮೆ. ಇವರುಗಳು 12ನೆ ಶತಮಾನದಲ್ಲಿಯೇ ಸಮಾಜದಲ್ಲಿ ಸುಧಾರಣೆ ತರಲು ಪ್ರಯತ್ನಿಸುವುದರೊಂದಿಗೆ ಈ ರಾಷ್ಟ್ರಕ್ಕೆ ಪ್ರಜಾಪ್ರಭುತ್ವದ ಅಡಿಪಾಯ ಹಾಕಿಕೊಟ್ಟ ಮಹಾನಿಯರು ಅಂತಹವರ ಬಗ್ಗೆ ರಮಾಕಾಂತ್ ಎಂಬ ಕಿಡಿಗೇಡಿಯೊಬ್ಬ ಅಸಹ್ಯ ಹಾಗೂ ಆಕ್ಷೇಪಾರ್ಹ ಪದಗಳನ್ನು ಬಳಸಿ ಪೋಸ್ಟ್ ಹಾಕಿರುವುದು ನಾಗರೀಕ ಸಮಾಜ ಸಹಿಸಲು ಸಾಧ್ಯವಿಲ್ಲಾ ಎಂದು ಮಹೇಶ್ ಕೆಡಿಕಾರಿದ್ದಾರೆ, ಆದ್ದರಿಂದ ಸರ್ಕಾರ ಈ ಕಿಡಿಗೇಡಿಯನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಲೇಖಕ: admin
ಮಡಿಕೇರಿ ಮಾ.12 NEWS DESK : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಸಾಲು ಸಾಲು ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ ರಾಜ್ಯ ಸರಕಾರ ಯಾವುದೇ ತುರ್ತು ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದೆ. ಸರಕಾರದ ಈ ನಿರ್ಲಕ್ಷ್ಯ ಮನೋಭಾವವನ್ನು ಸಹಿಸಲು ಸಾಧ್ಯವಿಲ್ಲವೆಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಮೂರು ಅಮಾಯಕ ಜೀವಗಳು ಕಾಡಾನೆ ದಾಳಿಗೆ ಬಲಿಯಾಗಿವೆ. ಇತ್ತೀಚೆಗಷ್ಟೇ ವಿದ್ಯಾರ್ಥಿನಿ ಹಾಗೂ ಮಹಿಳೆಯೋರ್ವರು ಮೃತಪಟ್ಟಿದ್ದು, ಇದೀಗ ಬೆಳೆಗಾರ ಗಣಪತಿ ಅವರು ಕಾಡಾನೆ ದಾಳಿಗೆ ತುತ್ತಾಗಿದ್ದಾರೆ. ಈ ಬೆಳವಣಿಗೆ ಅತ್ಯಂತ ದು:ಖಕರವಾಗಿದ್ದು, ಸರಕಾರ ಸಮಸ್ಯೆಯ ಗಂಭೀರತೆಯನ್ನು ಅರಿಯದೆ ಕೇವಲ ಪರಿಹಾದ ಚೆಕ್ ನೀಡಿ ಕೈತೊಳೆದುಕೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ. ಅರಣ್ಯ ಸಚಿವರು ಕಾಡಾನೆ ಉಪಟಳ ತಡೆಗೆ ಸಂಬಂಧಿಸಿದಂತೆ ಕೇವಲ ಭರವಸೆಗಳನ್ನು ನೀಡುತ್ತಿದ್ದಾರೆಯೇ ಹೊರತು ಯಾವುದೇ ಯೋಜನೆಗಳು ಕಾರ್ಯಗತಗೊಳ್ಳುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ವನ್ಯಜೀವಿಗಳ ದಾಳಿ…
ಕುಶಾಲನಗರ ಮಾ.11 NEWS DESK : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಯಾವುದೇ ರೀತಿಯಲ್ಲಿ ವಯಸ್ಸಿನ ಮಿತಿ ಇರುವುದಿಲ್ಲ ಎಂದು ಪತ್ರಕರ್ತೆ ಹಾಗೂ ಕೊಡಗು ಜಿಲ್ಲಾ, ಸೌಂದರ್ಯವರ್ಧಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ನಡೆದ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಕೇವಲ ಪ್ರಮಾಣ ಪತ್ರಕ್ಕೆ ಮಾತ್ರ ಸೀಮಿತವಾಗಬಾರದು. ವಯಸ್ಸಿನ ಅಂತರ ಗಮನಿಸದೇ, ಭ್ರಮೆಗಳನ್ನು ತೊರೆದು ಸ್ವಾವಲಂಬಿ ಬದುಕು ಕಾಣುವುದರೊಂದಿಗೆ ಪ್ರತಿಯೊಬ್ಬರೂ ತಮ್ಮನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭ ಮಾತನಾಡಿದ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ, ಮಹಿಳೆಯ ಸಾಮರ್ಥ್ಯ ಪ್ರತಿಭೆ ಕೇವಲ ನಾಲ್ಕು ಗೋಡೆಗಳಿಗೆ ಸೀಮಿತಗೊಳ್ಳಬಾರದು. ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಉತ್ತಮವಾಗಿ ಕುಟುಂಬ ನಿರ್ವಹಣೆ ಮಾಡುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ…
ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ ನ್ಯಾಯ ದೊರಕಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ತಿಳಿಸಿದ್ದಾರೆ. ಕುಶಾಲನಗರದಲ್ಲಿ ಕುಶಾಲನಗರದ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ನೂತನವಾಗಿ ಸ್ಥಾಪನೆಗೊಂಡಿರುವ ತಾಲೂಕು ಕಾನೂನು ಸೇವಾ ಸಮಿತಿಯ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಕೆಲಸ ಕಾರ್ಯಗಳ ಒತ್ತಡ ಕಡಿಮೆಯಾಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು ಈ ಸಂಬಂಧ ಪ್ರಕರಣಗಳ ಇತ್ಯರ್ಥಕ್ಕೆ ವಕೀಲರುಗಳ ಸಹಾಯ ಪ್ರಮುಖವಾಗಿದೆ ಎಂದರು. ಯಾವುದೇ ವಿಷಯಗಳು ಭಾಷಣಕ್ಕೆ ಮಾತ್ರ ಸೀಮಿತ ಆಗಬಾರದು ಎಂದ ನ್ಯಾಯಾಧೀಶರು, ಅರಿವಿನ ಕೊರತೆಯಿಂದ ನೊಂದವರಿಗೆ ಸೌಲಭ್ಯ ಲಭಿಸಲು ಅಸಾಧ್ಯ ಎಂದು ಹೇಳಿದರು. ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ರಾಜಿ ತೀರ್ಮಾನಕ್ಕೆ ಅಥವಾ…
ಮಡಿಕೇರಿ ಮಾ.11 NEWS DESK : ಅರ್ಬುದ ಕಾಯಿಲೆಯಿಂದ ಬಳಲುತ್ತಿರುವ ಅರೆಕಾಡಿನ ವಸಂತ ಎಂಬವರ ಚಿಕಿತ್ಸೆಗೆ ಮಾನವೀಯ ಸ್ನೇಹಿತರ ಒಕ್ಕೂಟದಿಂದ ಹತ್ತು ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಯಿತು. ಒಕ್ಕೂಟದ ಅಡ್ಮಿನ್ ಹನೀಫ್ ಸೋನಾ ಅವರ ಮುಂದಾಳತ್ವದಲ್ಲಿ ಮಡಿಕೇರಿಯಲ್ಲಿ ನಡೆದ ಕಾರುಣ್ಯ ಕಾರ್ಯಕ್ರಮದಲ್ಲಿ ಒಕ್ಕೂಟದ ಪ್ರತಿನಿಧಿ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ ಅವರು ಫಲಾನುಭವಿಯ ಪತ್ನಿ ಶಿವರಂಜಿನಿ ಅವರಿಗೆ ಒಕ್ಕೂಟದ ವತಿಯಿಂದ ಹತ್ತು ಸಾವಿರ ಮೊತ್ತದ ಚೆಕ್ಕನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅನಿಲ್, ಮಾನವೀಯ ಸ್ನೇಹಿತರ ಒಕ್ಕೂಟವು ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರಲ್ಲದೆ, ಫಲಾನುಭವಿ ವಸಂತ್ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಶುಭ ಹಾರೈಸಿದರು. ಒಕ್ಕೂಟದ ಪ್ರತಿನಿಧಿಗಳಾದ ಸುರೇಶ್ ಬಿಳಿಗೇರಿ, ಸಂತೋಷ್ ಕೆ. ಟಿ., ಒಕ್ಕೂಟದ ಮಾಜಿ ಪ್ರತಿನಿಧಿ ಪ್ರಭಾಕರ್ ನಾಪೋಕ್ಲು, ಪತ್ರಕರ್ತ ವಿಶ್ವಗುಡ್ಡೆ ಮನೆ ಮುಂತಾದವರು ಹಾಜರಿದ್ದರು.
ಗೋಣಿಕೊಪ್ಪ ಮಾ.11 NEWS DESK : ಮಹಿಳೆಯರು ಸ್ವಾವಲಂಬಿಗಳಾಗುವ ಮೂಲಕ ಸಮಾಜದಲ್ಲಿ ಆದರ್ಶದ ಬದುಕು ಕಟ್ಟಬೇಕು ಎಂದು ಸಮಾಜ ಸೇವಕಿ ಚಾಂದಿನಿ ಅರುಣ್ ಮಾಚಯ್ಯ ಕರೆ ನೀಡಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕದಳಿ ವೇದಿಕೆ ಹಾಗೂ ಮಾಯಮುಡಿ ಗ್ರಾಮದ ಶ್ರೀ ಗಣೇಶ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸಂಯುಕ್ತಾಶ್ರಯದಲ್ಲಿ ಮಾಯಮುಡಿಯ ಅಂಗನವಾಡಿ ಆವರಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ದೇಶ ಸ್ವಾತಂತ್ರ್ಯ ಗಳಿಸಿ ಎಂಭತ್ತು ವರ್ಷಗಳಾಗುತ್ತಾ ಬಂದರೂ ಕೂಡ ಮಹಿಳೆ ಅಬಲೆಯಲ್ಲ – ಸಬಲಳು. ಸಮಾಜದ ನಾನಾ ಸ್ತರಗಳಲ್ಲಿ ಪುರುಷನಿಗಿಂತಲೂ ಒಂದು ಹೆಜ್ಜೆ ಮುಂದೆ ತನ್ನ ಶಕ್ತಿ, ಸಹನೆ, ಸಾಮರ್ಥ್ಯ ಗಳನ್ನು ಸಾಬೀತು ಪಡಿಸುತ್ತಿರುವ ದಿಟ್ಟ ಮಹಿಳೆ. ತೊಟ್ಟಿಲು ತೂಗುವ ಮಹಿಳೆಯ ಕೈ ಆಕಾಶದಲ್ಲಿ ವಿಮಾನ ಹಾರಿಸುವ, ಗಗನ ಯಾತ್ರೆ ನಡೆಸುವ ಮಹತ್ತರ ಪಾತ್ರಗಳಲ್ಲಿ ಮಂಚೂಣಿಯಲ್ಲಿದ್ದಾಳೆ ಎಂದರು. ಮತ್ತೋರ್ವ ಅತಿಥಿ ಟಾಟು ಮೊಣ್ಣಪ್ಪ ಮಾತನಾಡಿ, ಮಹಿಳೆಯರಿಲ್ಲದ ಕುಟುಂಬಗಳನ್ನು ಊಹಿಸಲು ಅಸಾಧ್ಯ. ಕುಟುಂಬದ ಬೆಳಕು…
ಮಡಿಕೇರಿ ಮಾ.11 NEWS DESK : ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಸಾಯಿ ಹಾಕಿ ತರಬೇತಿ ಕೇಂದ್ರದ ಸಹಯೋಗದಲ್ಲಿ ಫಿಟ್ ಇಂಡಿಯಾ ಪರಿಕಲ್ಪನೆಯೊಂದಿಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಮಡಿಕೇರಿ ತಾಲೂಕಿನ ಐದು ಕಾಲೇಜುಗಳ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಪಂದ್ಯಾವಳಿಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ತಂಡವು ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಯಿ ಹಾಕಿ ತರಬೇತಿ ಕೇಂದ್ರ ಮಡಿಕೇರಿಯ ತರಬೇತಿದಾರರು ಮತ್ತು ಉಸ್ತುವಾರಿಯಾದ ಮಿನಿ ಉನ್ನಿ ರಾಜ್ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಮೇಜರ್ ರಾಘವ ಬಿ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ. ತಿಪ್ಪೇಸ್ವಾಮಿ, ಭಾರತ ಹಾಕಿ ತಂಡದ ಕ್ಯಾಂಪರ್ ಅಕ್ಷತಾ, ಕಿಲೋ ಇಂಡಿಯಾ ಹಾಕಿ ತಂಡದ ಆಟಗಾರ್ತಿಯರಾದ ಸೀಮಾ ಆನಂದ್ ಪವರ್ ಹಾಗೂ ಗಧೇಲಾ ಗಾಯತ್ರಿ ಉಪಸ್ಥಿತರಿದ್ದರು. ವರದಿ : ಅಶೋಕ್ ಮಡಿಕೇರಿ
ಮೈಸೂರು, ಮಾ.11 NEWS DESK : ದೇಶದ ಆರ್ಥಿಕತೆ ಕೊಡುಗೆಗಳನ್ನು ನೀಡಲು ಪ್ರಮುಖ ಪಾತ್ರ ವಹಿಸುವ ನಗರಗಳ ಅಭಿವೃದ್ಧಿಗೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಈಗ ಮೈಸೂರಿಗೂ ವಿಶೇಷ ಕೊಡುಗೆ ನೀಡಲು ನಿರ್ಧರಿಸಿದೆ. ಮೈಸೂರನ್ನು “ನಗರ ಆರ್ಥಿಕ ವಲಯ” ಯೋಜನೆಗೆ ಸೇರ್ಪಡೆಗೊಳಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಸಿದ್ದಾರೆ. ನವದೆಹಲಿಯಲ್ಲಿ ವಿತ್ತ ಸಚಿವರನ್ನು ಭೇಟಿ ಮಾಡಿದ ಸಂಸದ ಯದುವೀರ್ ಒಡೆಯರ್, ಬಜೆಟ್‌ನಲ್ಲಿ ಘೋಷಣೆ ಮಾಡಿರುವ “ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ನಗರವನ್ನೂ ಸೇರ್ಪಡೆ ಮಾಡಬೇಕು. ಸಾಂಸ್ಕೃತಿಕ ರಾಜಧಾನಿಯಾಗಿರುವ ಮೈಸೂರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದುಕೊಂಡಿದೆ. ಅದನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಈ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. :: ಹಣಕಾಸು ಸಚಿವರಿಗೆ ಮನವಿ ಸಲ್ಲಿಕೆ :: ಈ ಕುರಿತು ಮಾಹಿತಿ ನೀಡಿರುವ ಸಂಸದ ಯದುವೀರ್ ಒಡೆಯರ್, ನಗರ ಆರ್ಥಿಕ ವಲಯಕ್ಕೆ ಮೈಸೂರನ್ನು ಸೇರಿಸಬೇಕು ಎಂದು ಹಣಕಾಸು…
ಮಡಿಕೇರಿ ಮಾ.11 NEWS DESK : ಜಿಲ್ಲಾಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಸ್ತಾಪವಿದ್ದು, ಇದನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಸಾಗುತ್ತಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ (ಜಿಲ್ಲಾಸ್ಪತ್ರೆ) ಡೀನ್ ಮತ್ತು ನಿರ್ದೇಶಕ ಡಾ. ಲೋಕೇಶ್ ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಸ್ಪತ್ರೆ ಡೀನ್ ಅವರೊಂದಿಗೆ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಚರ್ಚಿಸಲಾದ ವಿಷಯಗಳ ಕುರಿತ ಪ್ರಗತಿ ಹಾಗೂ ಅನುಷ್ಠಾನÀ ಕುರಿತು ಮಾಹಿತಿ ಪಡೆಯುವ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದಲ್ಲಿ ಪತ್ರಕರ್ತರು ಜಿಲ್ಲಾಸ್ಪತ್ರೆಗೆ ತೆರಳಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ, ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು. ಈ ಸಂದರ್ಭ ಪತ್ರಕರ್ತರೊಂದಿಗೆ ಮಾತನಾಡಿದ ಡಾ. ಲೋಕೇಶ್, ಪ್ರಸ್ತುತ ಜಿಲ್ಲಾಸ್ಪತ್ರೆ ವೇಗದಲ್ಲಿ ಅಭಿವೃದ್ಧಿ ಕಾಣುತ್ತಿದೆ. ವೈದ್ಯರ ಕೊರತೆಯಿದ್ದರೂ ಇರುವ ವೈದ್ಯರಿಂದ ರೋಗಿಗಳಿಗೆ ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ರೇಡಿಯೋಲಾಜಿಸ್ಟ್ ಹೊರತುಪಡಿಸಿ ಬೇರೆಲ್ಲ ವಿಭಾಗದಲ್ಲೂ ವೈದ್ಯರಿದ್ದು, ಹುದ್ದೆ ಭರ್ತಿಗೆ ಆಹ್ವಾನಿಸಲಾಗಿದೆ.…
ಮಡಿಕೇರಿ ಮಾ.11 NEWS DESK : ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಜಾಗೃತಿ ಮೂಡಿಸಿದರು. ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರ ಇರುವಂತೆ ಸಲಹೆ ನೀಡಿದರು.






